ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಡಿ.27,28 ಶ್ರೀನಿವಾಸ ಕಲ್ಯಾಣೋತ್ಸವ – ಡಿ.29ಕ್ಕೆ ಉಚಿತ ಸಾಮೂಹಿಕ ವಿವಾಹ : ಪೂರ್ವತಯಾರಿಗೆ ಮೊದಲು ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ
ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ 2025ರ ಡಿಸೆಂಬರ್ 27, 28 ರಂದು ಪುತ್ತೂರು ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಎದುರು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಡಿ.29 ರಂದು ಜರಗುವ 100 ಜೋಡಿಗೆ ಸಾಮೂಹಿಕ ವಿವಾಹದ ತಯಾರಿಗೆ ಪೂರ್ವಭಾವಿಯಾಗಿ ಶುಕ್ರವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ಮಹಾಲಿಂಗೇಶ್ವರ ದೇವರಲ್ಲಿ ಅರ್ಚಕರು ವಿಶೇಷ ಪ್ರಾರ್ಥನೆ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಕಾರ್ಯಕ್ರಮದ ಯಶಸ್ವಿಗೆ ಶುಭಹಾರೈಸಿದರು. […]










