ಅರೇಲ್ತಡಿ ಉಳ್ಳಾಕುಲು ಮತ್ತು ಕೆಡೆಂಜೊಡಿತ್ತಾಯಿ ದೈವಸ್ಥಾನದಲ್ಲಿ ಶಿಲಾನ್ಯಾಸ ಕಾರ್ಯಕ್ರಮ | ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರಿಂದ ಆಶೀರ್ವಚನ
ಕಡಬ: ಕಡಬ ಗ್ರಾಮದ ಸವಣೂರು ಅರೇಲ್ತಡಿ ಉಳ್ಳಾಕುಲು ಮತ್ತು ಕೆಡೆಂಜೊಡಿತ್ತಾಯಿ ದೈವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ಸೋಮವಾರ ನಡೆಯಿತು. ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ನೀಲೇಶ್ವರ ಆರೋತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ 12 ಗಂಟೆಗೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಸವಣೂರು […]