ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವದ ಅಂಗವಾಗಿ ನೂತನ ಸಭಾಂಗಣ ನಿರ್ಮಾಣದ ಕಾಮಗಾರಿಗೆ ಚಾಲನೆ, ದಶಮಾನೋತ್ಸವ ಕಾರ್ಯಾಲಯ ಉದ್ಘಾಟನೆ
ಪುತ್ತೂರು: ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವದ ಅಂಗವಾಗಿ ಟ್ರಸ್ಟ್ ಕಚೇರಿಯ ಮೇಲ್ಭಾಗದಲ್ಲಿ ನೂತನ ಸಭಾಂಗಣ ನಿರ್ಮಾಣದ ಕಾಮಗಾರಿಗೆ ಚಾಲನೆ ಹಾಗೂ ಟ್ರಸ್ಟ್ ಕಾರ್ಯಾಲಯದ ಉದ್ಘಾಟನೆ ಬುಧವಾರ ನಡೆಯಿತು. ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಕಾರ್ಯಾಲಯವನ್ನು ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರಿಗೂ ನಮ್ಮ ಸಮಾಜ ಎಂದು ಬಾಯಲ್ಲಿ ಹೇಳಿಕೊಳ್ಳುವುದು ಮಾತ್ರವಲ್ಲ. ಬದಲಾಗಿ ಹೃದಯದಿಂದ ಬರಬೇಕು. ಟ್ರಸ್ಟ್ ನ ವತಿಯಿಂದ ಇಚ್ಲಂಪಾಡಿಯಲ್ಲಿ ಗ್ರಾಮ ಸಮಿತಿ ಮಾಡುವಲ್ಲಿ […]










