ಧಾರ್ಮಿಕ

ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ ಆಚರಣೆ

ಸವಣೂರು: ಕಡಬ ತಾಲೂಕಿನ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿಯನ್ನು ಇಂದು ಆಚರಿಸಲಾಯಿತು. ನಾಗರಪಂಚಮಿ ಅಂಗವಾಗಿ ಬೆಳಿಗ್ಗೆ 10 ಗಂಟೆಯಿಂದ ನಾಗತಂಬಿಲ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಪದಾಧಿಕಾರಿಗಳು, ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ ಆಚರಣೆ Read More »

ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಾಗರಪಂಚಮಿ ಆಚರಣೆ

ಕಾಣಿಯೂರು: ಅಗಳಿ ಶ್ರೀ ಸದಾಶಿವ ದೇವಸ್ಥಾನದ ಶ್ರೀ ನಾಗ ಸನ್ನಿಧಿಯಲ್ಲಿ ನಾಗರಪಂಚಮಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ, ಕ್ಷೀರಾಭಿಷೇಕ, ತಂಬಿಲ ಸೇವೆ ನಡೆಯಿತು. ದೇವಸ್ಥಾನದ ಆರ್ಚಕ ಈಶ್ವರಚಂದ್ರ ಭಟ್ ವಿವಿಧ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಯ ಮೊತ್ತೇಸರರಾದ ಶಿವರಾಮ ಗೌಡ ಅಗಳಿ, ಉದಯ ಕುಮಾರ್ ಅಗಳಿ ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಾಗರಪಂಚಮಿ ಆಚರಣೆ Read More »

ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ ಆಚರಣೆ

ಕಾಣಿಯೂರು: ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು ಬೆಳಿಗ್ಗೆ ಭಕ್ತಾದಿಗಳಿಂದ ಅರ್ಪಿತವಾದ ಹಾಲು, ಸೀಯಾಳಾಭಿಷೇಕ ನಡೆದು, ಮಧ್ಯಾಹ್ನ ಮಹಾಪೂಜೆ ನಡೆಯಿತು. ದೇವಸ್ಥಾನದ ಅರ್ಚಕ ವೆಂಕಟಕೃಷ್ಣ ಭಟ್‍ ಪೂಜಾ ವಿಧಿವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಕೊರಗಪ್ಪ ಗೌಡ ಕುಕ್ಕುನಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ, ವ್ಯವಸ್ಥಾಪನ ಸಮಿತಿ ನಿಕಟಪೂರ್ವ ಸದಸ್ಯರಾದ ವಸಂತ ದಲಾರಿ, ನಾರ್ಣಪ್ಪ ಗೌಡ ಜತ್ತೋಡಿ, ಆನಂದ ಗೌಡ ಬನೇರಿ, ಚಾರ್ವಾಕ ಸಿಎ ಬ್ಯಾಂಕ್‍ ಅಧ್ಯಕ್ಷ

ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ ಆಚರಣೆ Read More »

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ | ಸರತಿ ಸಾಲಿನಲ್ಲಿ ಭಕ್ತರಿಂದ ಹಾಲು, ಸೀಯಾಳ ಅರ್ಪಣೆ

ಸವಣೂರು: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿಯನ್ನು ಆಚರಿಸಲಾಯಿತು. ನೂರಾರು ಭಕ್ತಾದಿಗಳು ಮುಂಜಾನೆಯಿಂದಲೇ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಹಾಲು, ಸೀಯಾಳಾ, ಹಣ್ಣುಕಾಯಿ ಅರ್ಪಿಸಿ ಪುನೀತರಾದರು. ದೇವಸ್ಥಾನದ ಅರ್ಚಕರು ಶ್ರೀ ನಾಗನಿಗೆ ಅಭಿಷೇಕ ಮಾಡಿದರು. ಈ ಸಂದರ್ಭದಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯ ಸಂಚಾಲಕ ಸವಣೂರು ಸೀತಾರಾಮ ರೈ, ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ, ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಉತ್ಸವ ಸಮಿತಿಯ ಪದಾಧಿಕಾರಿಗಳು, ಭಕ್ತಾದಿಗಳು ಪಾಲ್ಗೊಂಡಿದ್ದರು.

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ | ಸರತಿ ಸಾಲಿನಲ್ಲಿ ಭಕ್ತರಿಂದ ಹಾಲು, ಸೀಯಾಳ ಅರ್ಪಣೆ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಸನ್ನಿಧಿಯಲ್ಲಿ ನಾಗರ ಪಂಚಮಿ | ಸರತಿ ಸಾಲಿನಲ್ಲಿ ನಿಂತು ಹಾಲು, ಸೀಯಾಳ ಅರ್ಪಿಸಿದ ಭಕ್ತಾದಿಗಳು

ಪುತ್ತೂರು: ಶ್ರಾವಣ ಮಾಸ ಶುಕ್ಲ ಪಕ್ಷ ಪಂಚಮಿಯಂದು ನಡೆಯುವ ಪ್ರಥಮ ಹಬ್ಬ ನಾಗರಪಂಚಮಿಯನ್ನು ತಾಲೂಕಿನ ವಿವಿಧ ನಾಗಸನ್ನಿಧಿಗಳಲ್ಲಿ ಸಂಭ್ರಮ ಸಡಗರದಿಂದ ಇಂದು ಮುಂಜಾನೆಯಿಂದ ಆಚರಿಸಲಾಯಿತು. ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಆಚರಿಸಲಾಯಿತು. ಮುಂಜಾನೆಯಿಂದಲೇ ನೂರಾರು ಭಕ್ತಾದಿಗಳು ಶ್ರೀ ನಾಗಸನ್ನಿಧಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಹಾಲು, ಸೀಯಾಳಾ, ಹಣ್ಣುಕಾಯಿ ಅರ್ಪಿಸಿದರು. ದೇವಸ್ಥಾನದ ಅರ್ಚಕರು ಶ್ರೀ ನಾಗನಿಗೆ ಅಭಿಷೇಕ ಮಾಡಿದರು.

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಸನ್ನಿಧಿಯಲ್ಲಿ ನಾಗರ ಪಂಚಮಿ | ಸರತಿ ಸಾಲಿನಲ್ಲಿ ನಿಂತು ಹಾಲು, ಸೀಯಾಳ ಅರ್ಪಿಸಿದ ಭಕ್ತಾದಿಗಳು Read More »

ಶ್ರೀ ಮಹಾಭಾರತ ಸರಣಿತಾಳಮದ್ದಳೆ ಸನ್ಮಾನ ಕಾರ್ಯಕ್ರಮ

ಉಪ್ಪಿನಂಗಡಿ : ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 40ನೇ ತಾಳಮದ್ದಳೆಯಾಗಿ ಚಿತ್ರಸೇನ ಕಾಳಗ ಸುರತ್ಕಲ್ ಕೃಷ್ಣಾಪುರದ ಪದುಮಶ್ರೀ ನಿವಾಸದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಉಪ್ಪಿನಂಗಡಿ, ನಿತೀಶ್ ಕುಮಾರ್ ವೈ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಶ್ರೀ ಗಣೇಶ ಭಟ್ ಸುರತ್ಕಲ್,ಶ್ರೀಯತಿ ಪುನರೂರು, ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ( ದೇವೇಂದ್ರ ಮತ್ತು ದ್ರೌಪದಿ)ಗೋಪಾಲ ಶೆಟ್ಟಿ ಕಳೆಂಜ,( ಚಿತ್ರಸೇನ )ದಿವಾಕರ ಆಚಾರ್ಯ ಗೇರುಕಟ್ಟೆ,( ಅರ್ಜುನ ) ಶ್ರೀಧರ

ಶ್ರೀ ಮಹಾಭಾರತ ಸರಣಿತಾಳಮದ್ದಳೆ ಸನ್ಮಾನ ಕಾರ್ಯಕ್ರಮ Read More »

ಉಜ್ರುಪಾದೆ ಶ್ರೀ ಕೃಷ್ಣ ಜನ್ಮಾಷ್ಟಮಿಗೆ 25 ವರ್ಷ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಬಲ್ನಾಡು ಗ್ರಾಮದ ಉಜ್ರುಪಾದೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆಯುವ 25ನೇ ವರ್ಷದ ಮೊಸರು ಕುಡಿಕೆ ಉತ್ಸವದ  ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನದಲ್ಲಿ  ಮಂಗಳವಾರ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ಸಮಿತಿ ಪದಾಧಿಕಾರಿಗಳು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಬಾಲಸುಬ್ರಮಣ್ಯ ಕೋಟ್ಯಾನ್,  ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ಪ್ರಕಾಶ್ ಕೆಲ್ಲಾಡಿ, ಕೋಶಾಧಿಕಾರಿ ಅಶೋಕ್ ಕುಮಾರ್ ಪದವು, ಹೇಮಚಂದ್ರ ಮುದಲಾಜೆ, ಬಲ್ನಾಡು ಕಟ್ಟೆ

ಉಜ್ರುಪಾದೆ ಶ್ರೀ ಕೃಷ್ಣ ಜನ್ಮಾಷ್ಟಮಿಗೆ 25 ವರ್ಷ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯ ಉಳುಮೆಗೆ ಇಂದು ಚಾಲನೆ ನೀಡಲಾಯಿತು. ಆರಂಭದಲ್ಲಿ ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಪ್ರಾರ್ಥನೆ ಮಾಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರು ತೆಂಗಿನ ಕಾಯಿ ಒಡೆದು ಟ್ಯಾಕ್ಟರ್ ಮೂಲಕ ಗದ್ದೆ ಉಲುಮೆಗೆ ಚಾಲನೆ ನೀಡಿ ಮಾತನಾಡಿ, ಪುಣ್ಯದ ಗದ್ದೆಯಲ್ಲಿ ಭಕ್ತಾಧಿಗಳ ಆಶಯದಂತೆ ಭತ್ತದ ಬೇಸಾಯ ಆರಂಭಿಸಿದ್ದೇವೆ. ಇಲ್ಲಿ ಕೇವಲ ಆರಂಭ ಮಾಡುವುದು ಮಾತ್ರವಲ್ಲ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ Read More »

ಆ.10 : ಆಟಿಡೊಂಜಿ ಬಂಟರ ಸೇರಿಗೆ ಕಾರ್ಯಕ್ರಮ

ಪುತ್ತೂರು: ವಿಶೇಷ ಆಹ್ವಾನಿತರ ಸಭೆ ಹಾಗೂ ತಾಲೂಕು ಬಂಟರ ಸಂಘದ ಕಾರ್ಯಕಾರಿ ಸಮಿತಿಯಿಂದ ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿರವರು ಮಾತನಾಡಿ ಆ.10ರಂದು ನಡೆಯಲಿರುವ ಆಟಿಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮದ ಯಶಸ್ಸಿಗೆ ಬಂಟ ಸಮಾಜದ ಸರ್ವರ ಸಹಕಾರ ಅಗತ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ, ವಿವಿಧ ಕ್ಷೇತ್ರಗಳ ಸಾಧಕರಿಗೆ ಚಿನ್ನದ ಪದಕ ಪ್ರಶಸ್ತಿ ಪ್ರಧಾನ, ವಿದ್ಯಾರ್ಥಿ ವೇತನ

ಆ.10 : ಆಟಿಡೊಂಜಿ ಬಂಟರ ಸೇರಿಗೆ ಕಾರ್ಯಕ್ರಮ Read More »

ಶ್ರೀಕೃಷ್ಣ ಲೋಕ : ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ನಡೆಯಲಿರುವ ಶ್ರೀ ಕೃಷ್ಣಲೋಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಇದರ ಅಧ್ಯಕ್ಷ ಪುತ್ತೂರು ಉಮೇಶ ನಾಯಕ್ ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಮಾತನಾಡಿ, ಪುತ್ತೂರಿನ ಹೃದಯ ಭಾಗದಲ್ಲಿರುವ ವಿವೇಕಾನಂದ ಶಿಶು ಮಂದಿರವು ನಂದಗೋಕುಲದಂತೆ ಬೆಳಗಲಿ, ಶ್ರೀಕೃಷ್ಣಲೋಕ ಕಾರ್ಯಕ್ರಮವು ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ಜರುಗಲಿ ಎಂದು

ಶ್ರೀಕೃಷ್ಣ ಲೋಕ : ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top