ಮೇ 13: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ
ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 13ರಂದು ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದೆ. ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7.30ಕ್ಕೆ ದೇವರ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಪಲ್ಲಕ್ಕಿ ಉತ್ಸವ ಹಾಗೂ ಬಂಡಿ ಉತ್ಸವ ಜರಗಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಮೇ 13: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ Read More »










