ಧಾರ್ಮಿಕ

ಮೇ 19 : ಕಾವುನಲ್ಲಿ ವಿಶ್ವಕರ್ಮ ಪೂಜೆ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು: ಕಾವು ಶ್ರೀ ವಿಶ್ವಕರ್ಮ ಪೂಜಾ ಸಮಿತಿ ವತಿಯಿಂದ ಶ್ರೀ ವಿಶ್ವಕರ್ಮ ಪೂಜೆ ಮೇ 19 ಭಾನುವಾರ ಬೆಳಿಗ್ಗೆ 8.30 ರಿಂದ ಕಾವು ನನ್ಯ ಜನಮಂಗಲ ಸಭಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 8.30 ರಿಂದ ಭಜನೆ, 9.30 ರಿಂದ ಶ್ರೀ ವಿಶ್ವಕರ್ಮ ಪೂಜೆ ಆರಂಭಗೊಳ್ಳಲಿದೆ. ಬೆಳಿಗ್ಗೆ 11ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ಆನೆಗುಂದಿ ಗುರುಸೇವಾ ಪರಿಷತ್ ಮಹಾಮಂಡಲದ ಅಧ್ಯಕ್ಷ ವಿ.ಪುರುಷೋತ್ತಮ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಪಡುಕುತ್ಯಾರು ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ವೇ| […]

ಮೇ 19 : ಕಾವುನಲ್ಲಿ ವಿಶ್ವಕರ್ಮ ಪೂಜೆ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಹೋರಿಗಳ ಕಳವು | ಬಲ್ನಾಡು ಉಳ್ಳಾಲ್ತಿ ಅಮ್ಮನ ಮೊರೆ ಹೋದ ಬಜರಂಗದಳ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ 1 ರಿಂದ ನಾಪತ್ತೆಯಾಗಿರುವ ಹೋರಿಗಳ ಪತ್ತೆಗಾಗಿ ಬಜರಂಗ ದಳದವರು ದೈವದ ಮೊರೆ ಹೋಗಿದ್ದಾರೆ. ದೇವಸ್ಥಾನದ ವಠಾರದಲ್ಲೇ ಸುತ್ತುತ್ತಿದ್ದ ಎರಡು ಹೋರಿಗಳು ಕಳ್ಳತನವಾಗಿರುವ ಶಂಕೆ ವ್ಯಕ್ತಪಡಿಸಿರುವ ಬಜರಂಗದಳ ಪುತ್ತೂರು ಘಟಕ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಹೋರಿ ಅಡ್ಯನಡ್ಕ ಸಮೀಪವಿರುವ ಸಾಧ್ಯತೆ ಕಂಡು ಬಂದಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಹೋರಿ ಬದುಕಿರುವ ಬಗ್ಗೆ ಮಾಹಿತಿ ದೊರಕಿದೆ. ಹೋರಿಯನ್ನು ಮಾಂಸಕ್ಕಾಗಿ ಕೊಂಡು ಹೋಗಿರುವ ಸಾಧ್ಯತೆ ಎಂದು ಪ್ರಶ್ನಾಚಿಂತನೆಯಲ್ಲಿ ಸೂಚನೆ ದೊರಕಿದೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಹೋರಿಗಳ ಕಳವು | ಬಲ್ನಾಡು ಉಳ್ಳಾಲ್ತಿ ಅಮ್ಮನ ಮೊರೆ ಹೋದ ಬಜರಂಗದಳ Read More »

ವಿಶ್ವಕರ್ಮ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾವು : ಮೇ 19 ರಂದು ಕಾವು ಜನಮಂಗಲದಲ್ಲಿ ವಿಶ್ವಕರ್ಮ ಕೂಡೂವಳಿಕೆ ಕಾವು ವಲಯದ ವತಿಯಿಂದ ಎರಡನೇ ವರ್ಷದ ವಿಶ್ವಕರ್ಮ ಪೂಜೆ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾವು ಕೂಡೂವಳಿಕೆಯ ಮೊಕ್ತೇಸರರಾದ ನಾರಾಯಣ ಆಚಾರ್ಯ ಮಳಿ, ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಆಚಾರ್ಯ ಈಶ್ವರಮಂಗಲ, ಕಾರ್ಯದರ್ಶಿ ಗಳಾದ ಬಾಲಕೃಷ್ಣ ಆಚಾರ್ಯ ಮಳಿ, ರವೀಂದ್ರ ಆಚಾರ್ಯ ಅರಿಯಡ್ಕ, ಪದಾಧಿಕಾರಿಗಳಾದ ವೆಂಕಟ್ರಮಣ ಆಚಾರ್ಯ ಪೆರ್ಲಂಪಾಡಿ, ಜಯಕರ ಆಚಾರ್ಯ

ವಿಶ್ವಕರ್ಮ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಶಂಕರ ಭಗವತ್ಪಾದರ ವಿಚಾರಗಳಿಂದ ನಮ್ಮ ಬದುಕು ಔನ್ನತ್ಯಕ್ಕೆ : ಅಂಬಿಕಾ ಕ್ಯಾಂಪಸ್‌ನಲ್ಲಿ ಶ್ರೀ ಶಂಕರ ಜಯಂತಿ ಕಾರ್ಯಕ್ರಮದಲ್ಲಿ ವಿದ್ವಾನ್ ಕೃಷ್ಣರಾಜ ಭಟ್

ಪುತ್ತೂರು: ಜಗದ್ಗುರು ಶಂಕರಾಚಾರ್ಯರ ವ್ಯಕ್ತಿತ್ವವನ್ನು ಮಾತಿನಲ್ಲಿ ಕಟ್ಟಿಕೊಡುವ ಶಕ್ತಿ ಸಾಮಾನ್ಯ ಮನುಷ್ಯರಲ್ಲಿಲ್ಲ. ಆದರೆ ಅವರ ಬಗೆಗೆ ತಿಳಿದುಕೊಂಡ ಅಲ್ಪಾತಿ ಅಲ್ಪ ವಿಚಾರಗಳನ್ನಾದರೂ ಮತ್ತೆ ಮತ್ತೆ ಪ್ರಸಾರ ಮಾಡುತ್ತಿದ್ದರೆ ನಮ್ಮ ವ್ಯಕ್ತಿತ್ವದಲ್ಲಿನ ದೋಷಗಳು ನಿವಾರಣೆಯಾಗುವಲ್ಲಿ ಸಹಕಾರಿಯಾಗುತ್ತದೆ. ಒಳ್ಳೆಯ ವಿಚಾರಗಳ ಅಧ್ಯಯನ, ಪ್ರಸರಣ ನಮ್ಮ ಮನಸ್ಸನ್ನು ಶುದ್ಧಗೊಳಿಸುತ್ತದೆ ಎಂದು ಶೃಂಗೇರಿಯ ಶ್ರೀ ಸದ್ವಿದ್ಯಾ ಸಂಜೀವಿನೀ ಸಂಸ್ಕೃತ ಪಾಠಶಾಲೆಯ ವ್ಯಾಕರಣ ಶಾಸ್ತ್ರ ವಿದ್ವಾಂಸ ವಿದ್ವಾನ್ ಕೃಷ್ಣರಾಜ ಭಟ್ಟ ಹೇಳಿದರು. ಅವರು ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಕ್ಯಾಂಪಸ್‌ನ ಶ್ರೀ ಶಂಕರ ಸಭಾಭವನದಲ್ಲಿ ಭಾನುವಾರ

ಶಂಕರ ಭಗವತ್ಪಾದರ ವಿಚಾರಗಳಿಂದ ನಮ್ಮ ಬದುಕು ಔನ್ನತ್ಯಕ್ಕೆ : ಅಂಬಿಕಾ ಕ್ಯಾಂಪಸ್‌ನಲ್ಲಿ ಶ್ರೀ ಶಂಕರ ಜಯಂತಿ ಕಾರ್ಯಕ್ರಮದಲ್ಲಿ ವಿದ್ವಾನ್ ಕೃಷ್ಣರಾಜ ಭಟ್ Read More »

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದೇಣಿಗೆ ಚೆಕ್ ಹಸ್ತಾಂತರ

ಪುತ್ತೂರು: ತಾಲೂಕಿನ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ನಡೆದಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಜೀರ್ಣೋದ್ಧಾರ ಕಾರ್ಯಕ್ಕೆ ಈಗಾಗಲೇ ಮೂರು ಲಕ್ಷ ರೂ. ದೇಣಿಗೆ ನೀಡಲಾಗಿದೆ. ಇದೀಗ ಎರಡನೇ ಹಂತದ 2.50 ಲಕ್ಷ ರೂ. ಹೀಗೆ ಒಟ್ಟು 5.50 ಲಕ್ಷ ರೂ. ನೀಡಿದ್ದಾರೆ. ಯೋಜನೆಯ ಪುತ್ತೂರು ತಾಲೂಕು ಯೋಜನಾಧಿಕಾರಿ ಶಶಿಧರ್ ಎಮ್‍. ಸಮಿತಿ ಸದಸ್ಯರಿಗೆ 2.50 ಲಕ್ಷ ಚೆಕ್‍ ನ್ನು ಶುಕ್ರವಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ,

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದೇಣಿಗೆ ಚೆಕ್ ಹಸ್ತಾಂತರ Read More »

ಮೇ 13: ಪುತ್ತೂರು  ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

ಪುತ್ತೂರು: ಮಹತೋಭಾರ ಪುತ್ತೂರು  ಶ್ರೀ ಮಹಾಲಿಂಗೇಶ್ವರ  ದೇವಸ್ಥಾನದಲ್ಲಿ ಮೇ 13ರಂದು ಪ್ರತಿಷ್ಠಾ ವರ್ಧಂತ್ಯುತ್ಸವ  ನಡೆಯಲಿದೆ. ಕುಂಟಾರು  ರವೀಶ ತಂತ್ರಿಗಳ  ನೇತೃತ್ವದಲ್ಲಿ ವಿವಿಧ  ಧಾರ್ಮಿಕ  ಕಾರ್ಯಕ್ರಮ  ನಡೆಯಲಿದೆ. ರಾತ್ರಿ  7.30ಕ್ಕೆ  ದೇವರ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಪಲ್ಲಕ್ಕಿ ಉತ್ಸವ ಹಾಗೂ ಬಂಡಿ  ಉತ್ಸವ ಜರಗಲಿದೆ  ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಮೇ 13: ಪುತ್ತೂರು  ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ Read More »

ಮೇ 12 : ಆರ್ಯಾಪು ಮರಿಕೆಯ ಸಿಂಗಾರ ಮನೆಯಲ್ಲಿ ಧರ್ಮದೈವಗಳ ನೇಮೋತ್ಸವ

ಪುತ್ತೂರು: ಆರ್ಯಾಪು ಮರಿಕೆಯ ಸಿಂಗಾರ ಮನೆಯಲ್ಲಿ ಧರ್ಮದೈವಗಳ ನೇಮೋತ್ಸವ ನಡೆಯಲಿದೆ. ಪೂರ್ವಿಕರ ಕಾಲದಿಂದ ಆರಾಧಿಸಿಕೊಂಡು ಬಂದ ದೈವಗಳನ್ನು ಮಾಯದಿಂದ ಜೋಗಕ್ಕೆ ಬರಿಸಿ, ಒಂದು ಕುಡ್ತೆ ಹಾಲು, ತುಂಬು ಗೆರಸೆ ಬಾರಣೆ ಕೊಡಿಸುತ್ತೇವೆಂದು ಈ ಹಿಂದೆ ಮರಿಕೆಯ ಸಿಂಗಾರ ಮನೆಯವರು ಪ್ರಾರ್ಥಿಸಿಕೊಂಡ ಹಿನ್ನಲೆಯಲ್ಲಿ ನೇಮೋತ್ಸವ ನಡೆಯಲಿದೆ. ರಾತ್ರಿ ಗಂಟೆ 8 ಕ್ಕೆ ಧರ್ಮದೈವ ನೇಮೋತ್ಸವ ನಡೆಯಲಿದೆ ಎಂದು ಡಾ. ನವೀನ್ ಕುಮಾರ್ ಮರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ 12 : ಆರ್ಯಾಪು ಮರಿಕೆಯ ಸಿಂಗಾರ ಮನೆಯಲ್ಲಿ ಧರ್ಮದೈವಗಳ ನೇಮೋತ್ಸವ Read More »

ಚಲನಚಿತ್ರದ ಮೂಲಕ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ | ‘ರಾಮನ ಅವತಾರ’ ಚಲನಚಿತ್ರ ನಿಷೇಧಿಸಲು ಆಗ್ರಹ

ಬೆಂಗಳೂರು : ವಿನಯ ಪಂಪಾಪತಿ ಮತ್ತು ವಿಕಾಸ ಪಂಪಾಪತಿ ನಿರ್ದೇಶನದ ಹಾಗೂ ಅಮ್ರೆಜ್ ಸೂರ್ಯವಂಶಿ ನಿರ್ಮಾಣದ ‘ರಾಮನ ಅವತಾರ’ಕನ್ನಡ ಚಲನಚಿತ್ರ ಮೇ 10 ರಂದು ಬಿಡುಗಡೆಗೊಳ್ಳಲಿದ್ದು ಅದರ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಚಲನಚಿತ್ರದಲ್ಲಿ ಕೋಟ್ಯಾಂತರ ಹಿಂದೂಗಳು ಅತ್ಯಂತ ಭಕ್ತಿಯಿಂದ ಪೂಜಿಸುವ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ ಮಾಡಲಾಗಿದೆ. ಆದ್ದರಿಂದ ಸಿನಿಮಾದ ಹೆಸರನ್ನು ಬದಲಾಯಿಸಬೇಕು ಮತ್ತು ಅದರಲ್ಲಿನ ರಾಮಾಯಣದ ಅಪಮಾನಾತ್ಮಕ ಸನ್ನಿವೇಶಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ಶರತ್ ಕುಮಾರ್ ಕರ್ನಾಟಕ

ಚಲನಚಿತ್ರದ ಮೂಲಕ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ | ‘ರಾಮನ ಅವತಾರ’ ಚಲನಚಿತ್ರ ನಿಷೇಧಿಸಲು ಆಗ್ರಹ Read More »

ಮೇ 10 ರಿಂದ ಕೇದಾರನಾಥ ದೇವಾಲಯ ಭಕ್ತರ  ದರ್ಶನಕ್ಕೆ ಮುಕ್ತ

ಕೇದಾರನಾಥ : ಕೇದಾರನಾಥ ಧಾಮದಲ್ಲಿ ಭಾನುವಾರದಿಂದ ವಿಶೇಷ ಪೂಜೆಗಳು ಆರಂಭವಾಗಿದೆ. ಮೇ 10 ರಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಾನುವಾರ ಸಂಜೆ ಉಖಿಮಠದ ಓಂಕಾರೇಶ್ವರ ದೇವಸ್ಥಾನದಲ್ಲಿ ಭೈರವನಾಥ ದೇವರಿಗೆ ಅರ್ಚಕರು ವಿಶೇಷ ಪೂಜೆ ಸಲ್ಲಿಸಿದರು. ಸೋಮವಾರ ಉಖಿಮಠದ  ಓಂಕಾರೇಶ್ವರ ದೇವಸ್ಥಾನದಿಂದ  ಪಂಚಮುಖಿ ಭೋಗಮೂರ್ತಿ ಪಲ್ಲಕಿ ಯಾತ್ರೆ ಆರಂಭವಾಯಿತು. ಇದೇ ತಿಂಗಳ 9ರಂದು ಕೇದಾರನಾಥ ಧಾಮ ತಲುಪಲಿದೆ. ಈ ತಿಂಗಳ 10 ರಂದು ಬೆಳಿಗ್ಗೆ 7 ಗಂಟೆಗೆ ಕೇದಾರನಾಥ ಧಾಮದ ಬಾಗಿಲು ಭಕ್ತರಿಗೆ ಪೂಜೆಗಾಗಿ ತೆರೆಯಲಾಗುತ್ತದೆ. ರುದ್ರಪ್ರಯಾಗದಲ್ಲಿರುವ 

ಮೇ 10 ರಿಂದ ಕೇದಾರನಾಥ ದೇವಾಲಯ ಭಕ್ತರ  ದರ್ಶನಕ್ಕೆ ಮುಕ್ತ Read More »

ನಾಳೆ (ಮೇ 5) : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ಧನ್ಯೋತ್ಸವ’ ಸಭೆ

ಪುತ್ತೂರು : ತಾಲೂಕಿನ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಮುಗಿದು ಬ್ರಹ್ಮಕಲಶೋತ್ಸವ ಸಂಪನ್ನಗೊಂಡಿದ್ದು, ‘ಧನ್ಯೋತ್ಸವ’ ಸಭೆ ಮೇ 5 ಭಾನುವಾರ ಸಂಜೆ 5 ಗಂಟೆಗೆ ಶ್ರೀ ದೇವಸ್ಥಾನದಲ್ಲಿ ನಡೆಯಲಿದೆ. ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮಕಲಶೋತ್ಸವ ಸಮಿತಿಯ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಹಕರಿಸಿದ ಕರಸೇವಕರು, ಗ್ರಾಮಸ್ಥರು ಹಾಗೂ ಭಕ್ತಾದಿಗಳಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಇದಾಗಿದೆ. ಕರಸೇವಕರು, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ

ನಾಳೆ (ಮೇ 5) : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ಧನ್ಯೋತ್ಸವ’ ಸಭೆ Read More »

error: Content is protected !!
Scroll to Top