ಧಾರ್ಮಿಕ

ಸಮಾಜದಲ್ಲಿ ಸಕಲ ಜೀವರಾಶಿಗಳಿಗೂ ಬದುಕಲು ಅವಕಾಶ ನೀಡುವುದೇ ಧರ್ಮ  | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆಯಲ್ಲಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ

ಪುತ್ತೂರು: ಸಮಾಜದಲ್ಲಿ ನಿಯತ್ತಿನಿಂದ ಬದುಕಲು ಧರ್ಮ ಹುಟ್ಟಿಕೊಂಡಿದೆ. ಜಗತ್ತಿನ ಸಕಲ‌ ಜೀವ ರಾಶಿಗಳಿಗೂ ಬದುಕುವ ಆಸೆಯಿದೆ. ಎಲ್ಲರೊಂದಿಗೆ ಸೇರಿಕೊಂಡು ಉತ್ತಮ ಬದುಕು ಸಾಗಿಸುವುದೇ, ಇನ್ನೊಬ್ಬರ ಹಿತವಾಗಿ ಬದುಕುವುದು, ಸ್ವಾರ್ಥ ರಹಿತವಾಗಿ ಬದುಕುವುದೇ ಧರ್ಮ. ಸಮಾಜದಲ್ಲಿ ಸಕಲ ಜೀವರಾಶಿಗಳಿಗೂ ಬದುಕಲು ಅವಕಾಶ ನೀಡುವುದೇ ಧರ್ಮ ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ನುಡಿದರು. ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಏ.22 ರಂದು ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ದೇವರಲ್ಲಿ […]

ಸಮಾಜದಲ್ಲಿ ಸಕಲ ಜೀವರಾಶಿಗಳಿಗೂ ಬದುಕಲು ಅವಕಾಶ ನೀಡುವುದೇ ಧರ್ಮ  | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆಯಲ್ಲಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ Read More »

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶಿಲಾನ್ಯಾಸ | ಮೂರು ದಿನಗಳ ಕಾಲ ನಡೆಯಿತು ವಿವಿಧ ವೈದಿಕ ಕಾರ್ಯಕ್ರಮಗಳು

ಬೆಳ್ತಂಗಡಿ: ತಾಲೂಕಿನ ದೇವರಗುಡ್ಡೆ ಭಟ್ರಬೈಲು ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ, ಭೂಖನನಾದಿ ಸಪ್ತಶುದ್ಧಿ, ದ್ವಾದಶಮೂರ್ತಿ ಆರಾಧನೆ ಹಾಗೂ ಗೋಪೂಜೆ ಏ.19, 20 ಹಾಗೂ 22 ರಂದು ಮೂರು ದಿನಗಳ ಕಾಲ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಏ.19 ರಂದು ಸಂಜೆ 7 ಗಂಟೆಗೆ ಸುದರ್ಶನ ಹೋಮ ನಡೆಯಿತು. ಏ.20 ಶನಿವಾರ ಬೆಳಿಗ್ಗೆ 8 ರಿಂದ ಸಪ್ತಶುದ್ಧಿ, ಗಣಹೋಮ, ಗೋಪೂಜೆ, ದ್ವಾದಶಮೂರ್ತಿ ಆರಾಧನೆ, ಮಧ್ಯಾಹ್ನ 12.30 ಕ್ಕೆ

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶಿಲಾನ್ಯಾಸ | ಮೂರು ದಿನಗಳ ಕಾಲ ನಡೆಯಿತು ವಿವಿಧ ವೈದಿಕ ಕಾರ್ಯಕ್ರಮಗಳು Read More »

ವರುಣ ಕೃಪೆಗಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರುಣನ ಕೃಪೆ ಹಾಗೂ ಲೋಕಕಲ್ಯಾಣಾರ್ಥವಾಗಿ ಸೀಯಾಳಾಭಿಷೇಕ ಸೋಮವಾರ ಬೆಳಿಗ್ಗೆ ನಡೆಯಿತು. ಸೀಯಾಳಾಭಿಷೇಕದ ಮೊದಲು ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ.ವಿ.ಎಸ್.ಭಟ್ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಎನ್.ಕೆ.ಜಗನ್ನಿವಾಸ ರಾವ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ರವಿಪ್ರಸಾದ್ ಶೆಟ್ಟಿ, ದಿನೇಶ್ ಪಿ.ವಿ., ಅಮರನಾಥ ಗೌಡ ಬಪ್ಪಳಿಗೆ, ಮಹಾಲಿಂಗೇಶ್ವರ ಭಜನಾ ಮಂಡಳಿ ಸಂಚಾಲಕ ಗೋಪಾಲಕೃಷ್ಣ, ಜೊಹರಾ

ವರುಣ ಕೃಪೆಗಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ Read More »

“ಬಸವನಮೂಲ’’ ಬಸವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಅತಿರುದ್ರ ಮಹಾಯಾಗ | ಸಾಕ್ಷಾತ್ ಮಹಾದೇವನೇ ನಂದಿ ರೂಪದಲ್ಲಿ ಒಲಿದ ಸ್ಥಳದಲ್ಲಿ ಅಪರೂಪದ ಸಂಕಲ್ಪಕ್ಕೆ ಸಿದ್ಧತೆ | ಶಿವನ ಪ್ರೀತ್ಯರ್ಥ ಅತಿರುದ್ರ ಮಹಾಯಾಗ ಸೇವೆ ಕೈಗೊಳ್ಳಲು ಆನ್ಲೈನ್ ನೋಂದಣಿಗೂ ಅವಕಾಶ

ಕುಲ್ಕುಂದ: ಅದು ಜಗತ್ತಿನ ಬೇರೆಲ್ಲೂ ಇಲ್ಲದ ಅತ್ಯಂತ ಅಪರೂಪದ ಮಹಾಶಿವನ ಆಲಯ. ಹಣೆಯ ಮೇಲೆ ಶಿವಲಿಂಗವನ್ನು ಹೊತ್ತ ನಂದಿಯ ರೂಪದ ವಿಗ್ರಹಕ್ಕೆ ಆರಾಧನೆ ನಡೆಯುವ ಏಕೈಕ ದೇವಸ್ಥಾನ. ಅರ್ಥಾತ್ ಬಸವನ ರೂಪದ ಮಹಾದೇವನೇ ಅಲ್ಲಿನ ಆರಾಧ್ಯ ಮೂರ್ತಿ. ಸುಮಾರು 800 ವರ್ಷಗಳ ಪ್ರಾಚೀನ ಇತಿಹಾಸವುಳ್ಳ, ಪಶ್ಚಿಮ ಘಟ್ಟದ ತಪ್ಪಲಿನ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಲ್ಕುಂದ ‘’ಬಸವನಮೂಲ’’ ಎಂದೇ ಪ್ರಸಿದ್ಧಿಯಾಗಿರುವ ಬಸವೇಶ್ವರ ದೇವಸ್ಥಾನದಲ್ಲಿ ಶಿವನಿಗೆ ಅತಿ ಪ್ರಿಯ ಎನ್ನಲಾದ ಸಾಮೂಹಿಕ ಅತಿರುದ್ರ ಮಹಾಯಾಗ ನಡೆಸಲು

“ಬಸವನಮೂಲ’’ ಬಸವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಅತಿರುದ್ರ ಮಹಾಯಾಗ | ಸಾಕ್ಷಾತ್ ಮಹಾದೇವನೇ ನಂದಿ ರೂಪದಲ್ಲಿ ಒಲಿದ ಸ್ಥಳದಲ್ಲಿ ಅಪರೂಪದ ಸಂಕಲ್ಪಕ್ಕೆ ಸಿದ್ಧತೆ | ಶಿವನ ಪ್ರೀತ್ಯರ್ಥ ಅತಿರುದ್ರ ಮಹಾಯಾಗ ಸೇವೆ ಕೈಗೊಳ್ಳಲು ಆನ್ಲೈನ್ ನೋಂದಣಿಗೂ ಅವಕಾಶ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮಕಲಶೋತ್ಸವಕ್ಕೆ ಚಾಲನೆ | ಭಕ್ತರಿಂದ ಸಮರ್ಪಣೆಯಾದ ಹೊರೆಕಾಣಿಕೆ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವೈಭವದ ಬ್ರಹ್ಮಕಲಶೋತ್ಸವಕ್ಕೆ ಶನಿವಾರ ಸಂಜೆ ಹೊರೆ ಕಾಣಿಕೆ ಸಮರ್ಪಣೆ ಮೂಲಕ ಚಾಲನೆ ನೀಡಲಾಯಿತು. ಶನಿವಾರ ಸಂಜೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಹೊರೆಕಾಣಿಕೆ ಮೆರವಣಿಗೆ ಶ್ರೀ ದೇವಸ್ಥಾನದಕ್ಕೆ ತೆರಳಿತು. ಮಾಣಿಲ ಶ್ರೀಧಾಮ ಕ್ಷೇತ್ರದ ಶ್ರೀ ಮೋಹನದಾಸ ಸ್ವಾಮೀಜಿ ತೆಂಗಿಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ, ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮಕಲಶೋತ್ಸವಕ್ಕೆ ಚಾಲನೆ | ಭಕ್ತರಿಂದ ಸಮರ್ಪಣೆಯಾದ ಹೊರೆಕಾಣಿಕೆ Read More »

ಏ.23-24 : ಕೆಮ್ಮಿಂಜೆ ಶ್ರೀರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾಪನಾ ಮಹೋತ್ಸವ

ಪುತ್ತೂರು: 1964 ಪುತ್ತೂರಿನ ಕೆಮ್ಮಿಂಜೆಯಲ್ಲಿ ನಿರ್ಮಿಸಲಾದ ಶ್ರೀ ರಾಮ ಭಜನಾ ಮಂದಿರವನ್ನು ನವೀಕರಿಸಲಾಗಿದ್ದು, ಇದರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮಗಳು ಏ.23 ಹಾಗೂ 24 ರಂದು ನಡೆಯಲಿದೆ ಎಂದು ಶ್ರೀ ರಾಮ ಭಜನಾ ಮಂದಿರ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕೆಮ್ಮಿಂಜೆ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 23 ರಂದು ಸಂಜೆ 7 ಗಂಟೆಯಿಂದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹ,ಸ್ಥಳ ಶುದ್ಧಿö, ಪ್ರಾಸಾದ ಶುದ್ಧಿ, ರಕ್ಷೋಘ್ನ ಹೋಮ, ನವಕ ಕಲಶ

ಏ.23-24 : ಕೆಮ್ಮಿಂಜೆ ಶ್ರೀರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾಪನಾ ಮಹೋತ್ಸವ Read More »

ಏ.21-28 : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ | ಇಂದು ಸಾಗಿ ಬಂತು ವೈಭವದ ಹೊರೆಕಾಣಿಕೆ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಹಾಗೂ ಸಪರಿವಾರ ದೇವರ ಪುನರ್ ಪ್ರತಿಷ್ಠಾ ಅವ್ರಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೆಯು ಏ.21 ರಿಂದ 28 ರ ತನಕ ವಿವಿಧ ವೈದಿಕ, ತಾಂತ್ರಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬ್ರಹ್ಮಶ್ರೀ ಕಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಬ್ರಹ್ಮ ಕಲಶೋತ್ಸವದಲ್ಲಿ ಏ.21 ರಂದು ಬೆಳಿಗ್ಗೆ

ಏ.21-28 : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ | ಇಂದು ಸಾಗಿ ಬಂತು ವೈಭವದ ಹೊರೆಕಾಣಿಕೆ Read More »

ಧ್ವಜಾವರೋಹಣದೊಂದಿಗೆ ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರನ ಜಾತ್ರೋತ್ಸವ ಸಂಪನ್ನ | ಭಕ್ತ ಸಮೂಹವನ್ನೇ ಪುಳಕಿತಗೊಳಿಸುವ ವೈಭವದ ಜಾತ್ರೋತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ ಧ್ಜಜಾವರೋಹಣದೊಂದಿಗೆ ಇಂದು ಸಂಪನ್ನಗೊಂಡಿತು. ಏ.10 ರಿಂದ ಧ್ವಜಾರೋಹಣದೊಂದಿಗೆ ಆರಂಭಗೊಂಡ ಜಾತ್ರೋತ್ಸವ ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು. ಏ.10 ರಿಂದ ಪ್ರತಿನಿತ್ಯ ಶ್ರೀ ದೇವರ ಬಲಿ ಉತ್ಸವ ನಡೆದು ಶ್ರೀ ದೇವಸ್ಥಾನದ ವಠಾರದಲ್ಲಿರುವ ಕಟ್ಟೆಯಲ್ಲಿ ಪೂಜೆಗೊಂಡ ಬಳಿಕ ಪ್ರತಿನಿತ್ಯ ನಿಗದಿಯಾದ ಪ್ರದೇಶಗಳಿಗೆ ಸವಾರಿ ಮಾಡಿ ವಿವಿಧ ಕಟ್ಟೆಗಳಲ್ಲಿ ಪೂಜೆಗೊಂಡು ಭಕ್ತಾದಿಗಳನ್ನು ಪುನೀತರಾಗಿಸುವುದು ವಿಶೇಷತೆಯಾಗಿದ್ದು, ಈ ಮೂಲಕ ಮನೆ ಬಾಗಿಲಿಗೆ ಬರುವ ದೇವರು ಎಂದೇ ಖ್ಯಾತಿ

ಧ್ವಜಾವರೋಹಣದೊಂದಿಗೆ ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರನ ಜಾತ್ರೋತ್ಸವ ಸಂಪನ್ನ | ಭಕ್ತ ಸಮೂಹವನ್ನೇ ಪುಳಕಿತಗೊಳಿಸುವ ವೈಭವದ ಜಾತ್ರೋತ್ಸವ Read More »

ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ಸಂಪನ್ನ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ವೀರಮಂಗಲ ಕುಮಾರಧಾರ ಹೊಳೆಯಲ್ಲಿ ಅತ್ಯಂತ ವೈಭವದಿಂದ ಇಂದು ಮುಂಜಾನೆ ನಡೆಯಿತು. ಗುರುವಾರ ಸಂಜೆ ಶ್ರೀ ದೇವಸ್ಥಾನದಲ್ಲಿ ಬಲಿ ಉತ್ಸವ ನಡೆದು ಬಳಿಕ ರಕ್ತೇಶ್ವರಿ ದೈವದೊಂದಿಗೆ ಮಾತುಕತೆ ನಡೆದು ನಂತರ ಹೊರಟ ಶ್ರೀ ದೇವರು ನೂರಾರು ಕಟ್ಟೆಗಳಲ್ಲಿ ಪೂಜೆಗೊಂಡು ದೂರದ ವೀರಮಂಗಲವನ್ನು ಇಂದು ಮುಂಜಾನೆ ತಲುಪಿದರು. ಅಲ್ಲಿ ಇಂದು ಮುಂಜಾನೆ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ಅವಭೃತ ಸ್ನಾನ ಮುಗಿಸಿ ಕಟ್ಟೆಪೂಜೆ ಗೊಂಡು ಪುನಃ ಹಿಂತಿರುಗಿದರು.

ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ಸಂಪನ್ನ Read More »

ಏ.21 : ಕಲ್ಕಾರು ಕುಟುಂಬಸ್ಥರ ಶ್ರೀ ನಾಗದೇವರು,  ಶ್ರೀ ಮಹಮ್ಮಾಯ ಅಮ್ಮನವರ, ಶ್ರೀ ಅಣ್ಣಪ್ಪ ಪಂಜುರ್ಲಿ, ಕಲ್ಲುರ್ಟಿ ಪಂಜುರ್ಲಿ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕಲ್ಕಾರು ಎಂಬಲ್ಲಿ ಕಲ್ಕಾರು ಕುಟುಂಬಸ್ಕರ ನೂತನವಾಗಿ ನಿರ್ಮಿಸಿರುವ ಚಿತ್ರಕೂಟದಲ್ಲಿ ನಾಗದೇವರು ದೈವಸ್ಥಾನಗಳಲ್ಲಿ ಶ್ರೀ ಮಹಮ್ಮಾಯ ಅಮ್ಮನವರು, ಶ್ರೀ ಅಣ್ಣಪ್ಪ ಪಂಜುರ್ಲಿ, ಕಲ್ಲುರ್ಟಿ ಪಂಜುರ್ಲಿ ಹಾಗೂ ಪರಿವಾರ ದೈವದ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಏ.21 ಭಾನುವಾರ ಬೆಳಿಗ್ಗೆ 9.45 ರಿಂದ 10.25 ರ ಮಿಥುನ ಲಗ್ನದಲ್ಲಿ ಬ್ರಹ್ಮಶ್ರೀ ಬಡಾಜೆ ಗೋಪಾಲಕೃಷ್ಣ ತಂತ್ರಿಗಳ ದಿವ್ಯ ಹಸ್ತದಲ್ಲಿ ಜರಗಲಿದೆ ಎಂದು ಕಲ್ಕಾರು ದೈವ ದೇವರುಗಳ ಕಾರ್ಯಕಾರಿ ಸಮಿತಿ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ತಿಳಿಸಿದ್ದಾರೆ. ಅವರು

ಏ.21 : ಕಲ್ಕಾರು ಕುಟುಂಬಸ್ಥರ ಶ್ರೀ ನಾಗದೇವರು,  ಶ್ರೀ ಮಹಮ್ಮಾಯ ಅಮ್ಮನವರ, ಶ್ರೀ ಅಣ್ಣಪ್ಪ ಪಂಜುರ್ಲಿ, ಕಲ್ಲುರ್ಟಿ ಪಂಜುರ್ಲಿ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ Read More »

error: Content is protected !!
Scroll to Top