ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಷಷ್ಠಿ ಮಹೋತ್ಸವ | ಸಾವಿರಾರು ಮಂದಿ ಭಕ್ತರ ಪಾಲ್ಗೊಳ್ಳುವಿಕೆ
ಪುತ್ತೂರು: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಶನಿವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶುಕ್ರವಾರ ಬೆಳಿಗ್ಗೆ 10 ರಿಂದ ಪಂಚಾಮೃತಾಭಿಷೇಕ, ಕಲಶಾಭಿಷೇಕ, ಮಧ್ಯಾಹ್ನ 12 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಂಜೆ 3 ಕ್ಕೆ ಶ್ರೀಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಸಂಜೆ 6 ರಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಹಾಗೂ […]