ಧಾರ್ಮಿಕ

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನಕ್ಕೆ ಭೇಟಿ ನೀಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಾಣಿ: ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ನಡೆಯುತ್ತಿದ್ದು, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿದರು. ದೈವಸ್ಥಾನಕ್ಕೆ ಭೇಟಿ ನೀಡಿದ ಅವರು ಶ್ರೀ ಉಳ್ಳಾಲ್ತಿ ಅಮ್ಮನವರ ದರ್ಶನ ಪಡೆದು ಗಂಧ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ ಮುಖ್ಯಸ್ಥರು, ಭಕ್ತಾದಿಗಳು ಉಪಸ್ಥಿತರಿದ್ದರು.

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನಕ್ಕೆ ಭೇಟಿ ನೀಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ Read More »

ಕುಂದರ್ ಕುಟುಂಬಸ್ಥರ ನಾಗಬನದಲ್ಲಿ ನಾಗಪ್ರತಿಷ್ಠೆ

ಪಂಜ : ಕುಂದರ್ ಕುಟುಂಬಸ್ಥರ ನಾಗಬನದ ನಾಗಾಪ್ರತಿಷ್ಠೆ ಕಾರ್ಯಕ್ರಮ ಪಂಜದ ಶೆಟ್ಟಿಮೂಲೆ ಎಂಬಲ್ಲಿ ನಡೆಯಿತು. ಕುಟುಂಬದ ಹಿರಿಯರಾದ ರತ್ನಾಕರ ಸುವರ್ಣ, ಆನಂದ ಪೂಜಾರಿ ಅಡೆಕಲ್ಲು, ಹಾಗೂ 150 ಮಂದಿ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪಂಜದ ಶೆಟ್ಟಿಮೂಲೆಯಲ್ಲಿನ ನಾಗಬನದ ಉಸ್ತುವಾರಿಯನ್ನು ಪ್ರಸ್ತುತ ಮಂಗಳೂರಿನ ಕುಂದರ್ ಕುಟುಂಬಸ್ಥರು ನಡೆಸಿಕೊಂಡು ಬರುತಿದ್ದಾರೆ. ಮಂಗಳೂರಿನ ಕುಂದರ್ ಕುಟುಂಬಸ್ಥರು ಮೂಲತಃ ಪಂಜದ ಶೆಟ್ಟಿಮೂಲೆಯವರು. ಹಲವು ವರ್ಷಗಳ ಹಿಂದೆ ಕುಂದರ್ ವಂಶಸ್ಥರು ಎರಡು ಕವಲುಗಳಾಗಿ ಒಂದು ಕವಲು ಮಂಗಳೂರಿನತ್ತ ಪಯಣ ಬೆಳೆಸಿತು ಎಂದು ತಿಳಿದು ಬಂದಿರುತ್ತದೆ.

ಕುಂದರ್ ಕುಟುಂಬಸ್ಥರ ನಾಗಬನದಲ್ಲಿ ನಾಗಪ್ರತಿಷ್ಠೆ Read More »

ಫೆ.13: ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ, ಪರಿವಾರ ದೈವಗಳ ಕಾಲಾವಧಿ ಮೆಚ್ಚಿ ಜಾತ್ರೆ

ಕೆಲಿಂಜ: ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಹಾಗೂ ಪರಿವಾರ ದೈವಗಳ ಕಾಲಾವಧಿ ಮೆಚ್ಚಿ ಜಾತ್ರೆ ಫೆ. 14 ಬುಧವಾರ ರಾತ್ರಿ ನಡೆಯಲಿದೆ. ಜಾತ್ರೆಯ ಪ್ರಯುಕ್ತ ಫೆ.13 ಮಂಗಳವಾರ ರಾತ್ರಿ ಶ್ರೀ ಉಳ್ಳಾಲ್ತಿ ಮಲರಾಯ ಮೂಲ ಭಂಡಾರ ಚಾವಡಿ ಬೆಂಞಣ್ತಿಮಾರ್ ಗುತ್ತಿನಿಂದ ಕೆಲಿಂಜ ಶ್ರೀ ಅಮ್ಮನವರ ಸನ್ನಿಧಾನಕ್ಕೆ ಭಂಡಾರ ಆಗಮನವಾಗಲಿದೆ. ಬೆಳಿಗ್ಗೆ 8 ಗಂಟೆಗೆ ತಂತ್ರಿವರ್ಯರ ಆಗಮನ, 9ಕ್ಕೆ ಪ್ರಾರ್ಥನೆ, ಬಿಂಬ ಶುದ್ಧಿ ನಡೆದು ಬಳಿಕ ಬೆಳಿಗ್ಗೆ 10ಕ್ಕೆ ಬಂಟ್ವಾಳ ಬಡ್ಡಕಟ್ಟೆ ಶ್ರೀ ಸದ್ಗುರು ನಿತ್ಯಾನಂದ ಗೋವಿಂದ ಸ್ವಾಮಿ

ಫೆ.13: ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ, ಪರಿವಾರ ದೈವಗಳ ಕಾಲಾವಧಿ ಮೆಚ್ಚಿ ಜಾತ್ರೆ Read More »

ಗೊನೆ ಮುಹೂರ್ತ ಕಾರ್ಯಕ್ರಮ- ಶ್ರೀ ಉಳ್ಳಾಲ್ತಿ ದೈವಸ್ಥಾನ ಕೆಲಿಂಜ

ಕೆಲಿಂಜ: ಫೆ. 14ರಂದು ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ಮೆಚ್ಚಿ ಜಾತ್ರೆಯು ನಡೆಯಲಿದ್ದು, ಆ ಪ್ರಯುಕ್ತ ಅನಂತಕೋಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಪ್ರಾರ್ಥನೆ ಸಲ್ಲಿಸಿ  ಪುಂಡಿಕಾಯಿ ಮನೆಯಲ್ಲಿ ಗೊನೆ ಮುಹೂರ್ತ ಕಾರ್ಯಕ್ರಮವು ನಡೆಯಿತು.  ಈ ಸಂದರ್ಭ ಊರಿನ ಮೊಕ್ತೇಸರರು, ಊರಿನ ಹಿರಿಯರು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.    ಕ್ಷೇತ್ರದ ಗೊನೆಮುಹೂರ್ತದ ವಿಶೇಷತೆ ಇಲ್ಲಿದೆ : ಜಾತ್ರೋತ್ಸವದ ತಯಾರಿಯ ಬಗ್ಗೆ ಯಾವುದೇ ಸಲಹೆ ಸೂಚನೆಗಳಿದ್ದರೂ ಗೊನೆ ಕಡಿಯುವ ಮೊದಲು ಪ್ರಸ್ತಾಪಿಸಬೇಕು ನಂತರ ಅದರ ಬಗ್ಗೆ ಯಾರೂ ಪ್ರಸ್ತಾಪಿಸುವಂತಿಲ್ಲ.ಹಿಂದಿನ

ಗೊನೆ ಮುಹೂರ್ತ ಕಾರ್ಯಕ್ರಮ- ಶ್ರೀ ಉಳ್ಳಾಲ್ತಿ ದೈವಸ್ಥಾನ ಕೆಲಿಂಜ Read More »

ಪಣೋಲಿಬೈಲಿನಲ್ಲಿ ಕೋಲದ ಹರಕೆ ತೀರಿಸಿದ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ | ಮುಸ್ಲಿಂ ಮುಖಂಡರೊಬ್ಬರಿಂದ ವಿರೋಧಿಸಿ ಪೋಸ್ಟ್ ಹಂಚಿಕೆ

ಮಂಗಳೂರು: ಇಷ್ಟಾರ್ಥ ಸಿದ್ಧಿಗಾಗಿ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದು, ಇದೀಗ ಮುಸ್ಲಿಂ  ಮುಖಂಡರೋರ್ವರು ವಿರೋಧ ವ್ಯಕ್ತಪಡಿಸಿದ್ದಾರೆ. ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದ ಖಾದ‌ರ್ ಪ್ರದಾಯ ಬದ್ಧವಾಗಿ ಕೋಲ ನೆರವೇರಿಸಿ ಕಲ್ಲುರ್ಟಿ- ಕಲ್ಕುಡ ದೈವಗಳ ಆಶೀರ್ವಾದ ಪಡೆದಿದ್ದರು.. ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಎಂಬುವವರು ಯು.ಟಿ. ಖಾದರ್ ಬಗ್ಗೆ ಆಕ್ಷೇಪಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಕೊರಗಜ್ಜನ ಭಕ್ತ ಯು.ಟಿ ಖಾದರ್ ನನ್ನು ಮುಸ್ಲಿಮರು

ಪಣೋಲಿಬೈಲಿನಲ್ಲಿ ಕೋಲದ ಹರಕೆ ತೀರಿಸಿದ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ | ಮುಸ್ಲಿಂ ಮುಖಂಡರೊಬ್ಬರಿಂದ ವಿರೋಧಿಸಿ ಪೋಸ್ಟ್ ಹಂಚಿಕೆ Read More »

ಫೆ.13: ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನದ ವರ್ಷಾವಧಿ ಉತ್ಸವ, ಕುಟುಂಬ ದೈವಗಳ ವಾರ್ಷಿಕ ತಂಬಿಲ

ಪುತ್ತೂರು: ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನದ ವರ್ಷಾವಧಿ ಉತ್ಸವ ಹಾಗೂ ಕುಟುಂಬದ ಧರ್ಮ ದೈವಗಳ ವಾರ್ಷಿಕ ತಂಬಿಲ ಫೆ.13 ಮಂಗಳವಾರ ಶ್ರೀ ದೇವಸ್ಥಾನದಲ್ಲಿ ನಡೆಯಲಿದೆ. ಉತ್ಸವದ ಅಂಗವಾಗಿ ಫೆ.7 ರಂದು ಬೆಳಿಗ್ಗೆ 8 ಕ್ಕೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಹಾಗೂ ಬ್ರಹ್ಮಶ್ರೀ ದಿನೇಶ್ ಮರಡಿತ್ತಾಯ ಗುಮ್ಮಟಗದ್ದೆ ಅವರ ನೇತೃತ್ವದಲ್ಲಿ ಗೊನೆ ಕಡಿಯುವುದು. ಫೆ.13 ರಂದು ಬೆಳಿಗ್ಗೆ 9 ಕ್ಕೆ ಬೈಲಾಡಿ ಮನೆಯಲ್ಲಿ ಶ್ರೀ ವೆಂಕಟರಮಣ ದೇವರ ಮುಡಿಪು ಪೂಜೆ, ಬೆಳಿಗ್ಗೆ 8 ಕ್ಕೆ ದೇವಸ್ಥಾನದಲ್ಲಿ ದೇವತಾ

ಫೆ.13: ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನದ ವರ್ಷಾವಧಿ ಉತ್ಸವ, ಕುಟುಂಬ ದೈವಗಳ ವಾರ್ಷಿಕ ತಂಬಿಲ Read More »

ಭಗವಂತನ ಕೆಲಸದಲ್ಲಿ ಕೈ ಜೋಡಿಸಿದರೆ ಅನುಗ್ರಹ ಪ್ರಾಪ್ತಿ: ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ | ಪಶುಪತಿನಾಥ ಭಜನಾ ಮಂದಿರದ ನೀಲನಕಾಶೆ ಅನಾವರಣಗೊಳಿಸಿದ ರಾಘವೇಶ್ವರ ಶ್ರೀ

ಪುತ್ತೂರು: ಭಗವಂತ ಕೈಗೊಳ್ಳುವ ಕೆಲಸದಲ್ಲಿ ನಾವು ಕೈಜೋಡಿಸಿದರೆ ಭಗವಂತನ ಅನುಗ್ರಹ ಪ್ರಾಪ್ತಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಹಾಗಾಗಿ ಪ್ರತಿಯೊಂದು ಮನೆಯಲ್ಲೂ ಗೋಸಾಕಣೆ, ಗೋವಿನ ಆರಾಧನೆ ಮಾಡಬೇಕಾದ ಅಗತ್ಯವಿದೆ ಎಂದು ಉಡುಪಿ ಅದಮಾರು ಮಠದ ಹಿರಿಯ ಶ್ರೀಗಳಾದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹೇಳಿದರು. ಅವರು ಭಾನುವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ, ಶ್ರೀ ಮಹಾಲಿಂಗೇಶ್ವರ ಗೋಸೇವಾ ಬಳಗದ ನೇತೃತ್ವದಲ್ಲಿ ಮೊಟ್ಟೆತ್ತಡ್ಕ ಎನ್.ಆರ್.ಸಿ.ಸಿ. ಸಮೀಪದ ಸಂಪ್ಯದಮೂಲೆಯ ಗೋವಿಹಾರ ಧಾಮದಲ್ಲಿ ಎರಡು ದಿನಗಳ ಕಾಲ ನಡೆದ ಗೋಲೋಕೋತ್ಸವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಭಗವಂತನ ಕೆಲಸದಲ್ಲಿ ಕೈ ಜೋಡಿಸಿದರೆ ಅನುಗ್ರಹ ಪ್ರಾಪ್ತಿ: ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ | ಪಶುಪತಿನಾಥ ಭಜನಾ ಮಂದಿರದ ನೀಲನಕಾಶೆ ಅನಾವರಣಗೊಳಿಸಿದ ರಾಘವೇಶ್ವರ ಶ್ರೀ Read More »

ನಳೀಲು ದೇವಸ್ಥಾನದ ಮಹಾದ್ವಾರ, ರಸ್ತೆ ಉದ್ಘಾಟಿಸಿದ ಶಾಸಕ ಅಶೋಕ್ ರೈ | ಫೆ. 17ರಿಂದ 24ರವರೆಗೆ ನಡೆಯಲಿದೆ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ

ಪೆರ್ಲಂಪಾಡಿ: ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಹಾದ್ವಾರ ಹಾಗೂ ರಸ್ತೆಯ ಉದ್ಘಾಟನೆಯನ್ನು ಶಾಸಕ ಹಾಗೂ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಅಶೋಕ್ ಕುಮಾರ್ ರೈ ಅವರು ಫೆ. 4ರಂದು ನೆರವೇರಿಸಿದರು. ಫೆ. 17ರಿಂದ 24ರವರೆಗೆ ನಳೀಲು ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಸಂದರ್ಭ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಶಾಸಕ ಅಶೋಕ್ ಕುಮಾರ್ ರೈ ಅವರು ತನ್ನ ಶಾಸಕ ನಿಧಿಯಿಂದ 20 ಲಕ್ಷ ರೂ. ಮಂಜೂರು ಮಾಡಿದ್ದರು. ಈ ರಸ್ತೆಯ ಕಾಮಗಾರಿ ಪೂರ್ಣಗೊಂಡಿದ್ದು,

ನಳೀಲು ದೇವಸ್ಥಾನದ ಮಹಾದ್ವಾರ, ರಸ್ತೆ ಉದ್ಘಾಟಿಸಿದ ಶಾಸಕ ಅಶೋಕ್ ರೈ | ಫೆ. 17ರಿಂದ 24ರವರೆಗೆ ನಡೆಯಲಿದೆ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ Read More »

ಗೋವು ಮನುಷ್ಯನ ಜೀವನದ ಅವಿಭಾಜ್ಯ ಅಂಗ | ಗೋಲೋಕೋತ್ಸವದಲ್ಲಿ ಹರೀಶ್ ರಾವ್

ಪುತ್ತೂರು: ಗೋವು ನಮ್ಮ ಜೀವನದ ಅವಿಭಾಜ್ಯ ಅಂಗ. ದುರಾದೃಷ್ಟವಶಾತ್ ಇಂದಿನ ಜನಾಂಗ ಅದನ್ನು ಮರೆಯುತ್ತಿದ್ದು, ಮುಂದಿನ ಪೀಳಿಗೆಗೆ ಗೋವಿನ ಮಹತ್ವದ ಕುರಿತು ತಿಳಿಹೇಳಬೇಕಾದ ಅಗತ್ಯವಿದೆ ಎಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಹೇಳಿದರು. ಅವರು ಭಾನುವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ, ಶ್ರೀ ಮಹಾಲಿಂಗೇಶ್ವರ ಗೋಸೇವಾ ಬಳಗದ ನೇತೃತ್ವದಲ್ಲಿ ಮೊಟ್ಟೆತ್ತಡ್ಕ ಎನ್‍.ಆರ್‍..ಸಿ.ಸಿ. ಸಮೀಪದ ಸಂಪ್ಯದಮೂಲೆಯಲ್ಲಿರುವ ಗೋವಿಹಾರ ಧಾಮದಲ್ಲಿ ಎರಡು ದಿನಗಳ ಕಾಲ ನಡೆದ ಗೋಲೋಕೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಗೋವು-ನಾವು

ಗೋವು ಮನುಷ್ಯನ ಜೀವನದ ಅವಿಭಾಜ್ಯ ಅಂಗ | ಗೋಲೋಕೋತ್ಸವದಲ್ಲಿ ಹರೀಶ್ ರಾವ್ Read More »

ಧರ್ಮಗಳ ಬಗ್ಗೆ ಅರಿತುಕೊಂಡರೆ ಸೌಹಾರ್ದತೆ ನೆಲೆಸಲು ಸಾಧ್ಯ: ಶಾಸಕ ಅಶೋಕ್ ರೈ

ಪುತ್ತೂರು: ನಾನೇ ಶ್ರೇಷ್ಠ, ನನ್ನ ಧರ್ಮ ಮಾತ್ರ ಶ್ರೇಷ್ಠ ಉಳಿದವು ಶೂನ್ಯ ಎಂಬ ಭಾವನೆ ನಮ್ಮಲ್ಲಿ ಇರಬಾರದು, ಎಲ್ಲಾ ಧರ್ಮಗಳು ಒಳಿತನ್ನೇ ಕಲಿಸಿಸುತ್ತದೆ, ಧರ್ಮಗಳ ಬಗ್ಗೆ ಪರಸ್ಪರ ಅರಿತುಕೊಂಡಲ್ಲಿ ಸಮಾಜದಲ್ಲಿ ಸೌಹಾರ್ಧತೆಯನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಪುರುಷರಕಟ್ಟೆ ಮದ್ರಸ ವಠಾರದಲ್ಲಿ ನಡೆಯುತ್ತಿರುವ ಧಾರ್ಮಿಕ ಮತಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಕ್ಕಳಿಗೆ ಸಣ್ಣ ಪ್ರಾಯದಲ್ಲೇ ನಮ್ಮ ಧರ್ಮದ ಆಚಾರ ವಿಚಾರಗಳನ್ನು ಕಲಿಸಬೇಕು. ತನ್ನ ಧರ್ಮವನ್ನು ಅರಿತುಕೊಳ್ಳುವುದರ ಜೊತೆಗೆ ಸಹೋದರ ಧರ್ಮದ

ಧರ್ಮಗಳ ಬಗ್ಗೆ ಅರಿತುಕೊಂಡರೆ ಸೌಹಾರ್ದತೆ ನೆಲೆಸಲು ಸಾಧ್ಯ: ಶಾಸಕ ಅಶೋಕ್ ರೈ Read More »

error: Content is protected !!
Scroll to Top