ಅಯೋಧ್ಯೆಯಲ್ಲಿ ಶ್ರೀ ರಾಮ ಪ್ರಾಣಪ್ರತಿಷ್ಠೆ | ರಾಮಕ್ಷತ್ರೀಯ ಸೇವಾ ಸಂಘದಿಂದ ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರದಲ್ಲಿ ವಿಶೇಷ ಮಹಾಪೂಜೆ
ಪುತ್ತೂರು: ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಕೆಮ್ಮಿಂಜೆ ಶ್ರೀರಾಮ ಭಜನಾ ಮಂಡಳಿ ಹಾಗೂ ರಾಮಕ್ಷತ್ರೀಯ ಸೇವಾ ಸಂಘದ ಜಂಟಿ ಆಶ್ರಯದಲ್ಲಿ ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರದಲ್ಲಿ ವಿಶೇಷ ಮಹಾಪೂಜೆ ನಡೆಯಿತು. ಈ ಸಂದರ್ಭದಲ್ಲಿ ಆಗಮಿಸಿದ ರಾಮಭಕ್ತರು ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮನ ಪ್ರಾಣಪ್ರತಿಷ್ಠೆಯನ್ನು ಎಲ್.ಇ.ಡಿ. ಪರದೆ ಮೂಲಕ ವೀಕ್ಷಿಸಿದರು. ಕಾರ್ಯಕ್ರಮದ ಅಂಗವಾಗಿ ಶ್ರೀರಾಮ ಮತ್ತು ಆಂಜನೇಯ ವೇಷಧಾರಿಗಳನ್ನು ಬೊಳುವಾರಿನಿಂದ ಮೆರವಣಿಗೆ ಮೂಲಕ ಕರೆ ತರಲಾಯಿತು. ಕರಸೇವಕ ಚಂದ್ರಶೇಖರ ರಾವ್ ಬಪ್ಪಳಿಗೆ […]










