ಧಾರ್ಮಿಕ

ಜ. 25: ಕೈಂದಾಡಿ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನೇಮೋತ್ಸವ | ಯಶಸ್ಸಿಗಾಗಿ ನಡೆಯಿತು ಪೂರ್ವಭಾವಿ ಸಭೆ

ಪುತ್ತೂರು:: ಶಾಂತಿಗೋಡು ಗ್ರಾಮದ ಕೈಂದಾಡಿ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಜ. 25ರಂದು ನಡೆಯಲಿರುವ ಶಿರಾಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ದೈವಸ್ಥಾನದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ನೇಮೋತ್ಸವವನ್ನು ಯಶಸ್ವಿಯಾಗಿ ನಡೆಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಕೂಸಪ್ಪ ಗೌಡ ಕಲ್ಕಾರು, ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಸುಬ್ರಹ್ಮಣ್ಯ ಭಟ್ ತೊಳ್ಪಾಡಿ, ಶ್ಯಾಮ್ ಭಟ್ ಕೈಂದಾಡಿ, ಮೋಹನ್ ಗೌಡ ಪಾದೆ, ದೇವಪ್ಪ ಓಲಾಡಿ, ಸೀತಾರಾಮ ಓಲಾಡಿ, ಹೋನಪ್ಪ ಗೌಡ ಕೈಂದಾಡಿ, […]

ಜ. 25: ಕೈಂದಾಡಿ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನೇಮೋತ್ಸವ | ಯಶಸ್ಸಿಗಾಗಿ ನಡೆಯಿತು ಪೂರ್ವಭಾವಿ ಸಭೆ Read More »

ಅಮರ ಕಾಸ್ಪಾಡಿ ಶ್ರೀ ಇರ್ವೆರ್ ಉಳ್ಳಾಕುಲು ದೈವಗಳಿಗೆ ಬಂಡಿ ಸಮರ್ಪಣೆ

ಪುತ್ತೂರು: ಚಾರ್ವಾಕ ಅಮರ ಕಾಸ್ಪಾಡಿ ಶ್ರೀ ಇರ್ವೆರ್ ಉಳ್ಳಾಕುಲು ದೈವಗಳಿಗೆ 125 ವರ್ಷದ ನಂತರ ಬಂಡಿ ಸಮರ್ಪಣೆಯಾಗಿದೆ. ಮಂಗಳವಾರ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ಪ್ರಾರ್ಥನೆ ನೆರವೇರಿಸಿ ಬಂಡಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತಿತರರು ಉಪಸ್ಥಿತರಿದ್ದರು.

ಅಮರ ಕಾಸ್ಪಾಡಿ ಶ್ರೀ ಇರ್ವೆರ್ ಉಳ್ಳಾಕುಲು ದೈವಗಳಿಗೆ ಬಂಡಿ ಸಮರ್ಪಣೆ Read More »

ವಿಟ್ಲ ಜಾತ್ರೋತ್ಸವದಲ್ಲಿ ಸಮರ್ಪಣ್ ವಿಟ್ಲ ಅರ್ಪಿಸುವ ಶಾಂಭವಿ ನಾಟಕ ಪ್ರದರ್ಶನ | ಸಮರ್ಪಣ್ ವಿಟ್ಲದ ಸಾಮಾಜಿಕ ಕಾರ್ಯ ಶ್ಲಾಘನೀಯ: ರಾಜೇಂದ್ರ ಪ್ರಸಾದ್ ಶೆಟ್ಟಿ

ವಿಟ್ಲ: ಇಲ್ಲಿನ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸಮರ್ಪಣ್ ವಿಟ್ಲ ಅರ್ಪಿಸುವ ಶಾಂಭವಿ ತುಳು ಹಾಸ್ಯಮಯ ನಾಟಕದ ಹಿನ್ನೆಲೆಯಲ್ಲಿ ಸಭಾ ಕಾರ್ಯಕ್ರಮ ಜ. 15ರಂದು ರಾತ್ರಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ ಮಾತನಾಡಿ, ಸಾಮಾಜಿಕ ಚಟುವಟಿಕೆಗೆ ಹಿನ್ನಡೆ ಆಗುತ್ತಿರುವ ಇಂದಿನ ಕಾಲದಲ್ಲಿ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಸಮರ್ಪಣ್ ವಿಟ್ಲ ಇದರ ಕಾರ್ಯ ಮೆಚ್ಚುವಂತಹದ್ದು. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪಿ, ಅವರ ಸೇವೆಯನ್ನು ಗುರುತಿಸಿ

ವಿಟ್ಲ ಜಾತ್ರೋತ್ಸವದಲ್ಲಿ ಸಮರ್ಪಣ್ ವಿಟ್ಲ ಅರ್ಪಿಸುವ ಶಾಂಭವಿ ನಾಟಕ ಪ್ರದರ್ಶನ | ಸಮರ್ಪಣ್ ವಿಟ್ಲದ ಸಾಮಾಜಿಕ ಕಾರ್ಯ ಶ್ಲಾಘನೀಯ: ರಾಜೇಂದ್ರ ಪ್ರಸಾದ್ ಶೆಟ್ಟಿ Read More »

ಜ.22 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ

ಪುತ್ತೂರು: ಜ.22 ರಂದು ಆಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಅಂಗವಾಗಿ ಪುತ್ತೂರು ರಾಮಕ್ಷತ್ರೀಯ ಸಮಾಜ ಬಾಂಧವರಿಂದ ಪುತ್ತೂರು ಕೆಮ್ಮಿಂಜೆಯಲ್ಲಿರುವ ಶ್ರೀರಾಮ ಭಜನಾ ಮಂದಿರದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಈ ಕುರಿತು ಪೂರ್ವಭಾವಿ ಸಭೆ ಸೋಮವಾರ ಕೆಮ್ಮಿಂಜೆ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 10 ಗಂಟೆಗೆ ಶ್ರೀ ರಾಮರಕ್ಷಾಸ್ತ್ರೋತ್ರ ವಿಷ್ಣು ಸಹಸ್ರನಾಮ, 11 ಗಂಟೆಯಿಂದ ಭಜನೆ ಭಜನೆ, ಮಧ್ಯಾಹ್ನ ಮಹಾಪೂಜೆ, ಬಳಿಕ ಅನ್ನಸಂತರ್ಪಣೆ ನಡೆಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ರಾಮಕ್ಷತ್ರೀಯ ಸಂಘದ ಅಧ್ಯಕ್ಷ ಸುರೇಶ್ ಕೆಮ್ಮಿಂಜೆ,

ಜ.22 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ Read More »

ರಾಮನ ಪ್ರತಿಷ್ಠೆಯಂದು ಹಳ್ಳಿ ಹಳ್ಳಿಗಳಲ್ಲಿ ಸಂಭ್ರಮ ಪಡಬೇಕು | ಕಥನ ಶ್ರೀರಾಮ ಕಥಾವೈಭವ ಕಾರ್ಯಕ್ರಮ ಉದ್ಘಾಟಿಸಿ ಡಾ.ಕಲ್ಲಡ್ಕ ಪ್ರಭಾಕರ ಭಟ್

ಪುತ್ತೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದ್ದು, ರಾಮ ಪ್ರತಿಷ್ಠೆಯಂದು ಹಳ್ಳಿ ಹಳ್ಳಿಗಳಲ್ಲಿ ಸಂಭ್ರಮ ಪಡಬೇಕು. ರಾಮ ಪ್ರತಿಷ್ಠೆಯಿಂದ ಮನುಷ್ಯನ ಜತೆ ಜೀವ ಸಂಕುಲಕ್ಕೂ ಒಳಿತಾಗಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ತೆಂಕಿಲದಲ್ಲಿ ಶ್ರೀರಾಮ ಕಥಾವೈಭವ ಸಾಂಸ್ಕೃತಿಕ ಸಮಿತಿ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವೈಭವದ ಅಯೋಧ್ಯೆಯ ಸಮಗ್ರ ಕಥನ ಶ್ರೀರಾಮ ಕಥಾವೈಭವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬೆಂಗಳೂರು ಎಂ.ಆರ್. ಜಿ. ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ

ರಾಮನ ಪ್ರತಿಷ್ಠೆಯಂದು ಹಳ್ಳಿ ಹಳ್ಳಿಗಳಲ್ಲಿ ಸಂಭ್ರಮ ಪಡಬೇಕು | ಕಥನ ಶ್ರೀರಾಮ ಕಥಾವೈಭವ ಕಾರ್ಯಕ್ರಮ ಉದ್ಘಾಟಿಸಿ ಡಾ.ಕಲ್ಲಡ್ಕ ಪ್ರಭಾಕರ ಭಟ್ Read More »

ಕೆಮ್ಮಾಯಿ ಶ್ರೀ ವಿಷ್ಣು ಯುವಕ ಮಂಡಲದ 27ನೇ ವಾರ್ಷಿಕೋತ್ಸವ | ಅಶ್ವತ್ಥ ಮಹೋತ್ಸವ

ಪುತ್ತೂರು: ಕೆಮ್ಮಾಯಿ ಶ್ರೀ ವಿಷ್ಣು ಯವಕ ಮಂಡಲದ 27ನೇ ವರ್ಷದ ವಾರ್ಷಿಕೋತ್ಸವ, ಅಶ್ವತ್ಥ ಮಹೋತ್ಸವ ಹಾಗೂ ಶನೈಶ್ಚರ ಗ್ರಹವೃತ ಕಲ್ಪೋಕ್ತ ಪೂಜೆ ಸೋಮವಾರ ಬೆಳಿಗ್ಗೆಯಿಂದ ನಡೆಯುತ್ತಿದೆ. ವೈದಿಕರು ವೈದಿಕ ಕಾರ್ಯಕ್ರಮಗಳೊಂದಿಗೆ ಪೂಜಾ ವಿವಿಧಾನಗಳನ್ನು ನೆರವೇರಿಸಿದರು. ಕಾರ್ಯಕ್ರಮದ ಅಂಗವಾಗಿ ವಿವಿಧ ಭಜನಾ ಮಂಡಳಿಗಳಿಂದ ಕುಣಿತ ಭಜನಾ ಕಾರ್ಯಕ್ರಮ ನೆರೆದಿದ್ದವರ ಕಣ್ಮನ ಸೆಳೆದವು.

ಕೆಮ್ಮಾಯಿ ಶ್ರೀ ವಿಷ್ಣು ಯುವಕ ಮಂಡಲದ 27ನೇ ವಾರ್ಷಿಕೋತ್ಸವ | ಅಶ್ವತ್ಥ ಮಹೋತ್ಸವ Read More »

ಆರ್ಲಪದವು ಪೂಮಾಣಿ- ಕಿನ್ನಿಮಾಣಿ-ಪಿಲಿಭೂತ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಸಭೆ

ಪುತ್ತೂರು: ಪಾಣಾಜೆ ಆರ್ಲಪದವು ಪೂಮಾಣಿ- ಕಿನ್ನಿಮಾಣಿ-  ಪಿಲಿಭೂತ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಸಭೆ ಪಾಣಾಜೆ ಶ್ರೀ ರಣಮಂಗಳ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಭಾನುವಾರ ನಡೆಯಿತು. ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ, ಶಾಸಕ ಅಶೋಕ್ ರೈ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ಭಕ್ತಾದಿಗಳ ಸಹಕಾರದಿಂದ ಜೀರ್ಣೋದ್ದಾರ ಕಾರ್ಯ ನಡೆಯಲಿದೆ. ಪಾಣಾಜೆ, ಬೆಟ್ಟಂಪಾಡಿ ಮತ್ತು ನಿಡ್ಪಳ್ಳಿ ಗ್ರಾಮಗಳು ನನ್ನ ಗ್ರಾಮಗಳು. ಶಾಸಕನಾಗುವ ಮೊದಲೇ ನಾನು ಈ ಮೂರುಗ್ರಾಮಗಳ ಗ್ರಾಮಸ್ಥರ ಜೊತೆ ಅತಿ ಹತ್ತಿರದ ಸಂಪರ್ಕ ಹೊಂದಿದ್ದೇನೆ. ಯಾವುದೇ ಲೋಪದೋಷಗಳಿಲ್ಲದೆ ಜೀರ್ಣೋದ್ದಾರ

ಆರ್ಲಪದವು ಪೂಮಾಣಿ- ಕಿನ್ನಿಮಾಣಿ-ಪಿಲಿಭೂತ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಸಭೆ Read More »

ಧ್ವಜಾರೋಹಣದ ಮೂಲಕ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಧ್ವಜಾರೋಹಣದ ಮೂಲಕ ಭಾನುವಾರ ಚಾಲನೆ ನೀಡಲಾಯಿತು. ಜ.21 ರ ತನಕ ನಡೆಯುವ ಜಾತ್ರೋತ್ಸವದ ಅಂಗವಾಗಿ ಜ.14 ರಂದು ಬೆಳಿಗ್ಗೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಇಂದು ರಾತ್ರಿ 8.30 ಕ್ಕೆ ಶ್ರೀ ದೇವರಿಗೆ ಲಕ್ಷದೀಪೋತ್ಸವ, ಉತ್ಸವ ಬಲಿ, ಕಟ್ಟೆಪೂಜೆ ಜರಗಲಿದೆ. ಸಂಜೆ 6 ಕ್ಕೆ ಅರಸು ಮುಂಡಲತ್ತಾಯ ದೈವದ ಭಂಡಾರ ಕ್ಷೇತ್ರಕ್ಕೆ ಆಗಮನವಾಗಲಿದೆ. 6.30 ರಿಂದ ಭಜನ್ ಸಂಧ್ಯಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7.30 ರಿಂದ ಚಾ ಪರ್ಕ

ಧ್ವಜಾರೋಹಣದ ಮೂಲಕ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ Read More »

ಮನುಷ್ಯನನ್ನು ದೇವರಾಗಿಸುವ ನೀತಿಯೇ ರಾಮನೀತಿ: ರಾಧಾಕೃಷ್ಣ ಕಲ್ಚಾರ್ | ಶ್ರೀರಾಮೋತ್ಸವ – ಶ್ರೀರಾಮ ಭಾವ ಪೂಜೆಯ ಉದ್ಘಾಟನಾ ಸಮಾರಂಭ

ಪುತ್ತೂರು: ನೈತಿಕತೆ ಬೇರೆ ಅಲ್ಲ, ಶ್ರೀರಾಮ ಬೇರೆ ಅಲ್ಲ. ರಾಮನ ವ್ಯಕ್ತಿತ್ವ ಎಲ್ಲರಿಗಿಂತ ವ್ಯತ್ಯಸ್ತವಾಗಿ, ಜನರಿಗೆ ಆದರ್ಶವಾಗಿ ಕಾಣಿಸಿಕೊಳ್ಳುತ್ತದೆ ಎಂದು ಯಕ್ಷಗಾನ ಅರ್ಥಧಾರಿ, ಪ್ರಾಧ್ಯಾಪಕ ರಾಧಾಕೃಷ್ಣ ಕಲ್ಚಾರ್ ಹೇಳಿದರು. ಅವರು ಶನಿವಾರ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ನಡೆದ ಶ್ರೀರಾಮೋತ್ಸವ – ಶ್ರೀರಾಮಭಾವ ಪೂಜೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ವೈಚಾರಿಕತೆ ಎಂದರೆ ಸರಿಯಾಗಿ ಅಧ್ಯಯನ ಮಾಡಿ,

ಮನುಷ್ಯನನ್ನು ದೇವರಾಗಿಸುವ ನೀತಿಯೇ ರಾಮನೀತಿ: ರಾಧಾಕೃಷ್ಣ ಕಲ್ಚಾರ್ | ಶ್ರೀರಾಮೋತ್ಸವ – ಶ್ರೀರಾಮ ಭಾವ ಪೂಜೆಯ ಉದ್ಘಾಟನಾ ಸಮಾರಂಭ Read More »

ಜ.16: ಕಾರ್ಪಾಡಿ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ: ಪೂರ್ವಭಾವಿ ಸಭೆ

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಕಿರುಷಷ್ಠಿ ಉತ್ಸವದ ಕುರಿತು ಪೂರ್ವಭಾವಿ ಸಭೆ ನಡೆಯಿತು. ದೇವಸ್ಥಾನದ ಆಡಳಿತಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವರ್ಷಾವಧಿ ಜಾತ್ರೋತ್ಸವದ ದಿನದಂದು ವಿಶೇಷ ಪೂಜೆ, ಅನ್ನಸಂತರ್ಪಣೆ ನಡೆಸುವುದೆಂದು ತೀರ್ಮಾನಿಸಲಾಯಿತು. ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಪ್ರತೀ ವರ್ಷ ಕಿರುಷಷ್ಠಿಗೆ ಜಾತ್ರೋತ್ಸವ ನಡೆಯುವ ಪದ್ದತಿ. ಈ ವರ್ಷ ದೇವರನ್ನು ಬಾಲಾಲಯದಲ್ಲಿ ಪ್ರತಿಷ್ಟಾಪಿಸಲಾಗಿದೆ. ಜೀರ್ಣೋದ್ಧಾರ ಕಾರ್ಯ ನಡೆಯುತ್ತಿರುವುದರಿಂದ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನವ ಕಲಶ, ಗಣಹೋಮ ನಡೆಸಿ ಭಕ್ತಾಧಿಗಳಿಗೆ ಮಧ್ಯಾಹ್ನ ಅನ್ನಸಂತರ್ಪಣೆ ಮಾಡುವ ಬಗ್ಗೆ

ಜ.16: ಕಾರ್ಪಾಡಿ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ: ಪೂರ್ವಭಾವಿ ಸಭೆ Read More »

error: Content is protected !!
Scroll to Top