ಧಾರ್ಮಿಕ

ಕಟ್ಟಿ ನೇಮೊಡು ಜೀವ ಪೊ೦ಡ ಅರ್ದಲ ದೆಪ್ಪರೆ ಇಜ್ಜಿ | ಪರತಿ ಮಾಂಗಣೆ ಪಾಡ್ದನದಲ್ಲೂ ಉಲ್ಲೇಖ

ಪುತ್ತೂರು: ದೈವಾರಾಧನೆ ಕಲೆಯಲ್ಲ ಬದುಕು, ಆರಾಧನಾ ಪ್ರಾಕಾರ. ಇಲ್ಲಿನ ಪ್ರತಿಯೊಂದು ಆಚರಣೆಗೂ ಒಂದೊಂದು ಹಿನ್ನೆಲೆ ಇದೆ. ದೈವಾರಾಧನೆಯ ನಡೆಯಲ್ಲೇ ದೈವ ನರ್ತಕ ಮೃತಪಟ್ಟರೆ, ಅದಕ್ಕೂ ಒಂದು ಕ್ರಮವಿದೆ. ದೈವಾರಾಧನೆ ನಡೆಯುತ್ತಿರುವಾಗಲೇ ದೈವ ನರ್ತಕ ಕುಸಿದು ಬಿದ್ದು ಮೃತಪಟ್ಟ ಘಟನೆ ಇತ್ತೀಚೆಗೆ ದೋಳ್ಪಾಡಿಯಲ್ಲಿ ನಡೆದಿತ್ತು. ಕೆಲ ವರ್ಷಗಳ ಹಿಂದೆ ಉಡುಪಿಯಲ್ಲೂ ಇಂತಹದ್ದೇ ಘಟನೆ ನಡೆದಿತ್ತು. ಅಲ್ಲಿ ಬೈದರ್ಕಳ ನೇಮೋತ್ಸವದಲ್ಲಿ ಕೋಟಿ ದೈವದ ನರ್ತಕ ಕುಸಿದು ಬಿದ್ದು ಮೃತಪಟ್ಟಿದ್ದರು. ಇಂತಹ ಘಟನೆ ನಡೆದಾಗ ಮುಖದ ಬಣ್ಣ ತೆಗೆಯದೇ ಅಂತ್ಯಕ್ರಿಯೆ ನಡೆಸಲಾಗುತ್ತದೆ. […]

ಕಟ್ಟಿ ನೇಮೊಡು ಜೀವ ಪೊ೦ಡ ಅರ್ದಲ ದೆಪ್ಪರೆ ಇಜ್ಜಿ | ಪರತಿ ಮಾಂಗಣೆ ಪಾಡ್ದನದಲ್ಲೂ ಉಲ್ಲೇಖ Read More »

ಏ.5 ರಿಂದ 8 : ನೂಜಿಬೈಲ್ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ನೇಮೋತ್ಸವ

ಪುತ್ತೂರು: ರೆಂಜಿಲಾಡಿ ಗ್ರಾಮದ ನೂಜಿಬೈಲ್ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ನೇಮೋತ್ಸವ ಏ.5 ರಿಂದ 8 ರ ತನಕ ನಡೆಯಲಿದೆ.ಏ.5 ರಂದು ಬೆಳಿಗ್ಗೆ ಧ್ವಜಾರೋಹಣ, ಉಗ್ರಾಣ ಮುಹೂರ್ತ, ಕ್ಷೇತ್ರ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿಗಳು ಹಾಗೂ ಕ್ಷೇತ್ರದ ದೈವಜ್ಞರಾದ ಬಾಲಕೃಷ್ಣ ನಾಯರ್ ಹಾಗೂ ಶಿಲ್ಪಿ ರಮೇಶ್ ಕಾರಂತ ಬೆದ್ರಡ್ಕದವರಿಗೆ ಗೌರವಾರ್ಪಣೆ ನಡೆಯಲಿದೆ. ಮಧ್ಯಾಹ್ನ ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ವಿಶೇಷ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಏ.6 ರಂದು ನೂಜಿಗುತ್ತು ಮನೆಯಿಂದ ದೈವಗಳ ಆಭರಣವನ್ನು ಹಾಗೂ

ಏ.5 ರಿಂದ 8 : ನೂಜಿಬೈಲ್ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ನೇಮೋತ್ಸವ Read More »

ಯಕ್ಷಧ್ರುವ ಪಟ್ಲ ಟ್ರಸ್ಟ್ ವತಿಯಿಂದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ನೆರವು

ಮಂಗಳೂರು : ಕಾಣಿಯೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಮಾ. 30 ರಂದು ದೈವಾರಾಧ‌ನೆ ನಡೆಯುತ್ತಿದ್ದ ಸಂದರ್ಭ, ದೈವ ನರ್ತಕರಾದ ಕಾಂತು ಅಜಿಲ ಸ್ಥಳದಲ್ಲೇ ಕುಸಿದು ಬಿದ್ದು ಇಹಲೋಕ ತ್ಯಜಿಸಿದ್ದರು. ಅವರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಒಂದು ಲಕ್ಷ ರೂ. ಆರ್ಥಿಕ ನೆರವನ್ನು ಏ. 2 ರಂದು ಘೋಷಣೆ ಮಾಡಿದೆ.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ

ಯಕ್ಷಧ್ರುವ ಪಟ್ಲ ಟ್ರಸ್ಟ್ ವತಿಯಿಂದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ನೆರವು Read More »

ಏ.4 ರಿಂದ 6 : ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ವರ್ಷಾವಧಿ ಜಾತ್ರೋತ್ಸವಏ.ಮಾ.4 ರಿಂದ 6 : ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ವರ್ಷಾವಧಿ ಜಾತ್ರೋತ್ಸವ

ಪುತ್ತೂರು: ಹನುಮಗಿರಿ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ ಏ.4 ರಿಂದ 6 ರ ತನಕ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಏ.4 ರಂದು ಮಧ್ಯಾಹ್ನ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಉಗ್ರಾಣ ತುಂಬಿಸುವುದು, ರಾತ್ರಿ ಸಹಸ್ರ ದೀಪಾಲಂಕಾರ ಸಹಿತ ರಂಗಪೂಜೆ, ಪವಮಾನ ರಥೋತ್ಸವ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ. ಏ.5 ರಂದು ಬೆಳಿಗ್ಗೆ ನಾಗತಂಬಿಲ, ಗಣಪತಿ ಹೋಮ, ಮಧ್ಯಾಹ್ನ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ. ಸಂಜೆ

ಏ.4 ರಿಂದ 6 : ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ವರ್ಷಾವಧಿ ಜಾತ್ರೋತ್ಸವಏ.ಮಾ.4 ರಿಂದ 6 : ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ವರ್ಷಾವಧಿ ಜಾತ್ರೋತ್ಸವ Read More »

ನಾಳೆ (ಮಾ.3) : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರೋತ್ಸವ | ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ

ಪುತ್ತೂರು: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಏ.3 ರಂದು ವಿವಿಧ ವೈದಿಕ ಕಾರ್ಯಕ್ರ ಮಗಳೊಂದಿಗೆ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಹೊರೆಕಾಣಿಕೆ ಸಮರ್ಪಣೆ ಭಾನುವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಶಾಂತಿಗೋಡು ವಿಷ್ಣುಮೂರ್ತಿ ಭಜನಾ ಮಂದಿರದಿಂದ ಭಕ್ತಾದಿಗಳು ಸಮರ್ಪಿಸಿದ ಹೊರೆಕಾಣಿಕೆ ಮೆರವಣಿಗೆ ಸಾಗಿ ಶ್ರೀ ದೇವಸ್ಥಾನದಲ ಉಗ್ರಾಣದಲ್ಲಿ ಜಮಾವಣೆಗೊಂಡಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಪಾಲ್ಗೊಂಡಿದ್ದರು.

ನಾಳೆ (ಮಾ.3) : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರೋತ್ಸವ | ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ Read More »

ಏ.2-3 : ಶಾಂತಿಗೋಡು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ:  ನಾಳೆ ಹೊರೆಕಾಣಿಕೆ

ಪುತ್ತೂರು : ಶಾಂತಿಗೋಡು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವದ ಎ.2 ಹಾಗೂ 3 ರಂದು ವಿವಿಧ ವೈದಿಕ ಕಾರ್ಯಕ್ರ ಮಗಳೊಂದಿಗೆ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಎ.2 ರಂದು ಬೆಳಿಗ್ಗೆ ಶ್ರೀವಿಷ್ಣುಮೂರ್ತಿ ಭಜನಾ ಮಂದಿರದಿಂದ ಊರ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಏ.3 ಸೋಮವಾರ ಬೆಳಿಗ್ಗೆ 8.30 ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಮಹಾಗಣಪತಿ ಹೋಮ,

ಏ.2-3 : ಶಾಂತಿಗೋಡು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ:  ನಾಳೆ ಹೊರೆಕಾಣಿಕೆ Read More »

ಏ.10 ರಿಂದ 17 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಗೊನೆ ಮುಹೂರ್ತ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ಬರ ದೇವಸ್ಥಾನದಲ್ಲಿ ಏ.10 ರಿಂದ 17 ರ ತನಕ ನಡೆಯುವ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಶನಿವಾರ ನಡೆಯಿತು. ಬೆಳಿಗ್ಗೆ ಶ್ರೀ ದೇವಸ್ಥಾನದ ಗರ್ಭಗುಡಿ ಎದುರು ಪ್ರಾರ್ಥನೆ ನೆರವೇರಿಸಿದ ಬಳಿಕ ದೇವಸ್ಥಾನದ ಪಕ್ಕದ ತೋಟವೊಂದರಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್.ಭಟ್ ಗೊನೆ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್, ರಾಮದಾಸ್ ಗೌಡ, ರವೀಂದ್ರನಾಥ ರೈ ಬಳ್ಳಮಜಲು, ಶೇಖರ್ ನಾರಾವಿ,

ಏ.10 ರಿಂದ 17 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಗೊನೆ ಮುಹೂರ್ತ Read More »

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ  : ದರ್ಶನ ಬಲಿ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು ಹಾಗೂ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 8 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಪಲ್ಲಕಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆದು ಬಳಿಕ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಯಿತು. ಬಳಿಕ ನಡೆದ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ,

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ  : ದರ್ಶನ ಬಲಿ Read More »

ದೇವಾಲಯದ ಮೆಟ್ಟಿಲು ಬಾವಿ ಕುಸಿತ ಪ್ರಕರಣ : ಸ್ಥಳಕ್ಕೆ ಸಿಎಂ ಚೌಹಾಣ್ ಭೇಟಿ

ಇಂದೋರ್ : ರಾಮನವಮಿ ನಿಮಿತ್ತ ಇಂದೋರ್’ನ ಬೇಲೇಶ್ವರ ದೇವಸ್ಥಾನದಲ್ಲಿ ಹೋಮ ಹವನ ಏರ್ಪಡಿಸಲಾಗಿತ್ತು. ಇದರಲ್ಲಿ ಪಾಲ್ಗೊಳ್ಳಲು ಭಾರೀ ಸಂಖ್ಯೆಯಲ್ಲಿ ಜನ ಬಂದು ನೂಕು ನುಗ್ಗಲು ಏರ್ಪಟ್ಟಿತ್ತು. ಈ ವೇಳೆ ದೇಗುಲದ ಬಾವಿ ಬಳಿಯ ಭೂಮಿ ಕುಸಿದಿದ್ದು, ಇದರ ಪರಿಣಾಮ ಅಲ್ಲೇ ಇದ್ದ ಬಾವಿಯ ಕಬ್ಬಿಣದ ಸರಳಿನ ಮೇಲ್ಛಾವಣಿಯೂ ಕುಸಿದು ಬಿದ್ದಿತ್ತು. ಈ ವೇಳೆ ಸ್ಥಳದಲ್ಲಿದ್ದ ಹಲವು ಮಂದಿ ಭಕ್ತರು ಬಾವಿಗೆ ಬಿದ್ದಿದ್ದರು. ದುರ್ಘಟನೆಯಲ್ಲಿ ಈ ವರೆಗೂ 35 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮಧ್ಯಪ್ರದೇಶದ ಮುಖ್ಯಮಂತ್ರಿ

ದೇವಾಲಯದ ಮೆಟ್ಟಿಲು ಬಾವಿ ಕುಸಿತ ಪ್ರಕರಣ : ಸ್ಥಳಕ್ಕೆ ಸಿಎಂ ಚೌಹಾಣ್ ಭೇಟಿ Read More »

ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಸುಣ್ಣ-ಬಣ್ಣ ಶೃಂಗಾರ

ಪುತ್ತೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವೇ ಹೀಗೆ. ಸಡಗರ, ಸಂಭ್ರಮದೊಂದಿಗೆ ಸ್ವಚ್ಛತೆ, ಶೃಂಗಾರಕ್ಕೂ ಇಲ್ಲಿದೆ ಆದ್ಯತೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರು ವರ್ಷಾವಧಿ ಜಾತ್ರೆಗೆ ಅಣಿಯಾಗುತ್ತಿದ್ದಂತೆ ಇಡೀ ಆಲಯ ಶೃಂಗಾರ ವರ್ಣ ಬಣ್ಣಗಳಿಂದ ಭಕ್ತರ ಕಣ್ಮನ ಸೆಳೆಯುತ್ತಿರುವುದು ನಿಜ. ಪ್ರತೀ ವರ್ಷ ಜಾತ್ರೆ ಸಂದರ್ಭದಲ್ಲಿ ದೇವಸ್ಥಾನದ ವಠಾರ ಸಹಿತ ಒಳಾಂಗಣ, ಹೊರಾಂಗಣ, ರಥಬೀದಿ ಹೀಗೆ ಇಂಚಿಂಚು ಬಿಡದೆ ಸ್ವಚ್ಛಗೊಳಿಸುವುದರ ಜತೆಗೆ ಸುತ್ತುಪೌಳಿಯ ಒಳಾಂಗಣ, ಹೊರಾಂಗಣದ ಗೋಡೆ, ಉಪ ದೇವರ ಗುಡಿಗಳು ಸಹಿತ ದೇವಸ್ಥಾನದ ಎದುರಗಡೆ

ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಸುಣ್ಣ-ಬಣ್ಣ ಶೃಂಗಾರ Read More »

error: Content is protected !!
Scroll to Top