ಡಿ.28-29 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಶ್ರೀನಿವಾಸ ಕಲ್ಯಾಣೋತ್ಸವ | ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಡಿ.28 ಹಾಗೂ 29 ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ, ಭೂಮಿಯಲ್ಲಿ ಅತ್ಯಂತ ಶ್ರೇಷ್ಠ ಸನ್ನಿಧಿಯಿದ್ದರೆ ಅದು ತಿರುಪತಿ ಕ್ಷೇತ್ರ. ಸಪ್ರಗಿರಿವಾಸ ಹೆಸರಿನೊಂದಿಗೆ ತಿರುಪತಿ […]