ಧಾರ್ಮಿಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರೋತ್ಸವಕ್ಕೆ ಭರದ ಸಿದ್ಧತೆ | ಲಕ್ಷ ದೀಪೋತ್ಸವದಂದು ಲಕ್ಷ ಹಣತೆಗಳ ಸಾಲು. 

ಸುಬ್ರಹ್ಮಣ್ಯ,: ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಚಂಪಾ ಷಷ್ಟಿ ಮಹೋತ್ಸವದ ಅಂಗವಾಗಿ ಡಿ.9 ಶನಿವಾರ ಮೂಲಮೃತಿಕ ಪ್ರಸಾದ ತೆಗೆದು ವಿತರಣೆ ಆಗುವುದರೊಂದಿಗೆ  ಆರಂಭಗೊಳ್ಳಲಿದ್ದು, ಡಿ.24 ರಂದು ಕೊಪ್ಪರಿಗೆ ಇಳಿಯುವ ಮೂಲಕ ರಾತ್ರಿ ನೀರು ಬಂಡಿ ಉತ್ಸವ ಹಾಗೂ ದೈವಗಳ ನಡಾವಳಿ ನಡೆದು ಜಾತ್ರೆ ಸಂಪನ್ನಗೊಳ್ಳಲಿದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ತಿಳಿಸಿದ್ದಾರೆ. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಜಾತ್ರೋತ್ಸವಕ್ಕೆ ಹೊರೆ ಕಾಣಿಕೆಸಲ್ಲಿಸುವ ಬಗ್ಗೆ ಸುಳ್ಯ, ಪುತ್ತೂರು ಹಾಗೂ […]

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರೋತ್ಸವಕ್ಕೆ ಭರದ ಸಿದ್ಧತೆ | ಲಕ್ಷ ದೀಪೋತ್ಸವದಂದು ಲಕ್ಷ ಹಣತೆಗಳ ಸಾಲು.  Read More »

ಸಮಾಜದ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ | ಬೊಳುವಾರಿನಲ್ಲಿ ನಡೆದ ಗುರುಪಾದ ಪೂಜೆಯಲ್ಲಿ ಆನೆಗುಂದಿ ಶ್ರೀ

ಪುತ್ತೂರು: ಶಿಕ್ಷಣ ಎಲ್ಲಾ ವಿಚಾರಗಳಿಗೂ ಮೂಲ. ಆದ್ದರಿಂದ ಸಮುದಾಯ, ಸಮಾಜವನ್ನು ಕಟ್ಟಲು ಶಿಕ್ಷಣವನ್ನೇ ಅಡಿಪಾಯವಾಗಿ ಬಳಸಿಕೊಳ್ಳಬೇಕು ಎಂದು ಆನೆಗುಂದಿ ಸರಸ್ವತೀ ಪೀಠಾಧೀಶ್ವರ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಹೇಳಿದರು. ದ.ಕ. ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಭಾನುವಾರ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಜರಗಿದ ಸಾಮೂಹಿಕ ಶ್ರೀ ಗುರುಪಾದ ಪೂಜೆಯಲ್ಲಿ ಅವರು ಆಶೀರ್ವಚನ ನೀಡಿದರು. ಶಿಕ್ಷಣದ ಜೊತೆಗೆ ಸಂಯಮವನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು. ಸಂಯಮ ಇದ್ದಾಗ ಮಾತ್ರ ಎಲ್ಲಾ ವ್ಯವಸ್ಥೆಗಳು ನಮ್ಮ ಜೊತೆಗಿರುತ್ತವೆ. ಸಂಯಮದಿಂದ ಯಶಸ್ಸು

ಸಮಾಜದ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ | ಬೊಳುವಾರಿನಲ್ಲಿ ನಡೆದ ಗುರುಪಾದ ಪೂಜೆಯಲ್ಲಿ ಆನೆಗುಂದಿ ಶ್ರೀ Read More »

ಶ್ರೀನಿವಾಸ ಕಲ್ಯಾಣೋತ್ಸವ, ಸನಾತನ ಸಮಾಗಮದ ಕಾರ್ಯಾಲಯ, ಮಾಹಿತಿ ಕೇಂದ್ರ ಉದ್ಘಾಟನೆ | ಪುತ್ತಿಲ ಪರಿವಾರದ ವೆಬ್ ಸೈಟ್ ಗೆ ಚಾಲನೆ

ಪುತ್ತೂರು: ಪುತ್ತಿಲ ಪರಿವಾರದ ನೇತೃತ್ವದಲ್ಲಿ ನಡೆಯಲಿರುವ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸನಾತನ ಸಮಾಗಮದ ಕಾರ್ಯಾಲಯ ಮತ್ತು ಮಾಹಿತಿ ಕೇಂದ್ರ ಡಿ. 2ರಂದು ಶ್ರೀ ಮಹಾಲಿಂಗೇಶ್ವರ ದೇವಳದ ಬ್ರಹ್ಮರಥ ಮಂದಿರದ ಮುಂಭಾಗ ಉದ್ಘಾಟನೆಗೊಂಡಿತು. ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಕಾರ್ಯಾಲಯ ಉದ್ಘಾಟಿಸಿ, ಪುತ್ತಿಲ ಪರಿವಾರದ ವತಿಯಿಂದ  ಪ್ರಥಮ ಬಾರಿಗೆ ಡಿ. 24 ಮತ್ತು 25ರಂದು ನಡೆಯಲಿರುವ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸನಾತನ ಸಮಾಗಮ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಶ್ರೀನಿವಾಸ ಕಲ್ಯಾಣೋತ್ಸವ, ಸನಾತನ ಸಮಾಗಮದ ಕಾರ್ಯಾಲಯ, ಮಾಹಿತಿ ಕೇಂದ್ರ ಉದ್ಘಾಟನೆ | ಪುತ್ತಿಲ ಪರಿವಾರದ ವೆಬ್ ಸೈಟ್ ಗೆ ಚಾಲನೆ Read More »

ಬರೆಪ್ಪಾಡಿ ಕೇಪುಳೇಶ್ವರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ

ಬರೆಪ್ಪಾಡಿ: ಬರೆಪ್ಪಾಡಿ ಶ್ರೀ ಕೇಪುಳೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಸ್‍.ಅಂಗಾರ, ಶಿಲ್ಪಿ ಪ್ರಸಾದ್ ಮುನಿಯಂಗಳ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಚ ವಿಠಲ ಗೌಡ ಬರೆಪ್ಪಾಡಿ, ಎಪಿಎಂಸಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಮೆದು, ಕಾಣಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣೇಶ್ ಉದನಡ್ಕ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಗಿರಿಶಂಕರ ಸುಲಾಯ, ಬೆಳಂದೂರು ಗ್ರಾಮ ಪಂಚಾಯಿತಿ ಮಾಜಿ

ಬರೆಪ್ಪಾಡಿ ಕೇಪುಳೇಶ್ವರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ Read More »

ಶ್ರೀರಾಮನ ಕೈಂಕರ್ಯದಿಂದ ಪ್ರಾಣ ಪ್ರತಿಷ್ಠೆಗೆ ಅರ್ಥ| ಅಯೋಧ್ಯೆಯ ಮಂತ್ರಾಕ್ಷತೆ ಹಂಚಿಕೆ ಕಾರ್ಯಕ್ರಮದಲ್ಲಿ ಶ್ರೀ ಸಚ್ಚಿದಾನಂದ ಸ್ವಾಮೀಜಿ

ಪುತ್ತೂರು: ಹಿಂದೂ ಧರ್ಮದಲ್ಲಿ ಗೊಂದಲಗಳಿದ್ದು, ಸ್ವಧರ್ಮಿಯರಿಂದಲೇ ಚಿಂತೆ ಕಾಡುವಂತಾಗಿದೆ. ಈ ನಿಟ್ಟಿನಲ್ಲಿ ಧರ್ಮ- ಧಾರ್ಮಿಕ ಆಚರಣೆಯೊಂದಿಗೆ ಪ್ರತಿಯೊಬ್ಬ ಹಿಂದೂ ಬೆರೆಯಬೇಕಾದ ಅಗತ್ಯವಿದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ನುಡಿದರು. ಅವರು ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಸಭಾಮಂದಿರದಲ್ಲಿ ಅಯೋಧ್ಯೆ ರಾಮಜನ್ಮ ಭೂಮಿ ಮಂದಿರದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಜ.22 ರಂದು ಶ್ರೀರಾಮ ಪ್ರಾಣಪ್ರತಿಷ್ಠೆ ಅಂಗವಾಗಿ ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆಯನ್ನು ವಿವಿಧ ತಾಲೂಕುಗಳಿಗೆ ಕಳುಹಿಸಿಕೊಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು. ಹಿಂದೂ ಧರ್ಮದಲ್ಲಿ

ಶ್ರೀರಾಮನ ಕೈಂಕರ್ಯದಿಂದ ಪ್ರಾಣ ಪ್ರತಿಷ್ಠೆಗೆ ಅರ್ಥ| ಅಯೋಧ್ಯೆಯ ಮಂತ್ರಾಕ್ಷತೆ ಹಂಚಿಕೆ ಕಾರ್ಯಕ್ರಮದಲ್ಲಿ ಶ್ರೀ ಸಚ್ಚಿದಾನಂದ ಸ್ವಾಮೀಜಿ Read More »

ಡಿ.27 : ಅಯ್ಯಪ್ಪ ದೀಪೋತ್ಸವ : ವಿವಿಧ ಸಮಿತಿ ರಚನೆ

ಪುತ್ತೂರು: ಡಿ.27 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಅಯ್ಯಪ್ಪ ದೀಪೋತ್ಸವ ಅಚಾರಣೆಯ ಸಮಿತಿ ರಚಿಸಲಾಯಿತು. ಸಮಿತಿ ಅಧ್ಯಕ್ಷರಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ಕಾರ್ಯಾಧ್ಯಕ್ಷರಾಗಿ ಸುಧಾಕರ ಶೆಟ್ಟಿ, ಸಂಚಾಲಕರಾಗಿ ಮುರಳಿ ಕೃಷ್ಣ ಹಸಂತಡ್ಕ, ಪ್ರಧಾನ ಕಾರ್ಯದರ್ಶಿಯಾಗಿ  ರಾಧಾಕೃಷ್ಣ ಗೌಡ ನಂದಿಲ, ಮನೋಜ್ ಚಿಕ್ಕಪುತ್ತೂರು, ಜತೆ ಕಾರ್ಯದರ್ಶಿಯಾಗಿ ಮನ್ಮಥ ಶೆಟ್ಟಿ, ಉಪಧ್ಯಾಕ್ಷರಾಗಿ ರಾಮಣ್ಣ ಗುರುಸ್ವಾಮಿ, ಸತೀಶ್ ನಾಯಕ್, ದೇವನಂದ, ಗೌರವ ಅಧ್ಯಕ್ಷರಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರನ್ನು ಆಯ್ಕೆ ಮಾಡಲಾಯಿತು.

ಡಿ.27 : ಅಯ್ಯಪ್ಪ ದೀಪೋತ್ಸವ : ವಿವಿಧ ಸಮಿತಿ ರಚನೆ Read More »

ಡಿ.24-25: ಶ್ರೀನಿವಾಸ ಕಲ್ಯಾಣೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಡಿ.24, 25 ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಪ್ರಪ್ರಥಮ ಬಾರಿಗೆ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಶ್ರೀ  ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.29ರಂದು ಬೆಳಿಗ್ಗೆ ಬಿಡುಗಡೆಗೊಳಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ಪ್ರಾರ್ಥನೆ ನೆರವೇರಿಸಿದರು. ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್

ಡಿ.24-25: ಶ್ರೀನಿವಾಸ ಕಲ್ಯಾಣೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ Read More »

ನ. 30: ಕನಕದಾಸ ಜಯಂತಿ ‘ದಾಸ ಸಾಹಿತ್ಯ-ಒಳನೋಟಗಳು’ ಒಂದು ದಿನದ ವಿಚಾರ ಸಂಕಿರಣ

ಪುತ್ತೂರು: ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯ, ಕಾಲೇಜಿನ ಕನ್ನಡ, ಸಂಸ್ಕೃತ ಹಾಗೂ ಲಲಿತಕಲಾ ಸಂಘ ಮತ್ತು ಐಕ್ಯೂಎಸಿ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ತಾಲೂಕು ಸಮಿತಿ ಸಹಯೋಗದಲ್ಲಿ ಕನಕದಾಸ ಜಯಂತಿ ‘ದಾಸ ಸಾಹಿತ್ಯ-ಒಳನೋಟಗಳು’ ಒಂದು ದಿನದ ವಿಚಾರ ಸಂಕಿರಣ ನ. 30ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ತಾಲೂಕು ಸಮಿತಿ ಅಧ್ಯಕ್ಷ ಡಾ.ಗಣರಾಜ ಕುಂಬ್ಳೆ ತಿಳಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9.30ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜು

ನ. 30: ಕನಕದಾಸ ಜಯಂತಿ ‘ದಾಸ ಸಾಹಿತ್ಯ-ಒಳನೋಟಗಳು’ ಒಂದು ದಿನದ ವಿಚಾರ ಸಂಕಿರಣ Read More »

ಪುತ್ತೂರು ಪ್ರವೇಶಿಸಿದ ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಮಂದಿರದ ಅಕ್ಷತೆ

ಪುತ್ತೂರು: ಅಯೋಧ್ಯೆಯಿಂದ ಅಕ್ಷತೆ ಹೊತ್ತ ರಥ ಪುತ್ತೂರನ್ನು ಸೋಮವಾರ ಪ್ರವೇಶಿಸಿತು. ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಜ. 22ರಂದು ನಡೆಯಲಿರುವ ಶ್ರೀ ರಾಮನ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ದೇಶಾದ್ಯಂತ ಏಕಕಾಲದಲ್ಲಿ ನಡೆಯುವ ಅಕ್ಷತೆ ವಿತರಣೆ ಕಾರ್ಯಕ್ರಮದ ಅಂಗವಾಗಿ ರಥ ಹೊರಟಿದೆ.ರಥ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿ ಮೂಲಕ ಆಗಮಿಸಿತು. ಈ ಸಂದರ್ಭದಲ್ಲಿ ಅಕ್ಷತೆ ಹೊತ್ತ ರಥವನ್ನು ಕಳಶ ಹಿಡಿದ ಮಹಿಳೆಯರು ಚೆಂಡೆ, ವಾದ್ಯಗಳ ಮೂಲಕ ಸ್ವಾಗತಿಸಿದರು. ಬಳಿಕ

ಪುತ್ತೂರು ಪ್ರವೇಶಿಸಿದ ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಮಂದಿರದ ಅಕ್ಷತೆ Read More »

ಕುಲ್ಕುಂದ ಜಾನುವಾರು ಜಾತ್ರೆ: ಗೋಪೂಜೆ

ಸುಬ್ರಹ್ಮಣ್ಯ: ಕಾರ್ತಿಕ ಹುಣ್ಣಿಮೆ ದಿನ ಕುಲ್ಕುಂದ ಜಾನುವಾರು ಜಾತ್ರೆಯ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಕಾರದೊಂದಿಗೆ ಕುಲ್ಕುಂದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಗೋ ಪೂಜೆ ಸಾಂಕೇತಿಕವಾಗಿ ನಡೆಯಿತು. ದೇವಸ್ಥಾನದ ಅರ್ಚಕರು ವಿಧಿ ವಿಧಾನದೊಂದಿಗೆ ಗೋಪೂಜೆ ನೆರವೇರಿಸಿದರು. ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂದ, ಬಸವೇಶ್ವರ ದೇವಸ್ಥಾನದ ಅರ್ಚಕ ಗಣೇಶ್ ದೀಕ್ಷಿತ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ, ವ್ಯವಸ್ಥಾಪನ ಸಮಿತಿ ಸದಸ್ಯ ವನಜ ಭಟ್, ಶೋಭಾ ಗಿರಿಧರ, ಮನೋಜ್, ಶ್ರೀಕುಮಾರ್, ರವಿ ಶೆಟ್ಟಿ

ಕುಲ್ಕುಂದ ಜಾನುವಾರು ಜಾತ್ರೆ: ಗೋಪೂಜೆ Read More »

error: Content is protected !!
Scroll to Top