ಧಾರ್ಮಿಕ

ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

ಪುತ್ತೂರು: ಪುತ್ತೂರು; ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಕುರಿತು ಪೂರ್ವಭಾವಿ ಸಭೆ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯರಾಮ ಕೆದಿಲಾಯರವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಉಪ ಸಮಿತಿಗಳ ಸಂಚಾಲಕರು ಹಾಗೂ ಸದಸ್ಯರುಗಳಿಗೆ ಅವರವರ ಜವಾಬ್ದಾರಿಗಳನ್ನು ತಿಳಿಸಿ ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನೆರವೇರುವಲ್ಲಿ ಎಲ್ಲರ ಸಹಕಾರವನ್ನು ಕೋರಲಾಯಿತು. ಮಾ.21 ರಂದು ಪುತ್ತೂರಿನಲ್ಲಿ ಆಮಂತ್ರಣ ವಿತರಣೆ: ಬ್ರಹ್ಮಕಲಶೋತ್ಸವದ ಪ್ರಚಾರಾರ್ಥವಾಗಿ ಪುತ್ತೂರು ನಗರದಲ್ಲಿ ಆಮಂತ್ರಣ ಪತ್ರಿಕೆಯನ್ನು ಮಾ.21 ರಂದು ವಿತರಿಸುವುದಾಗಿ ತೀರ್ಮಾನಿಸಲಾಯಿತು. ಬೆಳಿಗ್ಗೆ 9.30 […]

ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ Read More »

ಮಾ.17 ರಿಂದ 19 : ಪಡುಮಲೆ (ಪಮ್ಮಲ) ಜುಮ್ಮಾ ಮಸ್ಜಿದ್ ನಲ್ಲಿ ಆಂಡ್ ನೇರ್ಚೆ, ಧಾರ್ಮಿಕ ಉಪನ್ಯಾಸ

ಪುತ್ತೂರು: ಪಡುಮಲೆ (ಪಮ್ಮಲ) ಜುಮ್ಮಾ ಮಸ್ಜಿದ್ ವಠಾರದಲ್ಲಿ ಅಂತ್ಯ ವಿಶ್ರಮ ಹೊಂದಿರುವ ಮಹಾನುಭಾವದ ಹೆಸರಲ್ಲಿ ನಡೆದುಕೊಂಡು ಬರುತ್ತಿರುವ ಆಂಡ್ ನೇರ್ಚೆ ಮೂರು ದಿನಗಳ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಮಾ.17, 18 ಹಾಗೂ 19 ರಂದು ಮೂರು ದಿನಗಳ ಕಾಲ ನಡೆಯಲಿದೆ ಎಂದು ಜಮಾಅತ್ ಕಮಿಟಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಡುಮಲೆ ಪ್ರದೇಶ ಮಸೀದಿ, ದೇವಸ್ಥಾನ, ದೈವಸ್ಥಾನಗಳನ್ನೊಳಗೊಂಡು ಸೌಹಾರ್ದತೆಯಿಂದ ಕಳೆದ ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ ಎಂದರು. ಮಾ.17 ರಂದು ಧ್ವಜಾರೋಹಣದೊಂದಿಗೆ

ಮಾ.17 ರಿಂದ 19 : ಪಡುಮಲೆ (ಪಮ್ಮಲ) ಜುಮ್ಮಾ ಮಸ್ಜಿದ್ ನಲ್ಲಿ ಆಂಡ್ ನೇರ್ಚೆ, ಧಾರ್ಮಿಕ ಉಪನ್ಯಾಸ Read More »

ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಪುತ್ತೂರು : ನಗರದ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮಂಗಳವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಮಠದ ಶ್ರೀ ಸತ್ಯನಾರಾಯಣ ಗುಡಿಯಲ್ಲಿ ಮಠದ ಪ್ರಧಾನ ಅರ್ಚಕ ರಾಘವೇಂದ್ರ ಉಡುಪರ ನೇತೃತ್ವದಲ್ಲಿ ಪಂಚಗವ್ಯ ಪುಣ್ಯಾಹ, ಪುರಸ್ಸರ, ಕಲಶಾಭಿಷೇಕ, ಕಲಶ ಪ್ರತಿಷ್ಠೆ, 10.30 ರಿಂದ  ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 1ಕ್ಕೆ ಮಹಾಪೂಜೆ, ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ಜರಗಿತು. ಈ ಸಂದರರ್ಭದಲ್ಲಿ ಮಠದ ಟ್ರಸ್ಟಿಗಳಾದ

ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ Read More »

ಲಕ್ಷ್ಮೀದೇವಿ ಬೆಟ್ಟ ಶ್ರೀ ಮಹಾಲಕ್ಷ್ಮೀ ಬಿಂಬದ ಮೇಲೆ ಮೀನ ಸಂಕ್ರಮಣದ ಸೂರ್ಯರಶ್ಮಿ ಸ್ಪರ್ಶ | ಕಣ್ತುಂಬಿಕೊಂಡ ಹಲವಾರು ಭಕ್ತರು

ಪುತ್ತೂರು: ಪ್ರತಿ ವರ್ಷ ಮೀನ ಸಂಕ್ರಮಣದಂದು ವಿಶೇಷವಾಗಿ ಮುಂಜಾನೆಯ ವೇಳೆ ಸೂರ್ಯನ ರಶ್ಮಿಯು ದೇವಿಯ ಬಿಂಬಕ್ಕೆ ಸ್ಪರ್ಶಿಸುತ್ತಿರುವ ರಾಜ್ಯದ ಏಕೈಕ ದೇವಸ್ಥಾನ ಎಂದು ಪ್ರಸಿದ್ಧಿ ಪಡೆದಿರುವ, ಇಲ್ಲಿನ ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಿಯ ಬಿಂಬಕ್ಕೆ ಮಂಗಳವಾರದ  ಮೀನ ಸಂಕ್ರಮಣದಂದು ಮುಂಜಾನೆ ಸೂರ್ಯ ರಶ್ಮಿಯ ಸ್ಪರ್ಶವಾಯಿತು. ಪ್ರಾತಃಕಾಲ ಶ್ರೀಮಹಾಲಿಂಗೇಶ್ವರ ಭಜಕ ವೃಂದದವರಿಂದ ಭಜನೆ, ಶ್ರೀಕೃಷ್ಣ ಉಪಾಧ್ಯಾಯರವರಿಂದ ವೇದ ಮಂತ್ರ ಘೋಷ ನೆರವೇರಿತು. ಬೆಳಿಗ್ಗೆ 7ಗಂಟೆಯಿಂದ 7.30ರ ಸಮಯದಲ್ಲಿ ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ

ಲಕ್ಷ್ಮೀದೇವಿ ಬೆಟ್ಟ ಶ್ರೀ ಮಹಾಲಕ್ಷ್ಮೀ ಬಿಂಬದ ಮೇಲೆ ಮೀನ ಸಂಕ್ರಮಣದ ಸೂರ್ಯರಶ್ಮಿ ಸ್ಪರ್ಶ | ಕಣ್ತುಂಬಿಕೊಂಡ ಹಲವಾರು ಭಕ್ತರು Read More »

ಕಲ್ಲಾರೆ ಮಠದ ಗರ್ಭಗುಡಿಗೆ ಹಿತ್ತಾಳೆ ಹೊದಿಕೆ ಸಮರ್ಪಣೆ ಸಮಾರಂಭ | ಆಶೀರ್ವಚನ ನೀಡಿದ ಎಡನೀರು ಸ್ವಾಮೀಜಿ

ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಗರ್ಭಗುಡಿಗೆ ಹೊದಿಸಿದ ಹಿತ್ತಾಳೆಯ ಹೊದಿಕೆ ಸಮರ್ಪಣಾ ಸಮಾರಂಭ ಮಾರ್ಚ್ 13ರಂದು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ಆಶೀರ್ವಚನ ನೀಡುತ್ತಾ, ಧಾರ್ಮಿಕ ಕೇಂದ್ರಗಳು ಸಮಾಜದ ಶ್ರದ್ಧಾ ಕೇಂದ್ರಗಳು. ಸಮಾಜದ ವಿಕಸನದಲ್ಲಿ ಇಂತಹ ಕೇಂದ್ರಗಳ ಪಾತ್ರ ಪ್ರಮುಖವಾದುದು. ಆದ್ದರಿಂದ ಭಕ್ತರು ಇಂತಹ ಕೇಂದ್ರಗಳಿಗೆ ತಮ್ಮ ಸೇವೆಯನ್ನು ಸಲ್ಲಿಸುವುದು ಅಗತ್ಯ ಎಂದರು. ಸಂಸ್ಕಾರ, ಸಂಸ್ಕೃತಿ ಬೆಳೆಯಬೇಕು: ಶಾಸಕ ಮಠಂದೂರು ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು

ಕಲ್ಲಾರೆ ಮಠದ ಗರ್ಭಗುಡಿಗೆ ಹಿತ್ತಾಳೆ ಹೊದಿಕೆ ಸಮರ್ಪಣೆ ಸಮಾರಂಭ | ಆಶೀರ್ವಚನ ನೀಡಿದ ಎಡನೀರು ಸ್ವಾಮೀಜಿ Read More »

ರೋಟರಿ ಜಲಸಿರಿ ಯೋಜನೆ  | ನಿಡ್ಪಳ್ಳಿ ಶ್ರೀ ಶಾಂತಾದುರ್ಗ ದೇವಸ್ಥಾನಕ್ಕೆ ಕುಡಿಯುವ ನೀರಿನ ಘಟಕ ಕೊಡುಗೆ

ಪುತ್ತೂರು: ಪಾಣಾಜೆ ಗ್ರಾಮದ ನಿಡ್ಪಳ್ಳಿ ಶ್ರೀಶಾಂತಾದುರ್ಗ ದೇವಸ್ಥಾನಕ್ಕೆ ರೋಟರಿ ಕ್ಲಬ್ ಪುತ್ತೂರು ಯುವದ ವಲಯ ಸೇನಾನಿ ಡಾ|ಹರ್ಷ ಕುಮಾರ್ ರೈ ಮಾಡಾವುರವರು ರೋಟರಿ ಜಲಸಿರಿ ಯೋಜನೆಗೆ ಪೂರಕವಾಗಿ ಸಾರ್ವಜನಿಕ ಉದ್ದೇಶಕ್ಕೆ ಕುಡಿಯುವ ನೀರಿನ ಘಟಕವನ್ನು ಸಮರ್ಪಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಕುಮಾರ ನರಸಿಂಹ ಭಟ್, ಪ್ರಧಾನ ಅರ್ಚಕ ನವೀನ್ ಹೆಬ್ಬಾರ್, ಸುನಿಲ್ ಕುಮಾರ್ ರೈ ಕೊಪ್ಪಳ, ವಿಶ್ವೇಶ್ವರ ಭಟ್ ಮತ್ತು ಸಚಿತ್ ಕುಮಾರ್ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು. ರೋಟರಿ ಜಿಲ್ಲಾ ಗವರ್ನರ್ ಶ್ಲಾಘನೆ: ಪ್ರಸ್ತುತ

ರೋಟರಿ ಜಲಸಿರಿ ಯೋಜನೆ  | ನಿಡ್ಪಳ್ಳಿ ಶ್ರೀ ಶಾಂತಾದುರ್ಗ ದೇವಸ್ಥಾನಕ್ಕೆ ಕುಡಿಯುವ ನೀರಿನ ಘಟಕ ಕೊಡುಗೆ Read More »

ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಗರ್ಭಗುಡಿಗೆ ಹಿತ್ತಾಳೆ ಹೊದಿಕೆ ಸಮರ್ಪಣೆ

ಪುತ್ತೂರು : ನಗರದ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಗರ್ಭಗುಡಿಗೆ ದಾನಿಗಳಿಂದ ಕೊಡುಗೆಯಾಗಿ ನೀಡಿದ ಹಿತ್ತಾಳೆ ಹೊದಿಕೆ ಸಮರ್ಪಣಾ ಸಮರ್ಪಣಾ ಕಾರ್ಯಕ್ರಮ ಸೋಮವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಭಾನುವಾರ ಸಂಜೆ ದೇವತಾ ಪ್ರಾರ್ಥನೆ, ಸಪ್ತಶುದ್ಧಿ, ವಾಸ್ತು ರಕ್ಷೋಘ್ನ ಹೋಮ, ದಿಕ್ಷಾಲಬಲಿ ನಡೆಯಿತು. ಸೋಮವಾರ ಬೆಳಿಗ್ಗೆ 7 ರಿಂದ ಪಂಚಗವ್ಯ, ಸ್ವಸ್ತಿ ಪುಣ್ಯಾಹ, ಪುರಸ್ಸರ ಪಂಚವಿಂಶತಿ ಕಲಶ ಪ್ರತಿಷ್ಠೆ, ಪ್ರಧಾನ ಹೋಮ, ಕಲಶಾಭಿಷೇಕ, ಪ್ರಸನ್ನ ಪೂಜೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ

ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಗರ್ಭಗುಡಿಗೆ ಹಿತ್ತಾಳೆ ಹೊದಿಕೆ ಸಮರ್ಪಣೆ Read More »

ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ 7ನೇ ವರ್ಷದ ಗುರುಪೂಜೆ, ಭಜನೆ, ಸನ್ಮಾನ ಕಾರ್ಯಕ್ರಮ | ಶಾಸಕ ಸಂಜೀವ ಮಠಂದೂರು ಭಾಗಿ

ಪುತ್ತೂರು: ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ಆಶ್ರಯದಲ್ಲಿ ಏಳನೇ ವರ್ಷದ ಗುರುಪೂಜೆ, ಭಜನೆ, ಸನ್ಮಾನ ಕಾರ್ಯಕ್ರಮ ಮಾ12 ರಂದು ಕಲರ್ಪೆ ತರವಾಡು ಮನೆಯಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,  ಮೂರ್ತೆಯ ಕಲಸ ಮಾಡುವುದನ್ನು ಯುವ ಪೀಳಿಗೆಗೆ ನಾವು ತಿಳಿಸುವ ಕೆಲಸ ಮಾಡಬೇಕು.ಸಮಾಜಕದಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಒಳ್ಳೆಯ ಕೆಲಸ ಬಿಲ್ಲವ ಸಮಾಜ ಮಾಡಿದೆ ಎಂದ ಅವರು,  ಕೋಟಿ ಚೆನ್ನಯ ಹುಟ್ಟಿದ ಊರು ಪುತ್ತೂರಿನ ಬಸ್ಸು ತಂಗುಧಾಣಕ್ಕೆ ಕೋಟಿ ಚೆನ್ನಯ ನಾಮಕರಣ  ಕಾರ್ಯಕ್ರಮ 

ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ 7ನೇ ವರ್ಷದ ಗುರುಪೂಜೆ, ಭಜನೆ, ಸನ್ಮಾನ ಕಾರ್ಯಕ್ರಮ | ಶಾಸಕ ಸಂಜೀವ ಮಠಂದೂರು ಭಾಗಿ Read More »

ಕಾರ್ಪಾಡಿ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಜೀರ್ಣೋದ್ಧಾರ ಪ್ರಯುಕ್ತ ಸುತ್ತುಪೌಳಿಗೆ ಶಿಲಾನ್ಯಾಸ ಕಾರ್ಯಕ್ರಮ ಮಾರ್ಚ್ 12ರಂದು ಬೆಳಿಗ್ಗೆ ಕ್ಷೇತ್ರದ ತಂತ್ರಿಗಳಾದ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನೆರವೇರಿತು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಗೌಡ ದೇವಸ್ಯ, ಜತೆ ಕಾರ್ಯದರ್ಶಿ ಗಿರೀಶ್ ಕಿನ್ನಿಜಾಲ್, ಉಪಾಧ್ಯಕ್ಷರಾದ ನಾರಾಯಣ ನಾಯ್ಕ್ ಗೆಣಸಿನಕುಮೇರ್, ಜಯಂತ ಶೆಟ್ಟಿ ಕಂಬಳತಡ್ಡ, ವ್ಯವಸ್ಥಾಪನಾ

ಕಾರ್ಪಾಡಿ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ Read More »

ಮುಕ್ವೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 5 ಲಕ್ಷ ರೂ. ದೇಣಿಗೆ ಹಸ್ತಾಂತರ

ಪುತ್ತೂರು : ತಾಲೂಕಿನ ನರಿಮೊಗರು ಗ್ರಾಮದ ಮುಕ್ವೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು 5 ಲಕ್ಷ ರೂ. ದೇಣಿಗೆ ಚೆಕ್ ನ್ನು ಹಸ್ಥಾಂತರಿಸಿದರು. ಶನಿವಾರ ಕ್ಷೇತ್ರಕ್ಕೆ ಭೇಟಿ ನೀಡಿದ ಮಜಲುಮಾರು ಮುಕ್ವೆ ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ನ ಪದಾಧಿಕಾರಿಗಳಿಗೆ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ.ಯಂ.ಬೆಳಿಯಪ್ಪ ಗೌಡ ಕೆದ್ಕಾರ್, ಸದಸ್ಯರುಗಳಾದ ಗಣೇಶ್ ಭಟ್, ಯಂ.ರವಿ ಮಣಿಯ, ಕೆ.ಗಿರೀಶ್ ರೈ

ಮುಕ್ವೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 5 ಲಕ್ಷ ರೂ. ದೇಣಿಗೆ ಹಸ್ತಾಂತರ Read More »

error: Content is protected !!
Scroll to Top