ಧಾರ್ಮಿಕ

ದಂಬೆತ್ತಿಮಾರು ಮಾಯ್ಕಾರೆ ಅಜ್ಜೆ ಶ್ರೀ ಕೊರಗತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ, ಧಾರ್ಮಿಕ ಸಭೆ

ಪುತ್ತೂರು : ಆರ್ಯಾಪು ಗ್ರಾಮದ ಸಂಪ್ಯ ದಂಬೆತ್ತಿಮಾರು ಮಾಯ್ಕಾರೆ ಅಜ್ಜೆ ಶ್ರೀ ಕೊರಗತನಿಯ ಕ್ಷೇತ್ರದಲ್ಲಿ ಮಾ.10, 11ರಂದು ನಡೆದ  ವಾರ್ಷಿಕ ನೇಮೋತ್ಸವದ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ  ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳೀಕೃಷ್ಣ ಹಸಂತಡ್ಕ ಮಾತನಾಡಿ, ಮೂಲನಂಬಿಕೆಯ ತಳಹದಿಯಲ್ಲಿ ಬೆಳೆದು ಬಂದ ಕ್ಷೇತ್ರವಿದು. ಸ್ವಾರ್ಥರಹಿತ ಭಕ್ತಿ,  ನಿಸ್ವಾರ್ಥ ಸೇವೆಯಿಂದ ಸಾನಿಧ್ಯ ವೃದ್ಧಿಯಾಗಲು ಸಾಧ್ಯ ಎಂದ ಅವರು, ಬಹಳ ವೇಗದ ಜಗತ್ತಿನಲ್ಲಿ ನಾವಿದ್ದು, ಇಂತಹ ವೇಳೆಯಲ್ಲಿ ಸಂಸ್ಕಾರ, ಸಂಸ್ಕೃತಿಯನ್ನು ಮರೆಯುತ್ತಿದ್ದೇವೆ. ತಂದೆ-ತಾಯಿಯನ್ನೇ ಮರೆತುಬಿಡುವ […]

ದಂಬೆತ್ತಿಮಾರು ಮಾಯ್ಕಾರೆ ಅಜ್ಜೆ ಶ್ರೀ ಕೊರಗತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ, ಧಾರ್ಮಿಕ ಸಭೆ Read More »

ಉಡುಪಿ ಕೃಷ್ಣಮಠಕ್ಕೆ ಭೂಮಿ ನೀಡಿದ್ದು ಮುಸ್ಲಿಮರು ಹೇಳಿಕೆ: ‘ಕೈ’ ಮುಖಂಡ ಮಿಥುನ್ ರೈಗೆ ರಕ್ಷಿತ್ ಶೆಟ್ಟಿ ತರಾಟೆ

ಉಡುಪಿ: ಉಡುಪಿ ದೇಗುಲಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಮರು ಎಂದು ಹೇಳಿದ್ದ ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ನಟ ರಕ್ಷಿತ್ ಶೆಟ್ಟಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನು ಮಿಥುನ್ ರೈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ಕಾಂಗ್ರೆಸ್ ಮುಖಂಡರೇ ಮಿಥುನ್ ರೈಗೆ ಬುದ್ಧಿವಾದ ಹೇಳಿದ್ದರು. ಇದೀಗ ರಕ್ಷಿತ್ ಶೆಟ್ಟಿ ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ನಟ ರಕ್ಷಿತ್ ಶೆಟ್ಟಿ ತಮ್ಮ ಟ್ವೀಟರ್ ಖಾತೆಯಲ್ಲಿ ಮಿಥುನ್ ರೈ ಹೆಸರನ್ನು ಬಳಸದೇ ತರಾಟೆಗೆ ತೆಗೆದುಕೊಂಡಿದ್ದಾರೆ. ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಮಾಹಿತಿ

ಉಡುಪಿ ಕೃಷ್ಣಮಠಕ್ಕೆ ಭೂಮಿ ನೀಡಿದ್ದು ಮುಸ್ಲಿಮರು ಹೇಳಿಕೆ: ‘ಕೈ’ ಮುಖಂಡ ಮಿಥುನ್ ರೈಗೆ ರಕ್ಷಿತ್ ಶೆಟ್ಟಿ ತರಾಟೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿಗೆ ಶಿಲಾನ್ಯಾಸ | 35 ಲಕ್ಷ ರೂ. ಯೋಜನೆಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು

ಪುತ್ತೂರು: ಅತ್ಯಂತ ಪಾವಿತ್ರ್ಯತೆ ಹೊಂದಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿ ಬಹುದಿನಗಳ ಬೇಡಿಕೆಯಾಗಿದ್ದು, ಇದೀಗ 35 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೆ ಶಿಲಾನ್ಯಾಸ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚುವರಿ ಅನುದಾನ ತರಿಸಿಕೊಂಡು, ಇನ್ನಷ್ಟು ಅಭಿವೃದ್ಧಿಗೆ ಪ್ರಯತ್ನಿಸಲಾಗುವುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಿಣಿ ಅಭಿವೃದ್ಧಿಗಾಗಿ ಪುಡಾದ 35 ಲಕ್ಷ ರೂ. ಅನುದಾನದ ಕಾಮಗಾರಿಗೆ ಶನಿವಾರ ತೆಂಗಿನಕಾಯಿ ಒಡೆಯುವ ಮೂಲಕ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿಗೆ ಶಿಲಾನ್ಯಾಸ | 35 ಲಕ್ಷ ರೂ. ಯೋಜನೆಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು Read More »

ಗೆಳೆಯರು-94 ವತಿಯಿಂದ ಸಂಗೀತ ಗಾನ ಸಂಭ್ರಮ, ಹಳೆ ಬಸ್ ನಿಲ್ದಾಣದ ಇಂಟರ್ ಲಾಕ್ ಉದ್ಘಾಟನೆ

ಪುತ್ತೂರು : ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳೀ ದೇವಸ್ಥಾನದ ಆರಾಟ ಮಹೋತ್ಸವದ ಪ್ರಯುಕ್ತ ಉಪ್ಪಿನಂಗಡಿ ಗೆಳೆಯರು-94 ವತಿಯಿಂದ ಕೇರಳ ಹಾಗೂ ಕರ್ನಾಟಕದ ಖ್ಯಾತ ಕಲಾವಿದರಿಂದ ಸಂಗೀತ ಗಾನ ಸಂಭ್ರಮ ಹಾಗೂ ಗೆಳೆಯರು-94 ಬೇಡಿಕೆಯಂತೆ ಹಳೆ ಬಸ್ ನಿಲ್ದಾಣಕ್ಕೆ ಅಳವಡಿಸಿದ ಇಂಟರ್ ಲಾಕ್ ಉದ್ಘಾಟನೆ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಇಂಟರ್ ಲಾಕ್ ಉದ್ಘಾಟನೆ ನೆರವೇರಿಸಿ ಮಾತನಾಡಿ, ಉಪ್ಪಿನಂಗಡಿ ಹಳೆ ಬಸ್ ನಿಲ್ದಾಣ ದುಸ್ಥಿತಿಗೆ ಬರಬಾರದು ಎಂಬ ನಿಟ್ಟಿನಲ್ಲಿ ಶಾಸಕರ  ಅನುದಾನದಿಂದ ಇಂಟರ್ ಲಾಕ್ ಅಳವಡಿಸುವ ಮೂಲಕ

ಗೆಳೆಯರು-94 ವತಿಯಿಂದ ಸಂಗೀತ ಗಾನ ಸಂಭ್ರಮ, ಹಳೆ ಬಸ್ ನಿಲ್ದಾಣದ ಇಂಟರ್ ಲಾಕ್ ಉದ್ಘಾಟನೆ Read More »

ಪುತ್ತೂರು ಜಾತ್ರೆಯ ಆಮಂತ್ರಣ ಬಿಡುಗಡೆ | ವರ್ಷಂಪ್ರತಿಯಂತೆ ಏ. 1ಕ್ಕೆ ಗೊನೆ ಮುಹೂರ್ತ, ಏ. 10ರಿಂದ ಜಾತ್ರೆ | ಆಮಂತ್ರಣ ಪತ್ರ ಅನಾವರಣಗೊಳಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಹತ್ತೂರಿನ ಜನರು ತದೇಕಚಿತ್ತದಿಂದ ವೀಕ್ಷಿಸುವ ಪುತ್ತೂರು ಜಾತ್ರೆಯ ಆಮಂತ್ರಣ ಪತ್ರ ಮಾರ್ಚ್ 11ರಂದು ಬೆಳಿಗ್ಗೆ ಶಾಸಕ ಸಂಜೀವ ಮಠಂದೂರು ಬಿಡುಗಡೆಗೊಳಿಸಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಳಾಂಗಣದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ, ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಆಡಳಿತಾಧಿಕಾರಿ ನವೀನ್ ಭಂಡಾರಿ, ಗೌರಿ ಬನ್ನೂರು, ಪಿ.ಜಿ. ಜಗನ್ನೀವಾಸ್ ರಾವ್, ರಾಜೇಶ್ ಬನ್ನೂರು, ಐತ್ತಪ್ಪ ನಾಯ್ಕ್, ವೀಣಾ ಆಚಾರ್ಯ, ಗೌರಿ ಬನ್ನೂರು, ದೀಕ್ಷಾ ಪೈ, ಸಾಜಾ ರಾಧಾಕೃಷ್ಣ

ಪುತ್ತೂರು ಜಾತ್ರೆಯ ಆಮಂತ್ರಣ ಬಿಡುಗಡೆ | ವರ್ಷಂಪ್ರತಿಯಂತೆ ಏ. 1ಕ್ಕೆ ಗೊನೆ ಮುಹೂರ್ತ, ಏ. 10ರಿಂದ ಜಾತ್ರೆ | ಆಮಂತ್ರಣ ಪತ್ರ ಅನಾವರಣಗೊಳಿಸಿದ ಶಾಸಕ ಸಂಜೀವ ಮಠಂದೂರು Read More »

ಮಾ. 12: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ

ಪುತ್ತೂರು: ಕಾರಣಿಕ ಕ್ಷೇತ್ರ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತುಪೌಳಿಗೆ ಮಾ. 12ರಂದು ಬೆಳಿಗ್ಗೆ 10.45ಕ್ಕೆ ಶಿಲಾನ್ಯಾಸ ನೆರವೇರಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನಡೆದು, ದೇವಸ್ಥಾನದ ಹೊರ ಸುತ್ತುಪೌಳಿಗೆ ಶಿಲಾನ್ಯಾಸ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಮಾ. 12: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ Read More »

ನಾಳೆ (ಮಾ.11) : ಬಲ್ನಾಡು ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ನೇಮೋತ್ಸವ

ಪುತ್ತೂರು: ಬಲ್ನಾಡು ಗ್ರಾಮದ ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಮಾ.11 ರಂದು ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಮೊಕ್ತೇಸರ ಕೆ. ಬಾಬು ಪೂಜಾರಿ ಬಲ್ನಾಡು ಹೇಳಿದರು. ಬೆಳಿಗ್ಗೆ ಸ್ಥಳ ಶುದ್ಧಿ, ಗಣಹೋಮ, ಕಲಶಾಭಿಷೇಕ, ರಾತ್ರಿ 7ಕ್ಕೆ ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ. ಉಜ್ರುಪಾದೆಯಲ್ಲಿ ಹಲವು ಶತಮಾತನಗಳಿಂದ ಆರಾಧಿಸಿಕೊಂಡು ಬರುತ್ತಿದ್ದ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯ 2009 ಜುಲೈ 7,,೮ ರಂದು ನಡೆದಿದೆ. ಆ ಬಳಿಕ ಕ್ಷೇತ್ರದಲ್ಲಿ ಪ್ರತಿ

ನಾಳೆ (ಮಾ.11) : ಬಲ್ನಾಡು ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ನೇಮೋತ್ಸವ Read More »

ಕುದ್ಮಾರು: ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ

ಪುತ್ತೂರು: ಕುದ್ಮಾರು ಗ್ರಾಮದ ಅನ್ಯಾಡಿ ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ ಮಾರ್ಚ್ 9ರಂದು ರಾತ್ರಿ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ ನಡೆದು, ಸಂಜೆ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯಲಾಯಿತು. ರಾತ್ರಿ ದೈವಕ್ಕೆ ಎಣ್ಣೆ ಬೂಳ್ಯ ನೀಡಿ, ಬಳಿಕ ಅನ್ನಸಂತರ್ಪಣೆ ಜರಗಿತು. ಇದೇ ಸಂದರ್ಭ ನೇಮೋತ್ಸವ ಹಿನ್ನೆಲೆಯಲ್ಲಿ ಆಯೋಜಿಸಲಾದ ಲಕ್ಕಿಡಿಪ್ ಡ್ರಾದ ಫಲಿತಾಂಶ ನಡೆಯಿತು. ರಾತ್ರಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವದ ಹಾಗೂ ಸಪರಿವಾರ ದೈವಗಳ ನೇಮೋತ್ಸವ ನಡೆದು, ಗ್ರಾಮಸ್ಥರಿಗೆ ಸಿರಿಮುಡಿ ಗಂಧಪ್ರಸಾದ

ಕುದ್ಮಾರು: ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ Read More »

ಕುದ್ಮಾರು ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ಲಕ್ಷಿಡಿಪ್ ಡ್ರಾ ಫಲಿತಾಂಶ

ಪುತ್ತೂರು : ಕುದ್ಮಾರಿನ ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ದೈವಸ್ಥಾನದ ದೈವಗಳ ನೇಮೋತ್ಸವದ ಅಂಗವಾಗಿ ಗುರುವಾರ ರಾತ್ರಿ ಲಕ್ಕಿಡಿಪ್ ಡ್ರಾ ಫಲಿತಾಂಶ ನಡೆಯಿತು. ಫಲಿತಾಂಶ ಹೀಗಿದೆ: ಪ್ರಥಮ  :  3831, ದ್ವಿತೀಯ  : 4347, ತೃತೀಯ : 2994 ದೈವಸ್ಥಾನದಲ್ಲಿ ನೇಮೋತ್ಸವ ಆರಂಭಕ್ಕೆ ಮುನ್ನ ಗಣ್ಯರು, ಸಾರ್ವಜನಿಕರ ಸಮ್ಮುಖದಲ್ಲಿ ಡ್ರಾ ಫಲಿತಾಂಶ ನಡೆಸಿಕೊಟ್ಟರು. ಬಳಿಕ ಅನ್ನಸಂತರ್ಪಣೆ, ನೇಮೋತ್ಸವ ಜರಗಿತು.

ಕುದ್ಮಾರು ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ಲಕ್ಷಿಡಿಪ್ ಡ್ರಾ ಫಲಿತಾಂಶ Read More »

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಾಗಪ್ರತಿಷ್ಠೆ

ಪುತ್ತೂರು: ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಾಗಪ್ರತಿಷ್ಠೆ ಕಾರ್ಯಕ್ರಮ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಬುಧವಾರ ನಡೆಯಿತು. ಬೆಳಿಗ್ಗೆ ಮಹಾಗಣಪತಿ ಹೋಮ, ಪ್ರತಿಷ್ಠಾ ಹೋಮ, ಸಂಸ್ಕಾರ ಮಂಗಲ ಹೋಮ, ಆಶ್ಲೇಷಾ ಬಲಿ, ಅಷ್ಟವಟು ಆರಾಧನೆ, ಪಂಚವಿಂಶತಿ ಕಲಶ ಪೂಜೆ, ನಾಗಪ್ರತಿಷ್ಠೆ ಪಂಚಾಮೃತಾಭಿಷೇಕ, ತಂಬಿಲ ಸೇವೆ, ಮಹಾಪೂಜೆ, ಪ್ರಸಾದ ವಿತರಣೆಯಾಗಿ, ಬಳಿಕ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಡಾ.ಎಂ.ಕೆ.ಪ್ರಸಾದ್  ಮತ್ತಿತರರು ಉಪಸ್ಥಿತರಿದ್ದರು. ಸ್ಥಳ ದಾನಿಗಳಾದ

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಾಗಪ್ರತಿಷ್ಠೆ Read More »

error: Content is protected !!
Scroll to Top