ಧಾರ್ಮಿಕ

ನಾಳ ಕ್ಷೇತ್ರದಲ್ಲಿ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

ನಾಳ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆಯ ಪ್ರಯುಕ್ತ ಪಕ್ಷ ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ನಡೆಯಿತು. ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಆಸ್ರಣ್ಣ ದೀಪ ಬೆಳಗಿಸಿ ಉದ್ಘಾಟಿಸಿ, ದೇವಳದ ಒಳ ಭಾಗದಲ್ಲಿ ನವರಾತ್ರಿ ಪೂಜೆಯು ವಿದ್ಯುಕ್ತವಾಗಿ ನಡೆದಂತೆ ದೇವಿಯ ಪ್ರೀತ್ಯರ್ಥವಾಗಿ ಸಂಗೀತ, ಭಜನೆ, ಯಕ್ಷಗಾನ, ಪಾರಾಯಣ ಕಾರ್ಯಕ್ರಮಗಳು ನಡೆಯಲಿರುವುದು ಸಂಪ್ರದಾಯವಾಗಿದೆ ಎಂದು ತಿಳಿಸಿದರು. ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಭುವನೇಶ. ಜಿ, ಭಜನಾ ಮಂಡಳಿಯ ಅಧ್ಯಕ್ಷ ಉಮೇಶ ಶೆಟ್ಟಿ ಸಂಬೊಳ್ಯ, ಕಲಾವಿದ […]

ನಾಳ ಕ್ಷೇತ್ರದಲ್ಲಿ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ Read More »

ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಕಡಬ: ಕಡಬ ತಾಲೂಕಿನ ಕುಂತೂರು ಗ್ರಾಮದ ಸೀಮಾ ದೇವಸ್ಥಾನ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗುತ್ತಿದೆ. ಮಹೋತ್ಸವದ ಅಂಗವಾಗಿ ಪ್ರತಿನಿತ್ಯ ಮಹಾಪೂಜೆ, ಗಣಪತಿ ಮಹಾಪೂಜೆ, ಅನ್ನಸಂತರ್ಪಣೆ ಜರಗುತ್ತಿದ್ದು, ಅ.24 ರ ತನಕ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭಜನೆ, ಯಕ್ಷಗಾನ, ಭಕ್ತಿ ಭಾವಗಾನ, ನೃತ್ಯ ವೈಭವ, ಯಕ್ಷಗಾನ ತಾಳಮದ್ದಳೆ, ನೃತ್ಯ ನಿನಾದ ಮುಂತಾದ ಕಾರ್ಯಕ್ರಮಗಳು ಅ.24 ರ ವರೆಗೆ ನಡೆಯಲಿದೆ. ವಿಶೇಷವಾಗಿ ಅ.22 ರಂದು

ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ Read More »

ಶ್ರೀ ಸತ್ಯನಾರಾಯಣ ಪೂಜೆ, ಯಕ್ಷಗಾನ ತಾಳಮದ್ದಲೆ

ಪುತ್ತೂರು: ಕಳುವಾಜೆ ಶ್ರೀ ವೆಂಕಟರಮಣ ಗೌಡರ ಮನೆಯಲ್ಲಿ ಶ್ರೀ  ಸತ್ಯನಾರಾಯಣ ದೇವರ ಪೂಜೆಯ ಪ್ರಯುಕ್ತ ಶ್ರೀ ಸತ್ಯನಾರಾಯಣ ವ್ರತಾಚರಣೆ ಯಕ್ಷಗಾನ ತಾಳಮದ್ದಲೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಭವ್ಯಶ್ರೀ ಕುಲ್ಕುಂದ, ಚೆಂಡೆಯಲ್ಲಿ ಮುರಳೀಧರ ಕಲ್ಲೂರಾಯ ಕುಂಜೂರುಪಂಜ, ಮದ್ದಳೆಯಲ್ಲಿ ಮುರಳಿ ಹಳೆನೇರೆಂಕಿ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ವಿಷ್ಣು ಮತ್ತು ತುಂಗಧ್ವಜನಾಗಿ ರಾಧಾಕೃಷ್ಣ ಕಲ್ಚಾರ್, ಸಾಧುವೈಶ್ಯ ಮತ್ತು ಗೋವಳನಾಗಿ ಗುಡ್ಡಪ್ಪ ಬಲ್ಯ, ನಾರದ ಮತ್ತು ಚಂದ್ರಕೇತುವಾಗಿ ತಾರಾನಾಥ ಸವಣೂರು, ಜ್ವಾಲಮುಖ ಮತ್ತು ಲೀಲಾವತಿಯಾಗಿ ಪ್ರಸಾದ್ ಸವಣೂರು, ರಾಜಭಟ ಮತ್ತು ಕಲಾವತಿಯಾಗಿ ಶ್ರುತಿ

ಶ್ರೀ ಸತ್ಯನಾರಾಯಣ ಪೂಜೆ, ಯಕ್ಷಗಾನ ತಾಳಮದ್ದಲೆ Read More »

ಬರೆಪ್ಪಾಡಿ ದೇಗುಲದ ನಿಧಿ ಸಂಚಯನ ಹಿನ್ನೆಲೆ: ಪ್ರತಿನಿಧಿಗಳ ಸಭೆ

ಕಾಣಿಯೂರು: ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಕೇಪುಳೇಶ್ವರ ದೇವಸ್ಥಾನದಲ್ಲಿ ನಿಧಿ ಸಂಚಯನದ ಕುರಿತು ಭಾನುವಾರ ಪ್ರತಿನಿಧಿಗಳ ಸಭೆ ನಡೆಯಿತು. ದೇವಸ್ಥಾನದ ಜೀರ್ಣೋದ್ದಾರ ಪ್ರಯುಕ್ತ ಜ. 7ರಂದು ನಿಧಿ ಸಂಚಯನ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ತಾಲೂಕು, ವಲಯ ಹಾಗೂ ಗ್ರಾಮವಾರು ಪ್ರತಿನಿಧಿಗಳ ಸಭೆಯನ್ನು ನಡೆಸಿ, ಕಾರ್ಯಕ್ರಮದ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ತಾಲೂಕು, ವಲಯ, ಗ್ರಾಮಾವಾರು ಪ್ರತಿನಿಧಿಗಳು ಉಪಸ್ಥಿತರಿದ್ದರು.

ಬರೆಪ್ಪಾಡಿ ದೇಗುಲದ ನಿಧಿ ಸಂಚಯನ ಹಿನ್ನೆಲೆ: ಪ್ರತಿನಿಧಿಗಳ ಸಭೆ Read More »

ಪುತ್ತೂರು ದಸರಾ ಮಹೋತ್ಸವಕ್ಕೆ ಚಾಲನೆ

ಪುತ್ತೂರು: ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿ ವತಿಯಿಂದ ಪ್ರತಿವರ್ಷ ನಡೆಯುವ “ಪುತ್ತೂರು ದಸರಾ ಮಹೋತ್ಸವ”ಕ್ಕೆ ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ-ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಭಾನುವಾರ ಚಾಲನೆ ನೀಡಲಾಯಿತು. 21ನೇ ವರ್ಷದ ಮಹೋತ್ಸವ ಇದಾಗಿದ್ದು, ಕ್ಷೇತ್ರದ ತಂತ್ರಿ ಕುಕ್ಕಾಡಿ ಪ್ರೀತಂ ಪುತ್ತೂರಾಯ ಅವರ ನೇತೃತ್ವದಲ್ಲಿ ಬೆಳಗ್ಗೆ ಗಣಪತಿ ಸಹಿತ ನವದುರ್ಗೆಯರ ಪ್ರತಿಷ್ಠೆ ನಡೆಯಿತು. ಬಳಿಕ ಆರ್ಯಾಪು ಗ್ರಾಪಂ ಅಧ್ಯಕ್ಷೆ ಗೀತಾ ದೀಪ ಬೆಳಗಿಸಿ ಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ನಗರಸಭೆ ಸದಸ್ಯ

ಪುತ್ತೂರು ದಸರಾ ಮಹೋತ್ಸವಕ್ಕೆ ಚಾಲನೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರುತ್ಥಾನ: ಮಹಾಸಭೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹಿನ್ನಲೆಯಲ್ಲಿ ಈಗಾಗಲೇ 25 ಕೋಟಿ ರೂ. ಅನುದಾನಕ್ಕಾಗಿ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದ್ದು, ಇದು ಸರಕಾರದ ಮಟ್ಟದಲ್ಲಿದೆ. 4.66 ಕೋಟಿ ರೂ.ವನ್ನು ಭಕ್ತರಿಂದ ಸಂಗ್ರಹಕ್ಕಾಗಿ ಸರಕಾರ ಒಪ್ಪಿಗೆ ನೀಡಿದೆ. ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು. ಅವರು ಭಾನುವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಪುನರುತ್ಥಾನ ಕಾರ್ಯದ ಅಂಗವಾಗಿ ಅನ್ನಛತ್ರ ನಿರ್ಮಾಣ ಮತ್ತು ಪುಷ್ಕರಣಿ ಪುನರುತ್ಥಾನ ನಿಧಿ ಸಂಚಯನದ ಕುರಿತು ಭಕ್ತರ ಮಹಾಸಭೆಯನ್ನು ಉದ್ಘಾಟಿಸಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರುತ್ಥಾನ: ಮಹಾಸಭೆ Read More »

ಜಮಾಅತೆ ಇಸ್ಲಾಮೀ ಹಿಂದ್’ನಿಂದ ವಿಚಾರ ವಿನಿಮಯ

ಪುತ್ತೂರು: ಪ್ರತಿ ವರ್ಷ ಪ್ರವಾದಿ ಮಹಮ್ಮದ್ ಪೈಗಂಬರ್ (ಸ.ಅ.) ಅವರ ಜನ್ಮ ಮಾಸದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಸೀರತ್ ಅಭಿಯಾನ ನಡೆಸಲಾಗುತ್ತಿದ್ದು, ನ. 17ರಂದು ಸಮಾರೋಪ ಸಮಾರಂಭ ಪುತ್ತೂರು ಪುರಭವನದಲ್ಲಿ ನಡೆಯಲಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ವಲಯ ಉಪ ಸಂಚಾಲಕ ಅಮೀನ್ ಹಸನ್ ತಿಳಿಸಿದ್ದಾರೆ. ಅಭಿಯಾನದ ಅಂಗವಾಗಿ ಗುರುವಾರ ಸಂಘಟನೆ ವತಿಯಿಂದ ಪುತ್ತೂರಿನಲ್ಲಿ ಪತ್ರಕರ್ತರ ಜತೆಗಿನ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‘ಸಮಾನತೆಯ ಸಮಾಜ ಶಿಲ್ಪಿ ಅಭಿಯಾನ’ ಎಂಬ ಹೆಸರಿನಲ್ಲಿ ಅಭಿಯಾನ ನಡೆಯುತ್ತಿದ್ದು,

ಜಮಾಅತೆ ಇಸ್ಲಾಮೀ ಹಿಂದ್’ನಿಂದ ವಿಚಾರ ವಿನಿಮಯ Read More »

89ನೇ ಪುತ್ತೂರು ಶಾರದೋತ್ಸವದ ಶೋಭಾಯಾತ್ರೆಗೆ 80 ಭಜನಾ ತಂಡಗಳ ಮೆರುಗು

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅ.15 ರಿಂದ 24ರ ತನಕ ನಡೆಯುವ 89ನೇ ವರ್ಷದ “ಪುತ್ತೂರು ಶಾರದೋತ್ಸವ” ಈ ಬಾರಿ ಅತ್ಯಂತ ವೈಭವದಿಂದ ನಡೆಯಲಿದ್ದು, ಇದಕ್ಕಾಗಿ ಸಿದ್ಧತೆಗಳು ಭರದಿಂದ ಸಾಗುತ್ತಿದೆ ಎಂದು ಶೋಭಾಯಾತ್ರೆ ಸಂಚಾಲಕ ಸೀತಾರಾಮ ರೈ ಕೆದಂಬಾಡಿಗುತ್ತು ತಿಳಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಉತ್ಸವದ ವಿವರ ನೀಡಿದ ಅವರು, 9 ದಿನಗಳು ಶಾರದೋತ್ಸವ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಅ. 24ರಂದು ವೈಭವದ ಶೋಭಾಯಾತ್ರೆಗೆ ಬೊಳುವಾರು

89ನೇ ಪುತ್ತೂರು ಶಾರದೋತ್ಸವದ ಶೋಭಾಯಾತ್ರೆಗೆ 80 ಭಜನಾ ತಂಡಗಳ ಮೆರುಗು Read More »

ಪುತ್ತೂರು ಶಾರದೋತ್ಸವದ ಆಮಂತ್ರಣ ವಿತರಣೆ

ಪುತ್ತೂರು: ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅ. 15ರಿಂದ 24ರತನಕ ನಡೆಯಲಿರುವ 89ನೇ ವರ್ಷದ ಪುತ್ತೂರು ಶಾರದೋತ್ಸವದ ಆಮಂತ್ರಣ ವಿತರಣೆಗೆ ದರ್ಬೆ ವೃತ್ತದ ಬಳಿ ಗುರುವಾರ ಚಾಲನೆ ನೀಡಲಾಯಿತು. ಬಳಿಕ ಚೆಂಡೆ, ಕಲ್ಲಡ್ಕ ಬೊಂಬೆಯೊಂದಿಗೆ ಬೊಳುವಾರು ತನಕ ಸಾಗಿ ಆಮಂತ್ರಣ ಪತ್ರಿಕೆಯನ್ನು ಪೇಟೆಯ ವರ್ತಕರಿಗೆ ವಿತರಿಸಲಾಯಿತು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ ನೀಡಿ ಮಾತನಾಡಿ, ಪುತ್ತೂರು ಶಾರದೋತ್ಸವ ಈ

ಪುತ್ತೂರು ಶಾರದೋತ್ಸವದ ಆಮಂತ್ರಣ ವಿತರಣೆ Read More »

ಅ. 15ರಿಂದ 26: ‘ಪುತ್ತೂರು ದಸರಾ ಮಹೋತ್ಸವ’

ಪುತ್ತೂರು: ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿ ವತಿಯಿಂದ 21ನೇ ವರ್ಷದ ‘ಪುತ್ತೂರು ದಸರಾ ಮಹೋತ್ಸವ’ ಅ. 15ರಿಂದ 26ರ ತನಕ ಸಂಪ್ಯ ಉದಯಗಿರಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ವಿವಿಧ ವೈದಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಮಿತಿ ಸಂಚಾಲಕ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 15ರಂದು ಬೆಳಿಗ್ಗೆ 10ಕ್ಕೆ ಗಣಪತಿ ಹಾಗೂ ನವದುರ್ಗೆಯರ ಪ್ರತಿಷ್ಠೆ ನಡೆದು, ಬಳಿಕ ಕಾರ್ಯಕ್ರಮಗಳಿಗೆ ಆರ್ಯಾಪು ಗ್ರಾಪಂ ಅಧ್ಯಕ್ಷೆ ಗೀತಾ ದೀಪ

ಅ. 15ರಿಂದ 26: ‘ಪುತ್ತೂರು ದಸರಾ ಮಹೋತ್ಸವ’ Read More »

error: Content is protected !!
Scroll to Top