ಧಾರ್ಮಿಕ

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವ ಸಂಪನ್ನ

ಪಡುಮಲೆ : ಪಡುಮಲೆ ಶ್ರೀ ಕೂವೆ ಶಾಸ್ತರ ವಿಷ್ಣುಮೂರ್ತಿ ದೇವಾಲಯದಲ್ಲಿ  1008 ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ ಮಾ.5 ರಂದು ನಡೆಯಿತು. ಪೂರ್ವಾಹ್ನ ಗಂ 5 ರಿಂದ   ಬ್ರಹ್ಮಶ್ರೀ ವೇಧ ಮೂರ್ತಿ ಕುಂಟಾರು ವಾಸುದೇವ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ವೇಧ ಮೂರ್ತಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ   ಗಣಪತಿ ಹೋಮ,ಕವಟೋದ್ಘಾಟನೆ,ಶಾಂತಿ, ಪ್ರಾಯಶ್ಚಿತ್ತ ಮತ್ತು ಶಾಂತಿ ಹೋಮ ನಡೆದು ಬಳಿಕ ಪಡುಮಲೆ ಒಡೆಯ ಶ್ರೀ ಶಾಸ್ತಾರ ವಿಷ್ಣುಮೂರ್ತಿ  ದೇವರಗೆ  ಕಲಶಾಭಿಷೇಕ  ಅವಭೃತ ಪ್ರೋಕ್ಸಣೆ ಮಹಾಪೂಜೆ ,ಮಂತ್ರಾಕ್ಷತೆ ಕಾರ್ಯಕ್ರಮ ನೆಡೆಯಿತು. .ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು.  […]

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವ ಸಂಪನ್ನ Read More »

ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಶೌರ್ಯ ಯಾತ್ರೆ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಮಾಪನ

ಪುತ್ತೂರು : ವಿಶ್ವ ಹಿಂದು ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ಶೌರ್ಯ ಯಾತ್ರೆ ಭಾನುವಾರ ನಡೆಯಿತು. ನಗರದ ದಬೆ ವೃತ್ತದಿಂದ ಹೊರಟ ಶೌರ್ಯ ಯಾತ್ರೆ ಪುತ್ತೂರು ನಗರದ ಮುಖ್ಯ ರಸ್ತೆಯಲ್ಲಿ ಸಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಸಭಾ ಕಾರ್ಯಕ್ರಮದೊಂದಿಗೆ ಸಮಾಪನಗೊಂಡಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ|ಕಲ್ಲಡ್ಕ ಪ್ರಭಾಕರ್ ಭಟ್ ದಿಕ್ಸೂಚಿ ಭಾಷಣ ಮಾಡಿ, ಭಾರತದಲ್ಲಿ ವೀರತ್ವ, ಪರಾಕ್ರಮ ಮೆರೆದವರ ಇತಿಹಾಸವನ್ನು ಮಕ್ಕಳಿಗೆ ತಿಳಿಸಲಾಗದ ವಾತಾವರಣವನ್ನು ಮೆಕಾಲೆ ಶಿಕ್ಷಣ ವ್ಯವಸ್ಥೆ ಮಾಡಿತ್ತು.

ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಶೌರ್ಯ ಯಾತ್ರೆ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಮಾಪನ Read More »

ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ನೂತನ ರಥ | ಮುಂದಿನ ಜಾತ್ರೆಯೊಳಗೆ 60 ಲಕ್ಷ ವೆಚ್ಚದಲ್ಲಿ ರಥ-ಪಲ್ಲಕ್ಕಿ ನಿರ್ಮಾಣ

ಬೆಳ್ಳಾರೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ 60 ಲಕ್ಷ ರೂ.ವೆಚ್ಚದಲ್ಲಿ ಪಂಚಮಿ ರಥ ನಿರ್ಮಿಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಭಕ್ತಾಧಿಗಳ ಪೂರ್ವಭಾವಿ ಸಭೆ ಭಾನುವಾರ ದೇವಾಲಯದ ವಠಾರದಲ್ಲಿ ನಡೆಯಿತು. ಶತಮಾನಗಳ ಇತಿಹಾಸ ಹೊಂದಿರುವ ಶ್ರೀ ಕ್ಷೇತ್ರದಲ್ಲಿ ಹಿಂದಿನ ಕಾಲದಲ್ಲಿ ಜಾತ್ರೆಯು ರಥೋತ್ಸವದೊಂದಿಗೆ ವೈಭವಪೂರ್ಣವಾಗಿ ನಡೆಯುತಿತ್ತು. ಕಾಲ ಕ್ರಮೇಣ ಅದು ನಿಂತಿತು. ಅದಕ್ಕೆ ಸಾಕ್ಷಿ ಎಂಬಂತೆ ರಥದ ಪಳೆಯುಳಿಕೆಗಳು ಇತ್ತಿಚ್ಚಿನ ದಿನಗಳ ತನಕವು ದೇವಾಲಯದಲ್ಲಿ ಇತ್ತು. ಕೆಲ ವರ್ಷಗಳ ಹಿಂದೆ ನಡೆದ ಪ್ರಶ್ನಾಚಿಂತನೆಯಲ್ಲಿ

ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ನೂತನ ರಥ | ಮುಂದಿನ ಜಾತ್ರೆಯೊಳಗೆ 60 ಲಕ್ಷ ವೆಚ್ಚದಲ್ಲಿ ರಥ-ಪಲ್ಲಕ್ಕಿ ನಿರ್ಮಾಣ Read More »

ಪೆರಿಗೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಮಾ.25 ರಿಂದ 27 ರ ತನಕ ನಡೆಯುವ ಬಡಗನ್ನೂರು ಗ್ರಾಮದ ಪೆರಿಗೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಭಾನುವಾರ  ಬಿಡುಗಡೆ  ಮಾಡಲಾಯಿತು. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಮಾಣಿಲ ಶ್ರೀಧಾಮ ಮೋಹನದಾಸ ಪರಮಹಂಸ ಸ್ವಾಮೀಜಿಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣು ಮೂರ್ತಿ ದೇವಾಸ್ಥಾನದಲ್ಲಿ ಬಿಡುಗಡೆ ಮಾಡಿದರು.   ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಭಜನ ಮಂದಿರ ಪುನಃ ಪ್ರತಿಷ್ಠಾ ಮಹೋತ್ಸವದ ಅಧ್ಯಕ್ಷ ಶ್ರೀನಿವಾಸ ಗೌಡ ಕನ್ನಾಯ,

ಪೆರಿಗೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಬಂಗಾರಡ್ಕ ಶ್ರೀ ರಾಮ ಭಜನಾ ಮಂದಿರದ 14ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಬಂಗಾರಡ್ಕ ಶ್ರೀ ರಾಮ ಭಜನಾ ಮಂದಿರದ  14 ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಭಜನಾ ಮಂದಿರದ ಅಧ್ಯಕ್ಷ ಪ್ರದೀಪ್ ಕೃಷ್ಣ ಬಂಗಾರಡ್ಕ,  ಉಪಾಧ್ಯಕ್ಷ ಗೋಪಾಲಕೃಷ್ಣ ಬಂಗಾರಡ್ಕ, ಕಾರ್ಯದರ್ಶಿ-ಕಿಟ್ಟಣ್ಣ ರೈ ಬಂಗಾರಡ್ಕ ಹಾಗೂ ಊರಿನ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 14ನೇ ವಾರ್ಷಿಕೋತ್ಸವ ಸಮಾರಂಭ ಮಾ.30 ರಂದು ನಡೆಯಲಿದ್ದು, ಅರ್ಧ ಏಕಾಹ ಭಜನೆ, ಸಾಮೂಹಿಕ ಶ್ರೀ ರಾಮ ಕಲ್ಪೋಕ್ತ ಪೂಜೆ ಹಾಗೂ ರಾತ್ರಿ ರಂಗಪೂಜೆ ನಡೆಯಲಿದೆ.

ಬಂಗಾರಡ್ಕ ಶ್ರೀ ರಾಮ ಭಜನಾ ಮಂದಿರದ 14ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ

ಪುತ್ತೂರು : ಶ್ರದ್ಧಾ ಕೇಂದ್ರಗಳ ಮೂಲಕ ಧರ್ಮ ರಕ್ಷಣೆಯ ಕಾರ್ಯಗಳು ಆಗುತ್ತವೆ. ದೇವಾಲಯಗಳು ಯುವ ಪೀಳಿಗೆಗೆ ಸಂಸ್ಕಾರ, ಸಂಪದ್ರಾಯಗಳನ್ನು ತಿಳಿಸಿಕೊಡುವ ಕೇಂದ್ರಗಳಾಗಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಐತಿಹಾಸಿಕ ಕ್ಷೇತ್ರ ಪಡುಮಲೆ ಶ್ರೀ ಕೂವೆಶಾಸ್ತಾರ ದೇವಾಲಯದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಆರನೇ ದಿನ ಗುರುವಾರ ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ Read More »

ನಾಳೆ (ಮಾ.4) : ನರಿಮೊಗರು ಪೊಸಮೆನ್ಪದವು ಮುಗೇರಡ್ಕ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ನೇಮೋತ್ಸವ

ಪುತ್ತೂರು : ತಾಲೂಕಿನ ನರಿಮೊಗರು ಗ್ರಾಮದ ಪೊಸಮೆನ್ಪದವು ಮುಗೇರಡ್ಕ ಶ್ರೀ ಕಲ್ಕುಡ – ಕಲ್ಲುರ್ಟಿ ಹಾಗೂ ಪಂಜುರ್ಲಿ, ಗುಳಿಗ ದೈವಗಳ ನೇಮೋತ್ಸವ ಮಾ.4 ಶನಿವಾರ ರಾತ್ರಿ ನಡೆಯಲಿದೆ. ನೇಮೋತ್ಸವದ ಅಂಗವಾಗಿ ಬೆಳಿಗ್ಗೆ 7ಕ್ಕೆ ಗಣಹೋಮ, 8 ಕ್ಕೆ ನಾಗತಂಬಿಲ, ಪರಿವಾರ ದೈವಗಳಿಂದ ತಂಬಿಲ, 10.30 ಕ್ಕೆ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 11.30 ಕ್ಕೆ ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ಜರಗಲಿದೆ. ಸಂಜೆ 5.30 ಕ್ಕೆ ದೈವಗಳ ಭಂಡಾರ ತೆಗೆಯುವುದು, 6.30 ಕ್ಕೆ ಕಲ್ಕುಡ ದೈವಗಳ ನೇಮೋತ್ಸವ, ರಾತ್ರಿ

ನಾಳೆ (ಮಾ.4) : ನರಿಮೊಗರು ಪೊಸಮೆನ್ಪದವು ಮುಗೇರಡ್ಕ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ನೇಮೋತ್ಸವ Read More »

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ | ಶ್ರೀ ವಿಷ್ಣುಮೂರ್ತಿ ಹಾಗೂ ಪರಿವಾರ ದೇವರುಗಳ ಪ್ರತಿಷ್ಠೆ

ಪುತ್ತೂರು : ಬಡಗನ್ನೂರು ಗ್ರಾಮದ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯುತ್ತಿರುವ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ೬ನೇ ದಿನವಾದ ಗುರುವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಶ್ರೀ ದೇವರ ಪ್ರತಿಷ್ಠೆ ನಡೆಯಿತು. ಬೆಳಗ್ಗೆ ೮ ಗಂಟೆಗೆ ಕ್ಷೇತ್ರದ ತಂತ್ರಿಗಳಾದ ಬ್ರ.ವೇ.ಮೂ. ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ವೇ.ಮೂ.ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ೧೦೮ ತೆಂಗಿನಕಾಯಿ ಗಣಪತಿ ಹೋಮ, ಪ್ರತಿಷ್ಠಾ ಪಾಣಿ ನಡೆದು ಮಧ್ಯಾಹ್ನ 1.04 ರಿಂದ 3.15 ರ ಮಿಥುನ ಲಗ್ನ ಸುಮುಹೂರ್ತದಲ್ಲಿ

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ | ಶ್ರೀ ವಿಷ್ಣುಮೂರ್ತಿ ಹಾಗೂ ಪರಿವಾರ ದೇವರುಗಳ ಪ್ರತಿಷ್ಠೆ Read More »

ಆಧ್ಯಾತ್ಮ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ನೀಡುತ್ತದೆ : ಶ್ರೀ ಗುರುದೇವಾನಂದ ಸ್ವಾಮೀಜಿ | ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ

ಪುತ್ತೂರು : ದೇಹವೆಂಬ ಪಥಕ್ಕೆ ರಥ ಧರ್ಮ. ಸತ್ಯವನ್ನು ಹೇಳುವ ಧರ್ಮ ಚಾಲನಾಶೀಲ. ಮನುಷ್ಯ ಬದುಕಿನ ಸಂವಿಧಾನ ಧರ್ಮ. ಇಲ್ಲಿ ಆತ್ಮ ಸತ್ಯ ಒಂದೇ ಸತ್ಯ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಐತಿಹಾಸಿಕ ಪಡುಮಲೆ ಕ್ಷೇತ್ರದ ಶ್ರೀ ಕೂವೆ ಶಾಸ್ತರ ದೇವಾಲಯದ ಪ್ರತಿಷ್ಟ ಬ್ರಹ್ಮಕಲಶೋತ್ಸವದ ೫ ನೆ ದಿನದ ಧಾರ್ಮಿಕ ಸಭೆಯಲ್ಲಿ ಆಶೀರ್ವಾಚನ ನೀಡಿದರು. ಅಧ್ಯಾತ್ಮ ಎಂಬುದು ಕೀಲಿ ಕೈ. ಅದರ ಮೂಲಕ ಎಲ್ಲಾ ಸಮಸ್ಯೆಗಳಿಂದ ಬಿಡುಗಡೆ ಪಡೆಯಬಹುದು. ಪಡುಮಲೆಯಲ್ಲಿ ಸುಂದರ ಶ್ರದ್ದಾ

ಆಧ್ಯಾತ್ಮ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ನೀಡುತ್ತದೆ : ಶ್ರೀ ಗುರುದೇವಾನಂದ ಸ್ವಾಮೀಜಿ | ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ Read More »

ಮಾ.4 : ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿ ವಾರ್ಷಿಕೋತ್ಸವ, ಮಹಾಸಭೆ

ಪುತ್ತೂರು : ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಮಹಾಸಭೆ ಮಾ. 4 ಶನಿವಾರ ಅಪರಾಹ್ನ 3.30ಕ್ಕೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಮಹಿಳಾ ಮಂಡಳಿ ಅಧ್ಯಕ್ಷೆ ಇಂದಿರಾ ಪುರುಷೋತ್ತಮ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕಿ ಭಾರತಿ ಎಂ.ಎಲ್. ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳುವಂತೆ ವಿಶ್ವಕರ್ಮ ಮಹಿಳಾ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಮಾ.4 : ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿ ವಾರ್ಷಿಕೋತ್ಸವ, ಮಹಾಸಭೆ Read More »

error: Content is protected !!
Scroll to Top