ಧಾರ್ಮಿಕ

ಮಾ.7-8 : ಮಠಂತಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

ಪುತ್ತೂರು : ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಪ್ರತಿಷ್ಠಾ ಜಾತ್ರಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ ಮಾ.7 ಹಾಗೂ 8 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ುತ್ಸವದ ಅಂಗವಾಗಿ ಮಾ.7 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಗಣಪತಿ ಹೋಮ, ಪಂಚವಿಂಶತಿ ಕಲಶ ಪ್ರತಿಷ್ಠೆ, ಅಧಿವಾಸ ಹೋಮ, ಕಲಶಾಭಿಷೇಕ, ಏಕಾದಶ ರುದ್ರಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ, ಲಲಿತಾ ಸಹಸ್ರನಾಮ ಪಾರಾಯಣ, ಸಂಜೆ ದೈವಗಳಿಗೆ ತಂಬಿಲ, ಭಜನೆ, ರಂಗಪೂಜೆ, ಉತ್ಸವ ಬಲಿ, […]

ಮಾ.7-8 : ಮಠಂತಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ Read More »

ನಾಳೆ (ಮಾ.2) : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ

ಪುತ್ತೂರು : ಬಲ್ನಾಡು ಗ್ರಾಮದ ಉಜಿರೆಪಾದೆ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಶ್ರೀ ದೈವಗಳ ಪ್ರತಿಷ್ಠಾ ವರ್ಧಂತಿ ಉತ್ಸವ ಮಾ.2 ಗುರುವಾರ ನಡೆಯಲಿದೆ. ಗುರುವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಉತ್ಸವ ನಡೆಯಲಿದ್ದು, ಮಧ್ಯಾಹ್ನ 1 ರಿಂದ ಅನ್ನಸಂತರ್ಪಣೆ, ಸಂಜೆ 6.30 ಕ್ಕೆ ಶ್ರೀ ದೈವಗಳ ಭಂಡಾರ ತೆಗೆದು ದೈವಸ್ಥಾನಕ್ಕೆ ತೆರಳಿ ರಾತ್ರಿ ತಂಬಿಲಾದಿಗಳು ನಡೆಯಲಿವೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಮಾಧವ ಗೌಡ ಕಾಂತಿಲ ತಿಳಿಸಿದ್ದಾರೆ.

ನಾಳೆ (ಮಾ.2) : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ Read More »

ವೇದದಲ್ಲಿದೆ ರಾಷ್ಟ್ರದ ದೃಷ್ಟಿ | ಸನ್ಮಾನ ಸ್ವೀಕರಿಸಿ ಡಾ.ವಾಗೀಶ್ವರೀ ಶಿವರಾಮ | ಮಂಜುಲಗಿರಿ ಪುರೋಹಿತ ಶಂಕರನಾರಾಯಣ ಪ್ರತಿಷ್ಠಾನದಿಂದ ಸನ್ಮಾನ

ಪುತ್ತೂರು: ಕುಟುಂಬ ಸರಿಯಾಗಿದ್ದರೆ ನಾಡು, ದೇಶ ಬಲಿಷ್ಠವಾಗಿರುತ್ತದೆ. ಇದನ್ನು ವೇದದಲ್ಲಿ ಮುನಿಗಳು ಉಲ್ಲೇಖ ಮಾಡಿದ್ದಾರೆ. ಆದ್ದರಿಂದ ರಾಷ್ಟ್ರದ ದೃಷ್ಟಿಕೋನವನ್ನು ನಾವು ವೇದಗಳಲ್ಲಿಯೇ ಕಾಣಲು ಸಾಧ್ಯ  ಎಂದು ಮಂಗಳೂರು ಕೆನರಾ ಪ್ರೌಢಶಾಲೆಯ ನಿವೃತ್ತ ಸಂಸ್ಕೃತ ಶಿಕ್ಷಕ ವಿದ್ಯಾವಾರಿಧಿ ಡಾ. ವಾಗೀಶ್ವರೀ ಶಿವರಾಮ ಹೇಳಿದರು. ಬೆಟ್ಟಂಪಾಡಿ ಮಂಜುಲಗಿರಿ ಪುರೋಹಿತ ಶಂಕರನಾರಾಯಣ ಪ್ರತಿಷ್ಠಾನದ ವತಿಯಿಂದ ಶಂಕರ ಕೃಪಾದಲ್ಲಿ ಫೆ. 27ರಂದು ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕುಟುಂಬ, ನಾಡು, ರಾಜ್ಯ, ದೇಶ ಒಂದಕ್ಕೊಂದು ಪರಸ್ಪರ ಸಂಬಂಧ ಹೊಂದಿರುವಂತಹದ್ದು.

ವೇದದಲ್ಲಿದೆ ರಾಷ್ಟ್ರದ ದೃಷ್ಟಿ | ಸನ್ಮಾನ ಸ್ವೀಕರಿಸಿ ಡಾ.ವಾಗೀಶ್ವರೀ ಶಿವರಾಮ | ಮಂಜುಲಗಿರಿ ಪುರೋಹಿತ ಶಂಕರನಾರಾಯಣ ಪ್ರತಿಷ್ಠಾನದಿಂದ ಸನ್ಮಾನ Read More »

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ | ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಉಪಸ್ಥಿತಿ

ಪುತ್ತೂರು : ಬಡಗನ್ನೂರು ಗ್ರಾಮದ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪುನರ್‍ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ಮುಂಜಾನೆಯಿಂದ ವಿವಿಧ ವೈದಿಕ ಕಾರ್ಯಕ್ರಮಗಳು, ಧಾರ್ಮಿಕ ಸಭಾ ಕಾರ್ಯಕ್ರಮಗಳು ಜರಗಿದವು. ಬೆಳಗ್ಗೆ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಗಣಪತಿ ಹೋಮ, ತತ್ವಕಲಶ, ತತ್ವಹೋಮ, ಅನುಜ್ಞಾ ಕಲಶಾಭಿಷೇಕ, ಅಂಕುರ ಪೂಜೆ, ತ್ರಿಕಾಲಪೂಜೆ, ಮಧ್ಯಾಹ್ನ 12 ಕ್ಕೆ ಅಂಕುರ ಪೂಜೆ, ತ್ರಿಕಾಲಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು.

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ | ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಉಪಸ್ಥಿತಿ Read More »

ಪಡುಮಲೆ ಬ್ರಹ್ಮಕಲಶೋತ್ಸವದಲ್ಲಿ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಿಂದ ಭರತನಾಟ್ಯ ಪ್ರದರ್ಶನ

ಪುತ್ತೂರು: ಪುತ್ತೂರು ತಾಲೂಕಿನ ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಮೊದಲನೇ ದಿನವಾದ ಫೆ.25ರಂದು ರಾತ್ರಿ ದರ್ಬೆ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ನೃತ್ಯಗುರು ದೀಪಕ್ ಕುಮಾರ್ ಅವರ ಶಿಷ್ಯ ವೃಂದದವರಿಂದ ಭರತನಾಟ್ಯ ಪ್ರದರ್ಶನಗೊಂಡಿತು.

ಪಡುಮಲೆ ಬ್ರಹ್ಮಕಲಶೋತ್ಸವದಲ್ಲಿ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಿಂದ ಭರತನಾಟ್ಯ ಪ್ರದರ್ಶನ Read More »

ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ | ಹರಿದು ಬಂದ ಜನಸಾಗರ

ಪುತ್ತೂರು : ಐತಿಹಾಸಿಕ ಕ್ಷೇತ್ರ ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ರವಿವಾರ ವಿವಿಧ ವೈದಿಕ ಕಾರ್ಯಕ್ರಮಗಳು ನಡೆದವು. ಪೂರ್ವಾಹ್ನ 6 ರಿಂದ ಗಣಪತಿ ಹೋಮ, ಪ್ರಾಯಶ್ಚಿತ ಹೋಮಗಳು, ಚತು:ಶುದ್ದಿಧಾರ, ಅವಾಗಹ, ಪಂಚಕ, ಅಂಕುರ ಪೂಜೆ, ಅಪರಾಹ್ನ ಅಂಕುರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಹೋಮ ಕಲಶಾಭಿಷೇಕ, ಅಂಕುರ ಪೂಜೆ, ಮಹಾಪೂಜೆ ನಡೆಯಿತು. ಈ ಸಂದರ್ಭದಲ್ಲಿ ಆಲಂತಡ್ಕ ಶ್ರೀ ವನಶಾಸ್ತಾರ ಮಕ್ಕಳ ಕುಣಿತ ಭಜನ ತಂಡ ಹಾಗೂ ನಿಡ್ಪಳ್ಳಿ ಶಾಂತದುರ್ಗಾ ಭಜನ ಮಂಡಳಿಯಿಂದ ಭಜನೆ

ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ | ಹರಿದು ಬಂದ ಜನಸಾಗರ Read More »

ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ, ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ, ಧಾರ್ಮಿಕ ಸಭೆ, ಸನ್ಮಾನ

ಕಡಬ: ಕುದ್ಮಾರು ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ ಮತ್ತು ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಪ್ರಯುಕ್ತ ಫೆ. 25ರಂದು ಸಂಜೆ ಧಾರ್ಮಿಕ ಸಭೆ ನಡೆಯಿತು. ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ ದೈವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ್ ಕೆ.ಎನ್. ಕಾರ್ಲಾಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರದೀಪ್ ಆರ್. ಗೌಡ ಅರುವಗುತ್ತು ಉದ್ಘಾಟಿಸಿದರು. ಇದೇ ಸಂದರ್ಭ ಭಾರತೀಯ ಭೂಸೇನೆಯ ಮಾಜಿ ಸುಬೇದಾರ್ ರವಿಚಂದ್ರ ಮಾರ್ಕಜೆ, ಭಾರತೀಯ ಭೂಸೇನೆಯ

ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ, ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ, ಧಾರ್ಮಿಕ ಸಭೆ, ಸನ್ಮಾನ Read More »

ಬಲಮುರಿ ಶ್ರೀ ವಿದ್ಯಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ | ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ

ಪುತ್ತೂರು : ಬನ್ನೂರಿನ ಬಲಮುರಿ ಶ್ರೀ ವಿದ್ಯಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಪ್ರಯುಕ್ತ ಹಸಿರುವಾಣಿ ಮೆರವಣಿಗೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠದೂರು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರಿಗೆ ಭಗವಾಧ್ವಜ ನೀಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ  ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ತೆಂಗಿನ ಕಾಯಿ ಹೊಡೆದು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಪುರಸಭಾ ಸದಸ್ಯ ಪಿ ಜಿ ಜಗನ್ನಿವಾಸ ರಾವ್, ಮುರಳಿ ಕೃಷ್ಣಭಟ್ ಹಸಂತಡ್ಕ,ಜಯಾನಂದ ವಕೀಲರು, ಸುಬ್ರಹ್ಮಣ್ಯ

ಬಲಮುರಿ ಶ್ರೀ ವಿದ್ಯಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ | ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ Read More »

ಫೆ.25 ರಿಂದ ಮಾ.6 : ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ | ಪುತ್ತೂರಿನಿಂದ ಹೊರಟ ಹಸಿರುವಾಣಿ ಮೆರವಣಿಗೆ

ಪುತ್ತೂರು : ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.25 ರಿಂದ ಮಾ.6 ರ ತನಕ ನಡೆಯುವ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಮೆರವಣಿಗೆ ಶುಕ್ರವಾರ ಸಂಜೆ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ಬಳಿಕ ಮುಖ್ಯ ರಸ್ತೆಯಿಂದ ಹೊರಟ ಹಸಿರುವಾಣಿ ಮೆರವಣಿಗೆ , ಸಂಪ್ಯ, ಕುಂಬ್ರ ಮಾರ್ಗವಾಗಿ ಶ್ರೀ ಕ್ಷೇತ್ರವನ್ನು ಸಂಜೆ ಹೊತ್ತಿಗೆ ತಲುಪಿತು. ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ವ್ಯವಸ್ಥಾಪನಾ

ಫೆ.25 ರಿಂದ ಮಾ.6 : ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ | ಪುತ್ತೂರಿನಿಂದ ಹೊರಟ ಹಸಿರುವಾಣಿ ಮೆರವಣಿಗೆ Read More »

ಫೆ.26 : ಸಾಲ್ಮರ ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿಯಿಂದ 44ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಪುತ್ತೂರು : ಪುತ್ತೂರಿನ ಹೊರವಲಯದ ಸಾಲ್ಮರ ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ ವತಿಯಿಂದ 44ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಫೆ.26 ಭಾನುವಾರ ಸಂಜೆ 6.30 ರಿಂದ ಸಾಲ್ಮರ ಕಟ್ಟೆ ವಠಾರದಲ್ಲಿ ನಡೆಯಲಿದೆ. ಪೂಜೆಯ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ. ಭಕ್ತಾದಿಗಳು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಬೇಕಾಗಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಫೆ.26 : ಸಾಲ್ಮರ ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿಯಿಂದ 44ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ Read More »

error: Content is protected !!
Scroll to Top