ಕಾಂತಮಂಗಲ ಕುರುಂಜಿಯ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ | ದೇವರ ದರ್ಶನ ಪಡೆದ ಸಾವಿರಾರು ಭಕ್ತರು
ಸುಳ್ಯ: ಕಾಂತಮಂಗಲ ಕುರುಂಜಿಯ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ ಜ.31ರಂದು ನಡೆಯಿತು. ವಾರ್ಷಿಕ ಉತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಉತ್ಸವದ ಅಂಗವಾಗಿ ಜ.31 ರಂದು ಕ್ಷೇತ್ರದ ಗರ್ಭಗುಡಿ ತೆರೆದು ವಿಶೇಷ ಪೂಜೆ ನೆರವೇರಿತು. ವರ್ಷದಲ್ಲಿ ಒಂದು ದಿನ ಮಾತ್ರ ಗರ್ಭಗುಡಿಯ ಬಾಗಿಲು ತೆರೆಯುವುದು ಈ ಕ್ಷೇತ್ರದ ವಿಶೇಷತೆ. ಡಾ.ರೇಣುಕಾಪ್ರಸಾದ್ ಕೆ.ವಿ. ಧರ್ಮದರ್ಶಿಗಳಾಗಿರುವ ಕ್ಷೇತ್ರದಲ್ಲಿ ಪ್ರತಿ ಜ.31ರಂದು ವಾರ್ಷಿಕ ಉತ್ಸವ ವಿಜೃಂಭಣೆಯಿಂದ ನಡೆಯುತ್ತದೆ. ದೈವಜ್ಞರಾದ […]