ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಶಿವನ ದೇವಸ್ಥಾನಗಳಲ್ಲಿ ಮಹಾಶಿವರಾತ್ರಿಯಂದು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಆಯುಕ್ತರ ಸೂಚನೆ
ಪುತ್ತೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ಶಿವನ ದೇವಸ್ಥಾನಗಳಲ್ಲಿ ಫೆ.18ರಂದು ಮಹಾ ಶಿವರಾತ್ರಿ ಹಬ್ಬದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅದಕ್ಕೆ ತಗಲುವ ವೆಚ್ಚವನ್ನು ಆಯಾ ದೇವಾಲಯದ ನಿಧಿಯಿಂದ ಭರಿಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಶಿವರಾತ್ರಿಯ ಹಬ್ಬದ ದಿನದಂದು ವಿಶೇಷವಾಗಿ ಸಂಕಲ್ಪಿಸಿ ಆ ದಿನ ಪ್ರಾಂತ: ಕಾಲದಿಂದ ಮಧ್ಯಾಹ್ನದವರೆಗೆ ಯಾವುದಾದರೊಂದು ಸೂಕ್ತ ಸಮಯದಲ್ಲಿ ದೇವಾಲಯದ ದೈನಂದಿನ ಪೂಜಾವಿಧಿಗಳಿಗೆ ಧಕ್ಕೆಯಾಗದಂತೆ ರುದ್ರಾಭಿಷೇಕ ಮತ್ತು ರುದ್ರ ಹೋಮ ಪೂಜಾಕಾರ್ಯಗಳನ್ನು ವಿಶೇಷವಾಗಿ ನಡೆಸುವುದು. […]