ಧಾರ್ಮಿಕ

ಪುತ್ತಿಗೆ ಪರ್ಯಾಯ: ಸ್ವಾಗತ ಕಾರ್ಯಾಲಯ ಕಚೇರಿ ಉದ್ಘಾಟಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ

ಉಡುಪಿ: ಪುತ್ತಿಗೆ ಪರ್ಯಾಯದ ಪೂರ್ವಭಾವಿಯಾಗಿ ಶನಿವಾರ ಪರ್ಯಾಯ ಕಾರ್ಯಾಲಯ ಕಚೇರಿ ಮತ್ತು ಸ್ವಾಗತ ಕಾರ್ಯಾಲಯವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ  ಹೆಗ್ಗಡೆ ಉದ್ಘಾಟಿಸಿದರು. ಇದೇ ಸಂದರ್ಭ ಪರ್ಯಾಯ ಲಾಂಛನವನ್ನೂ ಬಿಡುಗಡೆಗೊಳಿಸಲಾಯಿತು. ಉಡುಪಿ ಶಾಸಕ ರಘುಪತಿ ಭಟ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

ಪುತ್ತಿಗೆ ಪರ್ಯಾಯ: ಸ್ವಾಗತ ಕಾರ್ಯಾಲಯ ಕಚೇರಿ ಉದ್ಘಾಟಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ Read More »

ಗಣೇಶ ಚತುರ್ಥಿಗೆ ಸೆ. 19ರಂದೇ ರಜೆ ಫಿಕ್ಸ್: ಸರ್ಕಾರದಿಂದ ಹೊರಬಿತ್ತು ಆದೇಶ

ಬೆಂಗಳೂರು: ಗಣೇಶ ಚತುರ್ಥಿಯ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರದ ಬದಲಾಗಿ ಮಂಗಳವಾರ ರಜೆ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಗಣೇಶ ಹಬ್ಬದ ಆಚರಣೆಯ ದಿನದ ಬಗ್ಗೆ ಗೊಂದಲಗಳಿವೆ. ಹಲವೆಡೆ ಸೋಮವಾರ (ಸೆ.18) ದಂದು ಹಬ್ಬ ಆಚರಿಸುತ್ತಿದ್ದರೆ, ಮತ್ತೆ ಕೆಲವೆಡೆ ಮಂಗಳವಾರ (ಸೆ.19) ದಂದು ಆಚರಿಸಲಾಗುತ್ತಿದೆ. ಸರ್ಕಾರ ನಿಗದಿ ಪಡಿಸಿದ ರಜೆಯು ಸೋಮವಾರ ಎಂದಿದೆ. ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಹಬ್ಬ ಆಚರಿಸುವ ಕಾರಣ ಅದೇ ದಿನ ಸರ್ಕಾರಿ ರಜೆ ನೀಡಬೇಕು ಎಂದು ಕೂಗು

ಗಣೇಶ ಚತುರ್ಥಿಗೆ ಸೆ. 19ರಂದೇ ರಜೆ ಫಿಕ್ಸ್: ಸರ್ಕಾರದಿಂದ ಹೊರಬಿತ್ತು ಆದೇಶ Read More »

ಪುರಾತನ ಕದ್ರಿ ದೇವಳವೇ ಉಗ್ರರ ಟಾರ್ಗೆಟ್??!! NIA ಮಾಹಿತಿ

ಮಂಗಳೂರು: ಮಂಗಳೂರು ನಗರದ ನಾಗುರಿಯ ಗರೋಡಿ ಬಳಿ ರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಗುರಿ ನಗರದ ಅತ್ಯಂತ ಪುರಾತನ ಶ್ರೀ ಕದ್ರಿ ದೇಗುಲವೇ ಆಗಿತ್ತು ಎನ್ನುವುದು ಎನ್‌ಐಎ ತನಿಖೆಯಿಂದ ಬಯಲಾಗಿದೆ. 2022 ನವೆಂಬರ್ 19ರಂದು ನಗರದ ನಾಗುರಿಯ ಗರೋಡಿ ಬಳಿ ಸಂಚಾರದಲ್ಲಿದ್ದ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಪಡೀಲ್ ನಲ್ಲಿ ರಿಕ್ಷಾ ಹತ್ತಿದ್ದ ಶಂಕಿತ ಉಗ್ರ ಶಾರೀಕ್‌ ಬಳಿಯಿದ್ದ ಕುಕ್ಕರ್ ಬಾಂಬ್ ನಾಗುರಿ ಬಳಿ ಆಕಸ್ಮಿಕವಾಗಿ ಸ್ಪೋಟಗೊಂಡಿತ್ತು. ಇದರಿಂದ ಶಾರೀಕ್ ಹಾಗೂ ರಿಕ್ಷಾ ಚಾಲಕ

ಪುರಾತನ ಕದ್ರಿ ದೇವಳವೇ ಉಗ್ರರ ಟಾರ್ಗೆಟ್??!! NIA ಮಾಹಿತಿ Read More »

ಸೆ. 19: ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಗಣೇಶೋತ್ಸವ

ಪುತ್ತೂರು: ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ. 19ರಂದು ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ನಡೆಯಲಿದೆ. ದೇವಸ್ಥಾನದ ಅರ್ಚಕ ವೇ.ಮೂ. ಶಿವಪ್ರಸಾದ್ ಕಡಮಣ್ಣಾಯ ಅವರ ಪೌರೋಹಿತ್ಯದಲ್ಲಿ ನಡೆಯಲಿರುವ ಉತ್ಸವದಲ್ಲಿ ಸೆ. 19ರಂದು ಬೆಳಿಗ್ಗೆ 7 ಗಂಟೆಗೆ ಶ್ರೀ ಗಣೇಶ ವಿಗ್ರಹ ಪ್ರತಿಷ್ಠೆ, 8ಕ್ಕೆ ಭಗವಧ್ವಜಾರೋಹಣ ನಡೆದು ಬಳಿಕ ಗಣಹೋಮ, ಭಜನ ಸೇವೆ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾಧ್ಯಕ್ಷತೆಯನ್ನು ಸಾರ್ವಜನಿಕ

ಸೆ. 19: ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಗಣೇಶೋತ್ಸವ Read More »

ಶ್ರೀ ಕ್ಷೇತ್ರ ಶರವೂರಿನಲ್ಲಿ ಕದಿರು ಕಟ್ಟುವ ಕಾರ್ಯಕ್ರಮ

ಪುತ್ತೂರು: ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ ಶನಿವಾರ ನಡೆಯಿತು. ದೇವಸ್ಥಾನದ ಅರ್ಚಕರು ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯಸ್ಥಾಪನ ಸಮಿತಿ ಅಧ್ಯಕ್ಷ ದಾಮೋದರ ಗೌಡ ಕಕ್ವೆ ಹಾಗೂ ಸಮಿತಿಯ ಸದಸ್ಯರುಗಳು, ಅರ್ಚಕರು, ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಶರವೂರಿನಲ್ಲಿ ಕದಿರು ಕಟ್ಟುವ ಕಾರ್ಯಕ್ರಮ Read More »

ಪಿಒಪಿ ಗಣೇಶ ಮೂರ್ತಿ ಉತ್ಪಾದನೆ, ಮಾರಾಟ ನಿಷೇಧಿಸಿದ ಸರ್ಕಾರ! | ನಿಯಮ ಉಲ್ಲಂಘಿಸಿದರೆ ಭಾರಿ ದಂಡದೊಂದಿಗೆ ಜೈಲು ಶಿಕ್ಷೆ

ಬೆಂಗಳೂರು: ರಾಜ್ಯಾದ್ಯಂತ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ (ಪಿಒಪಿ) ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ಮೂರ್ತಿಗಳ ಉತ್ಪಾದನೆ, ಮಾರಾಟ ಹಾಗೂ ವಿಸರ್ಜನೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದೇಶವನ್ನು ಅನುಷ್ಠಾನಗೊಳಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ರಾಜ್ಯದ ಎಲ್ಲಾ ಜಿಲ್ಲಾಡಳಿತ, ಸ್ಥಳೀಯ ಸಂಸ್ಥೆಗಳು, ಪೊಲೀಸ್ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಎನ್‌.ಪ್ರವೀಣ್‌ ಸೂಚಿಸಿದ್ದಾರೆ. ರಾಷ್ಟ್ರೀಯ ಹಸಿರು ನ್ಯಾಯ

ಪಿಒಪಿ ಗಣೇಶ ಮೂರ್ತಿ ಉತ್ಪಾದನೆ, ಮಾರಾಟ ನಿಷೇಧಿಸಿದ ಸರ್ಕಾರ! | ನಿಯಮ ಉಲ್ಲಂಘಿಸಿದರೆ ಭಾರಿ ದಂಡದೊಂದಿಗೆ ಜೈಲು ಶಿಕ್ಷೆ Read More »

ಮಂಗಳೂರು ವಿವಿ ಮಂಗಳ ಸಭಾಂಗಣದ ಗಣೇಶ ಚತುರ್ಥಿ ಗೊಂದಲಕ್ಕೆ ಮಂಗಳ!

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಗಣೇಶೋತ್ಸವ ವಿವಾದ ಸುಖಾಂತ್ಯ ಕಂಡಿದೆ. ವಿವಿಯ ಮಂಗಳ ಸಭಾಂಗಣದಲ್ಲಿ ಈ ಬಾರಿಯ ಗಣೇಶ ಚತುರ್ಥಿಯನ್ನು ನಡೆಸಲು ಆಡಳಿತ ಮಂಡಳಿ ತೀರ್ಮಾನಿಸಿದೆ ಎಂದು ಕುಲಪತಿಗಳಾದ ಪ್ರೊ. ಜಯರಾಜ್ ಅಮಿನ್ ಹೇಳಿಕೆ ನೀಡಿದ್ದಾರೆ.ಈ ಹಿಂದಿನ ವರ್ಷಗಳಲ್ಲಿ ವಿಶ್ವವಿದ್ಯಾಲಯದ ಪುರುಷರ ಹಾಸ್ಟೆಲ್​ನಲ್ಲಿ ಗಣೇಶೋತ್ಸವವವನ್ನು ಆಚರಣೆ ಮಾಡಲಾಗುತ್ತಿತ್ತು. ಈ ಬಾರಿ ಮಂಗಳಾ ಸಭಾಂಗಣದಲ್ಲಿ ಗಣೇಶ ಚತುರ್ಥಿ ಆಚರಣೆ ಮಾಡಲು ಯೋಜನೆ ರೂಪಿಸಿದಾಗ ಇದಕ್ಕೆ ವಿರೋಧ ವ್ಯಕ್ತವಾಗಿ ಅವಕಾಶ ನೀಡಲ್ಲ ಎಂದು ಕುಲಪತಿಗಳು ಹೇಳಿದ್ದರು.ಇದು ತೀವ್ರ ಆಕ್ರೋಶಕ್ಕೆ ಮತ್ತು ಅಸಮಾಧಾನಕ್ಕೆ

ಮಂಗಳೂರು ವಿವಿ ಮಂಗಳ ಸಭಾಂಗಣದ ಗಣೇಶ ಚತುರ್ಥಿ ಗೊಂದಲಕ್ಕೆ ಮಂಗಳ! Read More »

ದೇವಸ್ಥಾನಗಳ ಫಾಸಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶೀಘ್ರ ಬ್ರೇಕ್! | ಭಕ್ತರ ಭಾವನೆಗಳಿಗೆ ಗೌರವ ನೀಡಲು ರಾಜ್ಯ ಸರಕಾರ ನೀಡಿರುವ ಆದೇಶದ ವಿವರ ಇಲ್ಲಿದೆ…

ಬೆಂಗಳೂರು: ದೈವ ಭಕ್ತರ ಭಾವನೆಗಳನ್ನು ಗೌರವಿಸುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಗೊಳಪಟ್ಟ ದೇವಸ್ಥಾನಗಳ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಮುಜರಾಯಿ ಇಲಾಖೆಯ ಮಹತ್ವದ ನಿರ್ಣಯ ಇದಾಗಿದ್ದು, ಮನುಷ್ಯನಿಗೆ ಆಧ್ಯಾತ್ಮಿಕ ಅನುಭೂತಿ ನೀಡುವ ದೇವಾಲಯಗಳು ಸ್ವಚ್ಛತೆಯಿಂದ ಕೂಡಿರಬೇಕು ಎಂಬ ನಿರ್ಧಾರ ತಳೆದು ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಶೀಘ್ರ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಬ್ರೇಕ್‍ ಬೀಳಲಿದೆ. ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100

ದೇವಸ್ಥಾನಗಳ ಫಾಸಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶೀಘ್ರ ಬ್ರೇಕ್! | ಭಕ್ತರ ಭಾವನೆಗಳಿಗೆ ಗೌರವ ನೀಡಲು ರಾಜ್ಯ ಸರಕಾರ ನೀಡಿರುವ ಆದೇಶದ ವಿವರ ಇಲ್ಲಿದೆ… Read More »

ಸೆ. 19ರಂದೇ ರಜೆ ಘೋಷಿಸಲು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ | ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ದಿನೇಶ್ ಗುಂಡೂರಾವ್

ಪುತ್ತೂರು: ಗಣೇಶೋತ್ಸವದ ಸಾರ್ವತ್ರಿಕ ರಜೆಯ ಗೊಂದಲಕ್ಕೆ ತೆರೆ ಎಳೆಯಲು ದ.ಕ. ಜಿಲ್ಲಾ ಉಸ್ತುವಾರಿ ಸಚಿವರು, ದ.ಕ. ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಸೆ. 19ರಂದು ಗಣೇಶೋತ್ಸವ ಹಬ್ಬ ಆಚರಣೆ ನಡೆಯಲಿದ್ದು, ಸೆ. 18ಕ್ಕೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಇದರಿಂದ ಕರಾವಳಿ ಭಾಗದಲ್ಲಿ ಗೊಂದಲ ಉಂಟಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗೆ ಸೂಚನೆ ನೀಡಿರುವ ದ.ಕ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಸರಕಾರಿ ರಜೆಯನ್ನು ಮಾರ್ಪಡಿಸಿ ಅನುಕೂಲವಾಗುವಂತೆ ಸೆ. 19ರಂದು ರಜೆ ಘೋಷಿಸುವ ಸಂಬಂಧ

ಸೆ. 19ರಂದೇ ರಜೆ ಘೋಷಿಸಲು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ | ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ದಿನೇಶ್ ಗುಂಡೂರಾವ್ Read More »

ಸೆ. 28ರಿಂದ ಅ. 4: ಧರ್ಮಸ್ಥಳದಲ್ಲಿ 25ನೇ ವರ್ಷದ ಭಜನಾ ಕಮ್ಮಟ | ಪುತ್ತೂರು ತಾಲೂಕು ಬಿ.ಸಿ. ಟ್ರಸ್ಟ್ ವತಿಯಿಂದ ಪೂರ್ವಭಾವಿ ಸಭೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪುತ್ತೂರು ತಾಲೂಕು ವತಿಯಿಂದ ಭಜನಾ ಮಂಡಳಿ ಪರಿಷತ್ ಸಭೆ ನಡೆಯಿತು. ಸೆ. 28ರಿಂದ ಅ. 4ರವರೆಗೆ ಧರ್ಮಸ್ಥಳ ಕ್ಷೇತ್ರದಲ್ಲಿ ನಡೆಯುವ 25ನೇ ವರ್ಷದ ಭಜನಾ ಕಮ್ಮಟ ಕಾರ್ಯಕ್ರಮದಲ್ಲಿ ಭಜನಾ ಪರಿಷತ್ ಮಂಡಳಿಯ ಸದಸ್ಯರು ಪಾಲ್ಗೊಳ್ಳುವ ಕುರಿತು ಚರ್ಚಿಸಲಾಯಿತು. ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ಪುರುಷೋತ್ತಮ ಪಿ.ಕೆ. ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಭಜನಾ ಪರಿಷತ್ ತಾಲೂಕು ಅಧ್ಯಕ್ಷ ಸುಬ್ಬಯ್ಯ ರೈ , ಕಾರ್ಯದರ್ಶಿ ಲೋಕೇಶ್ ಬೆತ್ತೋಡಿ

ಸೆ. 28ರಿಂದ ಅ. 4: ಧರ್ಮಸ್ಥಳದಲ್ಲಿ 25ನೇ ವರ್ಷದ ಭಜನಾ ಕಮ್ಮಟ | ಪುತ್ತೂರು ತಾಲೂಕು ಬಿ.ಸಿ. ಟ್ರಸ್ಟ್ ವತಿಯಿಂದ ಪೂರ್ವಭಾವಿ ಸಭೆ Read More »

error: Content is protected !!
Scroll to Top