ಧಾರ್ಮಿಕ

ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಉತ್ಸವ | ಶ್ರೀ ಶಾರದಾ ಭಜನಾ ಮಂದಿರದಲ್ಲಿ ಪೂರ್ವಭಾವಿ ಸಭೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವದ ಪೂರ್ವಾಭಾವಿ ಸಭೆಯು ಭಜನಾ ಮಂದಿರದ ಅಧ್ಯಕ್ಷ ಸಾಯಿರಾಮ ರಾವ್ ಅಧ್ಯಕ್ಷತೆಯಲ್ಲಿ ನಡೆಯಿತು. ಮಂದಿರದ ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ ಮಾತನಾಡಿ, ಕಳೆದ 88 ವರ್ಷದಿಂದ ಮಂದಿರದಲ್ಲಿ ನವರಾತ್ರಿ ಉತ್ಸವ, ಶಾರದೆ ವಿಗ್ರಹ ಪ್ರತಿಷ್ಠೆ, ಶೋಭಾಯಾತ್ರೆ ನಡೆಯುತ್ತಿದೆ. ಈ ವರ್ಷದಿಂದ ಉತ್ಸವಕ್ಕೆ ಹೊಸ ಸಮಿತಿ ರಚನೆ ಮಾಡುವ ಜತೆಗೆ 10 ದಿನದ ನವರಾತ್ರಿ ಉತ್ಸವದಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮ, ಶೋಭಾಯಾತ್ರೆಯನ್ನು ವಿಜೃಂಭಣೆಯಿಂದ ನಡೆಸಿ […]

ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಉತ್ಸವ | ಶ್ರೀ ಶಾರದಾ ಭಜನಾ ಮಂದಿರದಲ್ಲಿ ಪೂರ್ವಭಾವಿ ಸಭೆ Read More »

ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ | ಅಧ್ಯಕ್ಷರಾಗಿ ರಾಜೇಶ್ ಬನ್ನೂರು ಆಯ್ಕೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಡೆಯುವ ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಉತ್ಸವ ಸಮಿತಿ ಅಧ್ಯಕ್ಷರಾಗಿ ರಾಜೇಶ್ ಬನ್ನೂರು ಅವರನ್ನು ಆಯ್ಕೆ ಮಾಡಲಾಯಿತು. ಭಜನಾ ಮಂದಿರದ ಅಧ್ಯಕ್ಷ ಸಾಯಿರಾಮ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ದಯಾನಂದ ಆದರ್ಶ, ನಯನಾ ರೈ ನೆಲ್ಲಿಕಟ್ಟೆ, ಕಾರ್ಯದರ್ಶಿಯಾಗಿ ಅಜಿತ್ ರೈ ಹೊಸಮನೆ, ಜತೆ ಕಾರ್ಯದರ್ಶಿಯಾಗಿ ಎಂ. ಗೋಪಾಲಕೃಷ್ಣ ಈಶ, ಹರಿಪ್ರಸಾದ್ ಶೆಟ್ಟಿ

ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ | ಅಧ್ಯಕ್ಷರಾಗಿ ರಾಜೇಶ್ ಬನ್ನೂರು ಆಯ್ಕೆ Read More »

ಹಿಂದೂಗಳು ಒಗ್ಗಟ್ಟಾಗಿ ಧರ್ಮವನ್ನು ಉಳಿಸುವ ಕೆಲಸ ಮಾಡಬೇಕು | ಬಪ್ಪಳಿಗೆ ಸಿಂಗಾಣಿಯಲ್ಲಿ ಶ್ರೀಕೃಷ್ಣ ವೇಷಧಾರಿ ಮಕ್ಕಳ ಶೋಭಾಯಾತ್ರೆಯಲ್ಲಿ ಕಿಶೋರ್ ಕುಮಾರ್ ಬೊಟ್ಯಾಡಿ

ಪುತ್ತೂರು: ಸಿಂಗಾಣಿ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಹಾಗೂ ಬಪ್ಪಳಿಗೆ ಎಂಸಿಬಿ ಸ್ಪೋರ್ಟ್ಸ್ ಆ್ಯಂಡ್ ಆರ್ಟ್ಸ್ ಕ್ಲಬ್ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ ಮತ್ತು ಕೃಷ್ಣ ವೇಷಧಾರಿಗಳ ಶೋಭಾಯಾತ್ರೆ ಬಪ್ಪಳಿಗೆ ಸಿಂಗಾಣಿಯಲ್ಲಿ ನಡೆಯಿತು. ಕೃಷ್ಣ ವೇಷಧಾರಿ ಮಕ್ಕಳ ಭವ್ಯ ಶೋಭಾಯತ್ರೆಗೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪ್ರಧಾನ ಅರ್ಚಕ ರವಿಚಂದ್ರ ನೆಲ್ಲಿತ್ತಾಯ ಚಾಲನೆ ನೀಡಿದರು. ಬಳಿಕ ರಾಗಿಕುಮೇರಿ ಶಾಲಾ ಬಳಿಯಿಂದ ಸಿಂಗಾಣಿವರೆಗೂ ಚೆಂಡೆ, ವಾದ್ಯ, ಬ್ಯಾಂಡ್ ಸೆಟ್ ಗಳೊಂದಿಗೆ ಭವ್ಯ ಮೆರವಣಿಗೆ ನಡೆಯಿತು. ಬಳಿಕ ಸಿಂಗಾಣಿಯ ಹಿಲ್

ಹಿಂದೂಗಳು ಒಗ್ಗಟ್ಟಾಗಿ ಧರ್ಮವನ್ನು ಉಳಿಸುವ ಕೆಲಸ ಮಾಡಬೇಕು | ಬಪ್ಪಳಿಗೆ ಸಿಂಗಾಣಿಯಲ್ಲಿ ಶ್ರೀಕೃಷ್ಣ ವೇಷಧಾರಿ ಮಕ್ಕಳ ಶೋಭಾಯಾತ್ರೆಯಲ್ಲಿ ಕಿಶೋರ್ ಕುಮಾರ್ ಬೊಟ್ಯಾಡಿ Read More »

ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿ ಹಾಗೂ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಧ್ಯಾತ್ಮಿಕ ಶಿಕ್ಷಣ ಶಿಬಿರ

ಸವಣೂರು : ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿ ಹಾಗೂ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಭಗವಾನ್ ಶ್ರೀಸತ್ಯಸಾಯಿ ಬಾಬಾರವರ ದಿವ್ಯ ಅನುಗ್ರಹದೊಂದಿಗೆ ವಿದ್ಯಾರಶ್ಮಿ ಪದವಿ ಕಾಲೇಜಿನ ವಿದ್ಯಾಸಿಂಚನ ಸಭಾಂಗಣದಲ್ಲಿ ಎರಡು ದಿನಗಳ ಆಧ್ಯಾತ್ಮಿಕ ಶಿಕ್ಷಣ ಶಿಬಿರ ನಡೆಯಿತು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ  ಅಶ್ವಿನ್ ಎಲ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ವೈಯಕ್ತಿಕ ಬೆಳವಣಿಗೆಗೆ ಆಧ್ಯಾತ್ಮಿಕ ಶಿಕ್ಷಣವು ಪೂರಕವಾದದ್ದು ಇದು ನಮ್ಮನ್ನು ಸನ್ಮಾರ್ಗದ ಕಡೆಗೆ ಕೊಂಡೊಯ್ಯುತ್ತದೆ ಎಂದರು. ಸತ್ಯಸಾಯಿ

ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿ ಹಾಗೂ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಧ್ಯಾತ್ಮಿಕ ಶಿಕ್ಷಣ ಶಿಬಿರ Read More »

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ | ಶ್ರೀ ಕೃಷ್ಣನ ವೇಷ  ತೊಟ್ಟು ಸಂಭ್ರಮಿಸಿದ  ಪುಟಾಣಿಗಳು

ಕಾವು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ ಹಾಗೂ ಕಾವು ಗೆಳೆಯರ ಬಳಗದ ವತಿಯಿಂದ ಮುದ್ದು ಕೃಷ್ಣ ಸ್ಫರ್ಧೆ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ದೀಪ ಪ್ರಜ್ವಲಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸದಸ್ಯರಾದ ಬಾಲಮುರಳಿ ಸಸ್ಪೆಟ್ಟಿ, ಲಕ್ಷ್ಮಿನಾರಾಯಣ ಭಟ್ ಪೆರ್ನಾಜೆ, ಸುಚೇತಾ ರೈ ಮತ್ತು ಗೀತಾ ಮಾಣಿಯಡ್ಕ ಚೆನ್ನಮಣೆ ಆಡುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ | ಶ್ರೀ ಕೃಷ್ಣನ ವೇಷ  ತೊಟ್ಟು ಸಂಭ್ರಮಿಸಿದ  ಪುಟಾಣಿಗಳು Read More »

ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಶ್ರೀ ಗಣೇಶೋತ್ಸವ: ಆಮಂತ್ರಣ ಬಿಡುಗಡೆ

ಪುತ್ತೂರು: ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸೆ.18 ಹಾಗೂ ಸೆ.19ರಂದು ನಡೆಯುವ ಪ್ರಥಮ ವರ್ಷದ ಗೌರಿ ಹಬ್ಬ ಹಾಗೂ ಗಣೇಶೋತ್ಸವದ ಆಮಂತ್ರಣ ಬಿಡುಗಡೆ ದೇವಸ್ಥಾನದ ವಠಾರದಲ್ಲಿ ನಡೆಯಿತು. ಆಮಂತ್ರಣ ಬಿಡುಗಡೆಗೆ ಮುನ್ನ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಅರ್ಚಕ ರಾಮ ಕಲ್ಲೂರಾಯ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಮೋಹನ್ ರೈ ಓಲೆಮುಂಡೋವು, ಮುಂಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಎನ್.ಎಸ್‌.ಡಿ. ಸರ್ವೆ ದೋಳ ಗುತ್ತು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಸಮಿತಿಯ ಕೋಶಾಧಿಕಾರಿ

ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಶ್ರೀ ಗಣೇಶೋತ್ಸವ: ಆಮಂತ್ರಣ ಬಿಡುಗಡೆ Read More »

ಸೆ.19 : ಮುಕ್ಕೂರಿನಲ್ಲಿ ಗಣೇಶೋತ್ಸವ ಕ್ರೀಡಾಕೂಟ, ಸಮ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ

ಮುಕ್ಕೂರು: ಕುಂಡಡ್ಕ -ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 14 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ, ಸಮ್ಮಾನ ಸಮಾರಂಭ ಸೆ.19 ರಂದು ಮುಕ್ಕೂರಿನಲ್ಲಿ ನಡೆಯಲಿದೆ. ಪ್ರಗತಿಪರ ಕೃಷಿಕ ಮೋಹನ ಬೈಪಡಿತ್ತಾಯ ದೀಪ ಬೆಳಗಿಸಲಿದ್ದಾರೆ. ಅನಂತರ ಪೆರುವಾಜೆ ಶ್ರೀ ಜಲದುರ್ಗಾದೇವಿ ಕುಣಿತ ಭಜನ ತಂಡದಿಂದ ಕುಣಿತ ಭಜನೆ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಕು.ಭಾಗೀರಥಿ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸಲಿದ್ದು, ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು  ಸಭಾಧ್ಯಕ್ಷತೆ ವಹಿಸಲಿದ್ದು

ಸೆ.19 : ಮುಕ್ಕೂರಿನಲ್ಲಿ ಗಣೇಶೋತ್ಸವ ಕ್ರೀಡಾಕೂಟ, ಸಮ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ಧಾರ | ಪೂರ್ವಭಾವಿ ಸಭೆ

ಕಾಣಿಯೂರು: ಇತಿಹಾಸ ಪ್ರಸಿದ್ಧ ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಸಮಿತಿ ಸಭೆಯು ಕ್ಷೇತ್ರದಲ್ಲಿ ಸೆ.10ರಂದು ನಡೆಯಿತು. ಸಭೆಯಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ಜೀರ್ಣೋದ್ಧಾರ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ಧಾರ | ಪೂರ್ವಭಾವಿ ಸಭೆ Read More »

ಪುತ್ತೂರು ಪೇಟೆಯಲ್ಲಿ ಅಟ್ಟಿಮಡಕೆಯ ವೈಭವ

ಪುತ್ತೂರು : ವಿಶ್ವ ಹಿಂದೂ ಪರಿಷತ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ ಅಂಗವಾಗಿ ಪುತ್ತೂರು ಮೊಸರು ಕುಡಿಕೆ ಉತ್ಸವ ಹಾಗೂ ವೈಭವದ ಶೋಭಾಯಾತ್ರೆಗೆ ಶನಿವಾರ ಸಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಚಾಲನೆ ನೀಡಲಾಯಿತು. ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿ ವೈದ್ಯ ಡಾ.ಎಂ.ಕೆ.ಪ್ರಸಾದ್ ಚಾಲನೆ ನೀಡಿದರು. ನಗರದ ಪ್ರಮುಖ ಕಡೆಗಳಲ್ಲಿ ಅಟ್ಟಿ ಮಡಿಕೆಗಳನ್ನು ಅಳವಡಿಸಲಾಗಿದ್ದು, ವೀರ ಹಿಂದೂ ಯುವಕರಿಂದ ಅಟ್ಟಿ ಮಡಿಕೆ ಒಡೆಯುವ

ಪುತ್ತೂರು ಪೇಟೆಯಲ್ಲಿ ಅಟ್ಟಿಮಡಕೆಯ ವೈಭವ Read More »

ಮೇರಿಮಾತೆ ಜನ್ಮ ದಿನಾಚರಣೆ ಅಂಗವಾಗಿ ಚರ್ಚ್‌ಗಳಲ್ಲಿ ಮೊಂತಿ ಫೆಸ್ಟ್ | ಮಾಯಿದೆ ದೇವುಸ್ ಚರ್ಚ್‍ನಲ್ಲಿ ಬೈಬಲ್ ವಾಚಿಸಿ ಸಂದೇಶ ನೀಡಿದ ಧರ್ಮಗುರು

ಪುತ್ತೂರು : ಯೇಸುಕ್ರಿಸ್ತ ತಾಯಿ ಮೇರಿ ಮಾತೆಯ ಜನ್ಮ ದಿನವನ್ನು ಸಾರುವ ‘ಮೊಂತಿ ಫೆಸ್ತ್(ತೆನೆ ಹಬ್ಬ)-ಕುಟುಂಬದ ಹಬ್ಬ’ ವನ್ನು ನಗರದ ಮಾಯಿದೆ ದೇವುಸ್ ಚರ್ಚ್‍ನಲ್ಲಿ ಶುಕ್ರವಾರ ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ಮಾಯಿದೆ ದೇವುಸ್ ಚರ್ಚ್‌ನಲ್ಲಿ ಬೈಬಲ್ ವಾಚಿಸಿ ಹಬ್ಬದ ಸಂದೇಶ ನೀಡಲಾಯಿತು. ಭತ್ತದ ತೆನೆಗಳನ್ನು ಆಯಾ ಚರ್ಚ್‌ನಲ್ಲಿ ಪ್ರಮುಖರು ಸಂಗ್ರಹಿಸಿ ಹಬ್ಬದ ದಿನದಂದು ಅವನ್ನು ಧರ್ಮಗುರುಗಳು ಪವಿತ್ರೀಕರಿಸಿ ಭಕ್ತರಿಗೆ ಹಂಚುವುದು ಸಂಪ್ರದಾಯವಾಗಿದ್ದು, ಈ ನಿಟ್ಟಿನಲ್ಲಿ ಪವಿತ್ರೀಕರಿಸಿದ ಭತ್ತದ ತೆ, ಸಿಹಿತ ಪ್ರತೀಕವಾಗಿ ಕಬ್ಬನ್ನು ಆಯಾ ಚರ್ಚ್‌ಗಳಲ್ಲಿ ಭಕ್ತರಿಗೆ

ಮೇರಿಮಾತೆ ಜನ್ಮ ದಿನಾಚರಣೆ ಅಂಗವಾಗಿ ಚರ್ಚ್‌ಗಳಲ್ಲಿ ಮೊಂತಿ ಫೆಸ್ಟ್ | ಮಾಯಿದೆ ದೇವುಸ್ ಚರ್ಚ್‍ನಲ್ಲಿ ಬೈಬಲ್ ವಾಚಿಸಿ ಸಂದೇಶ ನೀಡಿದ ಧರ್ಮಗುರು Read More »

error: Content is protected !!
Scroll to Top