ಧಾರ್ಮಿಕ

ಆ.25 : ಪುತ್ತೂರು ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರಮಹಾಲಕ್ಷ್ಮೀ ಪೂಜೆ

ಪುತ್ತೂರು: ನಗರದ ರೈಲ್ವೇ ನಿಲ್ದಾಣದ ಬಳಿ ಇರುವ ಲಕ್ಷ್ಮೀದೇವಿ ಬೆಟ್ಟದಲ್ಲಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ ಆ.25 ಶುಕ್ರವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಜರಗಲಿದೆ. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗಿ ಕ್ಷೇತ್ರದ ಧರ್ಮದರ್ಶಿ ಯನ್.ಐತ್ತಪ್ಪ ಸಪಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ.25 : ಪುತ್ತೂರು ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರಮಹಾಲಕ್ಷ್ಮೀ ಪೂಜೆ Read More »

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ

ಪುತ್ತೂರು: ಆದಿ ಸುಬ್ರಹ್ಮಣ್ಯದಲ್ಲಿ ಹುತ್ತಕ್ಕೆ ಪೂಜೆ ಸಲ್ಲುವಂತೆ ಪುತ್ತೂರು ತಾಲೂಕಿನಲ್ಲೂ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿಯ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ದೇವಸ್ಥಾನದ ನಾಗನಕಟ್ಟೆಯಲ್ಲಿ ಬೆಳಿಗ್ಗೆ ನಾಗದೇವರಿಗೆ ಹಾಲಿನ ಅಭಿಷೇಕ, ಸಿಯಾಳ ಅಭಿಷೇಕ ನಾಗತಂಬಿಲ ನಡೆಯಿತು. ಬಳಿಕ ವಲ್ಮಿಕ ರೂಪಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಪೂಜೆ ನಡೆದ ಬಳಿಕ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ Read More »

ಶ್ರೀ ಕ್ಷೇತ್ರ ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ

ಕಡಬ: ಕಡಬ ತಾಲೂಕಿನ ಎಣ್ಮೂರು ಗ್ರಾಮದ ಶ್ರೀ ಕ್ಷೇತ್ರ ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ ಹಬ್ಬ ಸೋಮವಾರ ನಡೆಯಿತು. ಮುಂಜಾನೆಯಿಂದಲೇ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಹಾಲು, ಸೀಯಾಳ ಅರ್ಪಿಸಿದರು. ಆಡಳಿತ ಮಂಡಳಿ ಸದಸ್ಯರು, ಊರ, ಪರವೂರ ಭಕ್ತಾದಿಗಳು ಸಂಭ್ರಮದ ನಾಗರಪಂಚಮಿ ಹಬ್ಬದಲ್ಲಿ ಪಾಲ್ಗೊಂಡರು. ಬಳಿಕ ಅನ್ನಸಂತರ್ಪಣೆ ಜರಗಿತು.

ಶ್ರೀ ಕ್ಷೇತ್ರ ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ Read More »

ಶ್ರೀ ಲಕ್ಷ್ಮೀ ದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಸಂಭ್ರಮದ ನಾಗರಪಂಚಮಿ

ಪುತ್ತೂರು: ನಗರದ ರೈಲ್ವೇ ನಿಲ್ದಾಣದ ಬಳಿ ಇರುವ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಸಂಭ್ರಮದ ನಾಗರಪಂಚಮಿಯನ್ನು ಸೋಮವಾರ ಆಚರಿಸಲಾಯಿತು. ಕ್ಷೇತ್ರದ ನಾಗಸನ್ನಿಧಿಯಲ್ಲಿ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ನಾಗತಂಬಿಲ ಸೇರಿದಂತೆ ವಿವಿಧ ಸೇವಾ ಕಾರ್ಯಗಳನ್ನು ನೆರವೇರಿಸಲಾಯಿತು. ಕ್ಷೇತ್ರದ ಧರ್ಮದರ್ಶಿ ಐತ್ತಪ್ಪ ಸಪಲ್ಯ ಸೇರಿದಂತೆ ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

ಶ್ರೀ ಲಕ್ಷ್ಮೀ ದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಸಂಭ್ರಮದ ನಾಗರಪಂಚಮಿ Read More »

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ

ಶಾಂತಿಮೊಗರು: ಕಾಣಿಯೂರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ ಆಚರಣೆ ಸೋಮವಾರ ನಡೆಯಿತು. ಬೆಳಿಗ್ಗೆ ಶ್ರೀ ಕ್ಷೇತ್ರದ ನಾಗಸನ್ನಿಧಿಯಲ್ಲಿ ನಾಗತಂಬಿಲ, ಹಾಲಿನ ಅಭಿಷೇಕ ನಡೆಯಿತು. ದೇವಸ್ಥಾನದ ಅರ್ಚಕ ರಮಾನಂದ್ ಭಟ್ ವಿವಿಧ ಪೂಜಾ ವಿಧಿ ವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ ಭಕ್ತಾದಿಗಳು ಹಾಲು, ಸೀಯಾಳಾ ಅರ್ಪಿಸಿದರು.

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ Read More »

ಕುದ್ಮಾರು ಅನ್ಯಾಡಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನಾಗರಪಂಚಮಿ

ಕುದ್ಮಾರು: ಕುದ್ಮಾರು ಗ್ರಾಮದ ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ನಾಗಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ಶ್ರೀ ನಾಗದೇವರಿಗೆ ಹಾಲಿನ ಅಭಿಷೇಕ ನಡೆಯಿತು. ಭಕ್ತಾದಿಗಳು ಶ್ರೀ ನಾಗದೇವರಿಗೆ ಹಾಲು, ಸೀಯಾಳ ಅರ್ಪಿಸಿದರು. ಬೆಳಗ್ಗಿನಿಂದಲೇ ಭಕ್ತಾದಿಗಳು ಆಗಮಿಸಿ ಸಂಭ್ರಮದ ನಾಗರಪಂಚಮಿ ಹಬ್ಬದಲ್ಲಿ ಪಾಲ್ಗೊಂಡರು.

ಕುದ್ಮಾರು ಅನ್ಯಾಡಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನಾಗರಪಂಚಮಿ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ನಾಗನಿಗೆ ಹಾಲಿನ ಅಭಿಷೇಕ

ಕಾಣಿಯೂರು : ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಅಂಗವಾಗಿ ನಾಗದೇವರಿಗೆ ಹಾಲಿನ ಅಭಿಷೇಕ ನಡೆಯಿತು. ದೇವಸ್ಥಾನದ ಅರ್ಚಕ ಜಿನೇಶ್ ಭಟ್ ಬರೆಪ್ಪಾಡಿ ಪೂಜಾ ವಿಧಿ ವಿಧಾನ ನಡೆಸಿದರು. ಈ ಸಂದರ್ಭದಲ್ಲಿ ಭಕ್ತಾದಿಗಳು ಹಾಲು, ಸೀಯಾಳ ಅರ್ಪಿಸಿದರು.

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ನಾಗನಿಗೆ ಹಾಲಿನ ಅಭಿಷೇಕ Read More »

ಶರವೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ನಾಗರಪಂಚಮಿ

ಕಡಬ : ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗತಂಬಿಲ, ಕ್ಷೀರಾಭಿಷೇಕ ಸೇವೆ, ಪಂಚಾಮೃತಾಭಿಷೇಕ ಸೇವೆ ಸೋಮವಾರ ಬೆಳಿಗ್ಗೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾದಿಗಳು ಸೇವೆ ಮಾಡಿಸಿ ಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನದ ಮಹಾಪೂಜೆ ಬಳಿಕ ಆಗಮಿಸಿದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರಗಿತು.

ಶರವೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ನಾಗರಪಂಚಮಿ Read More »

ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾವು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾವು ನೇತೃತ್ವದಲ್ಲಿ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾ ಭವನದಲ್ಲಿ ನಡೆಯುವ 40ನೇ ವರ್ಷದ  ಗಣೇಶೋತ್ಸವ ಕಾರ್ಯಕ್ರಮ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿಯಂದು ನಡೆಸುವ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಿತು. ಕಾವು  ಶ್ರೀ ಗಣೇಶೋತ್ಸವ ಸಮಿತಿಯ  ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ, ಅಧ್ಯಕ್ಷ ನವೀನ್ ನನ್ಯ ಪಟ್ಟಾಜೆ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್  ಮಂಜಲ್ತಡ್ಕ, ಜೊತೆ

ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಇಂದು ಶ್ರಾವಣ ಮಾಸದ ಪ್ರಥಮ ಹಬ್ಬ ನಾಗರಪಂಚಮಿ | ನಾಗ ಪೂಜೆಯ ಮಹತ್ವವೇನು |  ನಾಗದೇವರನ್ನು ಯಾಕೆ ಪೂಜಿಸಬೇಕು ?|ಇಲ್ಲಿದೆ ಡಿಟೈಲ್ಸ್

ಪುತ್ತೂರು: ನಾಗರಪಂಚಮಿ ಹಬ್ಬಗಳ ತಿಂಗಳಾಗಿರುವ ಶ್ರಾವಣಮಾಸದಲ್ಲಿ ಬರುವ ಪ್ರಥಮ ಹಬ್ಬ. ಶ್ರಾವಣ ಶುಕ್ಲ ಪಂಚಮಿಯಂದು (ಈ ಬಾರಿ ಆ.21 ಸೋಮವಾರ) ಆಚರಿಸಲಾಗುತ್ತದೆ. ಈ ದಿನದಂದು ಸ್ತ್ರೀಯರು ಸಹೋದರನ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ. ಹೊಸ ಬಟ್ಟೆ ಧರಿಸಿ, ನಾಗದೇವರನ್ನು ಪೂಜಿಸಿ, ಹಾಲಿನ ನೈವೇದ್ಯವನ್ನು ಅರ್ಪಿಸುತ್ತಾರೆ. ನಾಗಗಳ ಪೂಜೆಯನ್ನು ಮಾಡುವುದರಿಂದ ಸರ್ಪಭಯ ಉಳಿಯುವುದಿಲ್ಲ. ಜತೆಗೆ ವಿಷಭಯದ ಸಂಕಟ ತಪ್ಪುತ್ತದೆ ಎಂದು ಭಕ್ತರಲ್ಲಿ ಬಲವಾದ ನಂಬಿಕೆಯಿದೆ. ಉಪವಾಸದಿಂದ ಶಕ್ತಿ ಹೆಚ್ಚಾಗಿ ಅದರ ಫಲ ಲಭಿಸುತ್ತದೆ. ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ

ಇಂದು ಶ್ರಾವಣ ಮಾಸದ ಪ್ರಥಮ ಹಬ್ಬ ನಾಗರಪಂಚಮಿ | ನಾಗ ಪೂಜೆಯ ಮಹತ್ವವೇನು |  ನಾಗದೇವರನ್ನು ಯಾಕೆ ಪೂಜಿಸಬೇಕು ?|ಇಲ್ಲಿದೆ ಡಿಟೈಲ್ಸ್ Read More »

error: Content is protected !!
Scroll to Top