ಮಾಣಿಲ ಕ್ಷೇತ್ರಕ್ಕೆ ಬೃಹತ್ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ | ನೂರಾರು ವಾಹನಗಳಲ್ಲಿ ತೆರಳಿದ ಹೊರೆಕಾಣಿಕೆ
ಪುತ್ತೂರು: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತರದಲ್ಲಿ 48 ದಿನಗಳ ಪರ್ಯಂತ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಅಂಗವಾಗಿ ಪುತ್ತೂರಿನಿಂದ ತೆರಳುವ ಬೃಹತ್ ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ಚಾಲನೆ ನೀಡಲಾಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿ, ಎಲ್ಲೆಡೆ ನಡೆಯುವ ಬ್ರಹ್ಮಕಲಶೋತ್ಸವ ಸೇರಿದಂತೆ ಇನ್ನಿತರ ಧಾರ್ಮಿಕ ಕೇಂದ್ರಗಳಿಗೆ ಹೊರೆಕಾಣಿಕೆ ಸಮರ್ಪಣೆಯಾಗುತ್ತಿದೆ. ಅದರಂತೆ ಮಾಣಿಲ ಮಹಾಲಕ್ಷ್ಮೀ ಕ್ಷೇತ್ರದ ಸ್ವಾಮೀಜಿಯವರು ಪ್ರತಿಯೊಂದು […]










