ನಟ ಜಗ್ಗೇಶ್‍ಗೆ ಪುತ್ತೂರಿನಲ್ಲಿ ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವದ ಆಮಂತ್ರಣ
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಜ. 22ರಂದು ನಡೆಯಲಿರುವ ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆಯ ಆಮಂತ್ರಣವನ್ನು ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರಿಗೆ ನೀಡಲಾಯಿತು. ಶಾಸಕ ಸಂಜೀವ ಮಠಂದೂರು ಅವರ ಆಪ್ತ ಸಹಾಯಕ ವಸಂತ್ ಅವರು ಜಗ್ಗೇಶ್ ಅವರಿಗೆ ಆಮಂತ್ರಣ ನೀಡಿ, ಸಮಾರಂಭಕ್ಕೆ ಆಹ್ವಾನಿಸಿದರು. ಸಮಾರಂಭದಲ್ಲಿ ಭಾಗವಹಿಸಲಿರುವ ಮುಖ್ಯ ಅತಿಥಿಗಳ ಪೈಕಿ ಜಗ್ಗೇಶ್ ಅವರು ಕೂಡ ಒಬ್ಬರು. ಸಮಾರಂಭದಲ್ಲಿ ಪಾಲ್ಗೊಳ್ಳಲು ಪುತ್ತೂರಿಗೆ ಆಗಮಿಸಲಿರುವ ಜಗ್ಗೇಶ್ ಅವರು ನಂತರ […]