ರಾಜ್ಯ

ಮುಡಾ ಹಗರಣ : 300 ಕೋ. ರೂ. ಮೌಲ್ಯದ ಸ್ಥಿರಾಸ್ತಿ ಇ.ಡಿ ವಶ

ಅಕ್ರಮವಾಗಿ ಹಂಚಿದ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಂಡ ಇ.ಡಿ ಬೆಂಗಳೂರು : ಮೈಸೂರಿನ ಗಂಗರಾಜು, ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ರಿಯಲ್​​ ಎಸ್ಟೇಟ್​ ಉದ್ಯಮಿಗಳ ಹೆಸರಿನಲ್ಲಿ ನೋಂದಣಿಯಾಗಿದ್ದ ಅಂದಾಜು 300 ಕೋಟಿ ರೂಪಾಯಿ ಮೌಲ್ಯದ 142 ಸ್ಥಿರಾಸ್ತಿಯನ್ನು ನಿನ್ನೆ ರಾತ್ರೋರಾತ್ರಿ ಮುಟ್ಟುಗೋಲು ಹಾಕಿಕೊಂಡಿದೆ.ರಿಯಲ್​​ ಎಸ್ಟೇಟ್​ ಉದ್ಯಮಿಗಳ ಹೆಸರಿನಲ್ಲಿ, ಏಜೆಂಟ್​​ಗಳಾಗಿ ಕೆಲಸ ಮಾಡುವವರ ಹೆಸರಿನಲ್ಲೂ ಸ್ಥಿರಾಸ್ತಿ ನೋಂದಣಿಯಾಗಿದ್ದವು. ಮೈಸೂರಿನ ಗಂಗರಾಜು ಮತ್ತು […]

ಮುಡಾ ಹಗರಣ : 300 ಕೋ. ರೂ. ಮೌಲ್ಯದ ಸ್ಥಿರಾಸ್ತಿ ಇ.ಡಿ ವಶ Read More »

ಕಿಶೋರ್ ಕುಮಾರ್ ಪುತ್ತೂರು ಅವರ ಶಾಸಕರ ಭವನದಲ್ಲಿರುವ ಕೊಠಡಿಯಲ್ಲಿ ಪೂಜೆ, ಗೃಹಪ್ರವೇಶ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ಶಾಸಕರ ಭವನದ ಕೊಠಡಿಯಲ್ಲಿ ಪೂಜೆ ಮತ್ತು ಕೊಠಡಿ ಗೃಹ ಪ್ರವೇಶ ಕಾರ್ಯಕ್ರಮ ಇಂದು ನಡೆಯಿತು. ವಿಧಾನ ಪರಿಷತ್ ನ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಎಂ.ಎಲ್.ಸಿ. ಪ್ರತಾಪಸಿಂಹ ನಾಯಕ್, ಲಕ್ಣ್ಮೀಶ್ ಬಪ್ಪಳಿಗೆ ಪುತ್ತೂರು, ಪ್ರಕಾಶ್ ಮಲ್ಪೆ ಮತ್ತಿತರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಬಿಜೆಪಿ ಮುಖಂಡರು, ಹಲವಾರು ಗಣ್ಯ ವ್ಯಕ್ತಿಗಳು ಆಗಮಿಸಿದರು.

ಕಿಶೋರ್ ಕುಮಾರ್ ಪುತ್ತೂರು ಅವರ ಶಾಸಕರ ಭವನದಲ್ಲಿರುವ ಕೊಠಡಿಯಲ್ಲಿ ಪೂಜೆ, ಗೃಹಪ್ರವೇಶ Read More »

ಉಳ್ಳಾಲ ಕೋಟೆಕಾರಿನಲ್ಲಿ ಹಾಡಹಗಲೇ ಬ್ಯಾಂಕ್‌ ದರೋಡೆ

ಬಂದೂಕು ತೋರಿಸಿ ಸಿಬ್ಬಂದಿಯನ್ನು ಬೆದರಿಸಿ 10 ಕೋಟಿ ಹಣ, ಚಿನ್ನಾಭರಣ ದೋಚಿಕೊಂಡು ಪರಾರಿ ಮುಖ್ಯಮಂತ್ರಿ ಮಂಗಳೂರಿಗೆ ಆಗಮಿಸುತ್ತಿರುವಾಗಲೇ ಕೃತ್ಯ ಮಂಗಳೂರು : ಉಳ್ಳಾಲ ತಾಲೂಕಿನ ಕೆ.ಸಿ ರೋಡ್​​ನ ಕೋಟೆಕಾರು ಬ್ಯಾಂಕ್​ಗೆ ಇಂದು ಮಧ್ಯಾಹ್ನ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಹಾಡಹಗಲೇ ಬ್ಯಾಂಕ್​ಗೆ ನುಗಿದ ಐವರು ದರೋಡೆಕೋರರು ಕೃತ್ಯ ಎಸಗಿದ್ದಾರೆ. ಬಂದೂಕಿನಿಂದ ಬ್ಯಾಂಕ್​​ ಸಿಬ್ಬಂದಿಯನ್ನು ಬೆದರಿಸಿ ಚಿನ್ನಾಭರಣ, ನಗದು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಮಂಗಳೂರಿನಲ್ಲಿ ಮುಖ್ಯಮಂತ್ರಿ

ಉಳ್ಳಾಲ ಕೋಟೆಕಾರಿನಲ್ಲಿ ಹಾಡಹಗಲೇ ಬ್ಯಾಂಕ್‌ ದರೋಡೆ Read More »

6.80 ಕೋ.ರೂ. ಮೌಲ್ಯದ ಡ್ರಗ್ಸ್‌ ನಾಶ ಮಾಡಿದ ಮಂಗಳೂರು ಪೊಲೀಸರು

ಮಂಗಳೂರು: ಮಂಗಳೂರು ಪೊಲೀಸರು ಕಳೆದ ವರ್ಷ ನಗರ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡ ಸುಮಾರು 6.80 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ನಾಶ ಮಾಡಿದ್ದಾರೆ. ಮೂಲ್ಕಿ ಸಮೀಪದ ಕೈಗಾರಿಕಾ ಪ್ರದೇಶದಲ್ಲಿ ಮಾದಕ ವಸ್ತುಗಳನ್ನು ನಿನ್ನೆ ನಾಶ ಮಾಡಲಾಗಿದೆ. ನ್ಯಾಯಾಲಯದ ಅನುಮತಿಯೊಂದಿಗೆ 2024 ಮತ್ತು 2023ರಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಲಾಗಿದೆ. ಇದು ಪ್ರತಿ ವರ್ಷದ ಪ್ರಕ್ರಿಯೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ. 37 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಲಾಗಿದೆ. ಸುಮಾರು

6.80 ಕೋ.ರೂ. ಮೌಲ್ಯದ ಡ್ರಗ್ಸ್‌ ನಾಶ ಮಾಡಿದ ಮಂಗಳೂರು ಪೊಲೀಸರು Read More »

ಮುಡಾ ಹಗರಣ : ಸಿಬಿಐ ತನಿಖೆ ಕೋರಿದ ಅರ್ಜಿಯ ವಿಚಾರಣೆ ಮುಂದೂಡಿಕೆ

ಸದ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಳ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಆರ್​ಟಿಐ ಕಾರ್ಯರಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ರಿಟ್​ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಜನವರಿ 27ಕ್ಕೆ ಮುಂದೂಡಿದೆ.ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಮತ್ತು ಮನು ಸಿಂಘ್ವಿ, ರಾಜ್ಯ ಸರ್ಕಾರದ ಪರ‌ವಾಗಿ ಕಪಿಲ್‌ ಸಿಬಲ್, ಎಜಿ ಶಶಿಕಿರಣ್ ಶೆಟ್ಟಿ ಮತ್ತು ಹಿಂದಿನ ಭೂ ಮಾಲೀಕ ದೇವರಾಜು ಪರ ದುಷ್ಯಂತ್ ದವೆ

ಮುಡಾ ಹಗರಣ : ಸಿಬಿಐ ತನಿಖೆ ಕೋರಿದ ಅರ್ಜಿಯ ವಿಚಾರಣೆ ಮುಂದೂಡಿಕೆ Read More »

ಕನ್ನಡ ಚಿತ್ರರಂಗ, ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ (76) ಕೆಲ ದಿನಗಳ ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿದ್ದು,ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು  ನಿಧನ ಹೊಂದಿದ್ದಾರೆ ವಿಜಿ ಅವರದ್ದು ಬಲು ಸುದೀರ್ಘವಾದ ಸಿನಿಮಾ ಮತ್ತು ರಂಗಭೂಮಿ ಪಯಣ. ನಾಟಕಗಳಲ್ಲಿ ನಟಿಸುತ್ತಿದ್ದ ವಿಜಿ ಅವರ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಹೆಸರು

ಕನ್ನಡ ಚಿತ್ರರಂಗ, ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ ನಿಧನ Read More »

ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ : ಹಿಟ್‌ & ರನ್‌ ಕೇಸ್‌ ದಾಖಲು

ಅನುಮಾನಕ್ಕೆ ಕಾರಣವಾದ ಚಾಲಕನ ದೂರು ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತವಾಗಲು ನಾಯಿಗಳು ಅಡ್ಡಬಂದದ್ದು ಕಾರಣ ಎನ್ನಲಾಗಿತ್ತು. ಕಾರಿನಲ್ಲೇ ಇದ್ದ ಸಚಿವೆಯ ಸಹೋದರ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಕೂಡ ಮಾಧ್ಯಮದವರ ಮುಂದೆ ನಾಯಿಗಳು ಅಡ್ಡಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿಹೊಡೆದು ಅಪಘಾತ ಸಂಭವಿಸಿದೆ ಎಂದು ಹೇಳಿಕೆ ನೀಡಿದ್ದರು. ಆದರೆ ಈಗ ಕಾರಿನ ಚಾಲಕ ಅಪರಿಚಿತ ಕಂಟೇನರ್‌ ಚಾಲಕನ ವಿರುದ್ಧ ಹಿಟ್‌ & ರನ್‌ ದೂರು ದಾಖಲಿಸಿರುವುದರಿಂದ ಈ ಅಪಘಾತದ

ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ : ಹಿಟ್‌ & ರನ್‌ ಕೇಸ್‌ ದಾಖಲು Read More »

ಮಲ್ಪೆಯ ಮೀನುಗಾರಿಕೆ ದೋಣಿ ಕಾರವಾರದಲ್ಲಿ ಮುಳುಗಡೆ

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ದೋಣಿ ಕಾರವಾರ ಸಮೀಪ ಮುಳುಗಿ ಅಪಾರ ನಷ್ಟ ಉಂಟಾಗಿದೆ. ಮಲ್ಪೆಯ ಸೀ ಹಂಟರ್ ಹೆಸರಿನ ದೋಣಿಯ ತಳಭಾಗದ ಕಬ್ಬಿಣದ ವೆಲ್ಡಿಂಗ್ ಬಿಟ್ಟುಹೋದ ಪರಿಣಾಮ ನೀರು ತುಂಬಿಕೊಂಡು ಮುಳುಗಿದೆ. ಬೋಟ್‌ನಲ್ಲಿದ್ದ 8 ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಮಲ್ಪೆಯಿಂದ ಮಹಾರಾಷ್ಟ್ರದ ಕಡೆ ಈ ಬೋಟ್ ಚಲಿಸುತಿತ್ತು. ಕಾರವಾರದಿಂದ 9 ನಾಟಿಕನ್ ಮೈಲು ದೂರದ ಲೈಟ್‌ಹೌಸ್ ಬಳಿ ಬೋಟ್ ತಳಭಾಗದ ಕಬ್ಬಿಣದ ಭಾಗದಲ್ಲಿ ವೆಲ್ಡಿಂಗ್ ಬಿಟ್ಟುಹೋಗಿದೆ. ವೆಲ್ಡಿಂಗ್ ಬಿಟ್ಟುಹೋದ ಪರಿಣಾಮ ಬೋಟ್ ಇಂಜಿನ್

ಮಲ್ಪೆಯ ಮೀನುಗಾರಿಕೆ ದೋಣಿ ಕಾರವಾರದಲ್ಲಿ ಮುಳುಗಡೆ Read More »

ಬೆನ್ನು ಮೂಳೆ ಮುರಿತ : ಸಚಿವೆಗೆ ಒಂದು ತಿಂಗಳು ಬೆಡ್‌ರೆಸ್ಟ್‌

ಕಾರು ಅಪಘಾತದಲ್ಲಿ ಗಾಯಗೊಂಡಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ತುಸು ಗಂಭೀರವಾದ ಗಾಯವಾಗಿದೆ. ಎರಡು ಕಡೆ ಬೆನ್ನುಮೂಳೆ ಮುರಿತವಾಗಿದ್ದು, ಕನಿಷ್ಠ ಒಂದು ತಿಂಗಳು ಅತ್ತಿತ್ತ ಓಡಾಡದೆ ವಿಶ್ರಾಂತಿ ಪಡೆಯಬೇಕಾಗುತ್ತದೆ ಎಂದು ಚಿಕಿತ್ಸೆ ನೀಡಿದ ವೈದ್ಯರು ಮಾಹಿತಿ ನೀಡಿದ್ದಾರೆ.ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಸಚಿವೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಸಚಿವೆಯ ಸಹೋದರ, ಗನ್‌ಮ್ಯಾನ್‌ ಮತ್ತು ಕಾರಿನ ಡ್ರೈವರ್‌ ಕೂಡ ಗಾಯಗೊಂಡಿದ್ದಾರೆ. ಎಲ್ಲರಿಗೂ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಬೆನ್ನುಮೂಳೆಯ ಎಲ್1

ಬೆನ್ನು ಮೂಳೆ ಮುರಿತ : ಸಚಿವೆಗೆ ಒಂದು ತಿಂಗಳು ಬೆಡ್‌ರೆಸ್ಟ್‌ Read More »

ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಗಾಯ : ಆಸ್ಪತ್ರೆಯಲ್ಲಿ ಚಿಕಿತ್ಸೆ

ಕಾರು ಜಖಂ; ಸಹೋದರ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯ ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಮುಖಕ್ಕೆ ಗಾಯವಾಗಿದ್ದು, ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಸಹೋದರ ಚೆನ್ನರಾಜ ಹಟ್ಟಿಹೊಳಿ ಪ್ರಯಾಣಿಸುತ್ತಿರುವ ಕಾರು ಇಂದು ಮುಂಜಾನೆ ಹೊತ್ತು ಬೆಳಗಾವಿ ಸಮೀಪ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿವರು

ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಗಾಯ : ಆಸ್ಪತ್ರೆಯಲ್ಲಿ ಚಿಕಿತ್ಸೆ Read More »

error: Content is protected !!
Scroll to Top