ರಾಜ್ಯ

ಅಶ್ಲೀಲ ವೀಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣ | ಹೆಚ್‍.ಡಿ.ರೇವಣ್ಣರನ್ನು ಬಂಧಿಸಿದ ವಿಶೇಷ ತನಿಖಾ ತಂಡ

ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ, ಮಾಜಿ ಸಚಿವ ಹೆಚ್‌ಡಿ ರೇವಣ್ಣ ಅವರನ್ನು ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ನಿವಾಸದಿಂದ ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ. ರೇವಣ್ಣರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್‌ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಎನ್ನಲಾಗಿದೆ. ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣರನ್ನು ಎಸ್‌ಐಟಿ ವಶಕ್ಕೆ […]

ಅಶ್ಲೀಲ ವೀಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣ | ಹೆಚ್‍.ಡಿ.ರೇವಣ್ಣರನ್ನು ಬಂಧಿಸಿದ ವಿಶೇಷ ತನಿಖಾ ತಂಡ Read More »

ಕಲ್ಯಾಣ ಜ್ಯುವೆಲ್ಲರ್ಸ್ ನಲ್ಲಿ ಎಸಿ ಸ್ಪೋಟ : ಆರು ಮಂದಿಗೆ ಗಾಯ

ಬಳ್ಳಾರಿ : ಬಳ್ಳಾರಿ ನಗರದ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ಎಸಿ ಸ್ಪೋಟಗೊಂಡಿದ್ದು, ಇದನ್ನು ದುರಸ್ತಿಗೊಳಿಸಲು ಬಂದಿದ್ದ ನಿಂಗಪ್ಪ, ಸೈಯದ್ ಝುಬೇರ್ ಎಂಬವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ನಗರದ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 6 ಮಂದಿ ಗಾಯಗೊಂಡು ಓರ್ವ ಸ್ಥಿತಿ ಗಂಭೀರವಾಗಿದೆ. ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ಕಳೆದ ಕೆಲ ದಿನಗಳಿಂದ ಸೆಂಟ್ರಲೈಜ್ ಎಸಿಯಲ್ಲಿ ಗ್ಯಾಸ್ ಖಾಲಿಯಾಗಿತ್ತು. ಗ್ಯಾಸ್ ಭರ್ತಿ ಮಾಡಲು ಇಬ್ಬರು ಕಾರ್ಮಿಕರು ಮಳಿಗೆಗೆ ಬಂದಿದ್ದರು. ಎಸಿಗೆ ಗ್ಯಾಸ್ ತುಂಬಿಸುವಾಗ ಸ್ಪೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲ್ಯಾಣ ಜ್ಯುವೆಲ್ಲರ್ಸ್ ನಲ್ಲಿ ಎಸಿ ಸ್ಪೋಟ : ಆರು ಮಂದಿಗೆ ಗಾಯ Read More »

ರಾಜ್ಯದಲ್ಲಿ ಬಿಸಿ ಗಾಳಿ ಹೆಚ್ಚಳ | ರೆಡ್, ಆರೆಂಜ್ ಅಲರ್ಟ್ ಘೋಷಣೆ | ಏಲ್ಲೆಲ್ಲಿ?

ಬೆಂಗಳೂರು: ರಾಜ್ಯದಲ್ಲಿ ಬಿಸಿ ಗಾಳಿ ತೀವ್ರ ಹೆಚ್ಚಳ ಆಗಿದ್ದು, 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕೊಟ್ಟಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು, ಯಾದಗಿರಿ, ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ದೀರ್ಘಾವಧಿ ವರೆಗೆ ಸೂರ್ಯ ನಿಗೆ ಒಡ್ಡಿಕೊಳ್ಳುವ ಅಥವಾ ಕಷ್ಟಕರವಾದ ಕೆಲಸ ಮಾಡುವವರಲ್ಲಿ ಹೆಚ್ಚಿನ

ರಾಜ್ಯದಲ್ಲಿ ಬಿಸಿ ಗಾಳಿ ಹೆಚ್ಚಳ | ರೆಡ್, ಆರೆಂಜ್ ಅಲರ್ಟ್ ಘೋಷಣೆ | ಏಲ್ಲೆಲ್ಲಿ? Read More »

ಆರೋಗ್ಯ ರಕ್ಷಕರಿಗೆ ವೇತನ ಸಮಸ್ಯೆ |ಇನ್ನೂ ಬಾರದ ವೇತನ

ಆರೋಗ್ಯ ಕವಚ ಸಿಬ್ಭಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ. 108 ಆ್ಯಂಬುಲೆನ್ಸ್ ಚಾಲಕ, ಶುಶ್ರೂಷಕರಿಗೆ ಕೂಡಾ ಸಂಬಳವಾಗಿಲ್ಲ. ಗ್ರಾಮೀಣ ಭಾಗದ ಜೀವ ರಕ್ಷಕರ ಸ್ಥಿತಿ ಪರದಾಡುವಂತಾಗಿದೆ. 108 ಸೇವೆಯು ಗ್ರಾಮೀಣ ಭಾಗದಲ್ಲಿ ಆರೋಗ್ಯ ರಕ್ಷಣೆಗಾಗಿ ಪರದಾಡುವ ವೇಳೆ ಜೀವ ಉಳಿಸುವ ಸೇವೆಯಾಗಿದೆ. ನಗರ ಪ್ರದೇಶಕ್ಕೂ  ಹಲವು ಅನುಕೂಲವಿದೆ. ಆದರೆ ಸಿಬ್ಭಂದಿಗಳು ಮಾತ್ರಾ ವೇತನವಿಲ್ಲದೆ ಪರದಾಡುತ್ತಿದ್ದಾರೆ. ಏಪ್ರಿಲ್ 8 ರಿಂದ 108 ಅಂಬುಲೆನ್ಸ್‌ ವಾಹನಗಳು ರಸ್ತೆಗೆ ಇಳಿಯುವುದಿಲ್ಲ ಎಂದು ಈ ಹಿಂದೆ ಎಚ್ಚರಿಕೆ ನೀಡಿದ್ದರು. ಸಾಮೂಹಿಕವಾಗಿ ರಜೆ ಹಾಕಲು 

ಆರೋಗ್ಯ ರಕ್ಷಕರಿಗೆ ವೇತನ ಸಮಸ್ಯೆ |ಇನ್ನೂ ಬಾರದ ವೇತನ Read More »

ಐಸಿಸಿ ಟಿ20 ವಿಶ್ವಕಪ್ ಟೂರ್ನಿ | 15 ಆಟಗಾರರ ಭಾರತ ತಂಡ ಪ್ರಕಟ

ದೆಹಲಿ : 2024 ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ 15 ಆಟಗಾರರ ಭಾರತ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ನಿರೀಕ್ಷೆಯಂತೆ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು ಉಪ ನಾಯಕನ ಜವಾಬ್ದಾರಿಯನ್ನು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ನೀಡಲಾಗಿದೆ. ಪ್ರಸ್ತುತ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಟ್ಸನ್ ಹಾಗೂ ಯಜೇಂದ್ರ ಚಹಲ್ ಅವರು ಭಾರತ

ಐಸಿಸಿ ಟಿ20 ವಿಶ್ವಕಪ್ ಟೂರ್ನಿ | 15 ಆಟಗಾರರ ಭಾರತ ತಂಡ ಪ್ರಕಟ Read More »

ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ : ಹೆತ್ತ ಮಗಳನ್ನೇ ಕೊಂದ ತಾಯಿ

ಬೆಂಗಳೂರು: ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಪಡೆದ ಮಗಳನ್ನು ತಾಯಿಯೇ ಕೊಲೆ ಮಾಡಿದ ಘಟನೆ ಬೆಂಗಳೂರು ಬನಶಂಕರಿ ಪೊಲೀಶ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಾಹಿತಿ (18) ಮೃತಪಟ್ಟ ಯುವತಿ. ತಾಯಿ ಮೇಲೆ ಮಗಳು ಕೂಡ ಚಾಕುವಿನಿಂದ ದಾಳಿ ಮಾಡಿದ್ದು, ಗಾಯಗೊಂಡ ತಾಯಿ ಆಸ್ಪತ್ರೆ ಪಾಲಾಗಿದ್ದಾರೆ. ಸೆಕಂಡ್ ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಮಗಳ ನಡುವೆ ಜಗಳ ನಡೆದಿದೆ. ಪರೀಕ್ಷೆಗೆ ಕಾಲೇಜಿಗೆ ಹೋಗ್ತಿನಿ ಎಂದು ಮನೆಯಿಂದ ಹೊರಡುತ್ತಿದ್ದ ಮಗಳು ಪರೀಕ್ಷೆಗೆ ಗೈರು ಹಾಜರಾಗಿದ್ದ ವಿಚಾರ ಸೋಮವಾರ

ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ : ಹೆತ್ತ ಮಗಳನ್ನೇ ಕೊಂದ ತಾಯಿ Read More »

ಮಾಜಿ ಸಿಎಂ ಎಸ್‌ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 22ರಂದು ಎಸ್‌ಎಂ ಕೃಷ್ಣ ಅವರು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಡಿಸ್ಟಾರ್ಜ್ ಆಗಿದ್ದರು. ಇದೀಗ ಇಂದು (ಏಪ್ರಿಲ್ 29) ಎಸ್‌ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಎಸ್‌ಎಂ ಕೃಷ್ಣ ಅವರಿಗೆ 91 ವರ್ಷ ವಯಸ್ಸಾಗಿದ್ದರಿಂದ ಅವರು

ಮಾಜಿ ಸಿಎಂ ಎಸ್‌ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು Read More »

ಕೇಂದ್ರದಿಂದ ರಾಜ್ಯ ಸರಕಾರಕ್ಕೆ 3,454 ಕೋಟಿ ಬರ ಪರಿಹಾರ ಘೋಷಣೆ

ಬೆಂಗಳೂರು: ಕೇಂದ್ರ ಸರಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂ. ಪರಿಹಾರ ನೀಡಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಾಜ್ಯ ಸರಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ಇಷ್ಟು ದಿನಗಳು ಕಳೆದರೂ ಕೇಂದ್ರ ಸರಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಹೀಗಾಗಿ ರಾಜ್ಯ ಸರಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಬಳಿಕ ಕೇಂದ್ರ ಸರಕಾರ ಬರ ಪರಿಹಾರ

ಕೇಂದ್ರದಿಂದ ರಾಜ್ಯ ಸರಕಾರಕ್ಕೆ 3,454 ಕೋಟಿ ಬರ ಪರಿಹಾರ ಘೋಷಣೆ Read More »

ಕರ್ನಾಟಕದಲ್ಲಿ  ಮಧ್ಯಾಹ್ನ 1 ಗಂಟೆಯ ವೇಳೆಗೆ 38.23% ಮತದಾನ | ದಕ್ಷಿಣ ಕನ್ನಡ , ಉಡುಪಿ, ಚಿಕ್ಕಮಗಳೂರಿನಲ್ಲಿ ಭರ್ಜರಿ ಮತದಾನ

ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಮೊದಲ ಹಂತದ ಚುನಾವಣೆಯಲ್ಲಿ ಮಧ್ಯಾಹ್ನ 1 ಗಂಟೆಯ ವೇಳೆಗೆ 38.23% ಮತದಾನ ನಡೆದಿದೆ. ಬೆಂಗಳೂರು ನಗರದಲ್ಲಿ ಕಡಿಮೆ ಪ್ರಮಾಣದ ಮತದಾನ ನಡೆದರೆ ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರಿನಲ್ಲಿ ಭರ್ಜರಿ ಮತದಾನ ನಡೆದಿದೆ. ಬೆಂಗಳೂರು ಕೇಂದ್ರ 30.10%, ಬೆಂಗಳೂರು ಉತ್ತರ 32.25%, ಬೆಂಗಳೂರು ಗ್ರಾಮಾಂತರ 36.09%, ಬೆಂಗಳೂರು ದಕ್ಷಿಣ 31.51% ಮತದಾನ ನಡೆದಿದೆ. ದಕ್ಷಿಣ ಕನ್ನಡದಲ್ಲಿ 48.10%, ಉಡುಪಿ- ಚಿಕ್ಕಮಗಳೂರಿನಲ್ಲಿ 46.43% ಮತದಾನ ದಾಖಲಾಗಿದೆ.

ಕರ್ನಾಟಕದಲ್ಲಿ  ಮಧ್ಯಾಹ್ನ 1 ಗಂಟೆಯ ವೇಳೆಗೆ 38.23% ಮತದಾನ | ದಕ್ಷಿಣ ಕನ್ನಡ , ಉಡುಪಿ, ಚಿಕ್ಕಮಗಳೂರಿನಲ್ಲಿ ಭರ್ಜರಿ ಮತದಾನ Read More »

ಏ.26 ಮತದಾನದಂದು ಸರಕಾರಿ ಕಚೇರಿಗಳಿಗೆ ಕಡ್ಡಾಯ ರಜೆ | ಚುನಾವಣಾ ಆಯೋಗದಿಂದ ಆದೇಶ

ಬೆಂಗಳೂರು : ಏ. 26ರಂದು 14 ಲೋಕಸಭಾ ವ್ಯಾಪ್ತಿಯಲ್ಲೂ ಸರ್ಕಾರಿ ಕಚೇರಿಗೆ ಕಡ್ಡಾಯ ರಜೆ ಇರಲಿದೆ. ಖಾಸಗಿ ಕಂಪನಿಗಳು ರಜೆ ನೀಡಿ ಮತದಾನದ ಪ್ರಮಾಣ ಹೆಚ್ಚಿಸುವಂತೆ ಚುನಾವಣಾ ಆಯೋಗ ತಿಳಿಸಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿದೆ. ಏಪ್ರಿಲ್ 26ರಂದು ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದೆ. ಚುನಾವಣಾ ಕರ್ತವ್ಯ, ಅಗತ್ಯ ಸೇವೆಯಲ್ಲಿ ಕೆಲಸ ನಿರ್ವಹಿಸುತ್ತಿರೋ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ ನೀಡಲಾಗಿತ್ತು. ಅಂಚೆ ಮತದಾನಕ್ಕೆ ವಿವಿಧ ಇಲಾಖೆಯಿಂದ

ಏ.26 ಮತದಾನದಂದು ಸರಕಾರಿ ಕಚೇರಿಗಳಿಗೆ ಕಡ್ಡಾಯ ರಜೆ | ಚುನಾವಣಾ ಆಯೋಗದಿಂದ ಆದೇಶ Read More »

error: Content is protected !!
Scroll to Top