ರಾಜ್ಯ

ಮೇ ತಿಂಗಳಲ್ಲಿ 125 ವರ್ಷಗಳ ಬಳಿಕ ಸುರಿದ ಅತ್ಯಧಿಕ ಮಳೆ : 67 ಮಂದಿ ಸಾವು

ಮಹಾಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಅನಾಹುತ ಬೆಂಗಳೂರು : ರಾಜ್ಯದಲ್ಲಿ ಮೇ ತಿಂಗಳಲ್ಲಿ ಇಷ್ಟು ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದ್ದು 125 ವರ್ಷಗಳಲ್ಲಿ ಇದೇ ಮೊದಲು ಎನ್ನಲಾಗಿದೆ. ಕರ್ನಾಟಕ ಹಿಂದೆಂದೂ ಕಂಡು ಕೇಳರಿಯದಂತಹ ಮಳೆ ಮೇ ತಿಂಗಳೊಂದರಲ್ಲೇ ಸುರಿದಿದೆ. ಇದು ಶತಮಾನದ ಮಳೆ ಎಂದು ಹೇಳಲಾಗುತ್ತಿದ್ದು, ಮಳೆ ಸಂಬಂಧಿ ಅವಘಡಗಳಿಗೆ 67 ಜನರು ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಅಪಾರ ನಾಶನಷ್ಟ ಉಂಟಾಗಿದೆ. ಭೂಕುಸಿತ, ನೆರೆ, ವಿದ್ಯುತ್‌ ಶಾಕ್‌ ಮತ್ತಿತರ ಅವಘಡಗಳಲ್ಲಿ ಶುಕ್ರವಾರ ಒಂದೇ […]

ಮೇ ತಿಂಗಳಲ್ಲಿ 125 ವರ್ಷಗಳ ಬಳಿಕ ಸುರಿದ ಅತ್ಯಧಿಕ ಮಳೆ : 67 ಮಂದಿ ಸಾವು Read More »

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ, ಉಗುಳಿದರೆ 1 ಸಾವಿರ ರೂ ದಂಡ

ಸಿಗರೇಟು ಮತ್ತು ತಂಬಾಕು ಉತ್ಪನ್ನ ಬಳಕೆಯ ಹೊಸ ಕಾನೂನು ಜಾರಿ ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ಪಾನ್ ಪರಾಗ್, ತಂಬಾಕು ಸೇರಿದಂತೆ ಇನ್ನಿತರ ಪದಾರ್ಥಗಳನ್ನು ತಿಂದು ಉಗುಳುವುದನ್ನು ನಿಷೇಧಿಸಿ ರಾಜ್ಯ ಸರಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ತಿಂದು ಉಗುಳಿದರೆ 1 ಸಾವಿರ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸುವ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ‘ಸಿಗರೇಟು ಮತ್ತು ಇತರ ತಂಬಾಕು

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ, ಉಗುಳಿದರೆ 1 ಸಾವಿರ ರೂ ದಂಡ Read More »

ರಾಜ್ಯದಲ್ಲಿ ಕೊರೊನಾ ಏರಿಕೆ : ಇನ್ನೋರ್ವ ವ್ಯಕ್ತಿ ಬಲಿ

ಕೋವಿಟ್‌ ಟೆಸ್ಟ್‌ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಶುಕ್ರವಾರ ಕೊರೊನದಿಂದ ಇನ್ನೊಬ್ಬರು ಸಾವಿಗೀಡಾಗಿದ್ದು, ಇದರೊಂದಿಗೆ ಹೊಸ ಅಲೆಗೆ ರಾಜ್ಯದದಲ್ಲಿ ಒಟ್ಟು ಮೂವರು ಬಲಿಯಾದಂತಾಗಿದೆ. ಮೈಸೂರಲ್ಲಿ 63 ವರ್ಷದ ವ್ಯಕ್ತಿ ಕೊವಿಡ್‌ನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ತೀವ್ರ ಉಸಿರಾಟದ ಸೋಂಕಿನ ಗುಣಲಕ್ಷಣ ಹೊಂದಿರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.

ರಾಜ್ಯದಲ್ಲಿ ಕೊರೊನಾ ಏರಿಕೆ : ಇನ್ನೋರ್ವ ವ್ಯಕ್ತಿ ಬಲಿ Read More »

ಹಿರಿಯ ಸಾಹಿತಿ ಎಚ್.ಎಸ್ ವೆಂಕಟೇಶಮೂರ್ತಿ ನಿಧನ

ಚಲನಚಿತ್ರ ಸಾಹಿತಿಯಾಗಿಯೂ ಗುರುತಿಸಿಕೊಂಡಿದ್ದ ಸಾಹಿತಿ ಬೆಂಗಳೂರು: ಕನ್ನಡ ಖ್ಯಾತ ಕವಿ, ಸಾಹಿತಿ, ನಾಟಕ ರಚನೆಕಾರ ಎಚ್‌ಎಸ್‌ವಿ ಎಂದೇ ಚಿರಪರಿಚಿತರಾಗಿದ್ದ ಎಚ್.ಎಸ್ ವೆಂಕಟೇಶಮೂರ್ತಿ ಇಂದು ನಿಧನರಾಗಿದ್ದಾರೆ. ಮೂಲತಃ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಎಂಬ ಸಣ್ಣ ಗ್ರಾಮದ ಮಧ್ಯಮವರ್ಗದ ಕುಟುಂಬವೊಂದರಲ್ಲಿ 23-06-1944ರಲ್ಲಿ ಜನಿಸಿದ ಎಚ್.ಎಸ್ ವೆಂಕಟೇಶಮೂರ್ತಿ ಮೂವತ್ತು ವರ್ಷಗಳ ಕಾಲ ಗ್ರಾಮ್ಯಜೀವನ ನಡೆಸಿ ನಂತರ ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದರು. ನಂತರ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ 1973ರಲ್ಲಿ ನೇಮಕಗೊಂಡರು. ಕನ್ನಡದಲ್ಲಿ

ಹಿರಿಯ ಸಾಹಿತಿ ಎಚ್.ಎಸ್ ವೆಂಕಟೇಶಮೂರ್ತಿ ನಿಧನ Read More »

ಕೋಮು ಹಿಂಸೆ ದಮನಕ್ಕೆ ಎಸ್‌ಟಿಎಫ್‌ ನಿಯೋಜನೆ

ದ.ಕ., ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸ್ಥಾಪಿಸಲು ಸರ್ಕಾರ ಆದೇಶ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಿಂಸಾಚಾರಕ್ಕೆ ಕಾರಣವಾಗುವ ಕೋಮುವಾದಿ ಶಕ್ತಿಗಳನ್ನು ನಿಗ್ರಹಿಸಲು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಪದೇಪದೆ ಕೋಮು ಘರ್ಷಣೆಗಳು ಸಂಭವಿಸುತ್ತಿದ್ದು, ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಿ ಆಡಳಿತದ ವರ್ಚಸ್ಸಿಗೆ ಕಳಂಕ ತರುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಇತ್ತೀಚೆಗೆ ಮಂಗಳೂರಿನಲ್ಲಿ ಇಂತಹ ಘಟನೆಗಳನ್ನು ನಿಯಂತ್ರಣಕ್ಕೆ ತರಲು ಎಸ್‌ಟಿಎಫ್

ಕೋಮು ಹಿಂಸೆ ದಮನಕ್ಕೆ ಎಸ್‌ಟಿಎಫ್‌ ನಿಯೋಜನೆ Read More »

ಸರಣಿ ಕೊಲೆ, ಹಿಂಸಾಚಾರಕ್ಕೆ ಉನ್ನತ ಪೊಲೀಸ್‌ ಅಧಿಕಾರಿಗಳ ತಲೆದಂಡ?

ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್‌ ವ್ಯವಸ್ಥೆಗೆ ಆಮೂಲಾಗ್ರ ಬದಲಾವಣೆ ತರಲು ಚರ್ಚೆ ಬೆಂಗಳೂರು : ಮಂಗಳವಾರ ಬಂಟ್ವಾಳದಲ್ಲಿ ನಡೆದ ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ನಡೆದಿರುವ ಮೂರು ಕೊಲೆಗಳು ಹಾಗೂ ಆಗಾಗ ಸಂಭವಿಸುತ್ತಿರುವ ಕೋಮು ಹಿಂಸಾಚಾರ ಸಂಬಂಧಿ ಘಟನೆಗಳನ್ನು ತಡೆಯಲು ವಿಫಲವಾಗಿರುವ ಪೊಲೀಸ್‌ ಇಲಾಖೆಯ ವಿರುದ್ಧ ಭಾರಿ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೆಲವು ಉನ್ನತ ಅಧಿಕಾರಿಗಳ ತಲೆದಂಡವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು

ಸರಣಿ ಕೊಲೆ, ಹಿಂಸಾಚಾರಕ್ಕೆ ಉನ್ನತ ಪೊಲೀಸ್‌ ಅಧಿಕಾರಿಗಳ ತಲೆದಂಡ? Read More »

ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು

ಹಾಸನ: ಪದವಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನ ಕೆ.ವಿ. (21) ಮೃತಪಟ್ಟವರು. ಕವನ ಹಾಸನ ನಗರದಲ್ಲಿ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಗೆ ಧಿಡೀರ್ ಆಗಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆಕೆ ಕುಸಿದು ಬಿದ್ದಿದ್ದಾಳೆ. ಪೋಷಕರು ತಕ್ಷಣ ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಅಷ್ಟರಲ್ಲಿ ಕವನ

ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು Read More »

ಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ : ಹೈಕಮಾಂಡ್‌ ಭೇಟಿಯಾದ ನಾಯಕರು

ಅಧಿಕಾರ ಹಂಚಿಕೆ ಸೂತ್ರ ಪಾಲಿಸಲು ಹೈಕಮಾಂಡ್‌ ಮುಂದೆ ಕೋರಿಕೆ ಇಟ್ಟ ಡಿಕೆಶಿ ಬೆಂಗಳೂರು: ಕೆಲ ಸಮಯದಿಂದ ತಣ್ಣಗಾಗಿದ್ದ ಕಾಂಗ್ರೆಸ್‌ನ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ ಮತ್ತೆ ಶುರುವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಹಕ್ಕುಮಂಡಿಸಿದ್ದಾರೆ ಎನ್ನಲಾಗಿದೆ. ಡಿಕೆ.ಶಿವಕುಮಾರ್ ಅವರು ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್

ಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ : ಹೈಕಮಾಂಡ್‌ ಭೇಟಿಯಾದ ನಾಯಕರು Read More »

ಭಾರೀ ಮಳೆ : ಕೊಡಗು ಜಿಲ್ಲಾಧ್ಯಂತ ಶಾಲಾ-ಕಾಲೇಜುಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ

ಕೊಡಗು: ಜಿಲ್ಲಾಧ್ಯಂತ ಭಾರೀ ಮಳೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಎರಡು ದಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ., ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಡಿಸಿ ಆದೇಶ ಹೊರಡಿಸಿದ್ದಾರೆ. ಭಾರಿ ಮಳೆಯ ಹಿನ್ನಲೆಯಲ್ಲಿ ಸಾರ್ವಜನಿಕರು ಜಾಗ್ರತೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಭಾರೀ ಮಳೆ : ಕೊಡಗು ಜಿಲ್ಲಾಧ್ಯಂತ ಶಾಲಾ-ಕಾಲೇಜುಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ Read More »

ಅಬ್ದುಲ್‌ ರಹಿಮಾನ್‌ ಹತ್ಯೆ : ಮೂವರು ವಶ

15 ಮಂದಿಯ ತಂಡದಿಂದ ಕೊಲೆ ಎಂದು ಎಫ್‌ಐಆರ್‌ ದಾಖಲು ಬಂಟ್ವಾಳ: ತಾಲೂಕಿನ ಕೂರಿಯಾಳ ಸಮೀಪದ ಇರಾಕೋಡಿಯ ಕೊಳತ್ತಮಜಲ್ ನಿವಾಸಿ ಅಬ್ದುಲ್ ರಹಿಮಾನ್ ಹತ್ಯೆಗೆ ಸಂಬಂಧಪಟ್ಟು ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಮಧ್ಯಾಹ್ನ ಅಬ್ದುಲ್‌ ರಹಿಮಾನ್‌ ಅವರನ್ನು

ಅಬ್ದುಲ್‌ ರಹಿಮಾನ್‌ ಹತ್ಯೆ : ಮೂವರು ವಶ Read More »

error: Content is protected !!
Scroll to Top