ರಾಜ್ಯ

ಸರಕಾರ ಮಂಡಿಸಿದ್ದು ಜಾತಿ ಸಮೀಕ್ಷೆಯ ನಕಲಿ ವರದಿ : ಆರ್‌. ಅಶೋಕ್‌

ರಕ್ತ ಕಣ್ಣೀರು ಸಿನಿಮಾದಂತಿದೆ ಸರಕಾರದ ವರದಿ ಎಂದು ಲೇವಡಿ ಬೆಂಗಳೂರು: ಜಾತಿ ಗಣತಿ ವರದಿಯ ಮೂಲಪ್ರತಿ ಇಲ್ಲ ಎಂದು ಆಯೋಗದ ಅಧ್ಯಕ್ಷರೇ ಹೇಳಿದ್ದಾರೆ. ಹೀಗಾಗಿ ಸರ್ಕಾರ ಬಹಿರಂಗಗೊಳಿಸಿರುವ ಜಾತಿ ಗಣತಿ ವರದಿ ನಕಲಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಈಗ ಮಂಡನೆಯಾದ ದತ್ತಾಂಶಗಳ ವರದಿ ನಕಲಿ ಎಂಬುದಕ್ಕೆ ಪುರಾವೆಯಿದೆ. ಹಿಂದುಳಿದ ವರ್ಗಗಳ ಆಯೋಗದ ಅಂದಿನ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆಯವರು 2021, ಅಕ್ಟೋಬರ್‌ 5ರಂದು ಸರ್ಕಾರಕ್ಕೆ […]

ಸರಕಾರ ಮಂಡಿಸಿದ್ದು ಜಾತಿ ಸಮೀಕ್ಷೆಯ ನಕಲಿ ವರದಿ : ಆರ್‌. ಅಶೋಕ್‌ Read More »

ಪತ್ನಿ, ಮಗಳಿಂದಲೇ ರಾಜ್ಯದ ಮಾಜಿ ಪೊಲೀಸ್‌ ಮಹಾನಿರ್ದೇಶಕ ಭೀಕರ ಹತ್ಯೆ

ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ನಿವೃತ್ತ ಪೊಲೀಸ್‌ ಉನ್ನತಾಧಿಕಾರಿಯ ಕೊಲೆ ಬೆಂಗಳೂರು : ರಾಜ್ಯದ ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ (68) ಹತ್ಯೆ ಪ್ರಕರಣ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಹತ್ಯೆ ಸಂಬಂಧ ಅವರ ಪತ್ನಿ ಹಾಗೂ ಮಗಳನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ತನಿಖಾಧಿಕಾರಿಗಳ ಎದುರು ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರು ಅನೇಕ ಸ್ಫೋಟಕ ಅಂಶಗಳನ್ನು ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪತ್ನಿ ಪಲ್ಲವಿ ಹಾಗೂ ಮಗಳು ಕೃತಿ ಸದ್ಯ ಪೊಲೀಸರ

ಪತ್ನಿ, ಮಗಳಿಂದಲೇ ರಾಜ್ಯದ ಮಾಜಿ ಪೊಲೀಸ್‌ ಮಹಾನಿರ್ದೇಶಕ ಭೀಕರ ಹತ್ಯೆ Read More »

ವಿಮಾನಕ್ಕೆ ಟೆಂಪೊ ಟ್ರಾವೆಲರ್‌ ಡಿಕ್ಕಿ!

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಟ್ಟು ನಿಂತಿದ್ದ ಇಂಡಿಗೋ ವಿಮಾನಕ್ಕೆ ಟೆಂಪೊ ಟ್ರಾವೆಲ್ಲರ್ ಡಿಕ್ಕಿ ಹೊಡೆದ ಘಟನೆ ಶನಿವಾರ ಸಂಜೆ ನಡೆದಿದೆ. ಇಂಜಿನ್ ಸಮಸ್ಯೆಯಿಂದ ಏರ್‌ಪೋರ್ಟ್‌ ಒಳಭಾಗದ ಅಲ್ಪಾ ಪಾರ್ಕಿಂಗ್ ಬೇ-71ರಲ್ಲಿ ಕೆಲವು ದಿನಗಳಿಂದ ವಿಮಾನವನ್ನು ನಿಲ್ಲಿಸಲಾಗಿತ್ತು. ಇದೇ ವಿಮಾನಕ್ಕೆ ಮುಂಭಾಗದ ಮೂತಿ ಬಳಿ ಟೆಂಪೊ ಟ್ರಾವೆಲ್ಲರ್ ಡಿಕ್ಕಿಯಾಗಿದೆ. ಟೆಂಪೊ ಟ್ರಾವೆಲ್ಲರ್ ವಿಮಾನದ ಮೂತಿ ಭಾಗದ ಕೆಳಗೆ ಸಿಲುಕಿಕೊಂಡು ಟಾಪ್ ಜಖಂ ಆಗಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ರನ್‌ವೇಗೆ ಸಿಬ್ಬಂದಿಯನ್ನು ಬಿಟ್ಟು ಬರುತ್ತಿದ್ದ

ವಿಮಾನಕ್ಕೆ ಟೆಂಪೊ ಟ್ರಾವೆಲರ್‌ ಡಿಕ್ಕಿ! Read More »

ಪುನೀತ್‌ ಕೆರೆಹಳ್ಳಿಯನ್ನು ತಡೆದ ತಿಮರೋಡಿ ಬೆಂಬಲಿಗರ ಮೇಲೆ ಕೇಸ್‌

ಸೋಷಿಯಲ್‌ ಮೀಡಿಯಾದಲ್ಲಿ ನಡೆದ ಜಟಾಪಟಿಯ ಪರಿಣಾಮ ಬೆಳ್ತಂಗಡಿ: ಶನಿವಾರ ರಾಮೋತ್ಸವದಲ್ಲಿ ಭಾಗವಹಿಸಲು ಉಜಿರೆಗೆ ಆಗಮಿಸಿದ್ದ ಹಿಂದು ಪರ ಹೋರಾಟಗಾರ ಪುನೀತ್‌ ಕೆರೆಹಳ್ಳಿ ಅವರನ್ನು ತಡೆದು ನಿಲ್ಲಿಸಿ ವಾಪಸು ಹೋಗಲು ಹೇಳಿದ ಘಟನೆಗೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉಜಿರೆ ನಿವಾಸಿಗಳಾದ ಅನಿಲ್ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ, ಪ್ರಭಾಕರ, ಗಣೇಶ್ ಹಾಗೂ ಇತರರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯ ಎಸ್‌ಐ ಮುರಳೀಧರ ನಾಯ್ಕ್ ಕೆ.ಜಿ. ಅವರ

ಪುನೀತ್‌ ಕೆರೆಹಳ್ಳಿಯನ್ನು ತಡೆದ ತಿಮರೋಡಿ ಬೆಂಬಲಿಗರ ಮೇಲೆ ಕೇಸ್‌ Read More »

ರಿಕ್ಕಿ ರೈ ಮೇಲೆ ಫೈರಿಂಗ್‌ : ಮಲತಾಯಿ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾಗಿದ್ದ ರಿಕ್ಕಿ ರೈ ರಾಮನಗರ : ಮುತ್ತಪ್ಪ ರೈಯವರ ಪುತ್ರ ರಿಕ್ಕಿ ರೈ ಮೇಲೆ ನಿನ್ನೆ ಮಧ್ಯರಾತ್ರಿ ರಾಮನಗರ ತಾಲೂಕಿನ ಬಿಡದಿಯ ಅವರ ಮನೆ ಬಳಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿ ನಾಲ್ಕು ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿ ರೈಗೆ ಚಿಕಿತ್ಸೆ ನಡೆಯುತ್ತಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ರಾಮನಗರ ತಾಲೂಕಿನ ಬಿಡದಿ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ಘಟನೆ ವೇಳೆ ಚಾಲಕ ಬಸವರಾಜ್​​ ಕಾರು ಚಾಲನೆ

ರಿಕ್ಕಿ ರೈ ಮೇಲೆ ಫೈರಿಂಗ್‌ : ಮಲತಾಯಿ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ Read More »

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ನಡೆಯಿತಾ ರಿಕ್ಕಿ ರೈ ಮೇಲೆ ಫೈರಿಂಗ್‌?

ಮಂಗಳೂರಿನ ವ್ಯಕ್ತಿಯೊಬ್ಬರ ಮೇಲೂ ಇದೆ ಅನುಮಾನದ ನೋಟ ರಾಮನಗರ : ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಿನ್ನೆ ಮಧ್ಯರಾತ್ರಿ ನಡೆದಿದೆ. ಈ ದಾಳಿಯಲ್ಲಿ ರಿಕ್ಕಿ ರೈ ಅವರಿಗೆ ತೀವ್ರ ಗಾಯಗಳಾಗಿದ್ದು, ಅವರೊಂದಿಗಿದ್ದ ಒಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಿಕ್ಕಿ ರೈ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬೆನ್ನಿಗೆ ರಿಕ್ಕಿ ರೈ ಮೇಲೆ ದಾಳಿಯಾಗಲು ಕಾರಣ ಏನು ಎನ್ನುವ

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ನಡೆಯಿತಾ ರಿಕ್ಕಿ ರೈ ಮೇಲೆ ಫೈರಿಂಗ್‌? Read More »

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್‌

ರಾಮನಗರ: ಮಾಜಿ ಡಾನ್​​ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ರಾತ್ರಿ 12.50ರ ಸುಮಾರಿಗೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದೆ. ರಿಕ್ಕಿ ರೈ, ಮೂಗು, ಕೈಗೆ ಗುಂಡು ತಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್‌ Read More »

ಮೇ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ನಿರೀಕ್ಷೆ

ಬೆಂಗಳೂರು: ಪಿಯುಸಿ ಆಯಿತು ಇನ್ನು ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ನಿರೀಕ್ಷೆಯಲ್ಲಿ ಮಕ್ಕಳಿದ್ದಾರೆ. ಮುಂದಿನ ತಿಂಗಳು ಮೊದಲ ವಾರದಲ್ಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 21ರಿಂದ ಪ್ರಾರಂಭವಾಗಿ ಏಪ್ರಿಲ್ 4ರವರೆಗೆ ನಡೆದಿವೆ. ಏಪ್ರಿಲ್ 15ರಿಂದ ರಾಜ್ಯಾದ್ಯಂತ 240ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪ್ರಶ್ನೆಪತ್ರಿಕೆಗಳ ಮೌಲ್ಯಮಾಪನ ಪ್ರಾರಂಭವಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ

ಮೇ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ನಿರೀಕ್ಷೆ Read More »

ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು: ಗೂಡ್ಸ್ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಅಪಘಾತ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ನಾಗರಾಜ್(28), ಸೋಮು(38), ನಾಗಭೂಷಣ್(36) ಹಾಗೂ ಮುರಳಿ(38) ಮೃತಪಟ್ಟಿದ್ದಾರೆ. ಅವರು ತೆಲಂಗಾಣದ ಹಿಂದೂಪುರ ನಿವಾಸಿಗಳು ಎಂದು ಗುರುತಿಸಲಾಗಿದೆ. ದೇವದುರ್ಗ ತಾಲೂಕಿನ ಗಬ್ಬೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತೆಲಂಗಾಣದ ಹಿಂದೂಪುರದಿಂದ ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ನಡೆಯುವ ಕುರಿ ಸಂತೆಗೆ ಹೋಗುವ

ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು Read More »

ಜಾತಿ ಗಣತಿ ವರದಿ : ಸಂಪುಟ ಸಭೆಯಲ್ಲೂ ಬಗೆಹರಿಯಲಿಲ್ಲ ಗೊಂದಲ

ಒಕ್ಕಲಿಗ, ಲಿಂಗಾಯತ ಸಚಿವರಿಂದ ಭಾರಿ ವಿರೋಧ; ಜೋರು ಧ್ವನಿಯಲ್ಲಿ ವಾಗ್ವಾದ ಬೆಂಗಳೂರು : ಜಾತಿ ಗಣತಿ ವರದಿ ಸಂಬಂಧ ನಿನ್ನೆ ನಡೆದ ಮಹತ್ವದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವ ತೀರ್ಮಾನವನ್ನೂ ಕೈಗೊಳ್ಳಲು ಸಾಧ್ಯವಾಗಿಲ್ಲ. ಸಚಿವರು ವರದಿ ಪರ ಮತ್ತು ವಿರೋಧವಾಗಿ ಜೋರು ದ್ವನಿಯಲ್ಲಿ ಮಾತನಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಯಾವ ಸಮಜಾಯಿಸಿಗೂ ಬಗ್ಗಿಲ್ಲ ಎಂದು ತಿಳಿದುಬಂದಿದೆ. ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ಸಚಿವರು ವರದಿಯನ್ನು ತೀವ್ರವಾಗಿ ವಿರೋಧಿಸಿದ್ದಾರೆ.ಕಳೆದೊಂದು ವಾರದಿಂದ ಕರ್ನಾಟಕದಾದ್ಯಂತ ದೊಡ್ಡ ಕೋಲಾಹಲ ಎಬ್ಬಿಸಿದ್ದ ಜಾತಿ ಗಣತಿ

ಜಾತಿ ಗಣತಿ ವರದಿ : ಸಂಪುಟ ಸಭೆಯಲ್ಲೂ ಬಗೆಹರಿಯಲಿಲ್ಲ ಗೊಂದಲ Read More »

error: Content is protected !!
Scroll to Top