ರಾಜ್ಯ

ಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ಕೋಟಿ ವಂಚನೆ | ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ ಹೆಗ್ಡೆ ಎಂಬವರ ವಿರುದ್ಧ ಉದ್ಯಮಿ ನೀಲಿಮಾ ಎಂಬವರು ನೀಡಿದ ದೂರಿನಂತೆ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪ್ಲಾಸ್ಟಿಕ್ ಬದಲು ಆರ್ಗ್ಯಾನಿಕ್ ಬ್ಯಾಗ್ ಕಂಡು ಹಿಡಿದಿದ್ದಾಗಿ ನಂಬಿಸಿದ್ದ ಅಶ್ವತ್ಥ ಹೆಗ್ಡೆ ಬಿಸಿ ನೀರಿನಲ್ಲಿ ಕರಗುವ ಕೈಚೀಲ ಮಾಡುವುದಾಗಿ ಭರವಸೆ ನೀಡಿದ್ದರು. ಯಂತ್ರ ಹಾಗೂ ಕಾರ್ಮಿಕರನ್ನು ಕೊಡುವುದಾಗಿ ಹೇಳಿದ್ದರು. 1.26 ಕೋಟಿ ರೂಪಾಯಿ ಮೌಲ್ಯದ ಯಂತ್ರ […]

ಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ಕೋಟಿ ವಂಚನೆ | ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ ಹೆಗ್ಡೆ ವಿರುದ್ಧ ಪ್ರಕರಣ ದಾಖಲು Read More »

ರಾಜ್ಯಪಾಲರಿಗೆ ಕಂಬಳದ ಆಮಂತ್ರಣ ನೀಡಿ ಕಂಬಳಕ್ಕೆ ಆಹ್ವಾನ

ಪುತ್ತೂರು: ನ.24,25,26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ರಾಜ್ಯದ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲೊಟ್ ರವರಿಗೆ ಕಂಬಳ ಸಮಿತಿ ಅಧ್ಯಕ್ಷ ,ಪುತ್ತೂರು ಶಾಸಕ ಅಶೋಕ್ ರೈ ಅವರು ಆಮಂತ್ರಣ ಪತ್ರ ನೀಡಿ ಕಂಬಳಕ್ಕೆ ಆಹ್ವಾನ ಮಾಡಿದರು. ‌ರಾಜಭವನದಲ್ಲಿ ಇಂದು ರಾಜ್ಯಪಾಲರನ್ನು ಭೇಟಿಯಾದ ಶಾಸಕರ ನೇತೃತ್ವದ ನಿಯೋಗ ಕಂಬಳದ ಬಗ್ಗೆ ಪೂರ್ಣ ವಿವರಣೆ ಮಾಹಿತಿ ನೀಡಿದರು. ನಿಯೋಗದಲ್ಲಿ ತುಳು ಕೂಟದ ಅಧ್ಯಕ್ಷರಾದ ಸುಂದರ್ ರಾಜ್ ರೈ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಉಮೇಶ್ ಶೆಟ್ಟಿ ಸೇರಿದಂತೆ ತುಳು

ರಾಜ್ಯಪಾಲರಿಗೆ ಕಂಬಳದ ಆಮಂತ್ರಣ ನೀಡಿ ಕಂಬಳಕ್ಕೆ ಆಹ್ವಾನ Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಿಂದ ಕೋಟ್ಯಾಂತರ ನಗದು ಕಳವು | 10 ಮಂದಿ ಆರೋಪಿಗಳ ಬಂಧನ

ಧಾರವಾಡ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಯೋಜನಾ ಕಚೇರಿಯಲ್ಲಿ ಕೋಟ್ಯಾಂತರ ನಗದು ಕಳ್ಳತನ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹತ್ತು ಮಂದಿಯನ್ನು ಬಂಧಿಸಿದ್ದಾರೆ. ಎಸ್‌ಕೆಡಿಆರ್‌ಡಿಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹುಬ್ಬಳ್ಳಿಯ ಕುಶಾಲಕುಮಾರ ಕೃಷ್ಣಾ ಸವಣೂರು (23), ನವಲಗುಂದದ ಕಳ್ಳಿಮಠ ಓಣಿಯ ಬಸವರಾಜ ಶೇಖಪ್ಪ ಬಾಬಜಿ (34), ಮಹಾಂತೇಶ ಲಕ್ಷ್ಮಣ ಹಿರಗಣ್ಣವರ (27) ಹಾಗೂ ನವಲಗುಂದದ ಜಿಲಾನಿ ಬವರಸಾಬ ಜಮಾದಾರ (25), ಪರಶುರಾಮ ಹನುಮಂತಪ್ಪ ನೀಲಪ್ಪಗೌಡ್ರ (34), ಭೋವಿ ಓಣಿಯ ರಂಗಪ್ಪ ನಾಗಪ್ಪ ಗುಡಾರದ (31),

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಿಂದ ಕೋಟ್ಯಾಂತರ ನಗದು ಕಳವು | 10 ಮಂದಿ ಆರೋಪಿಗಳ ಬಂಧನ Read More »

ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್ ಪತ್ತೆ : ಜನರಲ್ಲಿ ಆತಂಕ

ಮಂಗಳೂರು: ಸೊಳ್ಳೆಗಳಿಂದ ಹರಡುವ ಮಾರಕ ಝೀಕಾ ವೈರಸ್ ಇದೀಗ ಚಿಕ್ಕಬಳ್ಳಾಪುರದಲ್ಲಿ ಪತ್ತೆಯಾಗಿದ್ದು, ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬೂರಹಳ್ಳಿ ಹೋಬಳಿಯ ತಲಕಾಯಲಬೆಟ್ಟ ವ್ಯಾಪ್ತಿಯಲಲ್ಲೂ ಝೀಕಾ ವೈರಸ್ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಸೊಳ್ಳೆಗಳನ್ನು ಹಿಡಿದು ಪರೀಕ್ಷೆಗೆ ಒಳಪಡಿಸಿದಾಗ ಝೀಕಾ ವೈರಸ್ ದೃಢಪಟ್ಟಿದೆ. ಆದರೆ ಜನರಿಗೆ ಹರಡಿಲ್ಲ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಝೀಕಾ ವೈರಸ್ ಕಂಡುಬಂದಿರುವ ತಲಕಾಯಲಬೆಟ್ಟ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆರೋಗ್ಯ ಇಲಾಖೆ ತಂಡ ಬೀಡು ಬಿಟ್ಟು ಮನೆ ಮನೆ ಸಮೀಕ್ಷೆ ರಕ್ತ ಸಂಗ್ರಹಕ್ಕೆ

ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್ ಪತ್ತೆ : ಜನರಲ್ಲಿ ಆತಂಕ Read More »

ಕೆರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ | ಪ್ರಕರಣ ದಾಖಲು

ಸೂಂಟಿಕೊಪ್ಪ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಕೆರೆಯೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಸೆವೆಂತ್ ಮೈಲ್‌ನಲ್ಲಿ ನಡೆದಿದೆ. ಸೆವೆಂತ್ ಮೈಲ್ ನಿವಾಸಿ ಪೌಲ್ ಡಿಸೋಜ ಎಂಬವರ ಮೃತದೇಹ ಇಂದು ಬೆಳಗ್ಗೆ ಸೌಭಾಗ್ಯ ತೋಟದ ಕೆರೆಯಲ್ಲಿ ಪತ್ತೆಯಾಗಿದೆ. ಕಳೆದ ಭಾನುವಾರ ಮನೆಯಿಂದ ಕಾಣೆಯಾಗಿದ್ದು, ಎಲ್ಲಿಯೂ ಕಂಡುಬಾರದ ಹಿನ್ನೆಲೆ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಮನೆಯವರು, ಪೊಲೀಸರು ಸೇರಿದಂತೆ ಗ್ರಾಮಸ್ಥರು ಹುಡುಕಾಟ ನಡೆಸುತ್ತಿದ್ದರು. ಆದರೆ ಇಂದು ಕೆರೆಯಲ್ಲಿ ಪೌಲ್‌

ಕೆರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ | ಪ್ರಕರಣ ದಾಖಲು Read More »

ಬಂಡೀಪುರ ರಾಂಪುರ ಆನೆ ಶಿಬಿರದ ವಿನಾಯಕ ಕುಸಿದು ಬಿದ್ದು ಸಾವು

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಂಪುರ ಆನೆ ಶಿಬಿರದಲ್ಲಿದ್ದ ವಿನಾಯಕ ಎಂಬ ಆನೆ ಮಂಗಳವಾರ ಸಾವನ್ನಪ್ಪಿದೆ. ಆನೆಗಳಿಗೆ ತರಬೇತಿ ನೀಡುತ್ತಿದ್ದ ಸಂದರ್ಭದಲ್ಲಿ ದಿಢೀರ್‌ ಆಗಿ ಅಸ್ವಸ್ಥಗೊಂಡು ಕುಸಿದು ಬಿದ್ದು ಮೃತಪಟ್ಟಿದೆ. ಮರಣೋತ್ತರ ಪರೀಕ್ಷೆಯ ಬಳಿಕ ನಿಖರ ಕಾರಣಗೊತ್ತಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಆನೆಗೆ ಅಕ್ಕಿರಾಜ, ವಿನಾಯಗನ್‌ ಎಂಬ ಹೆಸರು ಇದೆ. ಕೊಯಮತ್ತೂರಿನಲ್ಲಿ 2021ರಲ್ಲಿ ಈ ಆನೆಯನ್ನು ಸೆರೆ ಹಿಡಿದು ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಿಡಲಾಗಿತ್ತು. ಆನೆಯು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ

ಬಂಡೀಪುರ ರಾಂಪುರ ಆನೆ ಶಿಬಿರದ ವಿನಾಯಕ ಕುಸಿದು ಬಿದ್ದು ಸಾವು Read More »

ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ವಿದ್ಯುತ್, ಕುಡಿಯುವ ನೀರು ಉಚಿತ | 68ನೇ ಕನ್ನಡ ರಾಜ್ಯೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೊಷಣೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಇಂದಿನಿಂದ ವಿದ್ಯುತ್ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಉಚಿತ. ಹೀಗೆಂದು ಘೋಷಿಸಿದ್ದಾರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಂದು ಶಿಕ್ಷಣ ಇಲಾಖೆ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿ ಈ ಘೋಷಣೆ ಮಾಡಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಉಚಿತ ವಿದ್ಯುತ್, ಕುಡಿಯುವ ನೀರು ಸೌಲಭ್ಯಕ್ಕೆ ಶಿಕ್ಷಕರು ಮನವಿ ಮಾಡಿದ್ದಾರೆ. ಅದನ್ನು ಪರಿಗಣಿಸಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ವಿದ್ಯುತ್ ಮತ್ತು ಕುಡಿಯುವ ನೀರನ್ನು ಕೊಡುತ್ತೇವೆ ಎಂದು ಭರವಸೆ

ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ವಿದ್ಯುತ್, ಕುಡಿಯುವ ನೀರು ಉಚಿತ | 68ನೇ ಕನ್ನಡ ರಾಜ್ಯೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೊಷಣೆ Read More »

ಮಣ್ಣು ಅಗೆತ ಸಂದರ್ಭ ಬರೆ ಕುಸಿದು ಮೂವರು ಮೃತ್ಯು

ಮಡಿಕೇರಿ: ಕಟ್ಟಡ ಕಾಮಗಾರಿ ಹಿನ್ನಲೆಯಲ್ಲಿ ಮಣ್ಣು ತೆಗೆಯುವ ಕೆಲಸ ಮಾಡುತ್ತಿದ್ದ ವೇಳೆ ಬರೆ ಕುಸಿದು ಮೂವರು ಮಣ್ಣಿನ ಅಡಿಯಲ್ಲಿ ಸಿಲುಕಿ ಮೃತಪಟ್ಟ ಘಟನೆ ಮಂಗಳವಾರ ಮಡಿಕೇರಿಯ ಸ್ಟೀವರ್ಟ್ ಹಿಲ್ ಬಳಿ ನಡೆದಿದೆ. ಮಣ್ಣಿನಡಿಯಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಬಸವ, ಲಿಂಗಪ್ಪ, ಆನಂದ ಎಂದು ಗುರುತಿಸಲಾಗಿದೆ. ಮಣ್ಣಿನಡಿಯಲ್ಲಿ ಸಿಲುಕಿದ್ದ ಓರ್ವನ ಮೃತದೇಹ ಪತ್ತೆಯಾಗಿದ್ದು ಮತ್ತಿಬ್ಬರಿಗಾಗಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯರಿಂದ ಶೋಧ ಕಾರ್ಯಾ ಮುಂದುವರಿದಿದೆ ಎಂದು ತಿಳಿದು ಬಂದಿದೆ.

ಮಣ್ಣು ಅಗೆತ ಸಂದರ್ಭ ಬರೆ ಕುಸಿದು ಮೂವರು ಮೃತ್ಯು Read More »

ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರಕಾರ | ದ.ಕ.ಜಿಲ್ಲೆಯ ನಾಲ್ವರು ಪ್ರಶಸ್ತಿಗೆ ಆಯ್ಕೆ

ಬೆಂಗಳೂರು: ರಾಜ್ಯದ ಪ್ರಮುಖ ಸಾಹಿತಿಗಳು, ತೆರೆಮರೆಯ ಸಾಧಕರು, ಸಮಾಜ ಸೇವಕರು ಸೇರಿದಂತೆ 68 ಸಾಧಕರಿಗೆ 2023-24ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದ್ದು, ದ.ಕ.ಜಿಲ್ಲೆಯ ನಾಲ್ವರಿಗೆ ಪ್ರಶಸ್ತಿ ಘೋಷಣೆ ಮಾಡಿದೆ. ಕನ್ನಡ ನಾಡಿನ ಪರವಾಗಿ ಗಣನೀಯ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳನ್ನೂ ಸರಕಾರ ಗುರುತಿಸಿದೆ. ಪತ್ರಕರ್ತರಾದ ದಿನೇಶ್ , ಚಾರ್ಮಾಡಿ ಹಸನಬ್ಬ, ಹಾಜಿ ಅಬ್ದುಲ್ಲ ಪರ್ಕಳ, ಕೆ. ಷರೀಫಾ, ಹುಸೇನಾಬಿ ಬುಡೇನ್ ಸಾಬ್ ಸೇರಿದಂತೆ ಹಲವರು ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇನ್ನು 10 ಸಂಘ-

ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರಕಾರ | ದ.ಕ.ಜಿಲ್ಲೆಯ ನಾಲ್ವರು ಪ್ರಶಸ್ತಿಗೆ ಆಯ್ಕೆ Read More »

ಮಹಿಳೆ ಕುತ್ತಿಗೆಯಿಂದ ಕರಿಮಣಿ ಸರ ಕಿತ್ತು ಪರಾರಿ | ಪ್ರಕರಣ ದಾಖಲು

ಮೂಡಿಗೆರೆ : ಮೂಡಿಗೆರೆ ಕೆಎಸ್ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಕುತ್ತಿಗೆಯಿಂದ ಕದೀಮರು 37 ಗ್ರಾಂ ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ನಡೆದಿದೆ. ಮೂಡಿಗೆರೆಯಿಂದ ಕೊಟ್ಟಿಗೆಹಾರಕ್ಕೆ ಬರುತ್ತಿದ್ದ ಮಹಿಳೆ ಯಶೋಧಮ್ಮ ಎಂಬುವರು ಬಸ್ಸಿಗೆ ಹತ್ತುವಾಗ ಕುತ್ತಿಗೆಯಲ್ಲಿ ಹಾಕಿದ್ದ 37 ಗ್ರಾಮ್ ಮಾಂಗಲ್ಯ ಸರ ಕಿತ್ತ ಖದೀಮರು ಪರಾರಿಯಾಗಿದ್ದಾರೆ ಎನ್ನಲಾಗಿದೆ. 1 ಲಕ್ಷ ಕ್ಕಿಂತ ಹೆಚ್ಚು ಬೆಲೆ ಬಾಳುವ ಮಾಂಗಲ್ಯ ಸರ ಆಗಿದ್ದು, ಕಳೆದುಕೊಂಡ ಮಹಿಳೆ ಕೊಟ್ಟಿಗೆಹಾರದ ತರುವೆ ಮೂಲದವರು. ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಸಿ.ಸಿ.ಕ್ಯಾಮರಾ ಇಲ್ಲದಿರುವುದರಿಂದ ಈ

ಮಹಿಳೆ ಕುತ್ತಿಗೆಯಿಂದ ಕರಿಮಣಿ ಸರ ಕಿತ್ತು ಪರಾರಿ | ಪ್ರಕರಣ ದಾಖಲು Read More »

error: Content is protected !!
Scroll to Top