ರಾಜ್ಯ

ಸಿ ಶ್ರೇಣಿ ದೇವಾಲಯಗಳಿಗೂ ಗೃಹಜ್ಯೋತಿ ಯೋಜನೆ ವಿಸ್ತರಣೆ | ಚಿಂತನೆ ನಡೆಸಿದ ಸರಕಾರ

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಇದೀಗ ಸರಕಾರ ಧಾರ್ಮಿಕದತ್ತಿ ಇಲಾಖೆ ವ್ಯಾಪ್ತಿಯ ಸಿ ಶ್ರೇಣಿ ದೇವಸ್ಥಾನಗಳಿಗೂ ಗೃಹಜ್ಯೋತಿ ಯೋಜನೆಯನ್ನು ಕಲ್ಪಿಸಲು ಮುಂದಾಗಿದೆ. ಈಗಾಗಲೇ ಮನೆಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದು, ಗೃಹಜ್ಯೋತಿ ಯೋಜನೆಯಡಿ ಮನೆಗಳಿಗೆ ಮಾಸಿಕ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡುತ್ತಿರುವಂತೆ ಸಿ ದರ್ಜೆ ದೇವಸ್ಥಾನಗಳಿಗೂ ಉಚಿತ ವಿದ್ಯುತ್ ಪೂರೈಕೆ ಮಾಡಲು ಸರಕಾರ ಚಿಂತನೆ ನಡೆಸಿದೆ. ಶೀಘ್ರವೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆಯಲು ಯೋಜನೆ ರೂಪಿಸಲಾಗಿದೆ. ಒಂದರಿಂದ ಐದು ಲಕ್ಷ ರೂಪಾಯಿ ಆದಾಯ ಹೊಂದಿದ […]

ಸಿ ಶ್ರೇಣಿ ದೇವಾಲಯಗಳಿಗೂ ಗೃಹಜ್ಯೋತಿ ಯೋಜನೆ ವಿಸ್ತರಣೆ | ಚಿಂತನೆ ನಡೆಸಿದ ಸರಕಾರ Read More »

ಹೆಣ್ಣುಮರಿಗೆ ಜನ್ಮ ನೀಡಿದ ಜಂಬೂ ಸವಾರಿಗೆ ಬಂದಿದ್ದ ನೇತ್ರಾವತಿ ಆನೆ!

ಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತಾಲೀಮು ನಡೆಸಿದ್ದ 28 ವರ್ಷದ ನೇತ್ರಾವತಿ ಆನೆಯು ಹೆಣ್ಣು ಮರಿಗೆ ಜನ್ಮ ನೀಡಿದೆ. ಕೆಲವು ವರ್ಷಗಳಿಂದ ಶಿವಮೊಗ್ಗ ದಸರಾದಲ್ಲಿ ಬೆಳ್ಳಿ ಅಂಬಾರಿ ಹೊರಲು ಮೂರು ಆನೆಗಳನ್ನು ಬಳಸಿಕೊಳ್ಳಲಾಗುತ್ತಿದೆ. ಈ ಬಾರಿಯು ಅಂಬಾರಿ ಹೊರುವ ಸಾಗರನ ಜತೆ ಯಾವ ಅನೆಗಳನ್ನು ಕಳುಹಿಸಬೇಕು ಎಂದು ಗೊಂದಲ ಮೂಡಿತ್ತು. ಕುಂತಿ ಈಚೆಗೆ ಮರಿ ಹಾಕಿತ್ತು. ಭಾನುಮತಿ ತುಂಬು ಗರ್ಭಿಣಿಯಾಗಿತ್ತು. ಹಾಗಾಗಿ ಸಾಗರ ಆನೆ ಜತೆ ನೇತ್ರಾವತಿ, ಹೇಮಾವತಿ ಆನೆಗಳನ್ನು ಕಳುಹಿಸಲಾಗಿತ್ತು. ಪ್ರತಿ ವರ್ಷದಂತೆ ಈ ವರ್ಷವು

ಹೆಣ್ಣುಮರಿಗೆ ಜನ್ಮ ನೀಡಿದ ಜಂಬೂ ಸವಾರಿಗೆ ಬಂದಿದ್ದ ನೇತ್ರಾವತಿ ಆನೆ! Read More »

4 ಗ್ರಾಮಗಳಲ್ಲಿ ಲಘು ಭೂಕಂಪ!

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಸುಕಿನ ಜಾವ 2.50ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ. ಈ ಘಟನೆ ವಿಜಯದಶಮಿ ಹಬ್ಬದ ಸಂಭ್ರಮದಲ್ಲಿದ್ದ ಜನರಲ್ಲಿ ಆತಂಕ ಮೂಡಿಸಿದೆ. ನಿಲೋಗಲ್, ಹಟ್ಟಿ, ವೀರಾಪುರ ಹಾಗೂ ಗೆಜ್ಜಲಗಟ್ಟ ಗ್ರಾಮಗಳಲ್ಲಿ ಮಧ್ಯರಾತ್ರಿ ವೇಳೆಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಸದ್ಯ, ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ. ಈ ರೀತಿಯ ಲಘು ಭೂಕಂಪನದಿಂದ ಜನರು ಆತಂಕಪಡುವ

4 ಗ್ರಾಮಗಳಲ್ಲಿ ಲಘು ಭೂಕಂಪ! Read More »

ಬೆಂಗಳೂರು ಕಂಬಳಕ್ಕೆ ಆಹ್ವಾನ

ಪುತ್ತೂರು: ಬೆಂಗಳೂರು ಕಂಬಳ ಸಮಿತಿ ವತಿಯಿಂದ ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ಹಾಗೂ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಗೋವಿಂದರಾಜ್ ಅವರನ್ನು ಭೇಟಿ ಮಾಡಿ ಕಂಬಳಕ್ಕೆ ಆಹ್ವಾನಿಸಲಾಯಿತು. ಬೆಂಗಳೂರು ಕಂಬಳ ಕುರಿತು ರೂಪರೇಷೆಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಶಾಸಕ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ, ಕಾರ್ಯಾಧ್ಯಕ್ಷ ಗುರುಕಿರಣ್, ಉಪಾಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ, ಪದಾಧಿಕಾರಿ ಉದಯ್ ಶೆಟ್ಟಿ ಉಪಸ್ಥಿತರಿದ್ದರು.

ಬೆಂಗಳೂರು ಕಂಬಳಕ್ಕೆ ಆಹ್ವಾನ Read More »

‘ಬೆಂಗಳೂರು ಕಂಬಳ’ಕ್ಕೆ ಸಿಕ್ಕಿಲ್ಲ ಅನುಮತಿ! | ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಹೇಳಿದ್ದೇನು?

ಬೆಂಗಳೂರು: ಬಹುನಿರೀಕ್ಷಿತ ಬೆಂಗಳೂರು ಕಂಬಳಕ್ಕೆ ಇನ್ನೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅನುಮತಿ ಸಿಕ್ಕಿಲ್ಲ ಎಂದು ವರದಿಯಾಗಿದೆ. ನವಂಬರ್ ಕೊನೆ ವಾರದಲ್ಲಿ ನಡೆಯಲುದ್ದೇಶಿಸಿರುವ ಬೆಂಗಳೂರು ಕಂಬಳಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಕರೆ ಮುಹೂರ್ತವೂ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ಮುಹೂರ್ತಕ್ಕೆ ಆಗಮಿಸಿ, 1 ಕೋಟಿ ರೂ. ಅನುದಾನ ನೀಡುವ ಘೋಷಣೆ ಮಾಡಿದ್ದರು. ಇದರ ನಡುವೆ ಇದೀಗ ಅನುಮತಿ ವಿಚಾರ ವರದಿಯಾಗಿದೆ. ಬೆಂಗಳೂರಿನಲ್ಲಿ ಕಂಬಳ ನಡೆಸುವುದಾದರೆ ಬಿಬಿಎಂಪಿಯ ಅನುಮತಿ ಕಡ್ಡಾಯ. ಕಾನೂನು

‘ಬೆಂಗಳೂರು ಕಂಬಳ’ಕ್ಕೆ ಸಿಕ್ಕಿಲ್ಲ ಅನುಮತಿ! | ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಹೇಳಿದ್ದೇನು? Read More »

ಪಡುಕುತ್ಯಾರಿನ ಆನೆಗುಂದಿ ಮಹಾಸಂಸ್ಥಾನದಲ್ಲಿ ಆರ್ಟಿಸಾನ್ ಕಾರ್ಡ್ ಗಾಗಿ ಪ್ರಾತ್ಯಕ್ಷಿಕೆ ಪರೀಕ್ಷೆ

ಪಡುಕುತ್ಯಾರು: ಕರ ಕುಶಲ ಕಲೆ ಅಭಿವೃದ್ಧಿ ಇಲಾಖೆಯಿಂದ ಕೇಂದ್ರ ಸರಕಾರದ ಸವಲತ್ತುಗಳನ್ನು ಪಡೆಯಲು ಆರ್ಟಿಸಾನ್ ಕಾರ್ಡ್ ಅತೀ ಅಗತ್ಯವಾಗಿದ್ದು, ಕುಶಲಕರ್ಮಿಗಳ ಹೆಸರಿನಲ್ಲಿ ಹಲವಾರು ಮಂದಿ ಅರ್ಜಿ ಸಲ್ಲಿಸುತ್ತಿದ್ದಾರೆ. ಅವುಗಳ ವಸ್ತುನಿಷ್ಠತೆ, ನಿಖರತೆ ಪರಿಶೀಲಿಸಲು ಇತ್ತೀಚಿನ ದಿನಗಳಿಂದ ಪ್ರಾತ್ಯಕ್ಷಿಕ ಪರೀಕ್ಷೆಗಳನ್ನು ಇಲಾಖೆ ಕೈಗೊಳ್ಳುತ್ತಿದೆ ಎಂದು ಮಂಗಳೂರು ವಿಭಾಗದ ಹ್ಯಾಂಡಿಕ್ರಾಫ್ಟ್ ಸರ್ವೀಸ್ ಸೆಂಟರ್ ಸಹಾಯಕ ನಿರ್ದೇಶಕಿ ವೀಣಾ ಹೇಳಿದರು.ಅವರು ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಸತ್ಸಂಗ ಮಂದಿರದಲ್ಲಿ ಆರ್ಟಿಸಾನ್ ಕಾರ್ಡ್ ಗಾಗಿ ನಡೆದ ವೃತ್ತಿ ಕೌಶಲ್ಯ

ಪಡುಕುತ್ಯಾರಿನ ಆನೆಗುಂದಿ ಮಹಾಸಂಸ್ಥಾನದಲ್ಲಿ ಆರ್ಟಿಸಾನ್ ಕಾರ್ಡ್ ಗಾಗಿ ಪ್ರಾತ್ಯಕ್ಷಿಕೆ ಪರೀಕ್ಷೆ Read More »

42 ಕೋಟಿ ರೂ. ಹಿಂದಿನ ‘ಕೈ’ ಪತ್ತೆಗೆ ಸಿಬಿಐ ತನಿಖೆ ಅಗತ್ಯ: ಡಿ.ವಿ.ಎಸ್. ಆಗ್ರಹ

ಬೆಂಗಳೂರು: ಗುತ್ತಿಗೆದಾರರ ಮನೆಯಲ್ಲಿ ಸಿಕ್ಕಿದ 42 ಕೋಟಿ ರೂ. ಹಣದ ಪರದೇ ಕೆ ಪೀಛೇ ಇರುವ ಕೈಗಳನ್ನು ಪತ್ತೆ ಹಚ್ಚಲು ಸಿಬಿಐ ತನಿಖೆ ಅಗತ್ಯ. ಈ ನಿಟ್ಟಿನಲ್ಲಿ ಸಿಬಿಐ ಸ್ವಯಂಪ್ರೇರಿತ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಆಗ್ರಹಿಸಿದರು. ಬಿಜೆಪಿ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಭ್ರಷ್ಟಾಚಾರ, ಲೂಟಿ ಕಾಂಗ್ರೆಸಿನ ರಕ್ತದಲ್ಲಿದೆ. ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್ ಅನ್ಯಾಯ ಮಾಡುತ್ತಿದೆ. ಅಂಬಿಕಾಪತಿಗೆ 42

42 ಕೋಟಿ ರೂ. ಹಿಂದಿನ ‘ಕೈ’ ಪತ್ತೆಗೆ ಸಿಬಿಐ ತನಿಖೆ ಅಗತ್ಯ: ಡಿ.ವಿ.ಎಸ್. ಆಗ್ರಹ Read More »

ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಪಟಾಕಿ?? | ಅತ್ತಿಬೆಲೆ ಪಟಾಕಿ ದುರಂತದ ಕಾರಣ, ಪರಿಣಾಮ ವಿವರಿಸಿದ ಗೃಹ ಸಚಿವ

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದೆ. ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು ದೆಹಲಿ ಮಾದರಿಯಲ್ಲಿ ರಾಜ್ಯದಲ್ಲೂ ಪಟಾಕಿ ಬ್ಯಾನ್​ಗೆ ಚಿಂತನೆ ಮಾಡಲಾಗುವುದು. ಅತ್ತಿಬೆಲೆ ಪಟಾಕಿ ದುರಂತದಲ್ಲಿ 17 ಮಂದಿ ಸಾವು ವಿಷಾದನೀಯ. ಪಟಾಕಿ ಮಳಿಗೆಗೆ 2017ರಿಂದ 2022ರವರೆಗೆ ನೂತನ ಪರವಾನಗಿ ನವೀಕರಣ ನಡುವೆ ಫೇಕ್ ಲೈಸೆನ್ಸ್ ಸೃಷ್ಟಿ ಮಾಡಲಾಗಿದೆ. ಕೇವಲ 1 ಸಾವಿರ ಕೆಜಿ ಪಟಾಕಿ ಮಾರಾಟಕ್ಕೆ ಪರವಾನಗಿ ನೀಡಲಾಗಿದೆ.

ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಪಟಾಕಿ?? | ಅತ್ತಿಬೆಲೆ ಪಟಾಕಿ ದುರಂತದ ಕಾರಣ, ಪರಿಣಾಮ ವಿವರಿಸಿದ ಗೃಹ ಸಚಿವ Read More »

ಪ್ರಮೋದ್ ಮುತಾಲಿಕ್’ರನ್ನು ತಡೆದ ಪೊಲೀಸರು!

ರಾಗಿಗುಡ್ಡ: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗಕ್ಕೆ ಭೇಟಿ ನೀಡದಂತೆ ನಿರ್ಬಂಧ ವಿಧಿಸಲಾಗಿದೆ. ಮಂಗಳವಾರ ರಾತ್ರಿ ಶಿವಮೊಗ್ಗದ ಗಲಭೆ ಪೀಡಿತ ಪ್ರದೇಶ ರಾಗಿಗುಡ್ಡ ಪ್ರದೇಶಕ್ಕೆ ಭೇಟಿ ನೀಡಲು ತೆರಳುತ್ತಿದ್ದ ವೇಳೆ ಪೊಲೀಸರು ಪ್ರಮೋದ್ ಮುತಾಲಿಕ್ ಅವರನ್ನು ಹೊಸನಗರದ ತಾಲೂಕಿನ ಮಾಸ್ತಿಕಟ್ಟೆ ಬಳಿ ತಡೆದು, ಮುಂದಿನ 30 ದಿನಗಳ ಕಾಲ ಶಿವಮೊಗ್ಗ ತೆರಳದಂತೆ ನಿರ್ಬಂಧ ಹೇರಲಾಗಿರುವ ಪ್ರತಿಯನ್ನು ನೀಡಿದ್ದಾರೆ. ಗಲಭೆ ಪೀಡಿತ ಪ್ರದೇಶದಲ್ಲಿ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಪ್ರಚೋದನಕಾರಿ ಭಾಷಣ ಮಾಡುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ

ಪ್ರಮೋದ್ ಮುತಾಲಿಕ್’ರನ್ನು ತಡೆದ ಪೊಲೀಸರು! Read More »

ಕರ್ನಾಟಕ ಸಂಭ್ರಮ-50: ಲಾಂಛನ ಬಿಡುಗಡೆ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್’ನಲ್ಲಿ ಆಯೋಜಿಸಲಾಗಿರುವ ಕರ್ನಾಟಕ ಸಂಭ್ರಮ-50ರ ಲಾಂಛನವನ್ನು ಅನಾವರಣ ಮಾಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಾಂಛನ ಬಿಡುಗಡೆ ಮಾಡಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಕನ್ನಡ ಮತ್ತು ಸಂಸ್ಕೃತಿ

ಕರ್ನಾಟಕ ಸಂಭ್ರಮ-50: ಲಾಂಛನ ಬಿಡುಗಡೆ Read More »

error: Content is protected !!
Scroll to Top