ರಾಜ್ಯ

ಬೊಲಿವಿಯಾದಲ್ಲಿ 3900 ಚದರ ಕಿಲೋ ಮೀಟರ್‌ ಭೂಮಿ ಒತ್ತುವರಿ ಮಾಡಿಕೊಂಡ ನಿತ್ಯಾನಂದ ಸ್ವಾಮಿ!

ಕರ್ನಾಟಕದಿಂದ ಓಡಿಹೋಗಿ ಕೈಲಾಸ ದೇಶ ಸ್ಥಾಪಿಸಿಕೊಂಡಿರುವ ನಿತ್ಯಾನಂದ ನವದೆಹಲಿ: ಭಾರತದಿಂದ ಓಡಿಹೋಗಿ ತನ್ನದೇ ಆದ ಕೈಲಾಸ ದೇಶ ಸ್ಥಾಪಿಸಿರುವ ಬಿಡದಿಯ ನಿತ್ಯಾನಂದ ಸ್ವಾಮಿಯ ವಿರುದ್ಧ ಸುಮಾರು 3,900 ಚದರ ಕಿಲೋಮೀಟರ್‌ ಭೂಮಿ ಒತ್ತುವರಿ ಮಾಡಿಕೊಂಡ ಆರೋಪ ಕೇಳಿಬಂದಿದೆ. ದಕ್ಷಿಣ ಅಮೆರಿಕ ಖಂಡದಲ್ಲಿರುವ ಬೊಲಿವಿಯಾ ದೇಶದಲ್ಲಿ ನಿತ್ಯಾನಂದ ಸ್ವಾಮಿ ಮತ್ತು ಅವರ ಅನುಯಾಯಿಗಳು ಬುಡಕಟ್ಟು ಜನಾಂಗದವರ 3,900 ಚದರ ಕಿಲೋಮೀಟರ್ ಭೂ ಕಬಳಿಕೆ ಮಾಡಿದ್ದಾರೆ ಎನ್ನಲಾಗಿದೆ.ಬೊಲಿವಿಯಾದ ಅಮೆಜಾನ್ ಪ್ರದೇಶದ ಬುಡಕಟ್ಟು ಜನಾಂಗಕ್ಕೆ ಅಸ್ತಿತ್ವದಲ್ಲಿಲ್ಲದ ಕೈಲಾಸ ದೇಶ ವಂಚನೆ ಮಾಡಿರುವುದು […]

ಬೊಲಿವಿಯಾದಲ್ಲಿ 3900 ಚದರ ಕಿಲೋ ಮೀಟರ್‌ ಭೂಮಿ ಒತ್ತುವರಿ ಮಾಡಿಕೊಂಡ ನಿತ್ಯಾನಂದ ಸ್ವಾಮಿ! Read More »

ಕಮೆಂಟ್‌ ಹಾಕಿದ ವ್ಯಕ್ತಿಗೆ ಹೀಗೆಲ್ಲ ಬೈದರಾ ಸಚಿವ ಬೈರತಿ ಸುರೇಶ್‌?

ವೈರಲ್‌ ಆಯಿತು ಕೊಳಕು ಬೈಗುಳದ ಸ್ಕ್ರೀನ್‌ಶಾಟ್‌ ಬೆಂಗಳೂರು : ರಾಜ್ಯದ ಕಾಂಗ್ರೆಸ್‌ ಸಚಿವರಿಗೆ ದಿನಕ್ಕೊಂದರಂತೆ ವಿವಾದಗಳು ಸುತ್ತಿಕೊಳ್ಳುತ್ತಿವೆ. ಇದೀಗ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಸರದಿ. ಫೇಸ್‌ಬುಕ್​​ನಲ್ಲಿ ತನ್ನ ಪೋಸ್ಟ್​ಗೆ ಕಮೆಂಟ್​ ಮಾಡಿದ್ದ ವ್ಯಕ್ತಿಗೆ ಭೈರತಿ ಸುರೇಶ್ ತೀರಾ ಕೊಳಕು ಭಾಷೆಯಲ್ಲಿ ನಿಂದಿಸಿರುವ ಕೆಲವು ಸ್ಕ್ರೀನ್‌ಶಾಟ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿವೆ. ಸಚಿವರು ಬಳಸಿದ ಭಾಷೆಯ ಬಗ್ಗೆ ಎಲ್ಲೆಡೆ ಟೀಕೆಗಳು ವ್ಯಕ್ತವಾಗುತ್ತಿದ್ದು, ಕೆಲವರು ಇದು ಕಾಂಗ್ರೆಸ್‌ ಸಂಸ್ಕೃತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಮೆಂಟ್‌ ಮಾಡಿದ ವ್ಯಕ್ತಿಯನ್ನುದ್ದೇಶಿಸಿ

ಕಮೆಂಟ್‌ ಹಾಕಿದ ವ್ಯಕ್ತಿಗೆ ಹೀಗೆಲ್ಲ ಬೈದರಾ ಸಚಿವ ಬೈರತಿ ಸುರೇಶ್‌? Read More »

ಬೆಕ್ಕುಗಳಿಗೆ ಹರಡುತ್ತಿದೆ ಮರಣಾಂತಿಕ ವೈರಸ್‌ ಸೋಂಕು : ಮುನ್ನೆಚ್ಚರಿಕೆ ವಹಿಸಲು ಸೂಚನೆ

ಕೆಲವೇ ಸೆಕೆಂಡುಗಳಲ್ಲಿ ಹರಡಿ ಬೆಕ್ಕುಗಳನ್ನು ಸಾಯಿಸುವ ವೈರಾಣು ಬೆಂಗಳೂರು: ಹಕ್ಕಿಜ್ವರದ ಹಾವಳಿಯ ಬೆನ್ನಿಗೆ ಈಗ ರಾಜ್ಯದ ಕೆಲವೆಡೆಗಳಲ್ಲಿ ಬೆಕ್ಕುಗಳಿಗೆ ವೈರಸ್‌ ಸೋಂಕು ತಗಲಿದ್ದು, ಬೆಕ್ಕುಗಳು ಹಠಾತ್‌ ಸಾವಿಗೀಡಾಗುತ್ತಿವೆ. ಬೆಕ್ಕುಗಳಿಗೆ ಬಂದಿರುವ ಮರಣಾಂತಿಕ ರೋಗಕ್ಕೆ ಎಫ್​ಪಿವಿ ವೈರಸ್ ಕಾರಣ ಎಂದು ಗುರುತಿಸಲಾಗಿದೆ. ಹೀಗಾಗಿ ಮನೆಗಳಲ್ಲಿ ಬೆಕ್ಕು ಸಾಕುತ್ತಿರುವವರು ಸಾಕಷ್ಟು ಎಚ್ಚರಿಕೆ ವಹಿಸಬೇಕಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಈ ವೈರಸ್ ಸೋಂಕಿನಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಬೆಕ್ಕುಗಳು ಸಾವನ್ನಪ್ಪುತ್ತಿವೆ. ಅಲ್ಲದೆ ರಾಜ್ಯದ ವಿವಿಧೆಡೆ ವೈರಸ್ ಸೋಂಕು ಹರಡುತ್ತಿದೆ. ರಾಯಚೂರಿನಲ್ಲಿ ಕಳೆದ

ಬೆಕ್ಕುಗಳಿಗೆ ಹರಡುತ್ತಿದೆ ಮರಣಾಂತಿಕ ವೈರಸ್‌ ಸೋಂಕು : ಮುನ್ನೆಚ್ಚರಿಕೆ ವಹಿಸಲು ಸೂಚನೆ Read More »

ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು

ಹಾಗೇ ಹೇಳಿಯೇ ಇಲ್ಲ ಎಂದು ಪಾರಾಗಲು ಯತ್ನ ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣದಲ್ಲಿ ಅನುಮಾನದ ನೋಟಗಳಿಗೆ ಗುರಿಯಾಗಿ ಮುಜುಗರ ಅನುಭವಿಸುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇದರ ಬೆನ್ನಿಗೆ ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ನೀಡಿ ಇನ್ನೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತೀವ್ರ ವಿವಾದದ ಸುಳಿಯಲ್ಲಿ ಸಿಲುಕಿರುವ ಡಿ.ಕೆ.ಶಿವಕುಮಾರ್‌ ತಾನು ಹಾಗೆ ಹೇಳಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿ ಪಾರಾಗಲು ಯತ್ನಿಸಿದ್ದಾರೆ. ಸಂದರ್ಶನದಲ್ಲಿ ಶಿವಕುಮಾರ್‌ ನೀಡಿದ ಹೇಳಿಕೆ ಕಳೆದ ಲೋಕಸಭೆ ಚುನಾವಣೆಯಿಂದೀಚೆಗೆ ಸಂವಿಧಾನ ಪುಸ್ತಕವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌ಗೆ

ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದು ತನಿಖಾ ವರದಿ ಸರಕಾರಕ್ಕೆ ಸಲ್ಲಿಕೆ

ಪ್ರೋಟೊಕಾಲ್‌ ದುರ್ಬಳಕೆ ಮಾಡಿ ಚಿನ್ನ ಕಳ್ಳ ಸಾಗಾಟ ಮಾಡಿದ ಕುರಿತು ತನಿಖೆ ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.2 ಕೆಜಿ ಚಿನ್ನದೊಂದಿಗೆ ಡಿಆರ್​ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್‌ಗೆ ನೀಡಿದ ಪ್ರೋಟೊಕಾಲ್‌ ಕುರಿತಾದ ತನಿಖಾ ವರದಿ ಇಂದು ಸರಕಾರದ ಕೈಸೇರಲಿದೆ. ಸರಕಾರ ಈ ಪ್ರಕರಣದಲ್ಲಿ ಪ್ರೋಟೋಕಾಲ್ ದುರ್ಬಳಕೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತ ಅವರಿಗೆ ಆದೇಶಿಸಿತ್ತು. ಈಗ ವರದಿ ಸಿದ್ದವಾಗಿದ್ದು ಇಂದು ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ.

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದು ತನಿಖಾ ವರದಿ ಸರಕಾರಕ್ಕೆ ಸಲ್ಲಿಕೆ Read More »

ನಾನೇನು ಮಾಡಲಿ? ಯಾರ ವಿರುದ್ಧ ತನಿಖೆ ನಡೆಸಲಿ?

ಹನಿಟ್ರ್ಯಾಪ್‌ ಪ್ರಕರಣದ ಬಗ್ಗೆ ಗೃಹ ಸಚಿವರ ಅಸಹಾಯಕತೆ ಬೆಂಗಳೂರು: ದೇಶಾದ್ಯಂತ ಸುದ್ದಿ ಮಾಡಿರುವ ಹನಿಟ್ರ್ಯಾಪ್‌ ಪ್ರಕರಣದ ತನಿಖೆಗೆ ಸಂಬಂಧಿಸಿ ಗೃಹ ಸಚಿವ ಜಿ.ಪರಮೇಶ್ವರ ಮತ್ತೆಅಸಹಾಯಕತೆ ಪ್ರದರ್ಶಿಸಿದ್ದಾರೆ. ಯಾರಾದರೂ ದೂರು ಕೊಡದೆ ಪ್ರಕರಣದ ತನಿಖೆ ಮಾಡಲು ಸಾಧ್ಯವಿಲ್ಲ, ಯಾರ ವಿರುದ್ಧ ಎಂದು ತನಿಖೆ ಮಾಡಬಹುದು ಎಂದು ಬೇಜವಾಬ್ದಾರಿಯಾಗಿ ಮಾತನಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಪರಮೇಶ್ವರ, ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಣ್ಣ ದೂರು ಕೊಡದೇ ನಾನೇನು ಮಾಡಲಿ? ಎಫ್‌ಐಆರ್ ಆಗದೇ ತನಿಖೆಗೆ ಕೊಡಲು ಆಗಲ್ಲ. ರಾಜಣ್ಣ ಏನು ಮಾಡುತ್ತಾರೋ ನೋಡೋಣ.

ನಾನೇನು ಮಾಡಲಿ? ಯಾರ ವಿರುದ್ಧ ತನಿಖೆ ನಡೆಸಲಿ? Read More »

ಹೈಕಮಾಂಡನ್ನು ವಿಕೃತವಾಗಿ ಖುಷಿಪಡಿಸುವ ಚಾಳಿ : ಬಿ.ಕೆ.ಹರಿಪ್ರಸಾದ್‌ಗೆ ಬಿಜೆಪಿ ತಿರುಗೇಟು

ರಾಜ್ಯ ರಾಜಕಾರಣದಲ್ಲಿ ಪ್ರಾಮುಖ್ಯತೆಯಿಲ್ಲದ ರಾಜಕಾರಣಿ ಎಂದು ಲೇವಡಿ ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಹನಿಟ್ರ್ಯಾಪ್ ಪಿತಾಮಹ ಎಂದು ಟೀಕಿಸಿರುವ ವಿಧಾನ ಪರಿಷತ್ತಿನ ಕಾಂಗ್ರೆಸ್‌ ಸದಸ್ಯ ಬಿ.ಕೆ.ಹರಿಪ್ರಸಾದ್ ವಿರುದ್ಧ ಕಿಡಿಕಾರಿರುವ ಬಿಜೆಪಿ, ಹನಿಟ್ರ್ಯಾಪ್ ಕುರಿತಾದ ಹೇಳಿಕೆ ನಿಮ್ಮ ಮಲಿನಗೊಂಡ ಮನಸ್ಥಿತಿ, ಹರಕು ನಾಲಗೆಯ ವ್ಯಕ್ತಿತ್ವವನ್ನು ಪರಿಚಯಿಸಿದೆ. ನಾಮಕರಣ ಅಧಿಕಾರ ಬಲದಿಂದ ರಾಜಕೀಯ ಅಸ್ತಿತ್ವ ಕಂಡುಕೊಂಡಿರುವ ನೀವು, ಕೀಳು ಅಭಿರುಚಿಯ ಹೇಳಿಕೆಗಳನ್ನು ನೀಡಿ ನಿಮ್ಮ ಹೈಕಮಾಂಡ್ ಅಂಗಳವನ್ನು ವಿಕೃತ ಖುಷಿ ಪಡಿಸಲು ಹೊರಟಿದ್ದೀರಿ ಎಂಬುದು ಬಹಿರಂಗ ಸತ್ಯ ಎಂದು ಹೇಳಿದೆ.

ಹೈಕಮಾಂಡನ್ನು ವಿಕೃತವಾಗಿ ಖುಷಿಪಡಿಸುವ ಚಾಳಿ : ಬಿ.ಕೆ.ಹರಿಪ್ರಸಾದ್‌ಗೆ ಬಿಜೆಪಿ ತಿರುಗೇಟು Read More »

ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಕುಕ್ಕೆ ಆಡಳಿತ ಮಂಡಳಿಗೆ ಸೇರಿಸುವ ಯತ್ನ : ಜನರ ವಿರೋಧ

ರೌಡಿಶೀಟರ್‌ ಕಾಂಗ್ರೆಸ್‌ ಮುಖಂಡನ ಸೇರ್ಪಡೆಗೆ ಸಚಿವ ದಿನೇಶ್‌ ಗುಂಡೂರಾವ್‌ ಶಿಫಾರಸ್ಸು ಮಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಗೊಳಪಟ್ಟ ದೇವಸ್ಥಾನಗಳ ಪೈಕಿ ಆದಾಯದಲ್ಲಿ ನಂಬರ್‌ ಒನ್‌ ಸ್ಥಾನದಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಗೆ ಮಾಜಿ ರೌಡಿಶೀಟರ್‌ ಆಗಿರುವ ಕಾಂಗ್ರೆಸ್‌ ಮುಖಂಡರೊಬ್ಬರನ್ನು ಸೇರಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಮುಂದಾಗಿರುವುದು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಈ ಕಾಂಗ್ರೆಸ್‌ ಮುಖಂಡ ಹಿಂದೆ ನಕಲಿ ಚೆಕ್ ನೀಡಿ ಹಣ್ಣುಕಾಯಿ ಟೆಂಡರ್ ಮಾಡಿ ದೇವಸ್ಥಾನಕ್ಕೆ ವಂಚಿಸಿದ ಪ್ರಕರಣವಿದೆ. ಮಾಜಿ ರೌಡಿಶೀಟರ್ ಆಗಿರುವ

ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಕುಕ್ಕೆ ಆಡಳಿತ ಮಂಡಳಿಗೆ ಸೇರಿಸುವ ಯತ್ನ : ಜನರ ವಿರೋಧ Read More »

ಮುಸ್ಲಿಂ ಗುತ್ತಿಗೆ ಮೀಸಲಾತಿ : ಹೋರಾಟದಿಂದ ಹಿಂದೆ ಸರಿದ ಜೆಡಿಎಸ್‌

ಬಿಜೆಪಿ ಹೋರಾಟ ಬೆಂಬಲಿಸದಿರಲು ನಿರ್ಧಾರ ಬೆಂಗಳೂರು: ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವ ಕಾಂಗ್ರೆಸ್‌ ಸರಕಾರದ ನಿರ್ಧಾರದ ವಿರುದ್ಧ ಬಿಜೆಪಿ ನಡೆಸುವ ಹೋರಾಟವನ್ನು ಬೆಂಬಲಿಸದಿರುವ ಅಚ್ಚರಿಯ ನಿರ್ಧಾರವನ್ನು ಮಿತ್ರಪಕ್ಷ ಜೆಡಿಎಸ್‌ ಕೈಗೊಂಡಿದೆ.ಶನಿವಾರ ಬೆಂಗಳೂರಿನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು. ಜೆಡಿಎಸ್ ನಾಯಕರು ತಮ್ಮ ಶಾಸಕರಿಗೆ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಹೋರಾಟದಲ್ಲಿ ತನ್ನ ಮೈತ್ರಿ ಪಾಲುದಾರ ಬಿಜೆಪಿಯೊಂದಿಗೆ ಕೈಜೋಡಿಸುವುದಿಲ್ಲ ಎಂದು ಜೆಡಿಎಸ್ ತಿಳಿಸಿದೆ.ನಾವು ಪಕ್ಷದ ಸಿದ್ಧಾಂತ ಮತ್ತು ತತ್ವಗಳಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ.

ಮುಸ್ಲಿಂ ಗುತ್ತಿಗೆ ಮೀಸಲಾತಿ : ಹೋರಾಟದಿಂದ ಹಿಂದೆ ಸರಿದ ಜೆಡಿಎಸ್‌ Read More »

ಹನಿಟ್ರ್ಯಾಪ್‌ ದಾಖಲೆ ಸಿಎಂ ಸಿದ್ದರಾಮಯ್ಯನವರಿಗೆ ಹಸ್ತಾಂತರ

ಹನಿಟ್ರ್ಯಾಪ್‌ನಲ್ಲಿ ದೊಡ್ಡ ದೊಡ್ಡವರ ಕೈವಾಡ ಇದೆ ಎಂದು ಮಾಹಿತಿ ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ ಹನಿಟ್ರ್ಯಾಪ್​ ಪ್ರಕರಣದ ದಾಖಲೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಸ್ತಾಂತರಿಸಲಾಗಿದೆ. ಸಚಿವ ರಾಜಣ್ಣ ಪುತ್ರ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ನಿನ್ನೆ ಸಿದ್ದರಾಮಯ್ಯನವರನ್ನು ಭೇಟಿಯಾಗಿ ದಾಖಲೆ ಸಮೇತ ಹನಿಟ್ರ್ಯಾಪ್ ಪ್ರಕರಣದ ಮಾಹಿತಿ ನೀಡಿದ್ದಾರೆ. ಹನಿಟ್ರ್ಯಾಪ್ ಯತ್ನ ಸಂಬಂಧ ಎಲ್ಲ ಸಾಕ್ಷ್ಯಗಳನ್ನು ಸಿಎಂಗೆ ನೀಡಿದ್ದೇನೆ. ಸೋಮವಾರ ಅಥವಾ ಮಂಗಳವಾರ ಡಿಜಿ ಮತ್ತು ಐಜಿಪಿಗೆ ದೂರು ಸಲ್ಲಿಸುವೆ ಎಂದು ಹೇಳಿದ್ದಾರೆ.ನನಗೆ ಕೂಡ ಹನಿಟ್ರ್ಯಾಪ್ ನಡೆಸಲು

ಹನಿಟ್ರ್ಯಾಪ್‌ ದಾಖಲೆ ಸಿಎಂ ಸಿದ್ದರಾಮಯ್ಯನವರಿಗೆ ಹಸ್ತಾಂತರ Read More »

error: Content is protected !!
Scroll to Top