ರಾಜ್ಯ

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮುಡ್ನೂರು ಗ್ರಾಮದ ಗುತ್ತಿಕಲ್ಲು ಎಂಬಲ್ಲಿ ಏ. 3 ರಂದು ಸಂಭವಿಸಿದೆ. ಶಿವಪ್ಪ ಗೌಡ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಕೂಲಿ ಕೆಲಸ ಮಾಡಿಕೊಂಡಿದ್ದು, ಸುಮಾರು 4 ವರ್ಷಗಳ ಹಿಂದೆ ದಂಪತ್ಯದಲ್ಲಿ ಮನಸ್ಧಾಪ ಉಂಟಾಗಿ ಆತನ ಪತ್ನಿ ತವರು ಮನೆಯಲ್ಲಿ ನೆಲೆಸಿದ ಕಾರಣ ಮನೆಯಲ್ಲಿ ಒಬ್ಬರೇ ಇರುತ್ತಿದ್ದರು. ಏ. 1 ರಂದು ಶಿವಪ್ಪ ಗೌಡ ಕಾಣೆಯಾದ ಬಗ್ಗೆ ಅಣ್ಣ ತಿಮ್ಮಪ್ಪ ಗೌಡ ಪುತ್ತೂರು ನಗರ ಪೊಲೀಸ್‌ […]

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಇಚ್ಚೆ ಎಂಬಲ್ಲಿ ಏ.2 ರಂದು ಸಂಭವಿಸಿದೆ. ಅಂಗಾರ(80) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಇವರು ಏ.2 ರಂದು ಮನೆಯಿಂದ ಸ್ವಲ್ಪ ದೂರದಲ್ಲಿ ಗೇರು ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ.ಶಿ ಗೆ ಹೈಕಮಾಂಡ್‌ ನೀಡುವುದಿಲ್ಲ : ಸಿದ್ದರಾಮಯ್ಯ

ಡಿಕೆಶಿ ನಿದ್ದೆಗೆಡಿಸಿದ ಸಿದ್ದರಾಮಯ್ಯ ಸಂದರ್ಶನ ಬೆಂಗಳೂರು : ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೀಡಿರುವ ಹೇಳಿಕೆಯೊಂದು ಕಾಂಗ್ರೆಸ್ಸಿನ ಒಳ ಬೇಗುದಿಯನ್ನು ಹೆಚ್ಚಿಸಿದೆ. ಇಂಗ್ಲೀಷ್‌ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಹೈಕಮಾಂಡ್‌ ಮುಖ್ಯಮಂತ್ರಿ ಹುದ್ದೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರ ಈ ಹೇಳಿಕೆಯಿಂದ ಕಾಂಗ್ರೆಸ್​ನಲ್ಲಿ ತಲ್ಲಣ ಸೃಷ್ಟಿಸಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಹೇಳಿಕೆ ವಿಕೋಪಕ್ಕೆ ತಿರುಗುವ ಮೊದಲು ಸಿದ್ದರಾಮಯ್ಯ ಎಚ್ಚೆತ್ತುಕೊಂಡು ಸ್ಪಷ್ಟನೆ ನೀಡಿದ್ದು, ನಾನು ಮುಖ್ಯಮಂತ್ರಿ ಅಭ್ಯರ್ಥಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ.ಶಿ ಗೆ ಹೈಕಮಾಂಡ್‌ ನೀಡುವುದಿಲ್ಲ : ಸಿದ್ದರಾಮಯ್ಯ Read More »

ಚುರುಕುಗೊಂಡ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

ಬೆಂಗಳೂರು : ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದೆ. ಇಂದು ಮತ್ತು ನಾಳೆ ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಎರಡು ದಿನಗಳ ಸಭೆಯ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಎರಡು ದಿನ ನೆಲಮಂಗಲದ ಗೋಲ್ಡನ್ ಪಾಮ್ ರೆಸಾರ್ಟ್‌ನಲ್ಲಿ ನಡೆದ ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ಸಂಗ್ರಹಿಸಲಾದ ಆಕಾಂಕ್ಷಿಗಳ ಪಟ್ಟಿಯನ್ನು ಚುನಾವಣಾ ಸಮಿತಿ ಫಿಲ್ಟರ್ ಮಾಡಲಿದ್ದು, ಪ್ರತಿ ಕ್ಷೇತ್ರಕ್ಕೆ ಮೂರು ಸಂಭಾವ್ಯ ಅಭ್ಯರ್ಥಿಗಳ ಹೆಸರು ಪಕ್ಷದ

ಚುರುಕುಗೊಂಡ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ Read More »

ಕರಾವಳಿಯ ವಾಜಪೇಯಿ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯ ನಿವೃತ್ತಿ

ಸ್ವಾರ್ಥಿ ರಾಜಕಾರಣಿಗಳ ನಡುವೆ ಭಿನ್ನವಾಗಿ ಕಾಣುವ ಹಾಲಾಡಿ ಕರಾವಳಿಯ ವಾಜಪೇಯಿ ಎಂದೇ ಖ್ಯಾತಿ ಪಡೆದಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. 1999ರಿಂದ ಇಲ್ಲಿಯವರೆಗೆ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದ 72 ವರ್ಷದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರ ಈ ನಡೆ ಅಚ್ಚರಿ ಮೂಡಿಸಿರುವುದರ ಜತೆಗೆ ನಾಡಿನಾದ್ಯಂತ ಚರ್ಚೆಗೂ ಕಾರಣವಾಗಿದೆ. ಶ್ರೀನಿವಾಸ ಶೆಟ್ಟಿಯವರು ಓರ್ವ ಮಾದರಿ ಜನನಾಯಕ ಎಂದು ಧಾರಾಳವಾಗಿ ಹೇಳಬಹುದು. ಸತತ

ಕರಾವಳಿಯ ವಾಜಪೇಯಿ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯ ನಿವೃತ್ತಿ Read More »

ಐಪಿಎಲ್‌ ಪಂದ್ಯದಲ್ಲಿ ಅಭಿಮಾನಿಯೊಬ್ಬ ಪಂಜುರ್ಲಿ ದೈವದ ವೇಷಧಾರಿ : ತುಳುವರಿಂದ ಭಾರಿ ಆಕ್ರೋಶ

ತುಳುನಾಡಿನ ದೈವಗಳಿಗೆ ಅವಮಾನ ಮಾಡಬೇಡಿ-ಕಾಂತಾರ-2 ಬೇಡ ಎಂದು ಒತ್ತಾಯ ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ಐಪಿಎಲ್‌ ಪಂದ್ಯದಲ್ಲಿ ಅಭಿಮಾನಿಯೊಬ್ಬ ಪಂಜುರ್ಲಿ ದೈವದ ವೇಷ ಹಾಕಿಕೊಂಡು ಬಂದಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತನ್ನ ನೆಚ್ಚಿನ ತಂಡಕ್ಕೆ ಬೆಂಬಲ ನೀಡಲು ಆತ ಪಂಜುರ್ಲಿ ವೇಷ ಹಾಕಿದ್ದಾನೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಈ ಫೋಟೊವನ್ನು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಕ್ರೀಡಾಂಗಣದಲ್ಲಿ ದೈವದ ವೇಷ ಹಾಕಿದ್ದನ್ನು ನೋಡಿ ತುಳುವರು ಆಕ್ರೋಶ

ಐಪಿಎಲ್‌ ಪಂದ್ಯದಲ್ಲಿ ಅಭಿಮಾನಿಯೊಬ್ಬ ಪಂಜುರ್ಲಿ ದೈವದ ವೇಷಧಾರಿ : ತುಳುವರಿಂದ ಭಾರಿ ಆಕ್ರೋಶ Read More »

ಐಪಿಎಲ್ 2023 : ಅರ್ಧಶತಕ, ದಾಖಲೆ ನಿರ್ಮಿಸಿದ ಆರ್ ಸಿಬಿ ‘ರನ್ ಮಷಿನ್’ ವಿರಾಟ್ ಕೊಹ್ಲಿ

ಬೆಂಗಳೂರು : ಐಪಿಎಲ್ ಸೀಸನ್ 16ರ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಗೆಲುವು ಸಾಧಿಸಿದ್ದು, ಆರ್ ಸಿಬಿ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತು ಫಾಫ್ ಡುಪ್ಲೆಸಿಸ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಆರ್ ಸಿಬಿ 8 ವಿಕೆಗಳ ಭರ್ಜರಿ ಜಯ ದಾಖಲಿಸಿತು. ಇದೇ ಪಂದ್ಯದಲ್ಲಿ ಕೊಹ್ಲಿ ಅಪರೂಪದ ದಾಖಲೆ ಕೂಡ ನಿರ್ಮಾಣ ಮಾಡಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ವಿರುದ್ಧ ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್ ಸಿಬಿ ತಂಡ ಎಂಟು

ಐಪಿಎಲ್ 2023 : ಅರ್ಧಶತಕ, ದಾಖಲೆ ನಿರ್ಮಿಸಿದ ಆರ್ ಸಿಬಿ ‘ರನ್ ಮಷಿನ್’ ವಿರಾಟ್ ಕೊಹ್ಲಿ Read More »

ಇದು ಪ್ರಚಾರದ ವಿಷಯವಾಗಿದೆ. ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರದ ಸೋಲಿಗೆ ಕೊಡುಗೆ ನೀಡುತ್ತದೆ : ಮೊಯ್ಲಿ

ಬೆಂಗಳೂರು : ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ರಾಹುಲ್ ಗಾಂಧಿಯವರ ಅನರ್ಹತೆಯು ಕಾಂಗ್ರೆಸ್‌ನ ರಾಜಕೀಯ ಲಾಭಕ್ಕೆ ಸಹಾಯ ಮಾಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮೊಯ್ಲಿ, ಖಂಡಿತವಾಗಿ, ಇದು ಪ್ರಚಾರದ ವಿಷಯವಾಗಿದೆ. ಮತ್ತು ಇದು ರಾಜ್ಯದಲ್ಲಿ ಬಿಜೆಪಿ ಸರಕಾರದ ಸೋಲಿಗೆ ಕೊಡುಗೆ ನೀಡುತ್ತದೆ ಹಾಗೂ ಸೇಡಿನ ರಾಜಕೀಯದ ಉತ್ತುಂಗವನ್ನು ತೋರಿಸುತ್ತದೆ ಎಂದು ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಸೋಮವಾರ ಹೇಳಿದರು. ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಇದೆ ಮತ್ತು ಭ್ರಷ್ಟಾಚಾರ ವಿಷಯಗಳ ಬಗ್ಗೆ

ಇದು ಪ್ರಚಾರದ ವಿಷಯವಾಗಿದೆ. ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರದ ಸೋಲಿಗೆ ಕೊಡುಗೆ ನೀಡುತ್ತದೆ : ಮೊಯ್ಲಿ Read More »

ದ್ವಿಚಕ್ರ ವಾಹನದ ಟೈರ್ ಸ್ಫೋಟ : ಟೆಕ್ಕಿ ಸಾವು

ಬೆಂಗಳೂರು : ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ವೇಳೆ ಟೈರ್ ಸ್ಫೋಟಗೊಂಡ ಪರಿಣಾಮ ಟೆಕ್ಕಿಯೋರ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೊಸಕೆರೆಹಳ್ಳಿ ಬಳಿಯ ನೈಸ್ ರಸ್ತೆಯಲ್ಲಿ ಸ್ಕೂಟರ್ ಟೈರ್ ಸ್ಫೋಟಗೊಂಡು, ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಾಪ್ಟ್‌ವೇರ್ ಇಂಜಿನಿಯರ್ ಸುಲೋಚನಾ(24) ಏ. 3 ರ ಬೆಳಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ಡಿಸಿಪಿ ಸುಮನ್ ಪನ್ನೇಕರ್ ತಿಳಿಸಿದ್ದಾರೆ. ಕೋರಮಂಗಲದಿಂದ ಹೊಸಕೆರೆಹಳ್ಳಿ ಕಡೆಗೆ ಸುಲೋಚನಾ ಮತ್ತು ಆಕೆಯ ಸ್ನೇಹಿತ ಆನಂದ್ ಹೋಗುತ್ತಿದ್ದ ವೇಳೆ ಆನಂದ್ ಪೂರ್ಣ ಹೆಲ್ಮೇಟ್ ಧರಿಸಿದ್ದು,

ದ್ವಿಚಕ್ರ ವಾಹನದ ಟೈರ್ ಸ್ಫೋಟ : ಟೆಕ್ಕಿ ಸಾವು Read More »

ಜಿಲ್ಲಾಧಿಕಾರಿಯಿಂದ ರೈತರಿಗೆ ಸಿಹಿಸುದ್ದಿ : ಕೋವಿ ಠೇವಣಿಯಿಂದ ವಿನಾಯಿತಿ

ಮಂಗಳೂರು : ಚುನಾವಣೆ ಸಮಯದಲ್ಲಿ ರೈತರು ಸೇರಿದಂತೆ ಎಲ್ಲರೂ ತಮ್ಮ ಪರವಾನಗಿಯುಳ್ಳ ಕೋವಿ/ಆಯುಧಗಳನ್ನು ಸಮೀಪದ ಠಾಣೆಯಲ್ಲಿ ಠೇವಣಿ ಇಡಬೇಕಾಗುತ್ತದೆ. ಇದೀಗ ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದೆಲ್ಲೆಡೆ ಈ ಆದೇಶ ಜಾರಿಯಲ್ಲಿದೆ. ಆದರೆ, ದಕ್ಷಿಣಕನ್ನಡ ಜಿಲ್ಲೆಯ ರೈತರಿಗೆ ಮಾತ್ರ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಏ.3 ರಂದು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ರೈತರು ಠೇವಣಿ ಇಡುವ ವಿಚಾರದಲ್ಲಿ ಕೆಲ ಸಡಿಲಿಕೆಗಳನ್ನು ಮಾಡಿದ್ದಾರೆ. ಚುನಾವಣೆ ಬಂದಾಗ ಸಾರ್ವಜನಿಕ ಶಾಂತಿ ಮತ್ತು ಶಿಸ್ತುಪಾಲಾನ ಮುಂಜಾಗ್ರತ ಕ್ರಮವಾಗಿ ಶಸ್ತ್ರಾಸ್ತ್ರ ಠೇವಣಿಗೆ ಆದೇಶಿಸಲಾಗುತ್ತದೆ. ರಾಜ್ಯದಲ್ಲಿ

ಜಿಲ್ಲಾಧಿಕಾರಿಯಿಂದ ರೈತರಿಗೆ ಸಿಹಿಸುದ್ದಿ : ಕೋವಿ ಠೇವಣಿಯಿಂದ ವಿನಾಯಿತಿ Read More »

error: Content is protected !!
Scroll to Top