ರಾಜ್ಯ

ತಾಯಿ ಹಚ್ಚಿದ ಅಗರಬತ್ತಿಯಿಂದ ಏಳುತಿಂಗಳ ಮಗು ಮೃತ್ಯು

ಕನಕಗಿರಿ :  ಮಗುವಿಗೆ ಅನಾರೋಗ್ಯವಾಗಿದ್ದರಿಂದ ಅಗರಬತ್ತಿಯಿಂದ ಬಿಸಿ ಮುಟ್ಟಿಸಿದರೆ ಗುಣಮುಖವಾಗಬಹುದೆಂದು ತಿಳಿದು ಏಳು ತಿಂಗಳ ಮಗುವಿಗೆ ಅಗರಬತ್ತಿಯಿಂದ ಬಿಸಿ ಮುಟ್ಟಿಸಿದ್ದು, ಬಳಿಕ ಗುಣ ಪಡಿಸಲು ಮನೆಮದ್ದು ಮಾಡಿದ ಪರಿಣಾಮ ಮಗು ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಮಗು ಮೃತಪಟ್ಟ ವೇಳೆ ಮರಣೋತ್ತರ ಪರೀಕ್ಷೆ ಮಾಡಿದ ವೈದ್ಯರು ‘ಸುಟ್ಟಗಾಯಗಳಿಂದ ನಂಜಾಗಿ ಮಗು ಸಾವನ್ನಪ್ಪಿದೆ’ ಎಂದು ತಿಳಿಸಿದ್ದಾರೆ. ಈ ಕುರಿತು ಮರಣೋತ್ತರ ಪರೀಕ್ಷೆಯ ವರದಿಯನ್ನೂ ನೀಡಿದ್ದಾರೆ. ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಪ್ರಶಾಂತ್ ಎಂಬುವವರು […]

ತಾಯಿ ಹಚ್ಚಿದ ಅಗರಬತ್ತಿಯಿಂದ ಏಳುತಿಂಗಳ ಮಗು ಮೃತ್ಯು Read More »

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ

ಬೆಂಗಳೂರು: ಕರ್ನಾಟಕ ಸರ್ಕಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ಗ್ರಾಮೀಣ ಮತ್ತು ಸ್ಥಳೀಯ ಆಡಳಿತ ವ್ಯವಸ್ಥೆಗೆ ತೀವ್ರ ನಿರಾಸೆಯನ್ನುಂಟುಮಾಡಿದೆ. ಗ್ರಾಮ ಪಂಚಾಯತ್ ಸದಸ್ಯರ ಭತ್ಯೆ, ಪ್ರಯಾಣ ಭತ್ಯೆ , ದೂರವಾಣಿ ಭತ್ಯೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಬಗ್ಗೆ ಸರ್ಕಾರ ಯಾವುದೇ ಅನುದಾನ ನೀಡಿಲ್ಲ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಲು ಹೊಸ ಯೋಜನೆಗಳೇ ಇಲ್ಲ. ನಕ್ಸಲ್ ಪ್ರಭಾವಿತ ಗ್ರಾಮಗಳಿಗೆ ಸಹಾಯ ಪ್ಯಾಕೇಜ್ ನೀಡುವ ಬದಲು ಸಂಪೂರ್ಣ ನಿರ್ಲಕ್ಷ್ಯ ತೋರಲಾಗಿದೆ. ಈ ಬಜೆಟ್ ಕನ್ನಡಿಗರ ಅಭಿವೃದ್ಧಿಗೆ ಏನೂ ಕೊಟ್ಟಿಲ್ಲ. ಇದು

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ Read More »

ಬಜೆಟ್‌ ಹೈಲೈಟ್ಸ್‌ : ಮುಸ್ಲಿಮರಿಗೆ ಭರಪೂರ ಕೊಡುಗೆ

ಗುತ್ತಿಗೆಯಲ್ಲಿ ಮೀಸಲಾತಿ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಬೆಂಗಳೂರು : ಬಜೆಟ್‌ನಲ್ಲಿ ಮುಸ್ಲಿಂ ಸಮುದಾಯಕ್ಕೆ ಭರಪೂರ ಕೊಡುಗೆಗಳನ್ನು ಘೋಷಿಸುವ ಮೂಲಕ ಸಿದ್ದರಾಮಯ್ಯ ತನ್ನ ಮತಬ್ಯಾಂಕನ್ನು ಭದ್ರಗೊಳಿಸಿದ್ದಾರೆ. ಮೌಲಾನಾ ಆಜಾದ್ ಶಾಲೆಗಳ ಉನ್ನತೀಕರಣ, ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗದ ಪ್ರಾರಂಭ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಸೇರಿದಂತೆ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಭರ್ಜರಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಿದ್ದಾರೆ. ಹಲವರ ವಿರೋಧದ ನಡುವೆಯೂ ಸದ್ದಿಲ್ಲದೆ ಸಿದ್ದರಾಮಯ್ಯನವರು ಬಜೆಟ್​ನಲ್ಲಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ

ಬಜೆಟ್‌ ಹೈಲೈಟ್ಸ್‌ : ಮುಸ್ಲಿಮರಿಗೆ ಭರಪೂರ ಕೊಡುಗೆ Read More »

ಅಬಕಾರಿ ಇಲಾಖೆಗೆ 40 ಸಾವಿರ ಕೋ.ರೂ ರಾಜಸ್ವ ಸಂಗ್ರಹ ಗುರಿ

ಮದ್ಯದ ಬೆಲೆ ಮತ್ತೆ ಹೆಚ್ಚಾಗುವ ಸಾಧ್ಯತೆ ಬೆಂಗಳೂರು: ಅಬಕಾರಿ ಇಲಾಖೆಗೆ 40,000 ಕೋಟಿ ರೂ. ರಾಜಸ್ವ ಸಂಗ್ರಹ ಗುರಿಯನ್ನು ಸಿದ್ದರಾಮಯ್ಯ ಈ ಸಾಲಿನ ಬಜೆಟ್‌ನಲ್ಲಿ ನೀಡಿದ್ದಾರೆ. ಇಷ್ಟು ಮೊತ್ತ ಸಂಗ್ರಹವಾಗಬೇಕಾದರೆ ಅಬಕಾರಿ ಇಲಾಖೆ ಮದ್ಯ ಮಾರಾಟವನ್ನು ಹೆಚ್ಚು ಮಾಡಬೇಕು ಮತ್ತು ಜೊತೆಗೆ ಮದ್ಯದ ಬೆಲೆಯನ್ನು ಹೆಚ್ಚಿಸಬೇಕು. ಹೀಗಾಗಿ ರಾಜ್ಯದಲ್ಲಿ ಮದ್ಯ ಮತ್ತೆ ದುಬಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ಅಬಕಾರಿ ತೆರಿಗೆಯಿಂದ ಒಟ್ಟು 36,500 ಕೋಟಿ ರೂ.ಗಳ ರಾಜಸ್ವ ನಿರೀಕ್ಷಿಸಲಾಗಿದೆ. ಅದರಂತೆ 2025-26ನೇ ಸಾಲಿಗೆ

ಅಬಕಾರಿ ಇಲಾಖೆಗೆ 40 ಸಾವಿರ ಕೋ.ರೂ ರಾಜಸ್ವ ಸಂಗ್ರಹ ಗುರಿ Read More »

ಪುತ್ತೂರಿನಲ್ಲಿ ಮೆಡಿಕಲ್‌ ಕಾಲೇಜು ಸ್ಥಾಪಿಸುವ ಉದ್ದೇಶ

ಸದ್ಯಕ್ಕೆ ತಾಲೂಕು ಆಸ್ಪತ್ರೆಯ ಉನ್ನತೀಕರಣ ಮಾತ್ರ ಬೆಂಗಳೂರು: ಪುತ್ತೂರಿನಲ್ಲಿ ಹೊಸ ಮೆಡಿಕಲ್‌ ಕಾಲೇಜು ಸ್ಥಾಪಿಸುವ ಉದ್ದೇಶ ಇದೆ ಎಂದು ಬಜೆಟ್‌ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಈ ಸಾಲಿನ ಬಜೆಟ್‌ನಲ್ಲಿ ಹೊಸ ಮೆಡಿಕಲ್‌ ಕಾಲೇಜು ಘೋಷಿಸಿಲ್ಲ. ಮೆಡಿಕಲ್‌ ಕಾಲೇಜು ಘೋಷಣೆಗೆ ಪೂರಕವಾಗಿ ಪುತ್ತೂರಿನಲ್ಲಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲಾಗುವುದು ಎಂದು ಘೋಷಿಸಿದ್ದಾರೆ.ಕಳೆದ ಕೆಲವು ದಿನಗಳಿಂದ ಈ ಸಲ ಪುತ್ತೂರಿಗೆ ಮೆಡಿಕಲ್‌ ಕಾಲೇಜು ಘೋಷಣೆಯಾಗುವುದು ಖಚಿತ ಎಂಬ ವದಂತಿ ದಟ್ಟವಾಗಿ ಹರಡಿತ್ತು. ಇದಕ್ಕೆ

ಪುತ್ತೂರಿನಲ್ಲಿ ಮೆಡಿಕಲ್‌ ಕಾಲೇಜು ಸ್ಥಾಪಿಸುವ ಉದ್ದೇಶ Read More »

ಬಜೆಟ್‌ ಹೈಲೈಟ್ಸ್‌ : ಮಲ್ಪೆಯಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌; ಮತ್ಸ್ಯದರ್ಶಿನಿ, ಸುಸ್ಥಿರ ಮೀನುಗಾರಿಕೆಗೆ ಪ್ರೋತ್ಸಾಹ

ಕರಾವಳಿಗೆ ಸಿದ್ದರಾಮಯ್ಯ ಕೊಡುಗೆಗಳು ಬೆಂಗಳೂರು: ಉಡುಪಿ ಮಲ್ಪೆಯಲ್ಲಿ ಮಲ್ಟಿ ಲೆವೆಲ್ ಪಾರ್ಕಿಂಗ್, ಮೈಸೂರಿನಲ್ಲಿ ಹೈಟೆಕ್ ಮತ್ಸ್ಯದರ್ಶಿನಿ, ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ, ಹೊಸ ಇಂಜಿನ್‌ ಖರೀದಿಸಲು ಶೇ.50 ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ…ಇವು ಕರಾವಳಿಗೆ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕೊಟ್ಟಿರುವ ಕೊಡುಗೆಗಳು.ಮಲ್ಟಿ-ಲೆವೆಲ್‌ ಪಾರ್ಕಿಂಗ್‌ ವ್ಯವಸ್ಥೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು.

ಬಜೆಟ್‌ ಹೈಲೈಟ್ಸ್‌ : ಮಲ್ಪೆಯಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌; ಮತ್ಸ್ಯದರ್ಶಿನಿ, ಸುಸ್ಥಿರ ಮೀನುಗಾರಿಕೆಗೆ ಪ್ರೋತ್ಸಾಹ Read More »

ಬಜೆಟ್‌ ಹೈಲೈಟ್ಸ್‌ : ಮಕ್ಕಳಿಗೆ ಇಂಗ್ಲಿಷ್‌ ಕಲಿಸಲು ದ್ವಿಭಾಷೆ ಪರಿಚಯ

ರಾಗಿ ಆರೋಗ್ಯ ಮಿಶ್ರಣ ಇನ್ನು ಮುಂದೆ ವಾರಕ್ಕೆ 5 ದಿನ ಬೆಂಗಳೂರು: ಕಲಿತು ಹೊರಗೆ ಉದ್ಯೋಗಕ್ಕೆ ಹೋಗುವ ಸಂದರ್ಭದಲ್ಲಿ ಇಂಗ್ಲಿಷ್ ಸಂವಹನದ ಅಗತ್ಯ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಶಾಲಾ ಮಟ್ಟದಿಂದಲೇ ಮಕ್ಕಳಲ್ಲಿ ಇಂಗ್ಲಿಷ್ ಕಲಿಕೆಯ ಪರಿಚಯವಾಗಲು 4 ಸಾವಿರ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷೆ ಪರಿಚಯಿಸಲಾಗುತ್ತದೆ. ವಿದ್ಯಾರ್ಥಿಗಳು ಇಂಗ್ಲಿಷ್ ಮತ್ತು ಅವರ ಮಾತೃಭಾಷೆ ಎರಡರಲ್ಲೂ ನಿರರ್ಗಳತೆಯಿಂದ ಮಾತನಾಡಲು ಸಹಾಯ ಮಾಡುವುದು ಇದರ ಉದ್ದೇಶವಾಗಿದೆ ಎಂದು ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಪ್ರಸ್ತುತ ಶಾಲಾ ಮಕ್ಕಳಿಗೆ ವಾರಕ್ಕೆ 3 ದಿನ ನೀಡಲಾಗುತ್ತಿದ್ದ

ಬಜೆಟ್‌ ಹೈಲೈಟ್ಸ್‌ : ಮಕ್ಕಳಿಗೆ ಇಂಗ್ಲಿಷ್‌ ಕಲಿಸಲು ದ್ವಿಭಾಷೆ ಪರಿಚಯ Read More »

ನಕ್ಸಲ್‌ ನಿಗ್ರಹ ಪಡೆ ವಿಸರ್ಜನೆ : ಸಿದ್ದರಾಮಯ್ಯ ಘೋಷಣೆ

ನಕ್ಸಲ್‌ ಬಾಧಿತ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ 10 ಕೋ.ರೂ. ಬೆಂಗಳೂರು: ರಾಜ್ಯ ನಕ್ಸಲ್ ಮುಕ್ತವಾಗಿರುವುದರಿಂದ ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ದಾಖಲೆಯ 16ನೇ ಬಜೆಟ್ ಮಂಡಿಸಿದ ಸಿಎಂ, ನಮ್ಮ ಸರ್ಕಾರದ ಅವಧಿಯಲ್ಲಿ 6 ಜನ ಭೂಗತ ನಕ್ಸಲರು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿಯ ಮುಂದೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ದಳ ವಿಸರ್ಜನೆ ಮಾಡುವುದಾಗಿ ಹೇಳಿದ್ದಾರೆ. ಕಳೆದ ಫೆ.7ರಂದು ನ್ಯೂಸ್‌ ಕಾರ್ಕಳ ವೆಬ್‌ಸೈಟ್‌ ರಾಜ್ಯ ನಕ್ಸಲ್‌ ಮುಕ್ತ-ಎಎನ್‌ಎಫ್‌

ನಕ್ಸಲ್‌ ನಿಗ್ರಹ ಪಡೆ ವಿಸರ್ಜನೆ : ಸಿದ್ದರಾಮಯ್ಯ ಘೋಷಣೆ Read More »

ಬಜೆಟ್‌: ಬಿಸಿಯೂಟ ಕಾರ್ಯಕರ್ತೆಯರು, ಅತಿಥಿ ಉಪನ್ಯಾಸಕರಿಗೆ ಸಿಹಿ ನೀಡಿದ ಸಿದ್ದರಾಮಯ್ಯ

ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 10 ಕೋಟಿ, ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ದಾಖಲೆಯ 16ನೇ ಬಜೆಟ್‌ ಮಂಡಿಸುತ್ತಿದ್ದು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ್ದು, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನೂ 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ. ಇದೇ ವೇಳೆ ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500

ಬಜೆಟ್‌: ಬಿಸಿಯೂಟ ಕಾರ್ಯಕರ್ತೆಯರು, ಅತಿಥಿ ಉಪನ್ಯಾಸಕರಿಗೆ ಸಿಹಿ ನೀಡಿದ ಸಿದ್ದರಾಮಯ್ಯ Read More »

ಬಜೆಟ್‌ ಮಂಡನೆಗೆ ಕ್ಷಣಗಣನೆ : ಕರಾವಳಿ ಜನರಲ್ಲಿದೆ ಬೆಟ್ಟದಷ್ಟು ನಿರೀಕ್ಷೆ

ಸಿದ್ದರಾಮಯ್ಯನವರ ದಾಖಲೆಯ 16ನೇ ಮುಂಗಡಪತ್ರ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಲಿರುವ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದೆ. 2025ನೇ ಸಾಲಿನ ಕರ್ನಾಟಕ ಬಜೆಟ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಸಿದ್ದರಾಮಯ್ಯನವರು ಬೆಳಗ್ಗೆ 9.30ಕ್ಕೆ ಸಚಿವ ಸಂಪುಟ ನಡೆಸಲಿದ್ದು, ಸಭೆಯಲ್ಲಿ ಬಜೆಟ್​ಗೆ ಅನುಮೋದನೆ ಪಡೆದುಕೊಳ್ಳಲಿದ್ದಾರೆ. ಬಳಿಕ ಬೆಳಗ್ಗೆ 10.30ಗೆ ಬಜೆಟ್​ ಮಂಡನೆ ಮಾಡಲಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ತಮ್ಮ ದಾಖಲೆಯನ್ನೇ ಮುರಿದು 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಮಂಡಿನೋವಿನ ಕಾರಣದಿಂದ ನಿಂತು ಬಜೆಟ್ ಮಂಡಿಸುವ ಬದಲು ಕುಳಿತು

ಬಜೆಟ್‌ ಮಂಡನೆಗೆ ಕ್ಷಣಗಣನೆ : ಕರಾವಳಿ ಜನರಲ್ಲಿದೆ ಬೆಟ್ಟದಷ್ಟು ನಿರೀಕ್ಷೆ Read More »

error: Content is protected !!
Scroll to Top