ರಾಜ್ಯ

ರಾಜ್ಯದ ದೇವಸ್ಥಾನಗಳ ಅಭಿವೃದ್ಧಿ, ದೇವಾಲಯದ ಆಧಾರಿತ ಪ್ರವಾಸೋದ್ಯಮದ ಮಹತ್ವದ ಕುರಿತು ಸದನದಲ್ಲಿ ಗಮನ ಸೆಳೆದ ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಅವರು ರಾಜ್ಯದ ದೇವಸ್ಥಾನಗಳ ಅಭಿವೃದ್ಧಿ ಮತ್ತು ದೇವಾಲಯ ಆಧಾರಿತ ಪ್ರವಾಸೋದ್ಯಮದ ಮಹತ್ವದ ಬಗ್ಗೆ ಸರ್ಕಾರದ ಗಮನ ಸೆಳೆದರು. ಕೇಂದ್ರ ಸರ್ಕಾರದ ಪ್ರಸಾದ ಯೋಜನೆಗಾಗಿ ಕರ್ನಾಟಕ ಸರ್ಕಾರ 16 ಪ್ರಸ್ತಾವನೆಗಳನ್ನು ಕಳಿಸಿದ್ದರೂ, ಕೇವಲ 2 ಪ್ರಸ್ತಾಪಗಳು ಮಾತ್ರ ಅನುಮೋದನೆಯಾಗಿವೆ. ಉಳಿದ 14 ಪ್ರಸ್ತಾಪಗಳ ಬಗ್ಗೆ ರಾಜ್ಯ ಸರ್ಕಾರವು ಸ್ಪಷ್ಟವಾಗಿ ಉತ್ತರಿಸಬೇಕೆಂದು ಅವರು ಆಗ್ರಹಿಸಿದರು. ಉತ್ತರ ಪ್ರದೇಶದಲ್ಲಿ ನಡೆದ ಕುಂಭಮೇಳದ ಆಯೋಜನೆಗೆ ಕೇವಲ 16 ಕೋಟಿ ವೆಚ್ಚ ಮಾಡಿ, […]

ರಾಜ್ಯದ ದೇವಸ್ಥಾನಗಳ ಅಭಿವೃದ್ಧಿ, ದೇವಾಲಯದ ಆಧಾರಿತ ಪ್ರವಾಸೋದ್ಯಮದ ಮಹತ್ವದ ಕುರಿತು ಸದನದಲ್ಲಿ ಗಮನ ಸೆಳೆದ ಕಿಶೋರ್ ಕುಮಾರ್ ಪುತ್ತೂರು Read More »

ಪಿಯುಸಿ ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕೈ ಕಾರ್ಯಕರ್ತೆ ಸೆರೆ

ಖರ್ಗೆ ಕುಟುಂಬದ ಒಡೆತನದ ಕಾಲೇಜಿನಲ್ಲಿ ನಡೆದ ಅಕ್ರಮ ಬೆಂಗಳೂರು: ಕಲಬುರಗಿ ಜಿಲ್ಲೆಯ ಖರ್ಗೆ ಕುಟುಂಬದ ಒಡೆತನದ ಮಿಲಿಂದ್ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿನಿಯ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆಯನ್ನು ಬಂಧಿಸಲಾಗಿದೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಮಾ.5ರಂದು ರಾಜ್ಯಶಾಸ್ತ್ರ ಪರೀಕ್ಷೆ ವೇಳೆ ಕಲಬುರಗಿ ನಗರದ ಮಿಲಿಂದ್ ಕಾಲೇಜ್‌ನಲ್ಲಿ ಅಕ್ರಮ ನಡೆದಿದೆ. ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಎಂಬಾಕೆ ಪರೀಕ್ಷೆ ಬರೆದಿದ್ದಾಳೆ. ದಲಿತ ಸೇನೆ ಕಾರ್ಯಕರ್ತರು ಕಾಲೇಜಿಗೆ

ಪಿಯುಸಿ ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕೈ ಕಾರ್ಯಕರ್ತೆ ಸೆರೆ Read More »

ಎರಡು ವರ್ಷದಲ್ಲಿ 40 ಬಾರಿ ದುಬೈ ಪ್ರಯಾಣ ಕೈಗೊಂಡಿದ್ದ ನಟಿ ರನ್ಯಾ

ಕನ್ನಡದ ನಟಿಯ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ಬಗೆದಷ್ಟೂ ಆಳ ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಪ್ರಕರಣ ಅಗೆದಷ್ಟು ಬಯಲಾಗುತ್ತಲೇ ಇದೆ. ಈ ನಟಿ ಒಂದೆರಡು ಬಾರಿ ಅಲ್ಲ ಬರೋಬ್ಬರಿ 40 ಬಾರಿ ದುಬೈಗೆ ಹೋಗಿ ಬಂದಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಬಂಧನವಾಗುವ 2 ವಾರಗಳ ಹಿಂದೆ ರನ್ಯಾ ದುಬೈಗೆ ಹೋಗಿ ಬಂದಿದ್ದಳು. ಆಗ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಕಸ್ಟಮ್ ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡು ನಾನು ಡಿಜಿಪಿ ಮಗಳು

ಎರಡು ವರ್ಷದಲ್ಲಿ 40 ಬಾರಿ ದುಬೈ ಪ್ರಯಾಣ ಕೈಗೊಂಡಿದ್ದ ನಟಿ ರನ್ಯಾ Read More »

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ : ಹಲವೆಡೆ ದಾಳಿ

ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್‌ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಜಿಆರ್‌ಪಿಎ ಚೀಫ್‌ ಎಂಜಿನಿಯರ್ ನಂಜುಂಡಪ್ಪ ಮತ್ತು ಬಿಬಿಎಂಪಿ ಎಕ್ಸಿಕ್ಯೂಟಿವ್ ಎಂಜಿನಿಯರ್‌‌ ಎಚ್‌.ಪಿ ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆದಿದೆ. ಕೋಲಾರದಲ್ಲಿ ಬೆಸ್ಕಾಂ ಎಇಇ ಜಿ.ನಾಗರಾಜ್ ಮನೆ ಹಾಗೂ ಅವರಿಗೆ ಸೇರಿದ ಮೂರು ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇವರು ಈಗ ಬೆಂಗಳೂರಿನ ರಾಜಾಜಿನಗರದಲ್ಲಿ ಎಇಇ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಸಂಬಂಧಿಕರೊಬ್ಬರ ಮನೆ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ : ಹಲವೆಡೆ ದಾಳಿ Read More »

ವಿಷಾಹಾರದಿಂದ ನರಳಿದ ಮಂಗಳೂರು ಜೈಲಿನ 45 ಕೈದಿಗಳು

ವಾಂತಿಭೇದಿಯಿಂದ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಕೈದಿಗಳು ಮಂಗಳೂರು : ಮಂಗಳೂರು ಜೈಲಿನಲ್ಲಿ ನಿನ್ನೆ ವಿಷಾಹಾರ ಸೇವನೆಯಿಂದ ಸುಮಾರು 45 ಕೈದಿಗಳು ಅಸ್ವಸ್ಥರಾಗಿದ್ದು, ಈ ಪೈಕಿ ಓರ್ವ ಕೈದಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜೈಲಿನಲ್ಲಿ ನೀಡಿದ ಆಹಾರದಿಂದಾಗಿ ಫುಡ್ ಪಾಯಿಸನ್ ಆಗಿ ಹೊಟ್ಟೆನೋವಿನಿಂದ 45 ಕೈದಿಗಳು ನರಳಾಡಿದ್ದಾರೆ. ಏಕಾಏಕಿ ವಾಂತಿ ಮಾಡುತ್ತಾ ಹೊಟ್ಟೆನೋವಿನಿಂದ ಕೈದಿಗಳು ನರಳಾಡಿದ್ದಾರೆ. ಬಳಿಕ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಕೈದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಅಸ್ವಸ್ಥ ಕೈದಿಗಳನ್ನ ಇತರ ಕೈದಿಗಳು ತಾವೇ ಹೊತ್ತುತಂದಿದ್ದಾರೆ. ಈ ವೇಳೆ ನಾವು ಆಸ್ಪತ್ರೆಗೆ

ವಿಷಾಹಾರದಿಂದ ನರಳಿದ ಮಂಗಳೂರು ಜೈಲಿನ 45 ಕೈದಿಗಳು Read More »

ನವ ವಿವಾಹಿತ ಹೃದಯಘಾತದಿಂದ ಮೃತ್ಯು

ಮಂಡ್ಯ: ನವವಿವಾಹಿತ ಹೃದಯಘಾತದಿಂದ ಮೃತಪಟ್ಟ ಘಟನೆಯೊಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಮೂರು ದಿನದ ಹಿಂದೆ ಮದುವೆಯಾದ ಶಶಾಂಕ್ (28 ವ.) ಹೃದಯಘಾತಕ್ಕೆ ಬಲಿಯಾದ ಯುವಕ.

ನವ ವಿವಾಹಿತ ಹೃದಯಘಾತದಿಂದ ಮೃತ್ಯು Read More »

15 ದಿನದಲ್ಲಿ ನಾಲ್ಕು ಸಲ ಗಲ್ಫ್‌ಗೆ ಹೋಗಿ ಬಂದಿದ್ದ ನಟಿ ರನ್ಯಾ

ಗೋಲ್ಡ್‌ ಸ್ಮಗ್ಲಿಂಗ್‌ ಗ್ಯಾಂಗಿಗಾಗಿ ಕೆಲಸ ಮಾಡುತ್ತಿರುವ ಅನುಮಾನ ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಾಟ ಮಾಡಿದ ಕೇಸ್‌ನಲ್ಲಿ ಸೆರೆಯಾಗಿರುವ ಕನ್ನಡದ ನಟಿ ರನ್ಯಾ ರಾವ್‌ ಹಿಂದೆ ಗೋಲ್ಡ್‌ ಸ್ಮಗ್ಲಿಂಗ್‌ನ ವ್ಯವಸ್ಥಿತ ಜಾಲವೊಂದು ಇರುವ ಬಗ್ಗೆ ಡಿಆರ್‌ಐ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ನಟಿ ಕಳೆದ 15 ದಿನಗಳಲ್ಲಿ ನಾಲ್ಕು ಬಾರಿ ಗಲ್ಫ್ ದೇಶಕ್ಕೆ ಹೋಗಿ ಬಂದಿದ್ದಳಂತೆ. ವಿಮಾನ ನಿಲ್ದಾಣದಲ್ಲಿ ಹಿರಿಯ ಅಧಿಕಾರಿಗಳು ಬಳಸುವ ಅಫಿಷಿಯಲ್ ಪ್ರೊಟೊಕಾಲ್ ಸರ್ವೀಸ್ ಬಳಸಿ ಸೆಕ್ಯುರಿಟಿ ಚೆಕ್‌ನಿಂದ ತಪ್ಪಿಸಿಕೊಳ್ಳುತ್ತಿದ್ದಳು. ಪ್ರತಿಬಾರಿ ಚಿನ್ನ ಕಳ್ಳಸಾಗಾಟಕ್ಕೆ

15 ದಿನದಲ್ಲಿ ನಾಲ್ಕು ಸಲ ಗಲ್ಫ್‌ಗೆ ಹೋಗಿ ಬಂದಿದ್ದ ನಟಿ ರನ್ಯಾ Read More »

ಇಡ್ಲಿಯ ಜನಪ್ರಿಯತೆಗೆ ಕುತ್ತು ತಂದ ಕ್ಯಾನ್ಸರ್‌ಕಾರಕ ಅಂಶ

ಹೋಟೆಲ್‌ಗಳಲ್ಲಿ ಇಡ್ಲಿಗೆ ಬೇಡಿಕೆ ಕುಸಿತ; ದೋಸೆಯತ್ತ ವಾಲಿದ ಗ್ರಾಹಕರು ಬೆಂಗಳೂರು : ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್‌ ಶೀಟ್‌ ಬಳಸಿ ಇಡ್ಲಿ ತಯಾರಿಸುವ ವಿಚಾರ ಬಯಲಾದ ಬೆನ್ನಿಗೆ ಜನರು ಇಡ್ಲಿ ತಿನ್ನಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಕೆಲವು ಹೋಟೆಲ್‌ಗಳ ಇಡ್ಲಿಯಲ್ಲಿ ಕ್ಯಾನ್ಸರ್​ಕಾರಕ ರಾಸಾಯನಿಕ ಅಂಶ ಪತ್ತೆಯಾದ ಬೆನ್ನಲ್ಲೇ ಇಡ್ಲಿಗೆ ಬೇಡಿಕೆ ಕುಸಿತ ಕಂಡುಬಂದಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಇಡ್ಲಿ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿತ್ತು. ಇದಾದ ಕೆಲವೇ ದಿನಗಳಲ್ಲಿ ಬೆಂಗಳೂರಿನ ದರ್ಶಿನಿಗಳಲ್ಲಿ ಮತ್ತು ಹೋಟೆಲ್‌ಗಳಲ್ಲಿ ಜನರ

ಇಡ್ಲಿಯ ಜನಪ್ರಿಯತೆಗೆ ಕುತ್ತು ತಂದ ಕ್ಯಾನ್ಸರ್‌ಕಾರಕ ಅಂಶ Read More »

ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ : ಅಶೋಕ್‌ ಕುಮಾರ್‌ ರೈ ಒತ್ತಾಯ

ಹಣಕಾಸಿನ ನೆರವು ಒದಗಿಸುವುದಿಲ್ಲ ಎಂದು ಉತ್ತರಿಸಿದ ಸರಕಾರ ಬೆಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವಿಸ್ತರಿಸಬೇಕೆಂದು ಶಾಸಕ ಅಶೋಕ್‌ ಕುಮಾರ್‌ ರೈ ಅಧಿವೇಶನದಲ್ಲಿ ಒತ್ತಾಯಿಸಿದ್ದಾರೆ. ಇದಕ್ಕೆ ಉತ್ತರಿಸಿದ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್‌, ವಿಸ್ತರಣೆ ವೆಚ್ಚವನ್ನು ರಾಜ್ಯ ಸರಕಾರ ಭರಿಸಲಾಗುವುದಿಲ್ಲ ಎಂಬ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಶಾಸಕ ಅಶೋಕ್‌ ಕುಮಾರ್‌ ರೈ ಅವರ ಗಮನ ಸೆಳೆಯುವ ಸೂಚನೆಗೆ ಸಚಿವ ಎಂಬಿ. ಪಾಟೀಲ್ ಉತ್ತರ ನೀಡಿದರು. ಕೇಂದ್ರ ನಾಗರಿಕ ವಿಮಾನ ಯಾನ ಇಲಾಖೆ ಮಂಗಳೂರು ವಿಮಾನ ನಿಲ್ದಾಣದ

ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ : ಅಶೋಕ್‌ ಕುಮಾರ್‌ ರೈ ಒತ್ತಾಯ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ನಟಿಯ ಮನೆಯಲ್ಲಿ ಸಿಕ್ಕಿತು ಕೋಟಿಗಟ್ಟಲೆ ಮೌಲ್ಯದ ಚಿನ್ನ, ನಗದು

ತಿಂಗಳಿಗೆ 4.5 ಲ.ರೂ. ಬಾಡಿಗೆಯ ಐಷರಾಮಿ ಫ್ಲ್ಯಾಟ್‌ನಲ್ಲಿ ವಾಸವಾಗಿರುವ ರನ್ಯಾ ರಾವ್‌ ಬೆಂಗಳೂರು: ದುಬೈಯಿಂದ ಸುಮಾರು 15 ಕೆಜಿ ಚಿನ್ನ ಅಕ್ರಮವಾಗಿ ತಂದು ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ಕನ್ನಡದ ನಟಿ ರನ್ಯಾ ರಾವ್‌ ಫ್ಲ್ಯಾಟ್‌ನಲ್ಲೂ ಕೋಟಿಗಟ್ಟಲೆ ಮೌಲ್ಯದ ಚಿನ್ನ ಮತ್ತು ನಗದು ಸಿಕ್ಕಿದೆ. ನಟಿ ರನ್ಯಾ ರಾವ್‌ ಬಹಳ ಕಾಲದಿಂದ ಚಿನ್ನ ಸ್ಮಗ್ಲಿಂಗ್‌ಗನ್ನಲಿ ಭಾಗಿಯಾಗಿದ್ದಾಳೆ ಎನ್ನುವ ಅನುಮಾನ ಮೂಡಿದೆ. ನಿನ್ನೆ ರಾತ್ರಿ ಡಿಆರ್‌ಐ ಅಧಿಕಾರಿಗಳು ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯಲ್ಲಿರುವ ನಟಿಯ ಫ್ಲ್ಯಾಟ್‌ಗೆ ದಾಳಿ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ನಟಿಯ ಮನೆಯಲ್ಲಿ ಸಿಕ್ಕಿತು ಕೋಟಿಗಟ್ಟಲೆ ಮೌಲ್ಯದ ಚಿನ್ನ, ನಗದು Read More »

error: Content is protected !!
Scroll to Top