ರಾಜ್ಯ

ಕಾಲ್ತುಳಿತ ಘಟನೆ : ಆರೋಪಿಯನ್ನು ಬಿಟ್ಟು ಕಳುಹಿಸಲು ಹೇಳಿ ಹುದ್ದೆ ಕಳೆದುಕೊಂಡ ಗೋವಿಂದರಾಜ್‌

ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕಿತ್ತು ಹಾಕಿದ ಸಿದ್ದರಾಮಯ್ಯ ಬೆಂಗಳೂರು: ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಆರ್‌ಸಿಬಿಯ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆಯ ಬಂಧನ ಆಗುತ್ತಿದ್ದಂತೆ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿದ್ದ ಗೋವಿಂದರಾಜ್‌ ಅವರನ್ನು ಬಿಟ್ಟು ಕಳಿಸುವಂತೆ ಪೊಲೀಸರಿಗೆ ಒತ್ತಡ ಹಾಕಿದ್ದರು ಎಂಬ ವಿಚಾರ ತಿಳಿದು ಬಂದಿದೆ. ಇದೇ ಕಾರಣಕ್ಕೆ ಗೋವಿಂದರಾಜ್‌ ಅವರನ್ನು ತಮ್ಮ‌ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಸಿದ್ದರಾಮಯ್ಯ ತೆಗೆದು ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುರುವಾರ ಬೆಳಗ್ಗಿನ ಜಾವ ಆರ್‌ಸಿಬಿಯ ನಿಖಿಲ್‌ ಸೋಸಲೆ ಬಂಧನ […]

ಕಾಲ್ತುಳಿತ ಘಟನೆ : ಆರೋಪಿಯನ್ನು ಬಿಟ್ಟು ಕಳುಹಿಸಲು ಹೇಳಿ ಹುದ್ದೆ ಕಳೆದುಕೊಂಡ ಗೋವಿಂದರಾಜ್‌ Read More »

ಆರ್‍ ಸಿಬಿ ಸಂಭ್ರಮಾಚರಣೆ ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ | ರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕರ ಕೊಠಡಿ ಸಂಖ್ಯೆ 160ರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಅವರು ಮಾತನಾಡಿ, ಎಫ್‍ಐಆರ್‍ ನಲ್ಲಿ ಕೆಎಸ್‍ಸಿಎ, ಆರ್.ಸಿ.ಬಿ, ಮತ್ತು ಏಜೆನ್ಸಿಯಾದ ಡಿ.ಎನ್.ಎಯನ್ನು ಆರೋಪಿಗಳಾಗಿ ಹೆಸರಿಸಿದ್ದಾರೆ. ಸ್ವತಃ ಮುಖ್ಯಮಂತ್ರಗಳೇ ಆರೋಪಿ ನಂಬರ್ 1, ಉಪ ಮುಖ್ಯಮಂತ್ರಿಗಳು

ಆರ್‍ ಸಿಬಿ ಸಂಭ್ರಮಾಚರಣೆ ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ | ರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ Read More »

ಸಂಭ್ರಮಾಚರಣೆಗೆ ಕರೆ ಕೊಟ್ಟದ್ದೇ ಸರ್ಕಾರ : ಕೋರ್ಟ್‌ಗೆ ಕೆಎಸ್‌ಸಿಎ ಮಾಹಿತಿ

ಜನರ ಆಕ್ರೋಶದ ಹಿನ್ನೆಲೆಯಲ್ಲಿ ತನ್ನ ಮೇಲೆ ಆರೋಪ ಎಂದು ದೂರು ಬೆಂಗಳೂರು : ಆರ್​ಸಿಬಿ ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆಯನ್ನು ವಿಧಾನಸೌಧದ ಎದುರು ನಡೆಸುವಂತೆ ಕರೆ ಕೊಟ್ಟಿದ್ದೇ ಸರ್ಕಾರ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಆರೋಪಿಸಿ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರು ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ಸ್ ವೇದಿಕೆಯಲ್ಲಿ ಆಟಗಾರರನ್ನು ಸನ್ಮಾನಿಸಿದ್ದಾರೆ. ಸರ್ಕಾರ, ಸಚಿವರ ಮೇಲಿನ ಜನರ ಆಕ್ರೋಶದ ಹಾದಿ ತಪ್ಪಿಸಲು ಎಫ್​ಐಆರ್ ದಾಖಲಿಸಲಾಗಿದೆ ಎಂದು

ಸಂಭ್ರಮಾಚರಣೆಗೆ ಕರೆ ಕೊಟ್ಟದ್ದೇ ಸರ್ಕಾರ : ಕೋರ್ಟ್‌ಗೆ ಕೆಎಸ್‌ಸಿಎ ಮಾಹಿತಿ Read More »

ಕಾಲ್ತುಳಿತ : ಪ್ರಮುಖ ಆರೋಪಿಗಳು ಪರಾರಿಯಾಗಲು ಸರ್ಕಾರವೇ ಕಾರಣ?

ಸಿಎಂ ನೀಡಿದ ಸುಳಿವಿನಿಂದಲೇ ಆರೋಪಿಗಳು ರಾತ್ರೋರಾತ್ರಿ ತಪ್ಪಿಸಿಕೊಂಡಿದ್ದಾರೆ ಎಂಬ ಆರೋಪ ಬೆಂಗಳೂರು: ಆರ್‌ಸಿಬಿ ಐಪಿಎಲ್‌ ಗೆದ್ದಾಗ ಸನ್ಮಾನ ಏರ್ಪಡಿಸಿ ಪ್ರಚಾರ ಪಡೆಯಲು ಯತ್ನಿಸಿದ ರಾಜ್ಯ ಸರ್ಕಾರ ಎಡವಟ್ಟಿನ ಮೇಲೆ ಎಡವಟ್ಟು ಮಾಡಿಕೊಳ್ಳುತ್ತಿದೆ. ಕಾಲ್ತುಳಿತ ಘಟನೆಯ ಪ್ರಮುಖ ಆರೋಪಿಗಳೆಲ್ಲ ಪರಾರಿಯಾಗಿದ್ದು, ಇವರು ತಪ್ಪಿಸಿಕೊಳ್ಳಲು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕಾರಣ ಎಂಬ ಆರೋಪ ಈಗ ಕೇಳಿಬಂದಿದೆ. ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ನೀಡಿದ ಸುಳಿವಿನಿಂದ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದ ಪ್ರಮುಖ ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಕರ್ನಾಟಕ

ಕಾಲ್ತುಳಿತ : ಪ್ರಮುಖ ಆರೋಪಿಗಳು ಪರಾರಿಯಾಗಲು ಸರ್ಕಾರವೇ ಕಾರಣ? Read More »

ಕಾಲ್ತುಳಿತ ಪ್ರಕರಣ : ಕೆಎಸ್‌ಸಿಎ ಪ್ರತಿನಿಧಿ ಸೇರಿ ನಾಲ್ವರ ಬಂಧನ

ಕೆಎಸ್‌ಸಿಎ ಪ್ರಮುಖರೆಲ್ಲಾ ರಾತ್ರೋರಾತ್ರಿ ಎಸ್ಕೇಪ್‌? ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ. ಆದರೆ ಕೆಲವು ಪ್ರಮುಖ ಆರೋಪಿಗಳು ಪಲಾಯನ ಮಾಡಿದ್ದಾರೆ ಎನ್ನಲಾಗಿದೆ. ಡಿಎನ್‌ಎ ಇವೆಂಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ಮೂವರು ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ನ ಒಬ್ಬರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್‌ನ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ವಿನೋದ್, ಕೆಎಸ್‌ಸಿಎ ಪ್ರತಿನಿಧಿ ಹೆಸರು ಬಹಿರಂಗಪಡಿಸಿಲ್ಲ. ಕೆಎಸ್‌ಸಿಎ

ಕಾಲ್ತುಳಿತ ಪ್ರಕರಣ : ಕೆಎಸ್‌ಸಿಎ ಪ್ರತಿನಿಧಿ ಸೇರಿ ನಾಲ್ವರ ಬಂಧನ Read More »

ಬೆಂಗಳೂರು ಪೊಲೀಸ್‌ ಆಯುಕ್ತರ ತಲೆದಂಡಕ್ಕೆ ಸಾರ್ವಜನಿಕರಿಂದ ಆಕ್ಷೇಪ

ಅಮಾನತಿಗೆ ಕಾರಣ ಕೊಟ್ಟ ಸರ್ಕಾರ ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಬಲಿಯಾಗಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆಗೆ ಬೆಂಗಳೂರು ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸಹಿತ ಕೆಲವು ಪೊಲೀಸ್‌ ಅಧಿಕಾರಿಗಳನ್ನು ಹೊಣೆ ಮಾಡಿರುವ ಸರ್ಕಾರ ನಿನ್ನೆ ಅವರನ್ನು ಅಮಾನತಿನಲ್ಲಿಟ್ಟಿದೆ. ಆದರೆ ದಕ್ಷ ಅಧಿಕಾರಿ ಎಂದು ಗುರುತಿಸಿಕೊಂಡಿರುವ ಬಿ.ದಯಾನಂದ್‌ ಅವರ ತಲೆದಂಡಕ್ಕೆ ಸಾರ್ವಜನಿಕ ವಲಯದಿಂದ ಭಾರಿ ಆಕ್ಷೇಪ ವ್ಯಕ್ತವಾಗಿದೆ. ಸರ್ಕಾರ ತಾನು ಮಾಡಿದ ತಪ್ಪನ್ನು ಮುಚ್ಚಿಕೊಳ್ಳಲು ಪೊಲೀಸರ ತಲೆದಂಡ ಮಾಡಿದೆ. ಅದರಲ್ಲೂ ಕೆರಿಯರ್‌ನಲ್ಲಿ

ಬೆಂಗಳೂರು ಪೊಲೀಸ್‌ ಆಯುಕ್ತರ ತಲೆದಂಡಕ್ಕೆ ಸಾರ್ವಜನಿಕರಿಂದ ಆಕ್ಷೇಪ Read More »

ದಕ್ಷಿಣ ಕನ್ನಡದಲ್ಲಿ ಯಾರನ್ನೂ ಗುರಿ ಮಾಡಿಕೊಂಡಿಲ್ಲ : ಪರಮೇಶ್ವರ್‌ ಸ್ಪಷ್ಟನೆ

ವಾರದೊಳಗೆ ಕೋಮು ಹಿಂಸಾ ನಿಗ್ರಹ ಕಾರ್ಯಪಡೆ ಕಾರ್ಯಾರಂಭ ಬೆಂಗಳೂರು: ಕರಾವಳಿಯಲ್ಲಿ ನಾವು ಯಾರನ್ನೂ ಗುರಿ ಮಾಡುವುದಿಲ್ಲ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ. ನಾವು ಯಾರನ್ನೂ ಗುರಿ ಮಾಡುವುದಿಲ್ಲ. ನೀವು ಸಾರ್ವಜನಿಕವಾಗಿ ಕಾನೂನಿನ ಚೌಕಟ್ಟಿನಲ್ಲಿ ನಡೆದುಕೊಳ್ಳುವುದಾದರೆ ಭಯ ಏಕೆ? ಯಾರು ಕಾನೂನು ಬಿಟ್ಟು ಕೆಲಸ ಮಾಡುತ್ತಾರೆ ಅಂತವರಿಗೆ ಭಯ ಆಗಬೇಕು ಎಂದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಈಗಾಗಲೇ ತೀರ್ಮಾನ ಮಾಡಿದಂತೆ ಕೋಮು ಹಿಂಸಾ ನಿಗ್ರಹ ಕಾರ್ಯಪಡೆಯನ್ನು ಇನ್ನೊಂದು ವಾರದೊಳಗೆ ಮಾಡುತ್ತೇವೆ. ರಾಜ್ಯದಲ್ಲಿ

ದಕ್ಷಿಣ ಕನ್ನಡದಲ್ಲಿ ಯಾರನ್ನೂ ಗುರಿ ಮಾಡಿಕೊಂಡಿಲ್ಲ : ಪರಮೇಶ್ವರ್‌ ಸ್ಪಷ್ಟನೆ Read More »

ಕಾಲ್ತುಳಿತದಲ್ಲಿ ಕರಾವಳಿ ಮೂಲದ ಯುವತಿ ಮೃತ್ಯು

ಯುವ ಯಕ್ಷಗಾನ ಕಲಾವಿದೆ, ಬಾಸ್ಕೆಟ್‌ಬಾಲ್‌ ಕ್ರೀಡಾಪಟು ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಉಡುಪಿಯ ಹೆಬ್ರಿ ಮೂಲದ ಯುವತಿಯೊಬ್ಬರು ಸಾವಿಗೀಡಾಗಿದ್ದಾರೆ. ಯುವ ಯಕ್ಷಗಾನ ಕಲಾವಿದೆ, ಬಾಸ್ಕೆಟ್ ಬಾಲ್ ಕ್ರೀಡಾಪಟು ಚಿನ್ಮಯಿ ಶೆಟ್ಟಿ (19) ಮೃತಪಟ್ಟವರು. ಪ್ರಸ್ತುತ ಬೆಂಗಳೂರು ತಿಪ್ಪಸಂದ್ರ ನಿವಾಸಿಗಳಾದ ಹೆಬ್ರಿ ಕರುಣಾಕರ ಶೆಟ್ಟಿ ಮತ್ತು ಉಪ್ಪಿನಂಗಡಿ ಪೂಜಾ ಶೆಟ್ಟಿಯವರ ಪುತ್ರಿ ಕು.ಚಿನ್ಮಯಿ ಶೆಟ್ಟಿ. ಅವರು ಬೆಂಗಳೂರಿನ ಕನಕಪುರ ಮಾರ್ಗದ ಜ್ಯೋತಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡುತ್ತಿದ್ದರು. ‘ಯಕ್ಷತರಂಗ ಬೆಂಗಳೂರು’ನ ಯಕ್ಷಗಾನ

ಕಾಲ್ತುಳಿತದಲ್ಲಿ ಕರಾವಳಿ ಮೂಲದ ಯುವತಿ ಮೃತ್ಯು Read More »

11 ಮಂದಿಯ ಸಾವಿಗೆ ಯಾರು ಹೊಣೆ ? : ದಾಖಲಾಗದ ಎಫ್‌ಐಆರ್‌

ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆಗೆ ಮುಂದಾದ ಹೈಕೋರ್ಟ್‌ ಬೆಂಗಳೂರು : ಆರ್​ಸಿಬಿಯ ಐಪಿಎಲ್ ವಿಜಯೋತ್ಸವ ಆಚರಣೆ ಸಂದರ್ಭ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಬಗ್ಗೆ ಇನ್ನೂ ಒಂದೇ ಒಂದು ಎಫ್‌ಐಆರ್‌ ದಾಖಲಾಗದಿರುವುದು ನಾನಾ ರೀತಿಯ ಅನುಮಾನ ಹುಟ್ಟಲು ಕಾರಣವಾಗಿದೆ. ಇಡೀ ಘಟನೆಯನ್ನು ಯಾರದ್ದಾದರೂ ತಲೆಗೆ ಕಟ್ಟಿ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಸರ್ಕಾರ ಯತ್ನಿಸುತ್ತಿದೆ ಎಂಬ ದಟ್ಟ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಾಪಿಸಿದೆ. ಇಷ್ಟೊಂದು

11 ಮಂದಿಯ ಸಾವಿಗೆ ಯಾರು ಹೊಣೆ ? : ದಾಖಲಾಗದ ಎಫ್‌ಐಆರ್‌ Read More »

ಮಹಾಕುಂಭಮೇಳ, ಪುಷ್ಪ-2 ಪ್ರೀಮಿಯರ್‌ ಶೋ ಕಾಲ್ತುಳಿತ ಘಟನೆ ನೆನಪಿಸಿಕೊಂಡು ಸರ್ಕಾರಕ್ಕೆ ಚಾಟಿ

ಅಂದು ಮಾಡಿದ ಟೀಕೆಗಳನ್ನೇ ತಿರುಗುಬಾಣವಾಗಿ ಬಳಸಿ ಕಾಲೆಳೆಯುತ್ತಿರುವ ನೆಟ್ಟಿಗರು ಮಂಗಳೂರು: ಆರ್‌ಸಿಬಿ ತಂಡ ಚೊಚ್ಚಲ ಐಪಿಎಲ್‌ ಕಪ್‌ ಗೆದ್ದ ಸಂಭ್ರಮಾಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಿನ್ನೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಅಮಾಯಕರು ಸಾವನ್ನಪ್ಪಿದ ಘಟನೆಯ ಬಳಿಕ ಕುಂಭಮೇಳದ ಸಂದರ್ಭದಲ್ಲಿ ಪ್ರಯಾಗ್‌ರಾಜ್‌ನಲ್ಲಿ ಸಂಭವಿಸಿದ ಕಾಲ್ತುಳಿತ ಮತ್ತು ತೆಲುಗಿನ ಜನಪ್ರಿಯ ನಟ ಅಲ್ಲು ಅರ್ಜುನ್‌ ಅಭಿನಯದ ಪುಷ್ಪ-2 ಚಿತ್ರದ ಪ್ರೀಮಿಯರ್‌ ಶೋ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಗಳನ್ನು ಜನರು ನೆನಪಿಸಿಕೊಳ್ಳುತ್ತಿದ್ದಾರೆ. ವಿವಿಧ ಸೋಷಿಯಲ್‌ ಮೀಡಿಯಾದಲ್ಲಿ ನಿನ್ನೆಯಿಂದೀಚೆಗೆ ಜನರು ಈ ಎರಡು

ಮಹಾಕುಂಭಮೇಳ, ಪುಷ್ಪ-2 ಪ್ರೀಮಿಯರ್‌ ಶೋ ಕಾಲ್ತುಳಿತ ಘಟನೆ ನೆನಪಿಸಿಕೊಂಡು ಸರ್ಕಾರಕ್ಕೆ ಚಾಟಿ Read More »

error: Content is protected !!
Scroll to Top