ರಾಜ್ಯ

ಬಹು ನಿರೀಕ್ಷೆಯ ಕಾಂಗ್ರೆಸ್‌ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯಗೆ ವರುಣಾ ಕ್ಷೇತ್ರ

ಬೆಂಗಳೂರು : ಬಹು ಸಮಯದಿಂದ ನಿರೀಕ್ಷಿಸುತ್ತಿದ್ದ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬೆಳಗ್ಗೆ ದಿಢೀರ್‌ ಎಂದು ಬಿಡುಗಡೆ ಮಾಡಲಾಗಿದೆ. ಮೊದಲ ಪಟ್ಟಿಯಲ್ಲೇ ಸಿದ್ದರಾಮಯ್ಯ ಹೆಸರಿದ್ದು, ಅವರಿಗೆ ವರುಣಾ ಕ್ಷೇತ್ರವನ್ನು ನೀಡಲಾಗಿದೆ. ಇದರೊಂದಿಗೆ ಸಿದ್ದರಾಮಯ್ಯ ಅವರ ಕ್ಷೇತ್ರ ಗೊಂದಲ ಬಗೆಹರಿದಿದೆ. ವರುಣಾದಲ್ಲಿ ಪ್ರಸ್ತುತ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಶಾಸಕರಾಗಿದ್ದಾರೆ.ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರಿದ್ದು, ನಂಜನಗೂಡಿನಲ್ಲಿ ಧ್ರುವ ನಾರಾಯಣ್‌ ಅವರ ಪುತ್ರ ದರ್ಶನ್‌,ಕನಕಪುರದಿಂದ ಡಿ. ಕೆ. ಶಿವಕುಮಾರ್‌, ದೇವನಹಳ್ಳಿಯಿಂದ ಎಚ್‌. ಸಿ. ಮುನಿಯಪ್ಪ ಸ್ಪರ್ಧಿಸಲಿದ್ದಾರೆ.ಕಾಪುವಿನಿಮದ ವಿನಯ್‌ ಕುಮಾರ್‌ […]

ಬಹು ನಿರೀಕ್ಷೆಯ ಕಾಂಗ್ರೆಸ್‌ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯಗೆ ವರುಣಾ ಕ್ಷೇತ್ರ Read More »

ನಾಳೆ (ಮಾ. 25) ಬೆಂಗಳೂರಿನಲ್ಲಿರುವ ಪುತ್ತೂರಿಗರ ಸ್ನೇಹಮಿಲನ

ಪುತ್ತೂರು: ಬೆಂಗಳೂರಿನಲ್ಲಿ ನೆಲೆಸಿರುವ ಪುತ್ತೂರಿಗರ ‘ಸ್ನೇಹಮಿಲನ’ ಕಾರ್ಯಕ್ರಮ ನಾಳೆ ಅಂದರೆ ಮಾರ್ಚ್ 25ರಂದು ಸಂಜೆ 7ಕ್ಕೆ ಬೆಂಗಳೂರು ವಿಜಯನಗರದ ಬಂಟರ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿರುವರು. ಶ್ರೀ ವಿದ್ಯಾಭೂಷಣ ಅವರ ಗಾಯನ ಕಾರ್ಯಕ್ರಮವನ್ನು ಇದೇ ಸಂದರ್ಭ ಏರ್ಪಡಿಸಲಾಗಿದೆ. ಬೆಂಗಳೂರಿನ ಅತ್ತಿಗುಪ್ಪೆಯಲ್ಲಿರುವ ಮೆಟ್ರೋ ನಿಲ್ದಾಣ ಪಕ್ಕವಿರುವ ಬಂಟರ ಭವನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ವಿದ್ಯೆ, ಉದ್ಯೋಗ,

ನಾಳೆ (ಮಾ. 25) ಬೆಂಗಳೂರಿನಲ್ಲಿರುವ ಪುತ್ತೂರಿಗರ ಸ್ನೇಹಮಿಲನ Read More »

ವಿನೂತನ ಶೈಲಿಯ ಪ್ರಚಾರಕ್ಕೆ ಮಾದರಿಯಾದ ನಂದಳಿಕೆ ಸಿರಿಜಾತ್ರೆ

ಬಿರು ಬಿಸಿಲಿನಲ್ಲಿ ಬಾಯಾರಿದ ಹಕ್ಕಿಗಳಿಗೆ ಆಸರೆ – ರಸ್ತೆ ಬದಿ ಗಮನಸೆಳೆಯುತ್ತಿರುವ ಆಮಂತ್ರಣ ಕಾರ್ಕಳ : ತುಳುನಾಡಿನ ಕಾರಣಿಕ ಕ್ಷೇತ್ರ ಐತಿಹಾಸಿಕ ಪ್ರಸಿದ್ಧ ಆದಿ ಆಲಡೆ, ಸಿರಿಕ್ಷೇತ್ರ, ಸಿರಿಗಳ ಮೂಲ ಕ್ಷೇತ್ರ, ನಾಲ್ಕು ಸ್ಥಾನ ನಂದಳಿಕೆ ಹೀಗೆ ನಾನಾ ಹೆಸರುಗಳಿಂದ ಪ್ರಖ್ಯಾತವಾಗಿರುವ ನಂದಳಿಕೆ ಮಹಾಲಿಂಗೇಶ್ವರ ದೇಗುಲದ ಸಿರಿಜಾತ್ರೆಯು ವಿನೂತನ ಶೈಲಿಯ ಪ್ರಚಾರಕ್ಕೆ ಮಾದರಿಯಾಗಿದೆ. ಈ ಬಾರಿ ಎಪ್ರಿಲ್‌ 6ರಂದು ನಂದಳಿಕೆ ಜಾತ್ರೆ ನಡೆಯಲಿದ್ದು, ಬಿರು ಬಿಸಿಲಿನಲ್ಲಿ ಬಾಯಾರಿದ ಹಕ್ಕಿಗಳಿಗೆ ಆಸರೆ ಎಂಬ ಪರಿಸರ ಜಾಗೃತಿಯುಳ್ಳ ಸಂದೇಶದೊಂದಿಗೆ ಜಾತ್ರೆಯ

ವಿನೂತನ ಶೈಲಿಯ ಪ್ರಚಾರಕ್ಕೆ ಮಾದರಿಯಾದ ನಂದಳಿಕೆ ಸಿರಿಜಾತ್ರೆ Read More »

ನಾಳೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಭೇಟಿ

ಬೆಂಗಳೂರು : ಮಾ.25 ರಂದು ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ ನಗರದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಪ್ರಧಾನಿ, ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲು ಹೆಲಿಕಾಪ್ಟರ್‌ನಲ್ಲಿ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ ಎಂದು ಸರ್ಕಾರದ ಪತ್ರಿಕಾ ಪ್ರಕಟಣೆ ತಿಳಿಸಿದೆ. ವೈಟ್‌ಫೀಲ್ಡ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲು ಮತ್ತು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲು ಮೋದಿ ಮಧ್ಯಾಹ್ನ ಬೆಂಗಳೂರಿಗೆ ಹಿಂತಿರುಗಲಿದ್ದಾರೆ. ನಂತರ

ನಾಳೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಭೇಟಿ Read More »

ಅಂದು ವೀರಾವೇಶದಿಂದ ಹರಿದೆಸೆದ ಸುಗ್ರೀವಾಜ್ಞೆಯೇ ಇಂದು ಸಂಸತ್‌ ಸದಸ್ಯತ್ವಕ್ಕೆ ಕುತ್ತು ತಂದಿತು

ದೆಹಲಿ : ಮೋದಿ ಕುಲನಾಮ ಹೊಂದಿರುವವರೆಲ್ಲ ಕಳ್ಳರು ಎಂಬರ್ಥ ಬರುವಂತೆ ಮಾಡಿದ ಭಾಷಣ ಕೊನೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತನಕ್ಕೆ ಕುತ್ತು ತಂದಿದೆ. ವಿಶೇಷ ಎಂದರೆ ಕ್ರಿಮಿನಲ್‌ ಪ್ರಕರಣದಲ್ಲಿ ಶಿಕ್ಷೆಯಾದ ಸಂಸದರ ಸದಸ್ಯತ್ವ ತಕ್ಷಣ ರದ್ದುಗೊಳಿಸಬೇಕೆಂಬ ಕೇಂದ್ರ ಸರಕಾರದ ಒಂದು ಸುಗ್ರೀವಾಜ್ಞೆಯನ್ನು ಪ್ರತಿಭಟಿಸಿ ರಾಹುಲ್‌ ಗಾಂಧಿ ಅದರ ಪ್ರತಿಯನ್ನು ಪತ್ರಿಕಾಗೋಷ್ಠಿಯಲ್ಲಿ ಹರಿದೆಸೆದು ವೀರಾವೇಶ ಪ್ರದರ್ಶಿಸಿದ್ದರು. ಆಗ ಕಾಂಗ್ರೆಸಿನ ಯುವರಾಜನಾಗಿ ಕಂಗೊಳಿಸುತ್ತಿದ್ದ ರಾಹುಲ್‌ ಗಾಂಧಿಯ ಪತ್ರಿಕಾಗೋಷ್ಠಿಯ ಈ ವೀರಾವೇಶ ಆ ದಿನಗಳಲ್ಲಿ ಭಾರಿ ಸುದ್ದಿಯಾಗಿತ್ತು. ದೇಶವಿಡೀ

ಅಂದು ವೀರಾವೇಶದಿಂದ ಹರಿದೆಸೆದ ಸುಗ್ರೀವಾಜ್ಞೆಯೇ ಇಂದು ಸಂಸತ್‌ ಸದಸ್ಯತ್ವಕ್ಕೆ ಕುತ್ತು ತಂದಿತು Read More »

ಸಿದ್ದರಾಮಯ್ಯನವರಿಂದ ಕಾಂಗ್ರೆಸ್​ ಕಾರ್ಯಕರ್ತನಿಗೆ ಕಪಾಳಮೋಕ್ಷ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್​ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿರುವ ಪ್ರಸಂಗ ನಡೆದಿದೆ. ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ, ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತನಿಗೆ ಕಪಾಳಕ್ಕೆ ಹೊಡೆದಿದ್ದಾರೆ. ಈ ಬಾರಿಯೂ ಸಹ ಶಾಸಕ ರಾಮಪ್ಪ ಅವರಿಗೆ ಟಿಕೆಟ್​ ನೀಡಬೇಕೆಂದು ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತರು ಇಂದು (ಮಾರ್ಚ್ 24) ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಆಗ್ರಹಿಸಿದರು. ಈ ವೇಳೆ ತಳ್ಳಾಟ ನೂಕಾಟದಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯ, ಕಾರ್ಯಕರ್ತನ ಕೆನ್ನೆಗೆ ಬಾರಿಸಿದ ವಿಡಿಯೋ

ಸಿದ್ದರಾಮಯ್ಯನವರಿಂದ ಕಾಂಗ್ರೆಸ್​ ಕಾರ್ಯಕರ್ತನಿಗೆ ಕಪಾಳಮೋಕ್ಷ Read More »

ಚುನಾವಣೆ ಪೂರ್ವ ಮತ್ತು ಚುನಾವಣಾ ನೀತಿ ಸಂಹಿತೆಗೆ ಸಿದ್ಧತೆ ಮಾಡಿಕೊಳ್ಳಿ : ಮುಖ್ಯ ಚುನಾವಣಾಧಿಕಾರಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿವೆ. ಪ್ರಚಾರ ಕಾರ್ಯವನ್ನು ಕೂಡ ಆರಂಭಿಸಿವೆ. ಮೇ ತಿಂಗಳ ಎರಡನೇ ವಾರದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ

ಚುನಾವಣೆ ಪೂರ್ವ ಮತ್ತು ಚುನಾವಣಾ ನೀತಿ ಸಂಹಿತೆಗೆ ಸಿದ್ಧತೆ ಮಾಡಿಕೊಳ್ಳಿ : ಮುಖ್ಯ ಚುನಾವಣಾಧಿಕಾರಿ Read More »

ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ

ಬೆಂಗಳೂರು: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ‌ ಶಿಫಾರಸ್ಸು ಮಾಡಿಲ್ಲ ಎಂದು‌ ಆರೋಪಿಸಿ ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ತೆರಳಲು ಮುಂದಾದ ಕಾಂಗ್ರೆಸ್‌ ನಾಯಕರನ್ನು ಪೊಲೀಸರು ಮಾರ್ಗದ ಮಧ್ಯೆಯೇ ತಡೆದರು.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಸೇರಿದಂತೆ ಹಲವಾರು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ವಶಕ್ಕೆ ಪಡೆಯುವುದಕ್ಕೆ ಮುನ್ನ ಮಾತನಾಡಿದ ಮಾಜಿ ಸಿಎಂ

ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ Read More »

ಉಪ್ಪಿನಂಗಡಿ: 10 ಲಕ್ಷ ರೂ. ನಗದು ದರೋಡೆ, ಪ್ರಕರಣ ಓರ್ವ ವಶ

ಉಪ್ಪಿನಂಗಡಿ : ಮಗಳ ಮದುವೆಗೆ ಚಿನ್ನವನ್ನು ಖರೀದಿಸಲೆಂದು ದ್ವಿಚಕ್ರ ವಾಹನದಲ್ಲಿ 10 ಲಕ್ಷ ರೂ. ನಗದು ಹಣ ಕೊಂಡೊಯ್ಯುತ್ತಿದ್ದ ವೇಳೆ ಇಳಂತಿಲ ಗ್ರಾಮದ ಪೆದಮಲೆ- ಸರಳಿಕಟ್ಟೆ ರಸ್ತೆಯ ರಿಫಾಯಿನಗರ ಎಂಬಲ್ಲಿ ಅಪರಿಚಿತ ಯುವಕನೋರ್ವ ಹಣವನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಓರ್ವ ಆರೋಪಿಯನ್ನು ಒಂಬತ್ತು ಲಕ್ಷ ರೂ. ನಗದಿನೊಂದಿಗೆ ವಶಪಡಿಸಿಕೊಂಡಿದ್ದಾರೆ. ಇಳಂತಿಲ ಗ್ರಾಮದ ಕಾರ್ಯಪಾಡಿ ಮನೆ ನಿವಾಸಿ ಮಹಮ್ಮದ್ ಕೆ. (60) ಅವರು ತನ್ನ ಮಗಳ ಮದುವೆಗಾಗಿ ಚಿನ್ನಾಭರಣ ಖರೀದಿಸಲು ಸಂಗ್ರಹಿಸಿಟ್ಟ 10 ಲಕ್ಷ

ಉಪ್ಪಿನಂಗಡಿ: 10 ಲಕ್ಷ ರೂ. ನಗದು ದರೋಡೆ, ಪ್ರಕರಣ ಓರ್ವ ವಶ Read More »

ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು : ಸುಮಾರು 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಮಾರ್ಚ್ 23 ರಂದು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ತುಂಬೆ ವ್ಯಾಪ್ತಿಯ ತಲಪಾಡಿ ನಿವಾಸಿ ಅಬ್ದುಲ್ ಅಜೀಜ್ ಅಲಿಯಾಸ್ ಅಜೀಜ್ (45) ಎಂದು ಗುರುತಿಸಲಾಗಿದೆ.ಈತ ಕೇರಳ ಮತ್ತು ಕರ್ನಾಟಕದ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಅಜೀಜ್ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಲ್ಕು, ಉಳ್ಳಾಲದಲ್ಲಿ ಮೂರು, ಬಂಟ್ವಾಳದಲ್ಲಿ ಒಂದು ಮತ್ತು ಹಾಸನದ ಅರೇಹಳ್ಳಿ ಮತ್ತು ಕೇರಳ ರಾಜ್ಯದ ಕುಟ್ಯಾಡಿಯಲ್ಲಿ ತಲಾ ಒಂದು

ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

error: Content is protected !!
Scroll to Top