ರಾಜ್ಯ

ಮಹಾಕುಂಭಮೇಳಕ್ಕೆ ಹೋಗಿದ್ದ ಬೀದರ್‌ನ 6 ಮಂದಿ ಭೀಕರ ಅಪಘಾತಕ್ಕೆ ಬಲಿ

ಲಾರಿಗೆ ಹಿಂದಿನಿಂದ ಕ್ರೂಸರ್‌ ವಾಹನ ಡಿಕ್ಕಿ ಹೊಡೆದು ಅಪಘಾತ ಲಖನೌ: ಮಹಾಕುಂಭಮೇಳಕ್ಕೆ ಹೋಗಿದ್ದ ಬೀದರ್‌ನ ಒಂದೇ ಕುಟುಂಬದ 6 ಜನ ಭೀಕರ ಅಪಘತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ. ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಮಿರಾಜಾಪುರ ಜಿಲ್ಲೆಯ ರೂಪಾಪುರ ಬಳಿ ಅಪಘಾತ ಸಂಭವಿಸಿದೆ. 6 ಮಂದಿ ಸಾವನ್ನಪ್ಪಿದ್ದು ಉಳಿದವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್‌ […]

ಮಹಾಕುಂಭಮೇಳಕ್ಕೆ ಹೋಗಿದ್ದ ಬೀದರ್‌ನ 6 ಮಂದಿ ಭೀಕರ ಅಪಘಾತಕ್ಕೆ ಬಲಿ Read More »

ಮಲ್ಪೆ : ಮೀನುಗಾರಿಕೆ ದೋಣಿ ಬೆಂಕಿಗಾಹುತಿ

ಉಡುಪಿ: ಮಲ್ಪೆಯ ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟಿಗೆ ತಡರಾತ್ರಿ ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಹೋಗಿದೆ. ಮಲ್ಪೆಯ ಜನಾರ್ದನ ಟಿ. ಕಾಂಚನ್ ಎಂಬವರಿಗೆ ಸೇರಿದ ‘ರವಿಪ್ರಕಾಶ್’ ಎಂಬ ಸಣ್ಣಟ್ರಾಲ್ (ಫಿಶಿಂಗ್) ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯ ದೋಣಿಯವರು ಗಮನಿಸಿ ಸಕಾಲದಲ್ಲಿ ಮಾಹಿತಿ ನೀಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಆ ಬೋಟಿನ ಮೀನುಗಾರರು ಮೀನುಗಾರಿಕೆ ಮುಗಿಸಿಬಂದು ಬೋಟನ್ನು ಬಾಪುತೋಟದ ಬಳಿಯ ದಕ್ಕೆಯಲ್ಲಿ ನಿಲ್ಲಿಸಿದ್ದರು. ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಸಕಾಲದಲ್ಲಿ

ಮಲ್ಪೆ : ಮೀನುಗಾರಿಕೆ ದೋಣಿ ಬೆಂಕಿಗಾಹುತಿ Read More »

ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ ಶೇ.35 ಅಂಕ ಕಡ್ಡಾಯ

ಗರಿಷ್ಠ ಮೂರು ವಿಷಯಗಳಲ್ಲಿ ಶೇ.10ರಷ್ಟು ಕೃಪಾಂಕ ಸಿಗಲಿದೆ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ತಂದಿದ್ದ ಶೇ.10ರಷ್ಟು ಗ್ರೇಸ್ ಮಾರ್ಕ್ಸ್ ನೀಡುವ ಪದ್ಧತಿ ಈ ವರ್ಷದಿಂದ ರದ್ದಾಗಿದ್ದು, 2024ಕ್ಕೂ ಹಿಂದೆ ಇದ್ದಂತೆ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಕನಿಷ್ಠ ಅಂಕವನ್ನು ಶೇ.35ಕ್ಕೆ ನಿಗದಿ ಮಾಡಲಾಗಿದೆ.ಗ್ರೇಸ್ ಮಾರ್ಕ್ಸ್ ನೀಡುವ ಪದ್ಧತಿ ಶಿಕ್ಷಣದ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಲ್ಲದೆ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನಸ್ಥಿತಿಗೆ ಅಡ್ಡಿಯಾಗಿದೆ ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ವಿವಿಧ ವಲಯಗಳಿಂದ ತೀವ್ರ ಟೀಕೆಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರೇಸ್ ಅಂಕಗಳನ್ನು

ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ ಶೇ.35 ಅಂಕ ಕಡ್ಡಾಯ Read More »

ಇಂದು ಜಮೆಯಾಗಲಿದೆ ಗೃಹಲಕ್ಷ್ಮಿ ಹಣ

ಸತತ ಟೀಕೆಗಳ ಬಳಿಕ ಎಚ್ಚೆತ್ತ ಸರಕಾರ ಬೆಂಗಳೂರು: ಮಹಿಳೆಯರು ಕಳೆದ ಮೂರು ತಿಂಗಳಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಹಣ ಇಂದು ಬಿಡುಗಡೆಯಾಗಲಿದೆ. ಸಾಲು ಸಾಲು ಟೀಕೆ, ಆಕ್ರೋಶದ ವ್ಯಕ್ತವಾದ ನಂತರ ಎಚ್ಚೆತ್ತ ಸರಕಾರ ಮೂರು ತಿಂಗಳಿಂದ ಬಂದ್ ಆಗಿದ್ದ ಗೃಹಲಕ್ಷ್ಮಿ ಹಣ ಜಮೆ ಪ್ರಕ್ರಿಯೆಗೆ ಶುಕ್ರವಾರದಿಂದ ಚಾಲನೆ ನೀಡಲಿದೆ. ಶುಕ್ರವಾರ ನವೆಂಬರ್ ತಿಂಗಳ ದುಡ್ಡು ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ. ಡಿಸೆಂಬರ್ ತಿಂಗಳ ದುಡ್ಡನ್ನು ಮುಂದಿನ ಸೋಮವಾರ ಫಲಾನುಭವಿಗಳ ಖಾತೆಗೆ ಹಾಕಲಾಗುತ್ತದೆ. ಗೃಹಲಕ್ಷ್ಮಿ ಹಣ ಸ್ಥಗಿತವಾದ ಬಗ್ಗೆ ಸತತವಾಗಿ

ಇಂದು ಜಮೆಯಾಗಲಿದೆ ಗೃಹಲಕ್ಷ್ಮಿ ಹಣ Read More »

ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಲು ಕುಮ್ಮಕ್ಕು ನೀಡಿದ್ದ ಮೌಲ್ವಿ ಕೊನೆಗೂ ಬಂಧನ

ಪ್ರಚೋದನಕಾರಿ ಭಾಷಣ ಮಾಡಿ ಜನರನ್ನು ಕೆರಳಿಸಿದ್ದ ಮೌಲ್ವಿ ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್‌ನನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು ಗುರುವಾರ ಮೌಲ್ವಿ ಮುಫ್ತಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ, ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಬಂಧಿಸಿದಂತಾಗಿದೆ. ಮೌಲ್ವಿಯನ್ನು ಬಂಧಿಸುವ ವಿಚಾರದಲ್ಲಿ ಸಾರ್ವಜನಿಕರ ಹಾಗೂ ಪ್ರತಿಪಕ್ಷಗಳ ಒತ್ತಡ ಹೆಚ್ಚಾಗಿತ್ತು. ಇದೀಗ ಕೊನೆಗೂ ಆತನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಲು ಕುಮ್ಮಕ್ಕು ನೀಡಿದ್ದ ಮೌಲ್ವಿ ಕೊನೆಗೂ ಬಂಧನ Read More »

ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಐತಿಹಾಸಿಕ ದುರಂತ : ಬಿಜೆಪಿ ಟೀಕೆ

ಸಿದ್ದರಾಮಯ್ಯರಿಂದ, ಸಿದ್ದರಾಮಯ್ಯರಿಗಾಗಿ, ಸಿದ್ದರಾಮಯ್ಯರಿಗೋಸ್ಕರ ನಡೆಸಿದ ತನಿಖೆ ಎಂದು ಕಿಡಿಕಾರಿದ ಬಿಜೆಪಿ ನಾಯಕರು ಬೆಂಗಳೂರು: ಭಾರಿ ಚರ್ಚೆಗೆ ಗ್ರಾಸವಾಗಿದ್ದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಬಿ.ಎಂ. ಪಾರ್ವತಿ ಸೇರಿ ನಾಲ್ವರು ಆರೋಪಿಗಳಿಗೆ ಕ್ಲೀನ್‌ಚಿಟ್ ನೀಡಿದ್ದು, ಈ ತನಿಖೆಯಲ್ಲಿ ಪಕ್ಷಪಾತ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ. ಮುಡಾ ಹಗರಣದಲ್ಲಿ ನಡೆಸಲಾಗಿರುವ ಲೋಕಾಯುಕ್ತ ತನಿಖೆ ಸಿದ್ದರಾಮಯ್ಯರಿಂದ, ಸಿದ್ದರಾಮಯ್ಯರಿಗಾಗಿ, ಸಿದ್ದರಾಮಯ್ಯರಿಗೋಸ್ಕರ ನಡೆಸಿದ ತನಿಖೆಯಾಗಿದ್ದು, ಇದರಲ್ಲಿ ನ್ಯಾಯ ಸಿಕ್ಕುತ್ತದೆ ಎನ್ನುವ ಭರವಸೆ ಯಾರಿಗೂ

ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಐತಿಹಾಸಿಕ ದುರಂತ : ಬಿಜೆಪಿ ಟೀಕೆ Read More »

ಜೆಸಿಬಿ ಹರಿದು 2 ವರ್ಷದ ಮಗು ಮೃತ್ಯು

ಬೆಂಗಳೂರು : ಆಟವಾಡುತ್ತಿದ್ದ ಮಗುವಿನ ಮೇಲೆ ಜೆಸಿಬಿ ಹರಿದ ಘಟನೆ ಕಾಡುಗೋಡಿ ಬಳಿಯ ಸಿಟಿ ಲೇಔಟ್​ನಲ್ಲಿ ನಡೆದಿದೆ. ಜೆಸಿಬಿ ಹರಿದು ಮೃತ ಪಟ್ಟ ಮಗು ಥವನ್ ರೆಡ್ಡಿ (2) ಎನ್ನಲಾಗಿದೆ. ಮಂಗಳವಾರ ಸಂಜೆ 6.30ಕ್ಕೆ ಘಟನೆ ನಡೆದಿದ್ದು, ಜೆಸಿಬಿ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದರಿಂದ ಈ ದುರ್ಘಟನೆ ನಡೆದಿದೆ. ಮೃತ ಮಗು ಥವನ್ ರೆಡ್ಡಿ ಮನೆ ಮುಂದೆ ಆಟವಾಡುತ್ತಿದ್ದಾಗ ವೇಗವಾಗಿ ಬಂದ ಜೆಸಿಬಿ ಮಗುವಿನ ತಲೆಯ ಮೇಲೆ ಹರಿದು ಹೋಗಿದೆ.  ಗಾಯಗೊಂಡ ಮಗುವನ್ನು ವೈದೇಹಿ ಆಸ್ಪತ್ರೆಗೆ

ಜೆಸಿಬಿ ಹರಿದು 2 ವರ್ಷದ ಮಗು ಮೃತ್ಯು Read More »

ಮಾ.5ರಂದು ಸಂಸದ ತೇಜಸ್ವಿ ಸೂರ್ಯ ವಿವಾಹ

ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀಯನ್ನು ವರಿಸಲಿರುವ ತೇಜಸ್ವಿ ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾ.5ರಂದು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರ ಜೊತೆ ಹಸೆಮಣೆ ಏರಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸಾಂಪ್ರದಾಯಿಕವಾಗಿ ವಿವಾಹ ಕಾರ್ಯಕ್ರಮ ನಡೆಯಲಿದೆ. ತಮಿಳುನಾಡು ಮೂಲದ ಶಿವಶ್ರೀ ಅವರು ಈಗಾಗಲೇ ಗಾಯಕಿಯಾಗಿ ಖ್ಯಾತರಾಗಿದ್ದಾರೆ. ಮಾರ್ಚ್‌ 5 ಮತ್ತು 6ರಂದು ಬೆಂಗಳೂರಿನಲ್ಲಿ ಇವರ ವಿವಾಹ ಸಮಾರಂಭ ನೆರವೇರಲಿದೆ. 5ರಂದು ಕನಕಪುರ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್‍ವೊಂದರಲ್ಲಿ ಮದುವೆ ನಡೆಯಲಿದೆ ಎಂದು ತಿಳಿದುಬಂದಿದೆ. ಮದುವೆ ಸಮಾರಂಭ

ಮಾ.5ರಂದು ಸಂಸದ ತೇಜಸ್ವಿ ಸೂರ್ಯ ವಿವಾಹ Read More »

ಅತ್ತೆಯನ್ನು ಸಾಯಿಸಲು ಡಾಕ್ಟರ್ ಬಳಿ ಮಾತ್ರೆ ಕೇಳಿದ ಸೊಸೆ

ಬೆಂಗಳೂರು : ಸೊಸೆಯೊಬ್ಬಳು ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿಯೇ ಮಾತ್ರೆ ಕೇಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅತ್ತೆಯನ್ನು ಸಾಯಿಸಬೇಕು ಎಂದು ಬೆಂಗಳೂರಿನ ಡಾಕ್ಟರ್ ಸುನೀಲ್ ಕುಮಾರ್ ಎಂಬುವವರ ಬಳಿ ಸಹಾಯ ಕೇಳಿದ್ದಾಳೆ. ನನ್ನ ಅತ್ತೆ ದಿನ ನನಗೆ ಹಿಂಸೆ ನೀಡುತ್ತಿದ್ದಾರೆ, ಅವರಿಗೆ ತುಂಬಾ ವಯಸ್ಸಾಗಿದೆ ಹೀಗಾಗಿ ಏನಾದ್ರೂ ಹೇಳುತ್ತೀರಾ ಅವರನ್ನು ಹೇಗೆ ಸಾಯಿಸೋದು ಅಂತ ಎಂದು ವೈದ್ಯರಿಗೆ ಮೆಸೇಜ್ ಮಾಡಿದ್ದಾರೆ. ಜೊತೆಗೆ ಒಂದೆರಡು ಮಾತ್ರೆ ತಗೊಂಡ್ರೆ ಸಾಯುತ್ತಾರೆ ಅಲ್ವಾ ಅದು ಹೇಳಿ ಎಂದು ಕೇಳಿಕೊಂಡಿದ್ದಾಳೆ. ಇದಕ್ಕೆ ವೈದ್ಯರು

ಅತ್ತೆಯನ್ನು ಸಾಯಿಸಲು ಡಾಕ್ಟರ್ ಬಳಿ ಮಾತ್ರೆ ಕೇಳಿದ ಸೊಸೆ Read More »

ಶಿರಾಡಿ ಘಾಟಿ ಸುರಂಗ ಮಾರ್ಗ ಡಿಪಿಆರ್‌ಗೆ ಕೇಂದ್ರ ಒಪ್ಪಿಗೆ

26 ಕಿ.ಮೀ. ಯೋಜನೆಯಲ್ಲಿ 3.8 ಕಿ.ಮೀ. ಸುರಂಗ ಮಂಗಳೂರು: ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿಘಾಟ್‌ನಲ್ಲಿ ಸುರಂಗ, ಗ್ರೀನ್‌ಫೀಲ್ಡ್ ಮಾರ್ಗ ನಿರ್ಮಾಣ ಕುರಿತು ಸಮಗ್ರ ಯೋಜನಾ ವರದಿ (ಡಿಪಿಆರ್‌) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಸುರಂಗ ಮಾರ್ಗ ಕಾರ್ಯಸಾಧುವಲ್ಲ, ಇದಕ್ಕೆ ಭಾರಿ ಮೊತ್ತ ಬೇಕಾಗುತ್ತದೆ ಎಂದು ತಿರಸ್ಕರಿಸಿದ್ದರು. ಆದರೆ ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು, ಹಾಸನ ಜಿಲ್ಲೆಯ ಮಲೆನಾಡು ಭಾಗದ ಶಾಸಕರು ಮತ್ತು ಋಾಜ್ಯ

ಶಿರಾಡಿ ಘಾಟಿ ಸುರಂಗ ಮಾರ್ಗ ಡಿಪಿಆರ್‌ಗೆ ಕೇಂದ್ರ ಒಪ್ಪಿಗೆ Read More »

error: Content is protected !!
Scroll to Top