ರಾಜ್ಯ

ಮೇ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ನಿರೀಕ್ಷೆ

ಬೆಂಗಳೂರು: ಪಿಯುಸಿ ಆಯಿತು ಇನ್ನು ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ನಿರೀಕ್ಷೆಯಲ್ಲಿ ಮಕ್ಕಳಿದ್ದಾರೆ. ಮುಂದಿನ ತಿಂಗಳು ಮೊದಲ ವಾರದಲ್ಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 21ರಿಂದ ಪ್ರಾರಂಭವಾಗಿ ಏಪ್ರಿಲ್ 4ರವರೆಗೆ ನಡೆದಿವೆ. ಏಪ್ರಿಲ್ 15ರಿಂದ ರಾಜ್ಯಾದ್ಯಂತ 240ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪ್ರಶ್ನೆಪತ್ರಿಕೆಗಳ ಮೌಲ್ಯಮಾಪನ ಪ್ರಾರಂಭವಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ […]

ಮೇ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ನಿರೀಕ್ಷೆ Read More »

ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು: ಗೂಡ್ಸ್ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಅಪಘಾತ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ನಾಗರಾಜ್(28), ಸೋಮು(38), ನಾಗಭೂಷಣ್(36) ಹಾಗೂ ಮುರಳಿ(38) ಮೃತಪಟ್ಟಿದ್ದಾರೆ. ಅವರು ತೆಲಂಗಾಣದ ಹಿಂದೂಪುರ ನಿವಾಸಿಗಳು ಎಂದು ಗುರುತಿಸಲಾಗಿದೆ. ದೇವದುರ್ಗ ತಾಲೂಕಿನ ಗಬ್ಬೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತೆಲಂಗಾಣದ ಹಿಂದೂಪುರದಿಂದ ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ನಡೆಯುವ ಕುರಿ ಸಂತೆಗೆ ಹೋಗುವ

ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು Read More »

ಜಾತಿ ಗಣತಿ ವರದಿ : ಸಂಪುಟ ಸಭೆಯಲ್ಲೂ ಬಗೆಹರಿಯಲಿಲ್ಲ ಗೊಂದಲ

ಒಕ್ಕಲಿಗ, ಲಿಂಗಾಯತ ಸಚಿವರಿಂದ ಭಾರಿ ವಿರೋಧ; ಜೋರು ಧ್ವನಿಯಲ್ಲಿ ವಾಗ್ವಾದ ಬೆಂಗಳೂರು : ಜಾತಿ ಗಣತಿ ವರದಿ ಸಂಬಂಧ ನಿನ್ನೆ ನಡೆದ ಮಹತ್ವದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವ ತೀರ್ಮಾನವನ್ನೂ ಕೈಗೊಳ್ಳಲು ಸಾಧ್ಯವಾಗಿಲ್ಲ. ಸಚಿವರು ವರದಿ ಪರ ಮತ್ತು ವಿರೋಧವಾಗಿ ಜೋರು ದ್ವನಿಯಲ್ಲಿ ಮಾತನಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಯಾವ ಸಮಜಾಯಿಸಿಗೂ ಬಗ್ಗಿಲ್ಲ ಎಂದು ತಿಳಿದುಬಂದಿದೆ. ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ಸಚಿವರು ವರದಿಯನ್ನು ತೀವ್ರವಾಗಿ ವಿರೋಧಿಸಿದ್ದಾರೆ.ಕಳೆದೊಂದು ವಾರದಿಂದ ಕರ್ನಾಟಕದಾದ್ಯಂತ ದೊಡ್ಡ ಕೋಲಾಹಲ ಎಬ್ಬಿಸಿದ್ದ ಜಾತಿ ಗಣತಿ

ಜಾತಿ ಗಣತಿ ವರದಿ : ಸಂಪುಟ ಸಭೆಯಲ್ಲೂ ಬಗೆಹರಿಯಲಿಲ್ಲ ಗೊಂದಲ Read More »

ಭಟ್ಕಳ : ಮಾಂಸಕ್ಕಾಗಿ ಗಬ್ಬದ ಗೋವಿನ ವಧೆ

ಕರುವಿನ ಭ್ರೂಣವನ್ನು ಹೊಳೆ ದಂಡೆಯಲ್ಲಿ ಎಸೆದ ಕಟುಕರು ಕಾರವಾರ: ಗರ್ಭಧರಿಸಿದ್ದ ಗೋವನ್ನು ಹತ್ಯೆಗೈದು ಮಾಂಸ ಸಾಗಾಟ ಮಾಡಿ ವಿಕೃತಿ ಮೆರೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ಕುಕನೀರ್ ವೆಂಕಟಾಪುರ ಹೊಳೆಯ ದಂಡೆಯ ಬಳಿ ನಡೆದಿದೆ.ಮಾಂಸಕ್ಕಾಗಿ ದನವನ್ನು ವಧೆ ಮಾಡಿ ಕರುವಿನ ಭ್ರೂಣ ಹಾಗೂ ಅಂಗಾಂಗಗಳನ್ನು ಗೋಣಿ ಚೀಲದಲ್ಲಿ ಸುತ್ತಿ ಎಸೆದು ಹೋಗಿದ್ದಾರೆ. ಬೀದಿ ನಾಯಿಯೊಂದು ಚೀಲವನ್ನು ಎಳೆದುತಂದಾಗ ಘಟನೆ ಬೆಳಕಿಗೆ ಬಂದಿದೆ.ಸ್ಥಳಕ್ಕೆ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ

ಭಟ್ಕಳ : ಮಾಂಸಕ್ಕಾಗಿ ಗಬ್ಬದ ಗೋವಿನ ವಧೆ Read More »

ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸಿದ ಘಟನೆಗೆ ಆಕ್ರೋಶ

ಶಿವಮೊಗ್ಗ, ಬೀದರ್‌ನಲ್ಲಿ ನಡೆದ ಘಟನೆಗೆ ಕೆರಳಿದ ಬ್ರಾಹ್ಮಣ ಸಂಘಟನೆಗಳು ಬೆಂಗಳೂರು: ಸಿಇಟಿ ಪರೀಕ್ಷೆಗೆ ಹಾಜರಾದ ಬ್ರಾಹ್ಮಣ ಸಮುದಯದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಶಿವಮೊಗ್ಗ ಮತ್ತು ಬೀದರ್‌ನಲ್ಲಿ ಸಂಭವಿಸಿದ್ದು, ಇದಕ್ಕೆ ರಾಜ್ಯವ್ಯಾಪಿ ಆಕ್ರೋಶ ವ್ಯಕ್ತವಾಗಿದೆ. ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಓರ್ವ ವಿದ್ಯಾರ್ಥಿ ಜನಿವಾರ ತೆಗೆಯುವುದಿಲ್ಲ ಎಂದು ಹೇಳಿದಾಗ ಅಧಿಕಾರಿಗಳು ಜನಿವಾರ ಕಿತ್ತು ತೆಗೆದು ಕಸದಬುಟ್ಟಿಗೆ ಎಸೆದಿದ್ದಾರೆ. ಉಳಿದ ವಿದ್ಯಾರ್ಥಿಗಳಿಗೆ ಜನಿವಾರ ಬಿಚ್ಚಿದ ಬಳಿಕವೇ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಪರೀಕ್ಷಾ ಸಿಬ್ಬಂದಿ

ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸಿದ ಘಟನೆಗೆ ಆಕ್ರೋಶ Read More »

ಮಂಗಳೂರಿನಲ್ಲಿಂದು ರಾಜ್ಯದಲ್ಲೇ ಬೃಹತ್‌ ವಕ್ಫ್‌ ಪ್ರತಿಭಟನೆ

ಪೊಲೀಸರಿಂದ ಸರ್ಪಗಾವಲು; ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಇಂದು ಮುಸ್ಲಿಮರ ಬೃಹತ್‌ ಪ್ರತಿಭಟನೆ ನಡೆಯಲಿದೆ. ಕರ್ನಾಟಕದಲ್ಲೇ ಅತಿದೊಡ್ಡ ಪ್ರತಿಭಟನೆಗೆ ಉಲೇಮಾ ಸಮನ್ವಯ ಸಮಿತಿ ಕರೆ ನೀಡಿದೆ. ನಗರದ ಅಡ್ಯಾರ್ ಕಣ್ಣೂರಿನ ಷಾ ಗಾರ್ಡನ್ ಮೈದಾನದಲ್ಲಿ ಸಂಜೆ 4 ಗಂಟೆಗೆ ಪ್ರತಿಭಟನಾ ಸಭೆ ಆರಂಭಗೊಳ್ಳಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಖಾಝಿಗಳ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಇಸ್ಲಾಂ ಧರ್ಮಗುರುಗಳು, ಧಾರ್ಮಿಕ ಮುಖಂಡರು, ಉಲೇಮಾಗಳು ಭಾಗವಹಿಸಲಿದ್ದಾರೆ. ದಕ್ಷಿಣ

ಮಂಗಳೂರಿನಲ್ಲಿಂದು ರಾಜ್ಯದಲ್ಲೇ ಬೃಹತ್‌ ವಕ್ಫ್‌ ಪ್ರತಿಭಟನೆ Read More »

ಖಾಸಗಿ ಶಾಲೆಗಳ ಬೇಕಾಬಿಟ್ಟಿ ಶುಲ್ಕ ವಸೂಲಿಗೆ ತಡೆ

ಶಾಲೆ ದಾಖಲಾತಿಗಾಗಿ ಹೊಸ ನಿಯಮ ರಚಿಸಿದ ಶಿಕ್ಷಣ ಇಲಾಖೆ ಬೆಂಗಳೂರು: ಈಗ ಶಾಲೆ ಕಾಲೇಜುಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷಕ್ಕಾಗಿ ಪ್ರವೇಶಾತಿ ಭರದಿಂದ ನಡೆಯುತ್ತಿದೆ. ಈ ಸಂದರ್ಭದಲ್ಲೇ ಖಾಸಗಿ ಶಾಲೆಗಳ ದಾಖಲಾತಿಗಾಗಿ ಶಿಕ್ಷಣ ಇಲಾಖೆ ಹೊಸ ನಿಯಮಗಳನ್ನು ಬಿಡುಗಡೆ ಮಾಡಿ ಮೊದಲಿದ್ದ ಕೆಲವು ನಿಯಮಗಳಿಗೆ ಬ್ರೇಕ್ ಹಾಕಿದೆ. ದಾಖಲಾತಿ ಹೆಸರಲ್ಲಿ ಮಕ್ಕಳು, ಪೋಷಕರಿಗೆ ಕಿರುಕುಳ ಕೊಡುವುದು, ಮಕ್ಕಳ ದಾಖಲಾತಿಗೆ ಪೋಷಕರಿಗೆ ಪರೀಕ್ಷೆ ಇಡುವುದು ಹಾಗೂ ದುಬಾರಿ ಶುಲ್ಕ ವಸೂಲು ಮಾಡುವುದು ಇತ್ಯಾದಿಗಳಿಗೆ ಕಡಿವಾಣ ಹಾಕಲಾಗಿದೆ. ಶಾಲೆಗಳಿಗೆ ಮಕ್ಕಳನ್ನು ಸೇರಿಸುವಾಗ

ಖಾಸಗಿ ಶಾಲೆಗಳ ಬೇಕಾಬಿಟ್ಟಿ ಶುಲ್ಕ ವಸೂಲಿಗೆ ತಡೆ Read More »

ಕುಕ್ಕೆ ಕ್ಷೇತ್ರದ ವಾರ್ಷಿಕ ಆದಾಯ 155.95 ಕೋ.ರೂ. ಏರಿಕೆ

ಹಿಂದಿನ ವರ್ಷಕ್ಕಿಂತ 9.94 ಕೋ.ರೂ. ಹೆಚ್ಚಳ ಸುಬ್ರಹ್ಮಣ್ಯ: ರಾಜ್ಯದಲ್ಲೇ ಅತಿಹೆಚ್ಚು ಆದಾಯವಿರುವ ಪುಣ್ಯಕ್ಷೇತ್ರವಾಗಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಕಳೆದ ಹಣಕಾಸು ಸಾಲಿನಲ್ಲೂ ಭಾರಿ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ.ಗೆ ಏರಿಕೆ ಆಗಿದೆ. ಹಿಂದಿನ ವರ್ಷದ ಆದಾಯ 146.01 ಕೋಟಿ ರೂ. ಆಗಿತ್ತು. ಹಿಂದಿನ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ

ಕುಕ್ಕೆ ಕ್ಷೇತ್ರದ ವಾರ್ಷಿಕ ಆದಾಯ 155.95 ಕೋ.ರೂ. ಏರಿಕೆ Read More »

ಲಾರಿ ಮುಷ್ಕರ ಇಂದಿನಿಂದ ಇನ್ನಷ್ಟು ತೀವ್ರ

ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಭೀತಿ ಬೆಂಗಳೂರು: ಡೀಸೆಲ್‌ ಬೆಲೆ ಏರಿಕೆ ಪ್ರತಿಭಟಿಸಿ ಸೋಮವಾರ ಮಧ್ಯರಾತ್ರಿಯಿಂದ ಆರಂಭವಾಗಿರುವ ಅನಿರ್ದಿಷ್ಟಾವಧಿ ಲಾರಿ ಮುಷ್ಕರವನ್ನು ಇಂದಿನಿಂದ ಮತ್ತಷ್ಟು ತೀವ್ರರಗೊಳಿಸಲು ತೀವ್ರಗೊಳಿಸಲು ಲಾರಿ ಮಾಲೀಕರು ನಿರ್ಧರಿಸಿದ್ದಾರೆ. ಲಾರಿಗಳು ನಿಂತಲ್ಲೇ ನಿಂತಿರುವುದರಿಂದ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಆಗುತ್ತಿದ್ದು, ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಅಭಾವದ ಬಿಸಿ ತಟ್ಟಲು ಶುರುವಾಗಿದೆ. ಮಾರುಕಟ್ಟೆಗಳಲ್ಲಿ ಅಕ್ಕಿ, ಬೇಳೆ, ಎಣ್ಣೆ ಸೇರಿದಂತೆ ಅನೇಕ ವಸ್ತುಗಳು ದುಬಾರಿಯಾಗುತ್ತಿವೆ.ಲಾರಿ ಮುಷ್ಕರವನ್ನು ನೆಪವಾಗಿಟ್ಟುಕೊಂಡು ಕಾಳಸಂತೆ ದಂಧೆಕೋರರು ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ

ಲಾರಿ ಮುಷ್ಕರ ಇಂದಿನಿಂದ ಇನ್ನಷ್ಟು ತೀವ್ರ Read More »

ಸುರತ್ಕಲ್ ಬೀಚ್‌ನಲ್ಲಿ ಇಬ್ಬರು ಯುವಕರು ಸಮುದ್ರಪಾಲು: ಓರ್ವ ಮೃತ, ಇನ್ನೋರ್ವ ನಾಪತ್ತೆ

ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ವಾತಾವರಣ ಮಂಗಳೂರು: ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಂಬಯಿಯಿಂದ ಬಂದಿದ್ದ ಇಬ್ಬರು ಯುವಕರು ಸುರತ್ಕಲ್‌ ಬೀಚ್‌ನಲ್ಲಿ ನೀರುಪಾಲಾದ ದುರಂತ ಘಟನೆ ನಿನ್ನೆ ಸಂಜೆ ಸಂಭವಿಸಿದೆ. ಒಬ್ಬನನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಒಯ್ದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಇನ್ನೊಬ್ಬ ನಾಪತ್ತೆಯಾಗಿದ್ದು ತೀವ್ರ ಹುಡುಕಾಟ ನಡೆಯುತ್ತಿದೆ. ಮೃತ ಯುವಕನನ್ನು ಮುಂಬಯಿಯ ವಿವೇಕ್‌ ಎಂಬವರ ಪುತ್ರ ಜ್ಞಾನ್‌ ಬಂಜನ್‌ (18) ಎಂದು ಗುರುತಿಸಲಾಗಿದೆ. ಮುಂಬಯಿಯ ಉಮೇಶ್‌ ಎಂಬವರ ಪುತ್ರ ಅನಿಲ್‌ (16) ಸಮುದ್ರದಲ್ಲಿ ನಾಪತ್ತೆಯಾಗಿದ್ದಾನೆ. ರಾಜ್ಯ ತುರ್ತು ಸ್ಪಂದನ

ಸುರತ್ಕಲ್ ಬೀಚ್‌ನಲ್ಲಿ ಇಬ್ಬರು ಯುವಕರು ಸಮುದ್ರಪಾಲು: ಓರ್ವ ಮೃತ, ಇನ್ನೋರ್ವ ನಾಪತ್ತೆ Read More »

error: Content is protected !!
Scroll to Top