ಪ್ರತಿಪಕ್ಷ ನಾಯಕನ ಆಯ್ಕೆಗೆ ಕೂಡಿ ಬಂದ ಮುಹೂರ್ತ | ಸವಾಲು ಹಾಕುವಂತಹ ಸೂಕ್ತ ನಾಯಕನನ್ನು ಕೊಡುತ್ತೇವೆ : ಡಿ.ವಿ.ಸದಾನಂದ ಗೌಡ
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ತಿಂಗಳು ಕಳೆದ ಬಳಿಕ ಇದೀಗ ಪ್ರತಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಮುಂದಾಗಿದೆ. ಈ ಮೂಲಕ ಬಿಜೆಪಿಯಲ್ಲಿ ವಿರೋಧ ಪಕ್ಷ ನಾಯಕನ ಆಯ್ಕೆಗೆ ಮುಹೂರ್ತ ಕೂಡಿಬಂದಿದೆ. ಮುಂದಿನ ತಿಂಗಳು ಜು. 3ರೊಳಗೆ ವಿರೋಧ ಪಕ್ಷ ನಾಯಕನ ಆಯ್ಕೆ ಮಾಡಲಾಗುವುದು ಎಂದು ಸಂಸದ ಡಿ. ವಿ. ಸದಾನಂದಗೌಡ ಮಾಹಿತಿ ನೀಡಿದ್ದಾರೆ. ಗುರುವಾರ ಚಾಮರಾಜನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸದಾನಂದ ಗೌಡ, ಪ್ರತಿಪಕ್ಷ ನಾಯಕನ ಆಯ್ಕೆ ನಾವು ಮಾಡುವ ತೀರ್ಮಾನ ಅಲ್ಲ. […]