ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ, ಪಠ್ಯ ಪುಸ್ತಕ ಪರಿಷ್ಕರಣೆ | ಸಿಎಂ ನೇತೃತ್ವದ ಸಂಪುಟ ಸಭೆಯಲ್ಲಿ ನಿರ್ಧಾರ
ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಹಿಂದೆ ಬಿಜೆಪಿ ಸರಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದೆ. ಜುಲೈನಲ್ಲಿ ನಡೆಯಲಿರುವ ಅಧೀವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಆಗಲಿದೆ. ಸಚಿವ ಸಂಪುಟ ಸಭೆ ಮುಗಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ […]