ರಾಜ್ಯ

ನೂತನ ಸಹಕಾರ ಸಚಿವ ರಾಜಣ್ಣ ಅವರನ್ನು ಅಭಿನಂದಿಸಿದ ಸವಣೂರು ಸೀತಾರಾಮ ರೈ 

ಸವಣೂರು : ಕರ್ನಾಟಕ ರಾಜ್ಯದ ನೂತನ ಸಹಕಾರಿ ಸಚಿವರಾದ ಕೆ ಎನ್ ರಾಜಣ್ಣ ಅವರನ್ನು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಕೆ ಸೀತಾರಾಮ ರೈ ಸವಣೂರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಬೆಂಗಳೂರಿನ ಸಹಕಾರ ಸಂಘಗಳ ನಿಬಂಧಕರ ಕಚೇರಿಯಲ್ಲಿ ಸಚಿವರನ್ನು ಭೇಟಿಯಾಗಿ ಸೀತಾರಾಮ ರೈ ಅವರು ಅಭಿನಂದನೆಯನ್ನು ಸಲ್ಲಿಸಿದರು.  ಈ ಸಂದರ್ಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಎಸ್.ಎಂ.ಬಾಪೂ ಸಾಹೇಬ್ ಮತ್ತು ತುಮಕೂರು ಹಾಲು ಒಕ್ಕೂಟದ ನಿರ್ದೇಶಕರಾದ ನಾಗೇಶ್ ಬಾಬು […]

ನೂತನ ಸಹಕಾರ ಸಚಿವ ರಾಜಣ್ಣ ಅವರನ್ನು ಅಭಿನಂದಿಸಿದ ಸವಣೂರು ಸೀತಾರಾಮ ರೈ  Read More »

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆಗೆ ಸಿದ್ಧತೆ!

ಬೆಂಗಳೂರು: ಕಾಂಗ್ರೆಸ್ ನೀಡಿದ ಭರವಸೆಯಂತೆ ಕರ್ನಾಟಕ ರಾಜ್ಯದ ಸಾರಿಗೆ ನಿಗಮಗಳ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಬಗ್ಗೆ ವರದಿ ಸಿದ್ಧವಾಗಿದೆ. ಬುಧವಾರ ಮಧ್ಯಾಹ್ನ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಕೆಯಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಗ್ಯಾರಂಟಿಗಳು ಖಂಡಿತ ಈಡೇರುತ್ತವೆ. ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವೆಂದು ಹೇಳಿದ್ದೇವೆ. ಅದನ್ನು ಈಡೇರಿಸುತ್ತೇವೆ’ ಎಂದರು. ನಮ್ಮ ಪ್ರಣಾಳಿಕೆಯಲ್ಲಿ ನಾವು ಎಪಿಎಲ್- ಬಿಪಿಎಲ್ ಎಂದು ಹೇಳಿಲ್ಲ. ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಿಬಹುದು

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆಗೆ ಸಿದ್ಧತೆ! Read More »

ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಡಳಿತ ಅವಧಿ ಜುಲೈ ತಿಂಗಳಲ್ಲಿ ಸಂಪೂರ್ಣ | ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿಗೆ ಚುನಾವಣಾ ಆಯೋಗ ಆದೇಶ

ಪುತ್ತೂರು: ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಡಳಿತ ಅವಧಿ  ಜುಲೈ ತಿಂಗಳಲ್ಲಿ ಕೊನೆಗೊಳ್ಳಲಿದ್ದು, ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ  ಆಯ್ಕೆಗೆ ಮೀಸಲಾತಿ ನಿಗದಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅಧಿನಿಯಮದ ಪ್ರಕಾರ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದೆ. ರಾಜ್ಯದಲ್ಲಿ 5948 ಗ್ರಾಪಂಗಳಿಗೆ ತಾಲೂಕುವಾರು, ವರ್ಗವಾರು ಚುನಾವಣೆ 2020 ರಲ್ಲಿ ನಡೆದಿತ್ತು. ಅದಾದ ಬಳಿಕ ಎರಡನೇ ಅವಧಿಗೆ  ಅಧ್ಯಕ್ಷ-ಉಪಾಧ್ಯಕ್ಷರ ಹುದ್ದೆಗಳ ಸಂಖ್ಯೆಯನ್ನು ನಿರ್ದಿಷ್ಟಪಡಿಸಲಾಗಿದೆ. ಪರಿಶಿಷ್ಟ ಪಂಗಡ, ಜಾತಿ, ಹಿಂದುಳಿದ ವರ್ಗ ಹೀಗೆ

ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಡಳಿತ ಅವಧಿ ಜುಲೈ ತಿಂಗಳಲ್ಲಿ ಸಂಪೂರ್ಣ | ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿಗೆ ಚುನಾವಣಾ ಆಯೋಗ ಆದೇಶ Read More »

ಪ್ರವೀಣ್ ನೆಟ್ಟಾರು ಪತ್ನಿ ನೂತಾನಾ ಮರುನೇಮಕ : ಸಿಎಂ ಸಿದ್ದರಾಮಯ್ಯ ಘೋಷಣೆ | ವಜಾ ಮಾಡಿದ್ದರಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲವೆಂದು ಸಿಎಂ ಟ್ವೀಟ್

ಬೆಂಗಳೂರು: ಪ್ರವೀಣ್ ನೆಟ್ಟಾರು ಅವರ ಪತ್ನಿಯನ್ನು ವಜಾ ಮಾಡಿದ್ದ ಒಂದು ದಿನದೊಳಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಹೊರಡಿಸಿದ್ದು, ಸಿ ಗ್ರೂಪ್ ಹುದ್ದೆಗೆ ಮರು ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಗೆ ಅನುಕಂಪದ ಆಧಾರದಲ್ಲಿ ನೀಡಲಾದ ಹುದ್ದೆಯಿಂದ ವಜಾ ಮಾಡುತ್ತಿದ್ದಂತೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತಂತೆ ಇಂದು ಟ್ವಿಟ್ ಮಾಡಿರುವ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು

ಪ್ರವೀಣ್ ನೆಟ್ಟಾರು ಪತ್ನಿ ನೂತಾನಾ ಮರುನೇಮಕ : ಸಿಎಂ ಸಿದ್ದರಾಮಯ್ಯ ಘೋಷಣೆ | ವಜಾ ಮಾಡಿದ್ದರಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲವೆಂದು ಸಿಎಂ ಟ್ವೀಟ್ Read More »

ಪುರಾತನ ದೇವಳದ ಗರ್ಭಗುಡಿಯೊಳಗೆ ರಕ್ತ, ಮಾಂಸದ ಕೋಡಿ | ದುಷ್ಕರ್ಮಿಗಳ ಬಂಧನಕ್ಕೆ ಗ್ರಾಮಸ್ಥರ ಆಗ್ರಹ

ಚಿಕ್ಕಬಳ್ಳಾಪುರ: ಪುರಾತನ ದೇವಾಲಯದ ಒಳಗಡೆ ರಕ್ತ ಹಾಗೂ ಮಾಂಸ ಹಾಕಿ, ಅಪವಿತ್ರಗೊಳಿಸಿದ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಿಂದ ವರದಿಯಾಗಿದೆ. ರಕ್ತದ ಕೋಡಿ ದೇವರ ಮೂರ್ತಿಯ ಪಾದದವರೆಗೂ ಚೆಲ್ಲಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಮಳಮಾಚನಹಳ್ಳಿ ಗ್ರಾಮದ ಬ್ಯಾಟರಾಯ ಸ್ವಾಮಿ ದೇವಸ್ಥಾನದ ಕಿಟಕಿಯಿಂದ ರಕ್ತ, ಮಾಂಸವನ್ನು ಚೆಲ್ಲಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ, ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ದುಷ್ಕರ್ಮಿಗಳ ಬಂಧನಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಪುರಾತನ ದೇವಳದ ಗರ್ಭಗುಡಿಯೊಳಗೆ ರಕ್ತ, ಮಾಂಸದ ಕೋಡಿ | ದುಷ್ಕರ್ಮಿಗಳ ಬಂಧನಕ್ಕೆ ಗ್ರಾಮಸ್ಥರ ಆಗ್ರಹ Read More »

24 ಶಾಸಕರು ಸಂಪುಟದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಪುತ್ತೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ 24 ಶಾಸಕರು ಸಂಪುಟದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಬೆಳಿಗ್ಗೆ  ನಡೆದ  ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಥಾವರ್ ಚಂದ್ ಗೆಹ್ಲೋಟ್ , ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನೂತನ ಸಚಿವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.

24 ಶಾಸಕರು ಸಂಪುಟದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕಾರ Read More »

ಬಜರಂಗದಳ ಬ್ಯಾನ್ ಬಗ್ಗೆ ಚರ್ಚೆಯೇ ನಡೆದಿಲ್ಲ: ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯ ಸಂಪುಟದ ಕೆಲ ಸಚಿವರು RSS ಬ್ಯಾನ್ ಮಾಡುತ್ತೇವೆ. ಬಜರಂಗದಳವನ್ನು ನಿಷೇಧಿಸುತ್ತೇವೆ ಎಂದು ನೇರವಾಗಿ ಹೇಳಿಕೆಗಳನ್ನು ಕೊಡುತ್ತಿದ್ದರೆ, ಇತ್ತ ಸಚಿವ ಜಿ. ಪರಮೇಶ್ವರ್ ಮಾತ್ರ ಈ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಪ್ರಣಾಳಿಕೆಯಲ್ಲಿ ಬಜರಂಗದಳ ಮತ್ತು ಪಿಎಫ್‌ಐಗೆ ಸಂಬಂಧಿಸಿದಂತೆ ಹೇಳಿದ್ದೆವು. ಒಂದು ವೇಳೆ ಅವರು ಶಾಂತಿಗೆ ಭಂಗ ತಂದರೆ, ನಾವು ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ,

ಬಜರಂಗದಳ ಬ್ಯಾನ್ ಬಗ್ಗೆ ಚರ್ಚೆಯೇ ನಡೆದಿಲ್ಲ: ಸಚಿವ ಪರಮೇಶ್ವರ್ Read More »

ಸ್ಪೀಕರ್ ಯು.ಟಿ. ಖಾದರ್ ರಾಜೀನಾಮೆ!?

ಬೆಂಗಳೂರು: ಶಾಸಕ ಯು.ಟಿ. ಖಾದರ್ ಅವರು ಕಾಂಗ್ರೆಸಿನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದು ಬಹುತೇಕ ಪಕ್ಕಾ ಆಗಿದೆ ಎಂದು ಹೇಳಲಾಗಿದೆ. ಮಾಧ್ಯಮವೊಂದಕ್ಕೆ ನೀಡಿರುವ ಹೇಳಿಕೆಯಲ್ಲಿ ಸ್ವತಃ ಯು.ಟಿ. ಖಾದರ್ ಅವರೇ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಸ್ಪೀಕರ್ ಆಗಿ ಆಯ್ಕೆಯಾಗಿರುವ ಬೆನ್ನಿಗೇ ಯು.ಟಿ. ಖಾದರ್ ಅವರು ಈ ಹೇಳಿಕೆ ನೀಡಿದ್ದಾರೆ. ಸ್ಪೀಕರ್ ತಟಸ್ಥರಾಗಿರಬೇಕು ಎಂಬ ಕಾರಣಕ್ಕೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಅವರು ತಿಳಿಸಿದ್ದಾರೆ. ಕರಾವಳಿ ಭಾಗದಿಂದ ಅತೀ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.

ಸ್ಪೀಕರ್ ಯು.ಟಿ. ಖಾದರ್ ರಾಜೀನಾಮೆ!? Read More »

ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು: ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ  ಅವರು, ಪಕ್ಷ ಮರು ನಿರ್ಮಾಣ ದಿಸೆಯಲ್ಲಿ ರಾಜೀನಾಮೆ ನೀಡುತ್ತಿದ್ದು, ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ. ಪಕ್ಷದ ಜತೆ ಸದಾ ನಿಲ್ಲುತ್ತೇನೆ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಸೋಲೇ ಅಂತಿಮವಲ್ಲ. ಸೋಲಿನಿಂದ ಕಂಗೆಡದೆ ಪಕ್ಷವನ್ನು ಬಲವಾಗಿ ಕಟ್ಟುವ ಉದ್ದೇಶದಿಂದ ನಾವೆಲ್ಲರೂ ಅರ್ಪಣಾ ಮನೋಭಾವದೊಂದಿಗೆ ಕೆಲಸ ಮಾಡಬೇಕಿದೆ.

ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ Read More »

ಶಾಂತಿ ಕದಡಿದರೆ ಭಜರಂಗದಳ, ಆರ್‌ಎಸ್‌ಎಸ್‌ ನಿಷೇಧ: ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ | ಹಿಜಾಬ್, ಹಲಾಲ್ ಕಟ್, ಗೋ ಹತ್ಯೆ ಕಾನೂನು‌ ವಾಪಾಸ್?

ಬೆಂಗಳೂರು : ಸರ್ಕಾರವು ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ನಿಷೇಧಿಸುತ್ತದೆ ಮತ್ತು ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಭಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದ್ದು, ಈ ಮೊದಲು ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಕೃತ್ಯಗಳು ಮುಕ್ತವಾಗಿ ನಡೆಯುತ್ತಿದೆ

ಶಾಂತಿ ಕದಡಿದರೆ ಭಜರಂಗದಳ, ಆರ್‌ಎಸ್‌ಎಸ್‌ ನಿಷೇಧ: ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ | ಹಿಜಾಬ್, ಹಲಾಲ್ ಕಟ್, ಗೋ ಹತ್ಯೆ ಕಾನೂನು‌ ವಾಪಾಸ್? Read More »

error: Content is protected !!
Scroll to Top