ರಾಜ್ಯ

ಅಧಿಕಾರ ಬೇಡ: ಕಾರ್ಯಕರ್ತರ ಭಾವನೆ ತಿಳಿದುಕೊಂಡರೆ ಸಾಕು | ಯತ್ನಾಳ್ ಬಳಿ ಕಾರ್ಯಕರ್ತರ ಅಳಲು ತೋಡಿಕೊಂಡ ಪುತ್ತಿಲ

ಪುತ್ತೂರು: ರಕ್ತವನ್ನು ಬೆವರು ಮಾಡಿ, ಭಗವಧ್ವಜದ ಅಡಿಯಲ್ಲಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಇಂತಹ ಕಾರ್ಯಕರ್ತರಿಗೆ ದೌರ್ಜನ್ಯ ಎಸಗುವುದು ನೋವು ತರಿಸುವ ಘಟನೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು. ಪುತ್ತೂರು ಮಹಾವೀರ ಆಸ್ಪತ್ರೆಗೆ ಭೇಟಿ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮುಂದೆ ಕಾರ್ಯಕರ್ತರ ಅಳಲನ್ನು ಬಿಚ್ಚಿಟ್ಟರು. ನಮಗೆ ಅಧಿಕಾರ ಬೇಡ, ಯಾವುದೂ ಬೇಡ. ನಮ್ಮ ಕಾರ್ಯಕರ್ತರಿಗೆ ಇಂತಹ ಪರಿಸ್ಥಿತಿ ಬರುವುದ ಬೇಡ. ಎದುರಿನಿಂದ ಬೆನ್ನು ತಟ್ಟಿ ಮಾತನಾಡಿಸುವುದು, ಹಿಂದಿನಿಂದ ಇಂತಹ ಕೆಲಸ ಮಾಡಿಸುವುದು. ಕಾರ್ಯಕರ್ತರಿಗೆ ಇದಕ್ಕಿಂತ […]

ಅಧಿಕಾರ ಬೇಡ: ಕಾರ್ಯಕರ್ತರ ಭಾವನೆ ತಿಳಿದುಕೊಂಡರೆ ಸಾಕು | ಯತ್ನಾಳ್ ಬಳಿ ಕಾರ್ಯಕರ್ತರ ಅಳಲು ತೋಡಿಕೊಂಡ ಪುತ್ತಿಲ Read More »

ಕಾರ್ಯಕರ್ತರ ಭಾವನೆಯನ್ನು ಕೇಂದ್ರಕ್ಕೆ ತಲುಪಿಸ್ತೇನೆ : ಬಸನಗೌಡ ಪಾಟೀಲ್ ಯತ್ನಾಳ್

ಪುತ್ತೂರು: ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಬೇರೆಯಲ್ಲ. ಆದ್ದರಿಂದ ಕಾರ್ಯಕರ್ತರ ಭಾವನೆಯನ್ನು ಕೇಂದ್ರಕ್ಕೆ ತಲುಪಿಸುವ ಕೆಲಸ ಮಾಡುತ್ತೇನೆ. ನೊಂದ ಎಲ್ಲರಿಗೂ ಪಕ್ಷದಿಂದಲೇ ಪರಿಹಾರ ನೀಡಲು ಪ್ರಯತ್ನಿಸುತ್ತೇನೆ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾಗಿ ಧೈರ್ಯ ತುಂಬಿ, ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು. ಹೊರಗೊಂದು ಒಳಗೊಂದು ಮಾತನಾಡುವ ಸ್ವಭಾವ ನನ್ನದಲ್ಲ. ಯಾವತ್ತೂ ನೇರವಾಗಿಯೇ ಮಾತನಾಡುವವ. ಪ್ರಜಾಪ್ರಭುತ್ವದಲ್ಲಿ ಟೀಕೆ – ಟಿಪ್ಪಣಿಗೆ ಅವಕಾಶವಿದೆ. ಬ್ಯಾನರ್ ಹಾಕಿದ್ದಾರೆ ಎಂದಾಕ್ಷಣ ಅವರು ತಾಲಿಬಾನಿಗಳಲ್ಲ, ದೇಶದ್ರೋಹಿಗಳಲ್ಲ. ಬ್ಯಾನರ್

ಕಾರ್ಯಕರ್ತರ ಭಾವನೆಯನ್ನು ಕೇಂದ್ರಕ್ಕೆ ತಲುಪಿಸ್ತೇನೆ : ಬಸನಗೌಡ ಪಾಟೀಲ್ ಯತ್ನಾಳ್ Read More »

ಯತ್ನಾಳ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

ಪುತ್ತೂರು: ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಪುತ್ತೂರಿಗಾಗಮಿಸಿದ್ದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾಗಿ ಧೈರ್ಯ ತುಂಬಿದರು.

ಯತ್ನಾಳ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ Read More »

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಯತ್ನಾಳ್

ಪುತ್ತೂರು: ಇಲ್ಲಿನ ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಯುವಕರಿಗೆ ಧೈರ್ಯ ತುಂಬಿದರು. ಪಂಚವಟಿ, ಬಿಜೆಪಿ ಕಚೇರಿಗೆ ತೆರಳಿ ಬಳಿಕ ಮಹಾವೀರ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆ ಆವರಣದಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಯತ್ನಾಳ್ ಅವರನ್ನು ಸ್ವಾಗತಿಸಿದರು.

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಯತ್ನಾಳ್ Read More »

ಟ್ವೀಟ್‌ ಮೂಲಕ ಕ್ಷಮೆ ಯಾಚಿಸಿದ ಪ್ರತಾಪ್‌ ಸಿಂಹ

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರಲ್ಲಿ ಸಂಸದ ಪ್ರತಾಪ್‌ ಸಿಂಹ ಅವರು ಟ್ವೀಟ್ ಮೂಲಕ ಕ್ಷಮೆ ಯಾಚಿಸಿದ್ದಾರೆ. ನಮ್ಮ ಪರವಾಗಿ ಮತ ಕೇಳುವ, ಬ್ಯಾನರ್ ಬಂಟಿಂಗ್ ಕಟ್ಟುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗೂ ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕೂ ಇರುತ್ತದೆ. ಘಟನೆಗೆ ಸಂಬಂಧಿಸಿದಂತೆ ಪಕ್ಷ ಸೋತಾಗ ಅನಾಥನಾಗುವುದು, ಅಪಾಯಕ್ಕೆ ಸಿಲುಕುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ

ಟ್ವೀಟ್‌ ಮೂಲಕ ಕ್ಷಮೆ ಯಾಚಿಸಿದ ಪ್ರತಾಪ್‌ ಸಿಂಹ Read More »

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್|ಎಐಸಿಸಿ ಪ್ರ. ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

ಪುತ್ತೂರು: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ನೇಮಕವಾಗಿದ್ದು, ಮೇ 20ರಂದು ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ನಡೆಯಲಿದೆ ಎಂದು ಎಐಸಿಸಿ ಪ್ರ. ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಮಾಹಿತಿ ನೀಡಿದ್ದಾರೆ. ಇದೇ ಸಂದರ್ಭ ಕೆಲ ಸಚಿವರ ಪ್ರಮಾಣವಚನವೂ ನಡೆಯಲಿದೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್|ಎಐಸಿಸಿ ಪ್ರ. ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ Read More »

ಬಸನಗೌಡ ಪಾಟೀಲ್ ಯತ್ನಾಳ್ ನಾಳೆ ಪುತ್ತೂರಿಗೆ

ಪುತ್ತೂರು: ಫೈರ್ ಬ್ರಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಪುತ್ತೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರಿನಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಯತ್ನಾಳ್ ಭೇಟಿ ಮಹತ್ವ ಪಡೆದುಕೊಂಡಿದೆ. ಬಿಜೆಪಿ ನಾಯಕರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಂಭತ್ತು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಅವರ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದ್ದು, ರಾಜ್ಯದಲ್ಲಿ ಭಾರೀ ಸುದ್ದಿಯಾಗುತ್ತಿದೆ.

ಬಸನಗೌಡ ಪಾಟೀಲ್ ಯತ್ನಾಳ್ ನಾಳೆ ಪುತ್ತೂರಿಗೆ Read More »

ನಾಳೆ ಮಧ್ಯಾಹ್ನ ಮುಖ್ಯಮಂತ್ರಿ ಪ್ರಮಾಣ ವಚನ

ಪುತ್ತೂರು: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ. ನಾಳೆ ಮಧ್ಯಾಹ್ನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ನಡೆಯಲಿದೆ. ಈ ಬಗ್ಗೆ ಇದೀಗ ಅಧಿಕೃತ ಪ್ರಕಟಣೆ ಹೊರ ಬಿದ್ದಿದೆ. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಪ್ರಮಾಣ ಬೋಧಿಸಲಿದ್ದಾರೆ.

ನಾಳೆ ಮಧ್ಯಾಹ್ನ ಮುಖ್ಯಮಂತ್ರಿ ಪ್ರಮಾಣ ವಚನ Read More »

ಮಸೀದಿಗಳಿಗೆ ನೀಡಿದ ದೇಣಿಗೆ ವಾಪಾಸ್ ನೀಡುವಂತೆ ಜಾಹೀರಾತು|64 ಮಸೀದಿಗಳಿಗೆ 17.30 ಕೋಟಿ ರೂ. ದೇಣಿಗೆ ನೀಡಿದ ಕೆಜಿಎಫ್ ಅಭ್ಯರ್ಥಿ

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಮುಖಭಂಗ ಎದುರಿಸಿರುವ ಯೂಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು 64 ಮಸೀದಿಗಳಿಗೆ ತಾನು ನೀಡಿದ ದೇಣಿಗೆ ಚೆಕ್‌ಗಳನ್ನು ವಾಪಸ್ ನೀಡುವಂತೆ ಉರ್ದು ಪತ್ರಿಕೆಗಳಲ್ಲಿ ಜಾಹಿರಾತು ಪ್ರಕಟಿಸಿದ್ದಾರೆ. ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದ ಕೆಜಿಎಫ್ ಬಾಬು 64 ಮಸೀದಿಗಳ ಸಮಿತಿಗಳಿಗೆ 17.30 ಕೋಟಿ ರೂ. ದೇಣಿಗೆ ನೀಡಿದ್ದರು. ಸೋತ ನಂತರ ಸಮಿತಿಗಳಿಗೆ ನನ್ನ ಹಣ ಹರಾಮ್ ಆಗಿದ್ದು ಅದನ್ನು ಖರ್ಚು ಮಾಡಬೇಡಿ, ಸಾಧ್ಯವಾದಷ್ಟೂ ಬೇಗ ಅದನ್ನು ವಾಪಸ್ ಕೊಡಿ ಎಂದು ಹೇಳಿದ್ದಾರೆ. ದಾರುಲ್

ಮಸೀದಿಗಳಿಗೆ ನೀಡಿದ ದೇಣಿಗೆ ವಾಪಾಸ್ ನೀಡುವಂತೆ ಜಾಹೀರಾತು|64 ಮಸೀದಿಗಳಿಗೆ 17.30 ಕೋಟಿ ರೂ. ದೇಣಿಗೆ ನೀಡಿದ ಕೆಜಿಎಫ್ ಅಭ್ಯರ್ಥಿ Read More »

ಮುಖ್ಯಮಂತ್ರಿ ಹುದ್ದೆ ಕಗ್ಗಂಟು: ಇಂದು ಬೆಳಗ್ಗೆ 11ಕ್ಕೆ ನಿರ್ಣಾಯಕ ಸಭೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಬಿಗಿ ಪಟ್ಟುಗಳಿಂದಾಗಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಮುಖ್ಯಮಂತ್ರಿ ಆಯ್ಕೆಯನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ನಿನ್ನೆ ದಿಲ್ಲಿಗೆ ತೆರಳಿರುವ ಡಿಕೆಶಿ ಕೊಡುವುದಾದರೆ ಮುಖ್ಯಮಂತ್ರಿ ಹುದ್ದೆ ಕೊಡಿ, ಇಲ್ಲವಾದರೆ ಯಾವ ಹುದ್ದೆಯೂ ಬೇಡ, ಸಾಮಾನ್ಯ ಶಾಸಕನಾಗಿ ಇರುತ್ತೇನೆ ಎಂದು ಖಡಕ್‌ ಆಗಿ ಹೇಳಿದ ನಂತರ ಖರ್ಗೆ ಸೇರಿ ಹೈಕಮಾಂಡ್‌ ನಾಯಕರು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.ಶಾಸಕರ ಒಲವು ಸಿದ್ದರಾಮಯ್ಯ ಕಡೆಗಿದೆ. ಆದರೆ ಪಕ್ಷವನ್ನು ಗೆಲ್ಲಿಸುವಲ್ಲಿ ಡಿಕೆಶಿ ಕೂಡ ಅಪಾರ ಶ್ರಮ ಹಾಕಿದ್ದಾರೆ. ಈ ಪೈಕಿ ಯಾರು ಮುನಿಸಿಕೊಂಡರೂ

ಮುಖ್ಯಮಂತ್ರಿ ಹುದ್ದೆ ಕಗ್ಗಂಟು: ಇಂದು ಬೆಳಗ್ಗೆ 11ಕ್ಕೆ ನಿರ್ಣಾಯಕ ಸಭೆ Read More »

error: Content is protected !!
Scroll to Top