ರಾಜ್ಯ

ಮಸೀದಿಗಳಿಗೆ ನೀಡಿದ ದೇಣಿಗೆ ವಾಪಾಸ್ ನೀಡುವಂತೆ ಜಾಹೀರಾತು|64 ಮಸೀದಿಗಳಿಗೆ 17.30 ಕೋಟಿ ರೂ. ದೇಣಿಗೆ ನೀಡಿದ ಕೆಜಿಎಫ್ ಅಭ್ಯರ್ಥಿ

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಮುಖಭಂಗ ಎದುರಿಸಿರುವ ಯೂಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು 64 ಮಸೀದಿಗಳಿಗೆ ತಾನು ನೀಡಿದ ದೇಣಿಗೆ ಚೆಕ್‌ಗಳನ್ನು ವಾಪಸ್ ನೀಡುವಂತೆ ಉರ್ದು ಪತ್ರಿಕೆಗಳಲ್ಲಿ ಜಾಹಿರಾತು ಪ್ರಕಟಿಸಿದ್ದಾರೆ. ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದ ಕೆಜಿಎಫ್ ಬಾಬು 64 ಮಸೀದಿಗಳ ಸಮಿತಿಗಳಿಗೆ 17.30 ಕೋಟಿ ರೂ. ದೇಣಿಗೆ ನೀಡಿದ್ದರು. ಸೋತ ನಂತರ ಸಮಿತಿಗಳಿಗೆ ನನ್ನ ಹಣ ಹರಾಮ್ ಆಗಿದ್ದು ಅದನ್ನು ಖರ್ಚು ಮಾಡಬೇಡಿ, ಸಾಧ್ಯವಾದಷ್ಟೂ ಬೇಗ ಅದನ್ನು ವಾಪಸ್ ಕೊಡಿ ಎಂದು ಹೇಳಿದ್ದಾರೆ. ದಾರುಲ್ […]

ಮಸೀದಿಗಳಿಗೆ ನೀಡಿದ ದೇಣಿಗೆ ವಾಪಾಸ್ ನೀಡುವಂತೆ ಜಾಹೀರಾತು|64 ಮಸೀದಿಗಳಿಗೆ 17.30 ಕೋಟಿ ರೂ. ದೇಣಿಗೆ ನೀಡಿದ ಕೆಜಿಎಫ್ ಅಭ್ಯರ್ಥಿ Read More »

ಮುಖ್ಯಮಂತ್ರಿ ಹುದ್ದೆ ಕಗ್ಗಂಟು: ಇಂದು ಬೆಳಗ್ಗೆ 11ಕ್ಕೆ ನಿರ್ಣಾಯಕ ಸಭೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಬಿಗಿ ಪಟ್ಟುಗಳಿಂದಾಗಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಮುಖ್ಯಮಂತ್ರಿ ಆಯ್ಕೆಯನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ನಿನ್ನೆ ದಿಲ್ಲಿಗೆ ತೆರಳಿರುವ ಡಿಕೆಶಿ ಕೊಡುವುದಾದರೆ ಮುಖ್ಯಮಂತ್ರಿ ಹುದ್ದೆ ಕೊಡಿ, ಇಲ್ಲವಾದರೆ ಯಾವ ಹುದ್ದೆಯೂ ಬೇಡ, ಸಾಮಾನ್ಯ ಶಾಸಕನಾಗಿ ಇರುತ್ತೇನೆ ಎಂದು ಖಡಕ್‌ ಆಗಿ ಹೇಳಿದ ನಂತರ ಖರ್ಗೆ ಸೇರಿ ಹೈಕಮಾಂಡ್‌ ನಾಯಕರು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.ಶಾಸಕರ ಒಲವು ಸಿದ್ದರಾಮಯ್ಯ ಕಡೆಗಿದೆ. ಆದರೆ ಪಕ್ಷವನ್ನು ಗೆಲ್ಲಿಸುವಲ್ಲಿ ಡಿಕೆಶಿ ಕೂಡ ಅಪಾರ ಶ್ರಮ ಹಾಕಿದ್ದಾರೆ. ಈ ಪೈಕಿ ಯಾರು ಮುನಿಸಿಕೊಂಡರೂ

ಮುಖ್ಯಮಂತ್ರಿ ಹುದ್ದೆ ಕಗ್ಗಂಟು: ಇಂದು ಬೆಳಗ್ಗೆ 11ಕ್ಕೆ ನಿರ್ಣಾಯಕ ಸಭೆ Read More »

ಎಸ್ಸೆಸೆಲ್ಸಿ ಪೂರಕ ಪರೀಕ್ಷೆ ಅರ್ಜಿ, ಉತ್ತರ ಪತ್ರಿಕೆ ಸ್ಕ್ಯಾನ್ಡ್‌ ಪ್ರತಿ ಪಡೆಯಲು ದಿನಾಂಕ ವಿಸ್ತರಣೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಹತ್ವದ ಪ್ರಕಟಣೆಯನ್ನು ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ನೋಂದಣಿ ಮಾಡಿಕೊಳ್ಳಲು ಮತ್ತು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಅವಧಿಯನ್ನು ಮೇ 18 ರವರೆಗೆ ವಿಸ್ತರಿಸಿದೆ. ಈ ಹಿಂದೆ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಮೇ 14, 2023 ಕೊನೆಯ ದಿನಾಂಕವಾಗಿತ್ತು. ಹಾಗೂ ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೇ 15, 2023 ಕೊನೆಯ ದಿನವಾಗಿದ್ದು, ಈಗ ಈ ದಿನಾಂಕವನ್ನು ಮೇ 18

ಎಸ್ಸೆಸೆಲ್ಸಿ ಪೂರಕ ಪರೀಕ್ಷೆ ಅರ್ಜಿ, ಉತ್ತರ ಪತ್ರಿಕೆ ಸ್ಕ್ಯಾನ್ಡ್‌ ಪ್ರತಿ ಪಡೆಯಲು ದಿನಾಂಕ ವಿಸ್ತರಣೆ Read More »

7ನೇ ರಾಜ್ಯ ವೇತನ ಆಯೋಗದ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಿಸಲು ಮತ್ತು ನೂತನ ವೇತನ ಶ್ರೇಣಿ ರಚಿಸುವ ಉದ್ದೇಶದಿಂದ ನಿವೃತ್ತ ಸಿ.ಎಸ್.ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ 7ನೇ ರಾಜ್ಯ ವೇತನ ಆಯೋಗದ ಅವಧಿ ವಿಸ್ತರಣೆ ಮಾಡಲಾಗಿದೆ. ರಾಜ್ಯಪಾಲರ ಆದೇಶದಂತೆ ಮೇ 19ರಿಂದ 6 ತಿಂಗಳ ಕಾಲ ಆಯೋಗದ ಅವಧಿ ವಿಸ್ತರಣೆ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ. 2022ರ ನ. 19ರಂದು ವೇತನ ಆಯೋಗ ರಚನೆಯಾಗಿತ್ತು. ಆಯೋಗದ ಶಿಫಾರಸ್ಸು ಆಧರಿಸಲು ಮುಂದಿನ ಕ್ರಮ ಕೈಗೊಳ್ಳಲು 2023-24ನೇ ಸಾಲಿನಲ್ಲಿ ಹಣವನ್ನೂ

7ನೇ ರಾಜ್ಯ ವೇತನ ಆಯೋಗದ ಅವಧಿ ವಿಸ್ತರಣೆ Read More »

ಕರ್ನಾಟಕ ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಮ್ ತಮ್ಮ ಸ್ಥಾನಕ್ಕೆ ರಾಜೀನಾಮೆ

ಪುತ್ತೂರು: ಕರ್ನಾಟಕದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿದ್ದ ಅರುಣ್ ಶ್ಯಾಮ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪುತ್ತೂರು ಮೂಲದವರಾಗಿರುವ ಅರುಣ್ ಶ್ಯಾಮ್ ಸೋಮವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಹೈಕೋರ್ಟ್ನ ಹಿರಿಯ ನ್ಯಾಯವಾದಿಯಾಗಿರುವ ಅರುಣ್ ಶ್ಯಾಮ್ ಅವರನ್ನು ಎರಡೂವರೆ ವರ್ಷಗಳ ಹಿಂದೆ ಬಿಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿ ನೇಮಕ ಮಾಡಲಾಗಿತ್ತು. ಇದೀಗ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು ಕಾಂಗ್ರೆಸ್‌ಗೆ ಬಹುಮತ ದೊರೆಯುÄತ್ತಿದ್ದಂತೆ ತಮ್ಮ ಸ್ಥಾನಕ್ಕೆ

ಕರ್ನಾಟಕ ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಮ್ ತಮ್ಮ ಸ್ಥಾನಕ್ಕೆ ರಾಜೀನಾಮೆ Read More »

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ!

ಬೆಂಗಳೂರು; ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಾಲಿ ಸಿಎಂ ಆಗೋದು ಬಹುತೇಕ ಖಚಿತ ಎನ್ನಲಾಗಿದೆ. ದೆಹಲಿಯಲ್ಲಿ ತಮ್ಮ ಆಪ್ತ ಶಾಸಕರ ಜೊತೆ ಸಿದ್ದು ಸಭೆ ನಡೆಸಿದ ಬೆನ್ನಲ್ಲೇ ಸಿದ್ದರಾಮಯ್ಯ ನೂತನ ಸಿಎಂ ಆಗೋದು ಖಚಿತ ಎನ್ನಲಾಗಿದೆ. ಇನ್ನು ಸಿದ್ದರಾಮಯ್ಯ ನೂತನ ಸಿಎಂ ಎಂಬುವುದು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕೆಲವೇ ಹೊತ್ತಲ್ಲೇ ಉತ್ತರ ಸಿಗಲಿದೆ ಎಂದು ಹೇಳಲಾಗಿದೆ.

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ! Read More »

ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ | ಗ್ರಾಮಸ್ಥರ ಪಟ್ಟು : ಅಧಿಕಾರಿಗಳು ಪೆಚ್ಚು

ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಸರಕಾರ ನೀಡಿದ ಗ್ಯಾರೆಂಟಿ ಕಾರ್ಡ್ ಇದೀಗ ಅಧಿಕಾರಿಗಳನ್ನು ಹೊಸ ಇಕ್ಕಟ್ಟಿಗೆ ಸಿಲುಕಿಸಿದೆ. ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಎಂಬಲ್ಲಿ ಗ್ರಾಮಸ್ಥರು ವಿದ್ಯುತ್ ಬಿಲ್ ಕಟ್ಟಲ್ಲ ಎಂದು ಆವಾಜ್ ಹಾಕಿದ್ದು, ಅಧಿಕಾರಿಗಳು ಹ್ಯಾಪ್ ಮೋರೆ ಹಾಕಿಕೊಂಡು ಹಿಂದೆ ಬಂದಿದ್ದಾರೆ. ಚುನಾವಣಾ ಸಂದರ್ಭ ಕಾಂಗ್ರೆಸ್ ನಾಯಕರು ಭರವಸೆ ನೀಡಿದಂತೆ – ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರೆಂಟ್ ಬಿಲ್ ಕಟ್ಟೋದು ಬೇಡ ಎಂದು ಹೇಳಿಕೆ ನೀಡುತ್ತಿದ್ದರು. ಇದರ ಜೊತೆಗೆ ಬಡ ಕುಟುಂಬದ ಮಹಿಳೆಯರಿಗೆ ಮಾಸಿಕ ನೆರವು, ಸಿಲಿಂಡರ್

ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ | ಗ್ರಾಮಸ್ಥರ ಪಟ್ಟು : ಅಧಿಕಾರಿಗಳು ಪೆಚ್ಚು Read More »

ಸಿದ್ದರಾಮಯ್ಯ, ಡಿಕೆಶಿ ವಿಶೇಷ ವಿಮಾನದಲ್ಲಿ ದಿಲ್ಲಿಗೆ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು 70ರ ಗಡಿಯತ್ತಲೂ ಬರದಂತೆ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್‌ಗೆ ಈಗ ಮುಖ್ಯಮಂತ್ರಿ ಆಯ್ಕೆ ವಿಚಾರವೇ ದೊಡ್ಡ ಕಗ್ಗಂಟಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಗಾದಿಗಾಗಿ ಭಾರಿ ಪೈಪೋಟಿ ನಡೆಯುತ್ತಿದ್ದು, ಇಬ್ಬರು ನಾಯಕರು ಇಂದು ದಿಲ್ಲಿಯತ್ತ ಹೋಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಧ್ಯಾಹ್ನ 1 ಗಂಟೆ ಬಳಿಕ ದಿಲ್ಲಿಗೆ ತೆರಳಿದ್ದಾರೆ. ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ಎಚ್ಎಎಲ್ ನಿಂದ ಸಿದ್ದರಾಮಯ್ಯ

ಸಿದ್ದರಾಮಯ್ಯ, ಡಿಕೆಶಿ ವಿಶೇಷ ವಿಮಾನದಲ್ಲಿ ದಿಲ್ಲಿಗೆ Read More »

ಬಜರಂಗ ದಳ ದೂಷಿಸಿದ ಖರ್ಗೆಗೆ ಕೋರ್ಟ್‌ ನೋಟಿಸ್‌ | ಖರ್ಗೆ ವಿರುದ್ಧ ದಾಖಲಾಗಿದೆ 100 ಕೋ. ರೂ. ಮಾನನಷ್ಟ ಮೊಕದ್ದಮೆ

ಹೊಸದಿಲ್ಲಿ : ಬಜರಂಗದಳವನ್ನು ಪಿಎಫ್​ಐ ಜತೆ ಹೋಲಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್​ ಸಮನ್ಸ್ ನೀಡಿದೆ. ​​ಬಜರಂಗದಳ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಅವರಿಗೆ ಪಂಜಾಬ್‌ನ ಸಂಗ್ರೂರ್ ನ್ಯಾಯಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ. ಖರ್ಗೆಯವರು ಈ ಹಿಂದೆ ಬಜರಂಗದಳ ಸಂಘಟನೆಯನ್ನು ಪಿಎಫ್‌ಐ ಜತೆ ಹೋಲಿಕೆ ಮಾಡಿದ್ದರು. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಶ್ವ ಹಿಂದೂ ಪರಿಷತ್‌ ಚಂಡೀಗಡ ಘಟಕ 100 ಕೋಟಿ ರೂ. ಮಾನಹಾನಿ ಪರಿಹಾರ ಕೋರಿ

ಬಜರಂಗ ದಳ ದೂಷಿಸಿದ ಖರ್ಗೆಗೆ ಕೋರ್ಟ್‌ ನೋಟಿಸ್‌ | ಖರ್ಗೆ ವಿರುದ್ಧ ದಾಖಲಾಗಿದೆ 100 ಕೋ. ರೂ. ಮಾನನಷ್ಟ ಮೊಕದ್ದಮೆ Read More »

ಸಿಎಂ ಆಯ್ಕೆ ವಿಚಾರ ಖರ್ಗೆ ಹೆಗಲಿಗೆ! ಶಾಸಕಾಂಗ ಪಕ್ಷದ ಸಭೆ ನಿರ್ಣಯ

ಬೆಂಗಳೂರು: ಸಿಎಂ ಆಯ್ಕೆ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯಗೊಂಡಿದೆ. ಬೆಂಗಳೂರಿನ ಶಾಂಗ್ರಿಲಾ ಹೋಟೆಲಿನಲ್ಲಿ ನಡೆದ ಸಭೆಯಲ್ಲಿ ಒಂದು ಸಾಲಿನ ನಿರ್ಣಯವನ್ನಷ್ಟೇ ತೆಗೆದುಕೊಳ್ಳಲು ಸಭೆ ಸಫಲವಾಯಿತು. ಎಐಸಿಸಿ ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ಧ ಎಂದು ಶಾಸಕರು ಏಕ ಸ್ವರದಲ್ಲಿ ಹೇಳುವ ಮೂಲಕ ಸಭೆ ಮುಕ್ತಾಯ ಕಂಡಿತು. ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಗಲಿಗೆ ಸಿಎಂ ಆಯ್ಕೆ ವಿಚಾರ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಖರ್ಗೆ ಅವರು ನಾಳೆ ಬೆಳಿಗ್ಗೆ ಸಿಸೋಡಿಯಾ ಅವರನ್ನು ಭೇಟಿಯಾಗಲಿದ್ದಾರೆ.

ಸಿಎಂ ಆಯ್ಕೆ ವಿಚಾರ ಖರ್ಗೆ ಹೆಗಲಿಗೆ! ಶಾಸಕಾಂಗ ಪಕ್ಷದ ಸಭೆ ನಿರ್ಣಯ Read More »

error: Content is protected !!
Scroll to Top