ರಾಜ್ಯ

ಶಾಸಕ ಮಾಡಾಳ್‌ ಜಾಮೀನು:ಪ್ರಕರಣದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಪತ್ರ

ಬೆಂಗಳೂರು : ಲಂಚ ಪ್ರಕರಣ ಪ್ರಮುಖ ಆರೋಪಿಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನ್ಯಾಯಾಲಯ ಜಾಮೀನು ನೀಡಿದ ರೀತಿ ವಕೀಲರನ್ನೇ ಆಶ್ಚರ್ಯಕ್ಕೀಡು ಮಾಡಿದೆ. ನಿರೀಕ್ಷಣಾ ಜಾಮೀನು ಅರ್ಜಿಯನ್ನು ತುರ್ತಾಗಿ ವಿಚಾರಣೆ ಮಾಡಿ ಒಂದೇ ದಿನದಲ್ಲಿ ಇತ್ಯರ್ಥಗೊಳಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ನ್ಯಾಯಾಂಗದ ನಡೆಗೆ ವಕೀಲರ ಸಂಘ ತೀವ್ರ ಆಘಾತ ವ್ಯಕ್ತಪಡಿಸಿದೆ. ನ್ಯಾಯಾಂಗದ ಈ ಪರಿಸ್ಥಿತಿಯ ಬಗ್ಗೆ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಪ್ರಧಾನ ಕಾರ್ಯದರ್ಶಿ ಟಿ.ಜಿ. ರವಿ ಮತ್ತು ಖಜಾಂಚಿ ಹರೀಶ್, ಕೋರ್ಟ್ ಗಳಲ್ಲಿನ […]

ಶಾಸಕ ಮಾಡಾಳ್‌ ಜಾಮೀನು:ಪ್ರಕರಣದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಪತ್ರ Read More »

ಮಾ.8 ರಂದು ಮಹಿಳೆಯರಿಗೆ ಬಿ.ಎಂ.ಟಿ.ಸಿಯಲ್ಲಿ ಉಚಿತ ಪ್ರಯಾಣ

ಬೆಂಗಳೂರು: ಮಾ​.8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ ಬೆಂಗಳೂರು ಮಹಾನಗರ ಸಾರಿಗೆ ಮಹಿಳೆಯರಿಗೆ ಗುಡ್​ ನ್ಯೂಸ್​ ​​​ ನೀಡಿದೆ. ಮಾ.7 ರ ಮಧ್ಯರಾತ್ರಿ 12 ಗಂಟೆಯಿಂದ ಮಾ.8 ಮಧ್ಯರಾತ್ರಿ 12 ಗಂಟೆಯವರೆಗೆ, ಎಸಿ ವೋಲ್ವೋ ಸೇರಿದಂತೆ ಬಿಎಂಟಿಸಿಯ ಎಲ್ಲ ಮಾದರಿಯ ಬಸ್​​ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಮಹಿಳಾ ದಿನಾಚರಣೆ ಅಂಗವಾಗಿ ಒಂದು ದಿನ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ (ಎಂ.ಡಿ) ಸತ್ಯವತಿ ಪತ್ರ ಬರೆದ ಪತ್ರಕ್ಕೆ

ಮಾ.8 ರಂದು ಮಹಿಳೆಯರಿಗೆ ಬಿ.ಎಂ.ಟಿ.ಸಿಯಲ್ಲಿ ಉಚಿತ ಪ್ರಯಾಣ Read More »

ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ: ಫಾಕ್ಸ್‌ಕಾನ್

ಬೆಂಗಳೂರು: ಕರ್ನಾಟಕದಲ್ಲಿ ಐಫೋನ್‌ ಉತ್ಪಾದನಾ ಘಟಕವನ್ನು ಸ್ಥಾಪಿಸಿ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗುವ ವಿಚಾರ ಸಂಬಂಧ ಎದ್ದಿದ್ದ ಗೊಂದಲಗಳಿಗೆ ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಹೇಳುವುದರ ಮೂಲಕ ಫಾಕ್ಸ್‌ಕಾನ್ ತೆರೆ ಎಳೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಎರಡು ಪುಟಗಳ ಪತ್ರ ಬರೆದಿರುವ ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು, ಬೆಂಗಳೂರಿನಲ್ಲಿ ‘ಪ್ರಾಜೆಕ್ಟ್ ಎಲಿಫೆಂಟ್’ ಅನ್ನು ಯಶಸ್ವಿಯಾಗಿ ಆರಂಭಿಸುವುದಾಗಿ ಹೇಳಿ, ಈ ಯೋಜನೆಗೆ ನಿಮ್ಮ ರಾಜ್ಯವನ್ನು ಸಂಭಾವ್ಯ ಹೂಡಿಕೆಯ ತಾಣವಾಗಿ ಪರಿಗಣಿಸುವುದರಿಂದ, ಯಾಂತ್ರಿಕ/ನಿಖರವಾದ ಯಂತ್ರೋಪಕರಣಗಳು, ಕೆ ಎಲೆಕ್ಟ್ರಿಕ್ ವಾಹನ,

ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ: ಫಾಕ್ಸ್‌ಕಾನ್ Read More »

ಶಾಸಕ ಮಾಡಾಳ್‌ಗೆ ಮಧ್ಯಂತರ ಜಾಮೀನು

ಬೆಂಗಳೂರು: ಪುತ್ರನ ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಕೆಎಸ್ ಡಿಎಲ್ ಮಾಜಿ ಚೇರ್ಮನ್ ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪಗೆ ಹೈಕೋಟರ್ಸ್‌ ಏಕಸದಸ್ಯ ಪೀಠದಿಂದ ಮಧ್ಯಂತರ ಜಾಮೀನು ಮಂಜೂರಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿ ತುರ್ತು ವಿಚಾರಣೆಗಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಪುತ್ರ ಮಾಡಾಳ್ ಪ್ರಶಾಂತ್ ಮೇಲೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯ ನಂತರ ಅವರ ನಿವಾಸ ಮತ್ತು ಕಚೇರಿಯಲ್ಲಿ ಸಿಕ್ಕಿದ

ಶಾಸಕ ಮಾಡಾಳ್‌ಗೆ ಮಧ್ಯಂತರ ಜಾಮೀನು Read More »

ಮಾ.24ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಸರಕಾರಕ್ಕೆ ಇನ್ನೊಂದು ತಲೆನೋವು ಬೆಂಗಳೂರು: ಸರ್ಕಾರಿ ನೌಕರರ ನಂತರ ಇದೀಗ ಸಾರಿಗೆ ನೌಕರರು ಮುಷ್ಕರ ಹೂಡಲು ಮುಂದಾಗಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.24ರಿಂದ ಅನಿರ್ದಿಷ್ಟಾವಧಿ ಧರಣಿ ಮಾಡಲು ಸಾರಿಗೆ ನೌಕರರು ನಿರ್ಧರಿಸಿದ್ದಾರೆ. ಸಾರಿಗೆ ನಿಗಮ ನೌಕರರ ಸಮಾನ ಮನಸ್ಕರ ವೇದಿಕೆಯಿಂದ ಹೋರಾಟ ನಡೆಯಲಿದ್ದು, ಧರಣಿ ಸಂಬಂಧ ಇಂದು ಕಾರ್ಮಿಕ ಇಲಾಖೆಗೆ ಸಾರಿಗೆ ನೌಕರರು ನೋಟಿಸ್ ನೀಡಲಿದ್ದಾರೆ. ರಾಜ್ಯದ ನಾಲ್ಕು ನಿಗಮಗಳ ಬಸ್​​ಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ. ಸಾರಿಗೆ ನೌಕರರ ಕೂಟ ಈಗಾಗಲೇ

ಮಾ.24ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ Read More »

ಊಟ, ತಿಂಡಿ ಖರ್ಚು 3.26 ಕೋ. ರೂ. ಮಾತ್ರ ಉಳಿದದ್ದು ಬಿಜೆಪಿ ಸುಳ್ಳಿನ ಕಾರ್ಖಾನೆಯ ಲೆಕ್ಕ

200 ಕೋ. ರೂ. ಹಗರಣಕ್ಕೆ ಸಿದ್ದರಾಮಯ್ಯ ಸ್ಪಷ್ಟೀಕರಣ ಬೆಂಗಳೂರು : ಕಾಂಗ್ರೆಸ್ ಆಡಳಿತದ ಐದು ವರ್ಷಗಳಲ್ಲಿ ಕಾಫಿ, ತಿಂಡಿ, ಬಿಸ್ಕತ್‌ಗೆ 200 ಕೋ.ರೂ. ಖರ್ಚು ಮಾಡಲಾಗಿದೆ ಎಂದು ಬಿಜೆಪಿ ವಕ್ತಾರ ಎನ್.ಆರ್ ರಮೇಶ್ ಮಾಡಿರುವ ಆರೋಪವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಲ್ಲಗಳೆದಿದ್ದಾರೆ.ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, 2013-14 ರಿಂದ 2017-18 ರವರೆಗೆ ನಮ್ಮ ಸರ್ಕಾರದ ಅವಧಿಯಲ್ಲಿ 3.26 ಕೋ. ರೂ. ಕಾಫಿ, ತಿಂಡಿ ಮತ್ತು ಊಟ ಇತ್ಯಾದಿ ಆತಿಥ್ಯದ ವೆಚ್ಚಕ್ಕೆ ಖರ್ಚಾಗಿದ್ದರೆ,

ಊಟ, ತಿಂಡಿ ಖರ್ಚು 3.26 ಕೋ. ರೂ. ಮಾತ್ರ ಉಳಿದದ್ದು ಬಿಜೆಪಿ ಸುಳ್ಳಿನ ಕಾರ್ಖಾನೆಯ ಲೆಕ್ಕ Read More »

ಕರಾವಳಿಯ ತಾಪಮಾನ ಏರಿಕೆಗೆ ಬಿಸಿಗಾಳಿ ಕಾರಣ

ಅರಬ್ಬೀ ಸಮುದ್ರದ ಆಂಟಿಸೈಕ್ಲೋನ್‌ನಿಂದ ನಾಲ್ಕು ದಿನ ಬೀಸಿದ ಬಿಸಿಗಾಳಿ ಮಂಗಳೂರು : ಅರಬ್ಬೀ ಸಮುದ್ರದಲ್ಲಿ ಸೃಷ್ಟಿಯಾದ ಆಂಟಿಸೈಕ್ಲೋನ್‌ (Anticyclone) ಪರಿಣಾಮ ಕರಾವಳಿ ಪ್ರದೇಶದಲ್ಲಿ ನಾಲ್ಕು ದಿನ ಬಿಸಿಗಾಳಿ ಬೀಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶುಕ್ರವಾರದಿಂದ ಸೋಮವಾರದವರೆ ಬಿಸಿ ಗಾಳಿ ಬೀಸಿದೆ. ಈ ಬೇಸಿಗೆಯಲ್ಲಿ ಬಿಸಿಗಾಳಿ ಬೀಸಿರುವುದು ಇದೇ ಮೊದಲು. ಬಿಸಿಗಾಳಿಯಿಂದಾಗಿ ಶನಿವಾರ ಕೆಲವೆಡೆ 40 ಡಿಗ್ರಿ ಸೆಲ್ಸಿಯಸ್ ತಾಪಮಾನ​ ದಾಖಲಾಗಿತ್ತು. ಇದು ಸಾಮನ್ಯ ತಾಪಮಾನಕ್ಕಿಂತ 6

ಕರಾವಳಿಯ ತಾಪಮಾನ ಏರಿಕೆಗೆ ಬಿಸಿಗಾಳಿ ಕಾರಣ Read More »

ಸಿದ್ದರಾಮಯ್ಯ ಅವಧಿಯಲ್ಲಿ ಟೀ-ಬಿಸ್ಕತ್‌ ಹೆಸರಲ್ಲಿ 200 ಕೋ. ರೂ. ಲೂಟಿ

ದಾಖಲೆ ಸಹಿತ ಬಿಜೆಪಿ ಆರೋಪ ಬೆಂಗಳೂರು : ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೇವಲ ಕಾಫಿ, ತಿಂಡಿ, ಬಿಸ್ಕಿಟ್‌ಗಳ ಹೆಸರಿನಲ್ಲಿ 200 ಕೋಟಿ ರೂ.ಗೂ ಹೆಚ್ಚು ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಬರೀ ಕಾಫಿ, ಬಿಸ್ಕಿಟ್‌ಗೆ 200 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ಬಿಜೆಪಿ ವಕ್ತಾರ ಎನ್.​ಆರ್. ರಮೇಶ್ ಗಂಭೀರ ಆರೋಪ ಮಾಡಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಎನ್.ಆರ್.ರಮೇಶ್ ದಾಖಲೆ ಸಮೇತ ಸಿದ್ದರಾಮಯ್ಯ ವಿರುದ್ಧ 200 ಕೋಟಿ ಹಗರಣದ ನಾಹಿತಿ

ಸಿದ್ದರಾಮಯ್ಯ ಅವಧಿಯಲ್ಲಿ ಟೀ-ಬಿಸ್ಕತ್‌ ಹೆಸರಲ್ಲಿ 200 ಕೋ. ರೂ. ಲೂಟಿ Read More »

ಮಂಗಳೂರು ಕುಕ್ಕರ್‌ ಸ್ಫೋಟದ ಉಗ್ರ ಆಸ್ಪತ್ರೆಯಿಂದ ಬಿಡುಗಡೆ

ಎರಡೂವರೆ ತಿಂಗಳು ಸರಕಾರಿ ಖರ್ಚಿನಲ್ಲಿ ಚಿಕಿತ್ಸೆ ಬೆಂಗಳೂರು : ಮಂಗಳೂರು ಆಟೋರಿಕ್ಷಾ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಉಗ್ರ ಮೊಹಮ್ಮದ್ ಶಾರಿಕ್ ಸೋಮವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾನೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅವನನ್ನು ವಶಕ್ಕೆ ತೆಗೆದುಕೊಂಡಿದೆ.ಕಳೆದ ನ.19 ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್‌ನಲ್ಲಿ ಬಾಂಬಿಟ್ಟುಕೊಂಡು ಸಾಗಿಸುತ್ತಿದ್ದಾಗ ಅದು ಸ್ಫೋಟಿಸಿ ಶಾರಿಕ್‌ ಜತೆ ರಿಕ್ಷಾ ಚಾಲಕ ಪುರುಷೋತ್ತಮ್ ಗಾಯಗೊಂಡಿದ್ದರು. 24 ವರ್ಷದ ತೀರ್ಥಹಳ್ಳಿ ಮೂಲದ ಆರೋಪಿ ಶಾರಿಕ್ ಗಂಭೀರ ಸ್ವರೂಪದ ಗಾಯವಾಗಿತ್ತು. ಮಂಗಳೂರಿನ

ಮಂಗಳೂರು ಕುಕ್ಕರ್‌ ಸ್ಫೋಟದ ಉಗ್ರ ಆಸ್ಪತ್ರೆಯಿಂದ ಬಿಡುಗಡೆ Read More »

ಶೂಟಿಂಗ್‌ ವೇಳೆ ಬಿದ್ದು ಗಾಯಗೊಂಡ ಅಮಿತಾಭ್‌ ಬಚ್ಚನ್‌

ಮುಂಬಯಿ : ಹಿರಿಯ ನಟ ಅಮಿತಾಭ್ ಬಚ್ಚನ್​ ಅವರು ಶೂಟಿಂಗ್ ವೇಳೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಶೂಟಿಂಗ್ ವೇಳೆ ಬಿದ್ದ ಬಿರುಸಿಗೆ ಅಮಿತಾಭ್ ಬಚ್ಚನ್​ ಪಕ್ಕೆಲುಬು ಬಳಿ ಗಾಯವಾಗಿವಾಗಿದೆ.‘ಪ್ರಾಜೆಕ್ಟ್ ಕೆ’ ಚಿತ್ರದ ಶೂಟಿಂಗ್ ವೇಳೆ ಘಟನೆ ಸಂಭವಿಸಿದೆ.ಚಿತ್ರೀಕರಣ ಹೈದರಾಬಾದ್ ಬಳಿ ನಡೆಯುತ್ತಿತ್ತು, ಸದ್ಯ ಮುಂಬಯಿಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಮೇರುನಟರಾಗಿರುವ ಅಮಿತಾಭ್‌ ಬಚ್ಚನ್‌ ಎರಡು ಬಾರಿ ಕೋವಿಡ್‌ ಗೆದ್ದಿದ್ದರು. ದೇಹದ ಕೆಲವೊಂದು ಅಂಗಾಂಗಗಳು ವೈಫಲ್ಯವಾಗಿದ್ದವು ಎಂದು ಅಮಿತಾಭ್‌ ಹೇಳಿಕೊಂಡಿದ್ದರು. ಆಗ ಕೆಲವು ಅಂಗಾಂಗಗಳು ಕೆಲಸ

ಶೂಟಿಂಗ್‌ ವೇಳೆ ಬಿದ್ದು ಗಾಯಗೊಂಡ ಅಮಿತಾಭ್‌ ಬಚ್ಚನ್‌ Read More »

error: Content is protected !!
Scroll to Top