ರಾಜ್ಯ

ಭ್ರಷ್ಟಾಚಾರ ಆರೋಪಿ ಶಾಸಕ ವಿರೂಪಾಕ್ಷಪ್ಪ ಜಾಮೀನಿಗೆ ಅರ್ಜಿ

ಬೆಂಗಳೂರು : ಲಂಚ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಶಾಸಕರ ಪುತ್ರ ಪ್ರಶಾಂತ್ ಮಾಡಾಳ್‌ 40 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಬೆಳಕಿಗೆ ಬಂದ ಬಳಿಕ ಶಾಸಕರು ನಾಪತ್ತೆಯಾಗಿದ್ದಾರೆ. ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆಗೆ ಬರುವಂತೆ ಮಾಡಾಳ್ ವಿರೂಪಾಕ್ಷಪ್ಪಗೆ ನೋಟಿಸ್ ನೀಡಿದ್ದಾರೆ.ಸೋಮವಾರ ವಕೀಲರ ಮೂಲಕ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ […]

ಭ್ರಷ್ಟಾಚಾರ ಆರೋಪಿ ಶಾಸಕ ವಿರೂಪಾಕ್ಷಪ್ಪ ಜಾಮೀನಿಗೆ ಅರ್ಜಿ Read More »

ರಾಹುಲ್‌ ಗಾಂಧಿಯನ್ನು ಮತ್ತೆ ಟೀಕಿಸಿದ ನಳಿನ್

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ಸನ್ನು ಟೀಕಿಸುವ ಭರದಲ್ಲಿ ಮತ್ತೊಮ್ಮೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕೊರೊನಾ ಲಸಿಕೆ ತೆಗೆದುಕೊಂಡರೆ ಮಕ್ಕಳಾಗುವುದಿಲ್ಲ ಎಂದು ವಿಪಕ್ಷ ನಾಯಕರು ಹೇಳಿಕೆ ನೀಡಿದ್ದರು. ಬಳಿಕ ಅವರೇ ರಹಸ್ಯವಾಗಿ ಹೋಗಿ ತೆಗೆದುಕೊಂಡರು ಎಂದು ನಳಿನ್‌ ಕುಮಾರ್ ಕಟೀಲ್ ಟಾಂಗ್ ಕೊಟ್ಟಿದ್ದಾರೆ.ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಡಿ, ಹಾಕಿಸಿಕೊಂಡರೆ ಮಕ್ಕಳಾಗುವುದಿಲ್ಲ ಎಂದು ಜನರಿಗೆ ಹೇಳಿದರು. ಅದು ಬಂಜೆತನಕ್ಕೆ ಕಾರಣವಾಗುತ್ತದೆ ಎಂದು ಪ್ರಚಾರ ಮಾಡಿದರು. ಆದರೆ ಅವರೇ ಅದನ್ನು

ರಾಹುಲ್‌ ಗಾಂಧಿಯನ್ನು ಮತ್ತೆ ಟೀಕಿಸಿದ ನಳಿನ್ Read More »

ಹೆಚ್ಚಾಗಲಿದೆ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ

ಏಪ್ರಿಲ್‌ನಿಂದ ಶೇ.5-10 ಹೆಚ್ಚಿಸಲು ನಿರ್ಧಾರ ಹೊಸದಿಲ್ಲಿ : ಹೆದ್ದಾರಿ ಟೋಲ್‌ ದರ ಏರಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಈಗಾಗಲೇ ಹೆದ್ದಾರಿಗಳಲ್ಲಿ ಅಲ್ಲಲ್ಲಿ ರಸ್ತೆ ಶುಲ್ಕ ಪಾವತಿಸಿ ಹೈರಾಣಾಗಿರುವ ವಾಹನ ಸವಾರರಿಗೆ ಟೋಲ್‌ ಮತ್ತೆ ಬರೆ ಎಳೆಯಲಿದೆ.ರಾಷ್ಟ್ರಾದ್ಯಂತ ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್​ಪ್ರೆಸ್​ವೇ ಟೋಲ್​ಗಳಲ್ಲಿ ದರ ಏರಿಕೆ ಮಾಡಲು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎನ್​ಎಚ್​ಎಐ ನಿರ್ಧರಿಸಿದೆ. ಟೋಲ್ ದರ ಶೇ. 5ರಿಂದ 10ರಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಮಾಸಿಕ ಟೋಲ್ ಪಾಸ್​ನ ದರವನ್ನೂ ಶೇ. 10ರಷ್ಟು ಏರಿಕೆ

ಹೆಚ್ಚಾಗಲಿದೆ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ Read More »

ಕೂಲಿ ಕಾರ್ಮಿಕರಿಗೆ ಶ್ರಮಿಕ ನಿವಾಸ ನಿರ್ಮಿಸಲು ಮುಂದಾದ ರಾಜ್ಯ ಸರಕಾರ

ಬೆಂಗಳೂರು: ದೇಶದಲ್ಲಿ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಕೈಗಾರಿಕಾ ಪ್ರದೇಶಗಳಲ್ಲಿ ಕೆಲಸ ಮಾಡುವ ಕಟ್ಟಡ ಕಾರ್ಮಿಕರಿಗೆ, ವಿಶೇಷವಾಗಿ ವಲಸೆ ಕಾರ್ಮಿಕರಿಗೆ ರಾಜ್ಯ ಸರ್ಕಾರ ವಸತಿ ಸಮುಚ್ಚಯಗಳನ್ನು ನಿರ್ಮಾಣ ಮಾಡಿ, ನೆರವಿಗೆ ಮುಂದಾಗಿದೆ.ಈ ವಸತಿ ಸಮುಚ್ಚಯವು ರಸ್ತೆ ಬದಿಗಳಲ್ಲಿ ಟೆಂಟ್ ಗಳನ್ನು ಹಾಕಿಕೊಂಡು ಜೀವನ ನಡೆಸುವ ಕೂಲಿ ಕಾರ್ಮಿಕರಿಗೆ ಗೌರವಯುತವಾಗಿ ಜೀವನ ನಡೆಸಲು ಸಹಾಯ ಮಾಡುತ್ತದೆ. ಕಟ್ಟಡ ಕಾಮಗಾರಿಗಳು ಪೂರ್ಣಗೊಳ್ಳುವವರೆಗೂ ಕಾರ್ಮಿಕರು ಅಲ್ಲಿ ಜೀವನ ನಡೆಸಬಹುದು ಎಂದು ಕಾರ್ಮಿಕ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಕಾರ್ಮಿಕ ಇಲಾಖೆಯು ಈಗಾಗಲೇ

ಕೂಲಿ ಕಾರ್ಮಿಕರಿಗೆ ಶ್ರಮಿಕ ನಿವಾಸ ನಿರ್ಮಿಸಲು ಮುಂದಾದ ರಾಜ್ಯ ಸರಕಾರ Read More »

ನಂದಾವರ, ಬೆಟ್ಟಂಪಾಡಿಯಲ್ಲಿ ಎನ್‌ಐಎ ಶೋಧ

ಹಲವು ಮನೆಗಳಲ್ಲಿ ಶೋಧ ಕಾರ್ಯಾಚರಣೆ ಮಂಗಳೂರು : ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಕಾರ್ಯಾಚರಣೆ ನಡೆಸಿ ಕೆಲವರನ್ನು ವಿಚಾರಣೆಗೊಳಪಡಿಸಿದೆ ಎಂದು ತಿಳಿದು ಬಂದಿದೆ. ಬಿಹಾರದ ಪಟ್ನಾದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಮೋದಿಯವರ ಚುನಾವಣಾ ರ್ಯಾಲಿಯಲ್ಲಿ ಬಾಂಬ್‌ ಸ್ಫೋಟಿಸಿ ವಿಧ್ವಂಸಕ ಕೃತ್ಯ ಎಸಗಲು ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಈ ಕಾರ್ಯಾಚರಣೆ ನಡೆಸಿದೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಎನ್‌ಐಎ

ನಂದಾವರ, ಬೆಟ್ಟಂಪಾಡಿಯಲ್ಲಿ ಎನ್‌ಐಎ ಶೋಧ Read More »

ಇಂದು (ಮಾ.5) : ಬೈಂದೂರು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಭವತಿ ಭೀಕ್ಷಾಂ ದೇಹಿ ಅಭಿಯಾನದ ಮೂಲಕ ನಿಧಿ ಸಂಗ್ರಹ

ಪುತ್ತೂರು : ಕರ್ನಾಟಕ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಪತ್ ಭಾಂದವ ಈಶ್ವರ್ ಮಲ್ಪೆ ಅವರ ಸಹಕಾರದಲ್ಲಿ ಸೇವೆ ಎಂಬ ಯಜ್ಞದಲ್ಲಿ ಮಾ.5 ಭಾನುವಾರ ಬೈಂದೂರು ಸಮೀಪದ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಭವತಿ ಭೀಕ್ಷಾಂ ದೇಹಿ ಅಭಿಯಾನ ನಡೆಸಿ ನಿಧಿ ಸಂಗ್ರಹ ನಡೆಸಲಿದೆ. ಮಂಗಳೂರು ತಾಲ್ಲೂಕಿನ  ಬಿಂದು ಅವರ ಮಗು ಗೌರವ್ ಎಂಬ 14 ವರ್ಷದ ಬಾಲಕ ಕರುಳು ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಸುಮಾರು 15 ಲಕ್ಷ ರೂಪಾಯಿ ಅಗತ್ಯವಿರುತ್ತದೆ.

ಇಂದು (ಮಾ.5) : ಬೈಂದೂರು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಭವತಿ ಭೀಕ್ಷಾಂ ದೇಹಿ ಅಭಿಯಾನದ ಮೂಲಕ ನಿಧಿ ಸಂಗ್ರಹ Read More »

ವಿಹಿಂಪ, ಬಜರಂಗಳದ ದಕ್ಷಿಣ ಪ್ರಾಂತ ಬೈಠಕ್ ಹಾಗೂ ಶೌರ್ಯ ಯಾತ್ರೆ ಯಶಸ್ಸಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಪುತ್ತೂರು : ತೆಂಕಿಲ ವಿವೇಕಾನಂದ ಶಾಲೆಯಲ್ಲಿ ನಡೆಯುವ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಬೈಠಕ್ ಹಾಗೂ ಮಾ.5 ರಂದು ನಡೆಯುವ ಶೌರ್ಯ ಯಾತ್ರೆಯ ಯಶಸ್ಸಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ಬೆಳಿಗ್ಗೆ ಪ್ರಾರ್ಥನೆ ಸಲ್ಲಿಸಲಾಯಿತು. ಮಾ.4 ಹಾಗೂ 5 ರಂದು ಪ್ರಾಂತ ಬೈಠಕ್ ನಡೆಯಲಿದ್ದು, ಮಾ.5 ರಂದು ಸಂಜೆ ಶೌರ್ಯ ಯಾತ್ರೆ ನಡೆಯಲಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ಶ್ರೀ ಮಗಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವೆ.ಮೂ.ವಿ.ಎಸ್್.ಭಟ್ ಪ್ರಾರ್ಥನೆ ಸಲ್ಲಿಸಿದರು.

ವಿಹಿಂಪ, ಬಜರಂಗಳದ ದಕ್ಷಿಣ ಪ್ರಾಂತ ಬೈಠಕ್ ಹಾಗೂ ಶೌರ್ಯ ಯಾತ್ರೆ ಯಶಸ್ಸಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ Read More »

ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್‌ ಅಧಿಕಾರಿ

ಬೆಂಗಳೂರು : ಲಂಚ ಪಡೆಯುವ ವೇಳೆ ದಾವಣಗೆರೆಯ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಪ್ರಶಾಂತ್ ಸೇರಿದಂತೆ ಐವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಶಾಂತ್ ಮಾಡಾಳ್ ಕೆಎಎಸ್ ಅಧಿಕಾರಿಯಾಗಿದ್ದು ಜಲಮಂಡಳಿ ಹಾಗೂ ಎಸಿಬಿ ಎರಡಲ್ಲೂ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ ರಾಸಾಯನಿಕ ಪೂರೈಸುವ ಟೆಂಡರ್ ನೀಡುವ ಸಲುವಾಗಿ 81 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದಾಗಿ ಕಚ್ಚಾ ಸಾಮಾಗ್ರಿ ಕಂಪನಿಯನ್ನು ನಡೆಸುತ್ತಿದ್ದ ಶ್ರೇಯಸ್ ಕಶ್ಯಪ್

ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್‌ ಅಧಿಕಾರಿ Read More »

ಮಂಗಳೂರಿನಲ್ಲಿ ದೇಶದಲ್ಲಿಯೇ ಗರಿಷ್ಠ ತಾಪಮಾನ

ಮಂಗಳೂರು : ಚಳಿಗಾಲ ಮುಗಿದ ಬೆನ್ನಿಗೆ ಕರಾವಳಿಯಲ್ಲಿ ಬಿಸಿಲ ಝಳ ಏರುತ್ತಿದೆ. ಬೆಳಗ್ಗಿನ ಹೊತ್ತು ತುಸು ಚಳಿ ಇದ್ದರೂ ಹೊತ್ತೇರುತ್ತಿರುವಂತೆ ಸೂರ್ಯ ಸುಡಲು ತೊಡಗುತ್ತಾನೆ. ಈ ಸಲ ವಾತಾವರಣದಲ್ಲಿ ಬಹಳ ವ್ಯತ್ಯಾಸ ಕಂಡು ಬರುತ್ತಿದ್ದು ಸೆಕೆ ವಿಪರೀತ ಹೆಚ್ಚಳವಾದ ಅನುಭವವಾಗುತ್ತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ ಮಂಗಳೂರಿನಲ್ಲಿ ಗುರುವಾರ 36.9 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಇದು ಮಾರ್ಚ್‌ ತಿಂಗಳಲ್ಲಿ ದೇಶದಲ್ಲಿಯೇ ಅತ್ಯಧಿಕವಾಗಿದ್ದು,

ಮಂಗಳೂರಿನಲ್ಲಿ ದೇಶದಲ್ಲಿಯೇ ಗರಿಷ್ಠ ತಾಪಮಾನ Read More »

ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ ಸ್ಥಾಪನೆಗೆ ಸರಕಾರದಿಂದ ಅನುಮೋದನೆ | ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಸಹಿತ 15 ಜನರ ಸದಸ್ಯರನ್ನೊಳಗೊಂಡ ಸಮಿತಿಯಿಂದ ಸರಕಾರಕ್ಕೆ ಪ್ರಸ್ತಾವನೆ

ಪುತ್ತೂರು : ರಾಜ್ಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಆರಂಭಿಸಲು ಉದ್ದೇಶಿಸಿರುವ ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ (ಆರ್.ವಿಎಸ್.ಯು) ಸ್ಥಾಪನೆಗೆ ಸರಕಾರದಿಂದ ಅನುಮೋದನೆ ದೊರೆತಿದೆ. ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಅವರ ಅಧ್ಯಕ್ಷತೆಯಲ್ಲಿ 15 ಜನರ ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆಯನ್ನು ಡಾ.ರೇಣುಕಾ ಪ್ರಸಾದ್ ಕೆ.ವಿ. ಅವರ ಪ್ರಯತ್ನದಿಂದ ಸರಕಾರಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿ ತಪಾಸಣಾ ತಂಡಕ್ಕೆ ನೀಡಲಾಗಿತ್ತು. ಈ ವಿಶ್ವವಿದ್ಯಾಲಯ ಸ್ಥಾಪನಾ ಸಮಿತಿಯಲ್ಲಿ

ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ ಸ್ಥಾಪನೆಗೆ ಸರಕಾರದಿಂದ ಅನುಮೋದನೆ | ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಸಹಿತ 15 ಜನರ ಸದಸ್ಯರನ್ನೊಳಗೊಂಡ ಸಮಿತಿಯಿಂದ ಸರಕಾರಕ್ಕೆ ಪ್ರಸ್ತಾವನೆ Read More »

error: Content is protected !!
Scroll to Top