ರಾಜ್ಯ

ವೃದ್ಧ ತಂದೆ ತಾಯಿಯನ್ನು ಉಪೇಕ್ಷಿಸಿದರೆ ಮಕ್ಕಳಿಗೆ ಸಿಗಲ್ಲ ಆಸ್ತಿ

ಪೋಷಕರಿಂದ ವರ್ಗಾವಣೆ ಆಗಿರುವ ಆಸ್ತಿ, ಬರೆಸಿಕೊಂಡಿರುವ ಉಯಿಲು ರದ್ದುಪಡಿಸಲು ಆದೇಶ ಬೆಂಗಳೂರು : ವಯಸ್ಸಾದ ತಂದೆ ತಾಯಿಯನ್ನು ಉಪೇಕ್ಷಿಸಿದರೆ ಅವರ ಆಸ್ತಿ ಮಕ್ಕಳಿಗೆ ಸಿಗಲ್ಲ. ಹೀಗೊಂದು ಆದೇಶವನ್ನು ಕರ್ನಾಟಕ ಸರಕಾರ ನೀಡಿದೆ. ವಯಸ್ಸಾದ ತಂದೆ ತಾಯಿಯನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗಳಿಗೆ ತಂದು ದಾಖಲಿಸಿ ಮಕ್ಕಳು ನಾಪತ್ತೆಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಕರಾರ ಈ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲೆಯೊಂದರಲ್ಲೇ ಇಂಥ 150ಕ್ಕೂ ಹೆಚ್ಚು ಪ್ರಕರಣಗಳು ಇತ್ತೀಚೆಗೆ ಪತ್ತೆಯಾಗಿದ್ದವು. ಸಂಧ್ಯಾಕಾಲದಲ್ಲಿ ಹೆತ್ತ ತಂದೆ-ತಾಯಿಯನ್ನು ನೋಡಿಕೊಳ್ಳುವುದು ಮಕ್ಕಳ ಕರ್ತವ್ಯ. ಭಾರತೀಯ […]

ವೃದ್ಧ ತಂದೆ ತಾಯಿಯನ್ನು ಉಪೇಕ್ಷಿಸಿದರೆ ಮಕ್ಕಳಿಗೆ ಸಿಗಲ್ಲ ಆಸ್ತಿ Read More »

ಒಂದು ವರ್ಷದಲ್ಲಿ 59 ಸಲ ಡ್ರಗ್ಸ್‌ ಸಾಗಾಟ : ಆದರೂ ಸಿಕ್ಕಿಬೀಳಲಿಲ್ಲ ಈ ಚಾಲಾಕಿಯರು

ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ ಬೃಹತ್‌ ಡ್ರಗ್ಸ್‌ ಜಾಲದಲ್ಲಿ ಯಾರೆಲ್ಲ ಶಾಮೀಲಾಗಿದ್ದಾರೆ? ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿರುವ ರಾಜ್ಯದ ಅತಿದೊಡ್ಡ ಡ್ರಗ್ಸ್ ಜಾಲದ ಹಲವು ಮಾಹಿತಿಗಳು ಬೆಚ್ಚಿಬೀಳಿಸುವಂತಿದೆ. ದಾಖಲೆಯ 75 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜೊತೆ ಸಿಕ್ಕಿಬಿದ್ದಿರುವ ಇಬ್ಬರು ವಿದೇಶಿ ಮಹಿಳೆಯರು ಈ ಮೊದಲು ಒಂದು ವರ್ಷದ ಅವಧಿಯಲ್ಲಿ ವಿಮಾನ ನಿಲ್ದಾಣದ ಮೂಲಕ 59 ಸಲ ಡ್ರಗ್ಸ್‌ ಸಾಗಿಸಿದ್ದರೂ ಸಿಕ್ಕಿಬೀಳದೆ ಪಾರಾಗಿದ್ದರು. ಆದರೆ ಅದು ಹೇಗೆ ಸಾಧ್ಯವಾಯಿತು ಎನ್ನುವ ಪ್ರಶ್ನೆಯೊಂದು ಕಾಡುತ್ತಿದೆ. ರನ್ಯಾ ರಾವ್‌

ಒಂದು ವರ್ಷದಲ್ಲಿ 59 ಸಲ ಡ್ರಗ್ಸ್‌ ಸಾಗಾಟ : ಆದರೂ ಸಿಕ್ಕಿಬೀಳಲಿಲ್ಲ ಈ ಚಾಲಾಕಿಯರು Read More »

ಇಂದು ಬಹಿರಂಗವಾಗಲಿದೆ ಗೋಲ್ಡ್‌ ಸ್ಮಗ್ಲಿಂಗ್‌ನಲ್ಲಿ ಶಾಮೀಲಾಗಿರುವ ಸಚಿವರ ಹೆಸರು

ಯತ್ನಾಳ್‌ ಹೇಳಿಕೆಯಿಂದ ಇಡೀ ದೇಶದ ಗಮನ ಇಂದಿನ ಕಲಾಪದತ್ತ ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಾಟ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಸಚಿವರ ಹೆಸರನ್ನು ಸೋಮವಾರ ಸದನದಲ್ಲೇ ಹೇಳುವುದಾಗಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿರುವುದು ಭಾರಿ ಕುತೂಹಲ ಹುಟ್ಟಿಸಿದೆ.ವಿಜಯಪುರದಲ್ಲಿ ಭಾನುವಾರ ಈ ವಿಚಾರವಾಗಿ ಮಾತನಾಡಿರುವ ಅವರು, ರನ್ಯಾ ರಾವ್‌ಗೆ ಪ್ರೊಟೊಕಾಲ್ ನೀಡಿದವರ ಮಾಹಿತಿ ಸಂಗ್ರಹಿಸಲಾಗಿದೆ. ಚಿನ್ನ ಎಲ್ಲಿಂದ ತಂದರು, ಎಲ್ಲಿಟ್ಟು ತಂದರು ಎಂಬುದು ಗೊತ್ತಿದೆ. ಸೋಮವಾರ ವಿಧಾನಸಭೆಯಲ್ಲಿ ಸಚಿವರ ಹೆಸರುಗಳನ್ನು ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ.

ಇಂದು ಬಹಿರಂಗವಾಗಲಿದೆ ಗೋಲ್ಡ್‌ ಸ್ಮಗ್ಲಿಂಗ್‌ನಲ್ಲಿ ಶಾಮೀಲಾಗಿರುವ ಸಚಿವರ ಹೆಸರು Read More »

75 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ : ಇಬ್ಬರು ವಿದೇಶಿ ಮಹಿಳೆಯರ ಬಂಧನ

ಬೆಂಗಳೂರಿನಲ್ಲಿ ಮಂಗಳೂರು ಪೊಲೀಸರ ಕಾರ್ಯಾಚರಣೆ ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ 75 ಕೋಟಿ ರೂ. ಮೌಲ್ಯದ 37.87 ಕೆಜಿ ಡ್ರಗ್ಸ್​ ವಶಪಡಿಸಿಕೊಂಡು ಇಬ್ಬರು ವಿದೇಶಿ ಮಹಿಳೆಯರನ್ನು ಬಂಧಿಸಿದ್ದಾರೆ. ಇದು ಕರ್ನಾಟಕದ ಇತಿಹಾಸದಲ್ಲಿ ಅತಿದೊಡ್ಡ ಡ್ರಗ್ಸ್ ವಶ ಕಾರ್ಯಾಚರಣೆ ಎನ್ನಲಾಗಿದೆ. ಸಿಸಿಬಿ ಪೊಲೀಸರು ಕಳೆದ ಐದು ತಿಂಗಳಿಂದ ಈ ಡ್ರಗ್ಸ್‌ ಜಾಲದ ಬೆನ್ನುಹತ್ತಿದ್ದರು.ಎಂಡಿಎಂಎ ಡ್ರಗ್ಸ್ ದೆಹಲಿಯ ಲ್ಯಾಬ್​ನಲ್ಲಿ ನಿತ್ಯ ತಯಾರಾಗುತ್ತಿತ್ತು. ವಾರಕ್ಕೊಮ್ಮೆ ಬೆಂಗಳೂರಿಗೆ ವಿಮಾನದಲ್ಲಿ ಮೂಟೆಗಟ್ಟಲೆ ಬರುತ್ತಿತ್ತು. ವಾರಕ್ಕೆ 15-30 ಕೆಜಿ ಮತ್ತು ತಿಂಗಳಿಗೆ ಕನಿಷ್ಠ

75 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ : ಇಬ್ಬರು ವಿದೇಶಿ ಮಹಿಳೆಯರ ಬಂಧನ Read More »

ಬಹುಭಾಷಾ ಪಂಡಿತ, ಹಿರಿಯ ಸಾಹಿತಿ ಡಾ.ಪಂಚಾಕ್ಷರಿ ಹಿರೇಮಠ ನಿಧನ

ಬಹುಭಾಷಾ ಪಂಡಿತ, ಕನ್ನಡದ ಹಿರಿಯ ಸಾಹಿತಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಡಾ. ಪಂಚಾಕ್ಷರಿ ಹಿರೇಮಠ (92) ನಿಧನರಾಗಿದ್ದಾರೆ. ಧಾರವಾಡದ ಜಯನಗರ ನಿವಾಸಿ ಹಾಗೂ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕರಾಗಿದರು. ಪಂಚಾಕ್ಷರಿ ಅವರು ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ. ಕನ್ನಡದ ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಅವರು 19 ಕಾವ್ಯ ಸಂಕಲನಗಳು, 11 ಕಥಾ ಸಂಕಲನಗಳು, ಉರ್ದು ಮತ್ತು ಹಿಂದಿಯಿಂದ ಕನ್ನಡಕ್ಕೆ ತಂದ 8 ಅನುವಾದಿತ ಕಾದಂಬರಿಗಳು, 13 ಪ್ರಬಂಧ ಮತ್ತು ವಿಮರ್ಶೆಯ

ಬಹುಭಾಷಾ ಪಂಡಿತ, ಹಿರಿಯ ಸಾಹಿತಿ ಡಾ.ಪಂಚಾಕ್ಷರಿ ಹಿರೇಮಠ ನಿಧನ Read More »

ಹೋಳಿ ಗಮ್ಮತ್ತಿನಲ್ಲಿ ಹೊಡೆದಾಟ : ಮೂವರ ಹತ್ಯೆ

ನಶೆ ಏರಿದ ಬಳಿಕ ರಾಡ್‌, ದೊಣ್ಣೆಯಿಂದ ಬಡಿದಾಡಿಕೊಂಡ ಸ್ನೇಹಿತರು ಬೆಂಗಳೂರು: ಹೋಳಿ ಗಮ್ಮತ್ತಿನಲ್ಲಿ ಕಂಠಮಟ್ಟ ಶರಾಬು ಕುಡಿದು ನಶೆ ತಲೆಗೇರಿಸಿಕೊಂಡಿದ್ದ ಬಿಹಾರ ಮೂಲದ ಆರು ಕಾರ್ಮಿಕರು ಪರಸ್ಪರ ಹೊಡೆದಾಡಿಕೊಂಡ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಓರ್ವನಿಗೆ ಗಂಭೀರ ಗಾಯವಾಗಿದ್ದು, ಇಬ್ಬರು ಪರಾರಿ ಆಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದ ನಿರ್ಮಾಣ ಹಂತದ ಫೋರ್‌ವಾಲ್ ಅವೆನ್ಯೂ ಅಪಾರ್ಟ್​ಮೆಂಟ್​ನ​ 3ನೇ ಮಹಡಿಯಲ್ಲಿ ಘಟನೆ ನಡೆದಿದೆ. ಕೊಲೆಯಾದ ಇಬ್ಬರನ್ನು ಅನ್ಸು(19) ಮತ್ತು ರಾಧೆ ಶ್ಯಾಮ್(20) ಎಂದು

ಹೋಳಿ ಗಮ್ಮತ್ತಿನಲ್ಲಿ ಹೊಡೆದಾಟ : ಮೂವರ ಹತ್ಯೆ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಡಿಜಿಪಿ ರಾಮಚಂದ್ರ ರಾವ್‌ಗೆ ಕಡ್ಡಾಯ ರಜೆ ನೀಡಿದ ಸರಕಾರ

ಪ್ರಭಾವಿ ನಾಯಕರೊಬ್ಬರ ಜರ್ಮನಿ ಟೂರ್‌ ಬಗ್ಗೆ ಅನುಮಾನ ವ್ಯಕ್ತಪಡಿಸಿದ ತನಿಖಾಧಿಕಾರಿಗಳು ಬೆಂಗಳೂರು: ಕನ್ನಡ ನಟಿ ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣದ ತನಿಖೆ ತೀವ್ರಗೊಂಡಿರುವಂತೆ ಸರಕಾರ ಆಕೆಯ ಮಲತಂದೆ ಡಿಜಿಪಿ ದರ್ಜೆಯ ಐಪಿಎಸ್‌ ಅಧಿಕಾರಿ ಡಾ.ರಾಮಚಂದ್ರ ರಾವ್‌ ಅವರನ್ನು ಕಡ್ಡಾಯ ರಜೆಯಲ್ಲಿ ಕಳಿಸಿದೆ. ಡಾ.ರಾಮಚಂದ್ರ ರಾವ್‌ ಪ್ರಸ್ತುತ ಪೊಲೀಸ್‌ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.ರನ್ಯಾ ರಾವ್‌ ಕಳೆದ ಮಾ.3ರಂದು ದುಬೈಯಿಂದ 12.56 ಕೋಟಿ ರೂ. ಮೌಲ್ಯದ 14.2 ಕೆಜಿ ಚಿನ್ನವನ್ನು ಕಳ್ಳ ಮಾರ್ಗದಿಂದ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಡಿಜಿಪಿ ರಾಮಚಂದ್ರ ರಾವ್‌ಗೆ ಕಡ್ಡಾಯ ರಜೆ ನೀಡಿದ ಸರಕಾರ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ರನ್ಯಾ ರಾವ್‌ ತಂತ್ರಗಳು ಒಂದೊಂದಾಗಿ ಬಯಲು

ಸರಕಾರಿ ಕಾರಲ್ಲೇ ಚಿನ್ನ ಕಳ್ಳ ಸಾಗಾಟ ಬೆಂಗಳೂರು : ದುಬೈಯಿಂದ ಚಿನ್ನ ಕಳ್ಳ ಸಾಗಾಟ ಮಾಡಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್‌ ಕಳ್ಳ ಸಾಗಾಟಕ್ಕೆ ಬಳಸಿದ ತಂತ್ರವನ್ನು ಪತ್ತೆಹಚಿದ್ದಾರೆ. ರನ್ಯಾ ಕಳ್ಳ ಮಾರ್ಗದಲ್ಲಿ ತಂದ ಚಿನ್ನವನ್ನು ವಿಮಾನ ನಿಲ್ದಾಣದಿಂದ ಸಾಗಿಸಲು ಕರ್ನಾಟಕ ಸರಕಾರದ ಕಾರನ್ನೇ ಬಳಸುತ್ತಿದ್ದಳು ಎಂದು ಡಿಆರ್‌ಐ ಅಧಿಕಾರಿಗಳು ತಿಳಿಸಿದ್ದಾರೆ.ರನ್ಯಾ ರಾವ್‌ ಮಲತಂದೆ ರಾಮಚಂದ್ರ ರಾವ್‌ ಐಪಿಎಸ್‌ ದರ್ಜೆಯ ಪೊಲೀಸ್‌ ಅಧಿಕಾರಿಯಾಗಿದ್ದು, ಡಿಜಿಪಿ ಹುದ್ದೆಯಲ್ಲಿದ್ದರು. ತಂದೆಯ ಅಧಿಕಾರವನ್ನು ರನ್ಯಾ ರಾವ್‌ ಸಂಪೂರ್ಣವಾಗಿ ದುರ್ಬಳಕೆ ಮಾಡಿಕೊಂಡಿರುವುದು ಡಿಆರ್‌ಐ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ರನ್ಯಾ ರಾವ್‌ ತಂತ್ರಗಳು ಒಂದೊಂದಾಗಿ ಬಯಲು Read More »

ವಸತಿ ಶಾಲೆಯಿಂದ ತಪ್ಪಿಸಿಕೊಂಡಿದ್ದ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಪತ್ತೆ

ರಜೆ ಸಿಕ್ಕಿಲ್ಲ ಎಂದು ವಸತಿ ಶಾಲೆಯ ಗೋಡೆ ಹಾರಿ ಪಲಾಯನ ಮಾಡಿದ್ದ ಮಕ್ಕಳು ಮಂಗಳೂರು: ಚಿಕ್ಕಮಗಳೂರಿನ ತೇಗೂರು ಗ್ರಾಮದ ಡಾ. ಅಬ್ದುಲ್​ ಕಲಾಂ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಶುಕ್ರವಾರ ರಾತ್ರಿ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ವಸತಿ ಶಾಲೆಯ 9ನೇ ತರಗತಿಯ ಬಾಳೆಹೊನ್ನೂರು ಮೂಲದ ಯಶ್ವಿತ್ ಸಾಲಿಯಾನ್​​​ ಮತ್ತು ಬೆಂಗಳೂರು ಮೂಲದ ತರುಣ್‌ ಮಾರ್ಚ್​ 3ರಂದು ನಾಪತ್ತೆಯಾಗಿದ್ದರು. ಮಂಗಳೂರಿನ ಹೋಟೆಲ್​ವೊಂದರಲ್ಲಿ ಕೆಲಸಕ್ಕೆ ಸೇರಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.ಯಶ್ವಿತ್ ಮತ್ತು ತರುಣ್ ಉತ್ತಮ ಸ್ನೇಹಿತರಾಗಿದ್ದು, ಓದಿನಲ್ಲಿ ಆಸಕ್ತಿ ಇಲ್ಲದಿದ್ದರೂ ವಸತಿ

ವಸತಿ ಶಾಲೆಯಿಂದ ತಪ್ಪಿಸಿಕೊಂಡಿದ್ದ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಪತ್ತೆ Read More »

ಡೆಪ್ಯುಟಿ ಸ್ಪೀಕರ್‌ ರುದ್ರಪ್ಪ ಲಮಾಣಿ ದಿಢೀರ್‌ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್‌

ಚಿತ್ರದುರ್ಗ ಬಳಿ ಬೈಕ್‌ ಗುದ್ದಿ ಗಾಯಗೊಂಡಿದ್ದ ಲಮಾಣಿ ಬೆಂಗಳೂರು : ನಿನ್ನೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್​ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ನಿನ್ನೆ ಬಜೆಟ್​​ ಅಧಿವೇಶನ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗ ಮಧ್ಯೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜೆ.ಜೆ.ಹಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿ ಲಮಾಣಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಈಗ ಏಕಾಏಕಿ ರುದ್ರಪ್ಪ ಲಮಾಣಿ

ಡೆಪ್ಯುಟಿ ಸ್ಪೀಕರ್‌ ರುದ್ರಪ್ಪ ಲಮಾಣಿ ದಿಢೀರ್‌ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್‌ Read More »

error: Content is protected !!
Scroll to Top