ಶಾಸಕ, ಸಚಿವ ಎಸ್.ಅಂಗಾರ ಅವರಿಗೆ ಟಿಕೆಟ್ ಮಿಸ್ : ವೆಂಕಟ್ ವಳಲಂಬೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
ಕಡಬ : ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ, ಸಚಿವ ಎಸ್.ಅಂಗಾರ ಅವರಿಗೆ ಬಿಜೆಪಿ ಟಿಕೆಟ್ ದೊರೆಯದೇ ಇರುವುದಕ್ಕಾಗಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವೆಂಕಟ್ ವಳಲಂಬೆ ಹೇಳಿದ್ದಾರೆ. ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬಾರದ ರೀತಿ ದುಡಿದ, ಸಾಮಾನ್ಯ ಮನೆತನದಿಂದ ಬಂದಿರುವ ಸರಳ ಸಜ್ಜನಿಕೆಯ ಎಲ್ಲರ ಜನಮನ ಗೆದ್ದಿರುವ ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿರುವ ಎಸ್.ಅಂಗಾರರಂತಹ ಪ್ರಾಮಾಣಿಕ ಕಾರ್ಯಕರ್ತನೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಅಭ್ಯರ್ಥಿ ಘೋಷಣೆ ಮಾಡಿರುವುದರಿಂದ […]