ರಾಜ್ಯ

ಪುತ್ತೂರಿನಲ್ಲಿ ಮೆಡಿಕಲ್‌ ಕಾಲೇಜು ಸ್ಥಾಪಿಸುವ ಉದ್ದೇಶ

ಸದ್ಯಕ್ಕೆ ತಾಲೂಕು ಆಸ್ಪತ್ರೆಯ ಉನ್ನತೀಕರಣ ಮಾತ್ರ ಬೆಂಗಳೂರು: ಪುತ್ತೂರಿನಲ್ಲಿ ಹೊಸ ಮೆಡಿಕಲ್‌ ಕಾಲೇಜು ಸ್ಥಾಪಿಸುವ ಉದ್ದೇಶ ಇದೆ ಎಂದು ಬಜೆಟ್‌ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಈ ಸಾಲಿನ ಬಜೆಟ್‌ನಲ್ಲಿ ಹೊಸ ಮೆಡಿಕಲ್‌ ಕಾಲೇಜು ಘೋಷಿಸಿಲ್ಲ. ಮೆಡಿಕಲ್‌ ಕಾಲೇಜು ಘೋಷಣೆಗೆ ಪೂರಕವಾಗಿ ಪುತ್ತೂರಿನಲ್ಲಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲಾಗುವುದು ಎಂದು ಘೋಷಿಸಿದ್ದಾರೆ.ಕಳೆದ ಕೆಲವು ದಿನಗಳಿಂದ ಈ ಸಲ ಪುತ್ತೂರಿಗೆ ಮೆಡಿಕಲ್‌ ಕಾಲೇಜು ಘೋಷಣೆಯಾಗುವುದು ಖಚಿತ ಎಂಬ ವದಂತಿ ದಟ್ಟವಾಗಿ ಹರಡಿತ್ತು. ಇದಕ್ಕೆ […]

ಪುತ್ತೂರಿನಲ್ಲಿ ಮೆಡಿಕಲ್‌ ಕಾಲೇಜು ಸ್ಥಾಪಿಸುವ ಉದ್ದೇಶ Read More »

ಬಜೆಟ್‌ ಹೈಲೈಟ್ಸ್‌ : ಮಲ್ಪೆಯಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌; ಮತ್ಸ್ಯದರ್ಶಿನಿ, ಸುಸ್ಥಿರ ಮೀನುಗಾರಿಕೆಗೆ ಪ್ರೋತ್ಸಾಹ

ಕರಾವಳಿಗೆ ಸಿದ್ದರಾಮಯ್ಯ ಕೊಡುಗೆಗಳು ಬೆಂಗಳೂರು: ಉಡುಪಿ ಮಲ್ಪೆಯಲ್ಲಿ ಮಲ್ಟಿ ಲೆವೆಲ್ ಪಾರ್ಕಿಂಗ್, ಮೈಸೂರಿನಲ್ಲಿ ಹೈಟೆಕ್ ಮತ್ಸ್ಯದರ್ಶಿನಿ, ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ, ಹೊಸ ಇಂಜಿನ್‌ ಖರೀದಿಸಲು ಶೇ.50 ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ…ಇವು ಕರಾವಳಿಗೆ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕೊಟ್ಟಿರುವ ಕೊಡುಗೆಗಳು.ಮಲ್ಟಿ-ಲೆವೆಲ್‌ ಪಾರ್ಕಿಂಗ್‌ ವ್ಯವಸ್ಥೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು.

ಬಜೆಟ್‌ ಹೈಲೈಟ್ಸ್‌ : ಮಲ್ಪೆಯಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌; ಮತ್ಸ್ಯದರ್ಶಿನಿ, ಸುಸ್ಥಿರ ಮೀನುಗಾರಿಕೆಗೆ ಪ್ರೋತ್ಸಾಹ Read More »

ಬಜೆಟ್‌ ಹೈಲೈಟ್ಸ್‌ : ಮಕ್ಕಳಿಗೆ ಇಂಗ್ಲಿಷ್‌ ಕಲಿಸಲು ದ್ವಿಭಾಷೆ ಪರಿಚಯ

ರಾಗಿ ಆರೋಗ್ಯ ಮಿಶ್ರಣ ಇನ್ನು ಮುಂದೆ ವಾರಕ್ಕೆ 5 ದಿನ ಬೆಂಗಳೂರು: ಕಲಿತು ಹೊರಗೆ ಉದ್ಯೋಗಕ್ಕೆ ಹೋಗುವ ಸಂದರ್ಭದಲ್ಲಿ ಇಂಗ್ಲಿಷ್ ಸಂವಹನದ ಅಗತ್ಯ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಶಾಲಾ ಮಟ್ಟದಿಂದಲೇ ಮಕ್ಕಳಲ್ಲಿ ಇಂಗ್ಲಿಷ್ ಕಲಿಕೆಯ ಪರಿಚಯವಾಗಲು 4 ಸಾವಿರ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷೆ ಪರಿಚಯಿಸಲಾಗುತ್ತದೆ. ವಿದ್ಯಾರ್ಥಿಗಳು ಇಂಗ್ಲಿಷ್ ಮತ್ತು ಅವರ ಮಾತೃಭಾಷೆ ಎರಡರಲ್ಲೂ ನಿರರ್ಗಳತೆಯಿಂದ ಮಾತನಾಡಲು ಸಹಾಯ ಮಾಡುವುದು ಇದರ ಉದ್ದೇಶವಾಗಿದೆ ಎಂದು ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಪ್ರಸ್ತುತ ಶಾಲಾ ಮಕ್ಕಳಿಗೆ ವಾರಕ್ಕೆ 3 ದಿನ ನೀಡಲಾಗುತ್ತಿದ್ದ

ಬಜೆಟ್‌ ಹೈಲೈಟ್ಸ್‌ : ಮಕ್ಕಳಿಗೆ ಇಂಗ್ಲಿಷ್‌ ಕಲಿಸಲು ದ್ವಿಭಾಷೆ ಪರಿಚಯ Read More »

ನಕ್ಸಲ್‌ ನಿಗ್ರಹ ಪಡೆ ವಿಸರ್ಜನೆ : ಸಿದ್ದರಾಮಯ್ಯ ಘೋಷಣೆ

ನಕ್ಸಲ್‌ ಬಾಧಿತ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ 10 ಕೋ.ರೂ. ಬೆಂಗಳೂರು: ರಾಜ್ಯ ನಕ್ಸಲ್ ಮುಕ್ತವಾಗಿರುವುದರಿಂದ ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ದಾಖಲೆಯ 16ನೇ ಬಜೆಟ್ ಮಂಡಿಸಿದ ಸಿಎಂ, ನಮ್ಮ ಸರ್ಕಾರದ ಅವಧಿಯಲ್ಲಿ 6 ಜನ ಭೂಗತ ನಕ್ಸಲರು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿಯ ಮುಂದೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ದಳ ವಿಸರ್ಜನೆ ಮಾಡುವುದಾಗಿ ಹೇಳಿದ್ದಾರೆ. ಕಳೆದ ಫೆ.7ರಂದು ನ್ಯೂಸ್‌ ಕಾರ್ಕಳ ವೆಬ್‌ಸೈಟ್‌ ರಾಜ್ಯ ನಕ್ಸಲ್‌ ಮುಕ್ತ-ಎಎನ್‌ಎಫ್‌

ನಕ್ಸಲ್‌ ನಿಗ್ರಹ ಪಡೆ ವಿಸರ್ಜನೆ : ಸಿದ್ದರಾಮಯ್ಯ ಘೋಷಣೆ Read More »

ಬಜೆಟ್‌: ಬಿಸಿಯೂಟ ಕಾರ್ಯಕರ್ತೆಯರು, ಅತಿಥಿ ಉಪನ್ಯಾಸಕರಿಗೆ ಸಿಹಿ ನೀಡಿದ ಸಿದ್ದರಾಮಯ್ಯ

ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 10 ಕೋಟಿ, ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ದಾಖಲೆಯ 16ನೇ ಬಜೆಟ್‌ ಮಂಡಿಸುತ್ತಿದ್ದು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ್ದು, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನೂ 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ. ಇದೇ ವೇಳೆ ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500

ಬಜೆಟ್‌: ಬಿಸಿಯೂಟ ಕಾರ್ಯಕರ್ತೆಯರು, ಅತಿಥಿ ಉಪನ್ಯಾಸಕರಿಗೆ ಸಿಹಿ ನೀಡಿದ ಸಿದ್ದರಾಮಯ್ಯ Read More »

ಬಜೆಟ್‌ ಮಂಡನೆಗೆ ಕ್ಷಣಗಣನೆ : ಕರಾವಳಿ ಜನರಲ್ಲಿದೆ ಬೆಟ್ಟದಷ್ಟು ನಿರೀಕ್ಷೆ

ಸಿದ್ದರಾಮಯ್ಯನವರ ದಾಖಲೆಯ 16ನೇ ಮುಂಗಡಪತ್ರ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಲಿರುವ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದೆ. 2025ನೇ ಸಾಲಿನ ಕರ್ನಾಟಕ ಬಜೆಟ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಸಿದ್ದರಾಮಯ್ಯನವರು ಬೆಳಗ್ಗೆ 9.30ಕ್ಕೆ ಸಚಿವ ಸಂಪುಟ ನಡೆಸಲಿದ್ದು, ಸಭೆಯಲ್ಲಿ ಬಜೆಟ್​ಗೆ ಅನುಮೋದನೆ ಪಡೆದುಕೊಳ್ಳಲಿದ್ದಾರೆ. ಬಳಿಕ ಬೆಳಗ್ಗೆ 10.30ಗೆ ಬಜೆಟ್​ ಮಂಡನೆ ಮಾಡಲಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ತಮ್ಮ ದಾಖಲೆಯನ್ನೇ ಮುರಿದು 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಮಂಡಿನೋವಿನ ಕಾರಣದಿಂದ ನಿಂತು ಬಜೆಟ್ ಮಂಡಿಸುವ ಬದಲು ಕುಳಿತು

ಬಜೆಟ್‌ ಮಂಡನೆಗೆ ಕ್ಷಣಗಣನೆ : ಕರಾವಳಿ ಜನರಲ್ಲಿದೆ ಬೆಟ್ಟದಷ್ಟು ನಿರೀಕ್ಷೆ Read More »

ರಾಜ್ಯದ ದೇವಸ್ಥಾನಗಳ ಅಭಿವೃದ್ಧಿ, ದೇವಾಲಯದ ಆಧಾರಿತ ಪ್ರವಾಸೋದ್ಯಮದ ಮಹತ್ವದ ಕುರಿತು ಸದನದಲ್ಲಿ ಗಮನ ಸೆಳೆದ ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಅವರು ರಾಜ್ಯದ ದೇವಸ್ಥಾನಗಳ ಅಭಿವೃದ್ಧಿ ಮತ್ತು ದೇವಾಲಯ ಆಧಾರಿತ ಪ್ರವಾಸೋದ್ಯಮದ ಮಹತ್ವದ ಬಗ್ಗೆ ಸರ್ಕಾರದ ಗಮನ ಸೆಳೆದರು. ಕೇಂದ್ರ ಸರ್ಕಾರದ ಪ್ರಸಾದ ಯೋಜನೆಗಾಗಿ ಕರ್ನಾಟಕ ಸರ್ಕಾರ 16 ಪ್ರಸ್ತಾವನೆಗಳನ್ನು ಕಳಿಸಿದ್ದರೂ, ಕೇವಲ 2 ಪ್ರಸ್ತಾಪಗಳು ಮಾತ್ರ ಅನುಮೋದನೆಯಾಗಿವೆ. ಉಳಿದ 14 ಪ್ರಸ್ತಾಪಗಳ ಬಗ್ಗೆ ರಾಜ್ಯ ಸರ್ಕಾರವು ಸ್ಪಷ್ಟವಾಗಿ ಉತ್ತರಿಸಬೇಕೆಂದು ಅವರು ಆಗ್ರಹಿಸಿದರು. ಉತ್ತರ ಪ್ರದೇಶದಲ್ಲಿ ನಡೆದ ಕುಂಭಮೇಳದ ಆಯೋಜನೆಗೆ ಕೇವಲ 16 ಕೋಟಿ ವೆಚ್ಚ ಮಾಡಿ,

ರಾಜ್ಯದ ದೇವಸ್ಥಾನಗಳ ಅಭಿವೃದ್ಧಿ, ದೇವಾಲಯದ ಆಧಾರಿತ ಪ್ರವಾಸೋದ್ಯಮದ ಮಹತ್ವದ ಕುರಿತು ಸದನದಲ್ಲಿ ಗಮನ ಸೆಳೆದ ಕಿಶೋರ್ ಕುಮಾರ್ ಪುತ್ತೂರು Read More »

ಪಿಯುಸಿ ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕೈ ಕಾರ್ಯಕರ್ತೆ ಸೆರೆ

ಖರ್ಗೆ ಕುಟುಂಬದ ಒಡೆತನದ ಕಾಲೇಜಿನಲ್ಲಿ ನಡೆದ ಅಕ್ರಮ ಬೆಂಗಳೂರು: ಕಲಬುರಗಿ ಜಿಲ್ಲೆಯ ಖರ್ಗೆ ಕುಟುಂಬದ ಒಡೆತನದ ಮಿಲಿಂದ್ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿನಿಯ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆಯನ್ನು ಬಂಧಿಸಲಾಗಿದೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಮಾ.5ರಂದು ರಾಜ್ಯಶಾಸ್ತ್ರ ಪರೀಕ್ಷೆ ವೇಳೆ ಕಲಬುರಗಿ ನಗರದ ಮಿಲಿಂದ್ ಕಾಲೇಜ್‌ನಲ್ಲಿ ಅಕ್ರಮ ನಡೆದಿದೆ. ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಎಂಬಾಕೆ ಪರೀಕ್ಷೆ ಬರೆದಿದ್ದಾಳೆ. ದಲಿತ ಸೇನೆ ಕಾರ್ಯಕರ್ತರು ಕಾಲೇಜಿಗೆ

ಪಿಯುಸಿ ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕೈ ಕಾರ್ಯಕರ್ತೆ ಸೆರೆ Read More »

ಎರಡು ವರ್ಷದಲ್ಲಿ 40 ಬಾರಿ ದುಬೈ ಪ್ರಯಾಣ ಕೈಗೊಂಡಿದ್ದ ನಟಿ ರನ್ಯಾ

ಕನ್ನಡದ ನಟಿಯ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ಬಗೆದಷ್ಟೂ ಆಳ ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಪ್ರಕರಣ ಅಗೆದಷ್ಟು ಬಯಲಾಗುತ್ತಲೇ ಇದೆ. ಈ ನಟಿ ಒಂದೆರಡು ಬಾರಿ ಅಲ್ಲ ಬರೋಬ್ಬರಿ 40 ಬಾರಿ ದುಬೈಗೆ ಹೋಗಿ ಬಂದಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಬಂಧನವಾಗುವ 2 ವಾರಗಳ ಹಿಂದೆ ರನ್ಯಾ ದುಬೈಗೆ ಹೋಗಿ ಬಂದಿದ್ದಳು. ಆಗ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಕಸ್ಟಮ್ ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡು ನಾನು ಡಿಜಿಪಿ ಮಗಳು

ಎರಡು ವರ್ಷದಲ್ಲಿ 40 ಬಾರಿ ದುಬೈ ಪ್ರಯಾಣ ಕೈಗೊಂಡಿದ್ದ ನಟಿ ರನ್ಯಾ Read More »

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ : ಹಲವೆಡೆ ದಾಳಿ

ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್‌ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಜಿಆರ್‌ಪಿಎ ಚೀಫ್‌ ಎಂಜಿನಿಯರ್ ನಂಜುಂಡಪ್ಪ ಮತ್ತು ಬಿಬಿಎಂಪಿ ಎಕ್ಸಿಕ್ಯೂಟಿವ್ ಎಂಜಿನಿಯರ್‌‌ ಎಚ್‌.ಪಿ ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆದಿದೆ. ಕೋಲಾರದಲ್ಲಿ ಬೆಸ್ಕಾಂ ಎಇಇ ಜಿ.ನಾಗರಾಜ್ ಮನೆ ಹಾಗೂ ಅವರಿಗೆ ಸೇರಿದ ಮೂರು ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇವರು ಈಗ ಬೆಂಗಳೂರಿನ ರಾಜಾಜಿನಗರದಲ್ಲಿ ಎಇಇ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಸಂಬಂಧಿಕರೊಬ್ಬರ ಮನೆ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ : ಹಲವೆಡೆ ದಾಳಿ Read More »

error: Content is protected !!
Scroll to Top